ETV Bharat / state

ಜಲ ನಿಯಂತ್ರಣ ಸಮಿತಿ ನಿರ್ದೇಶನ ಆಘಾತಕಾರಿ, ಸರ್ಕಾರ ನೀರು ಹರಿಸಬಾರದು: ಹೆಚ್.ಡಿ.ಕುಮಾರಸ್ವಾಮಿ - ಬೆಂಗಳೂರು

ರೈತರ ಬಗ್ಗೆ ಕಾಳಜಿ, ಬೆಂಗಳೂರಿನ ಜನರ ಕುಡಿಯುವ ನೀರಿನ ಬಗ್ಗೆ ಆತಂಕ ಇದ್ದಿದ್ದರೆ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರಲಿಲ್ಲ- ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ.

HD Kumaraswamy
ಹೆಚ್.ಡಿ ಕುಮಾರಸ್ವಾಮಿ
author img

By ETV Bharat Karnataka Team

Published : Sep 13, 2023, 11:27 AM IST

ಬೆಂಗಳೂರು: ನಿತ್ಯವೂ ನೆರೆ ರಾಜ್ಯಕ್ಕೆ 5 ಸಾವಿರ ಕ್ಯೂಸೆಕ್‌ ಕಾವೇರಿ ನೀರು ಹರಿಸಬೇಕೆಂದು ಕರ್ನಾಟಕಕ್ಕೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಕೊಟ್ಟಿರುವ ನಿರ್ದೇಶನ ಆಘಾತಕಾರಿ. ಯಾವ ಕಾರಣಕ್ಕೂ ರಾಜ್ಯ ಸರ್ಕಾರ ನೀರು ಹರಿಸಬಾರದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದರು.

  • ನಿತ್ಯವೂ ನೆರೆರಾಜ್ಯಕ್ಕೆ 5,000 ಕ್ಯೂಸೆಕ್‌ ಕಾವೇರಿ ನೀರು ಹರಿಸಬೇಕೆಂದು ಕರ್ನಾಟಕಕ್ಕೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಕೊಟ್ಟಿರುವ ನಿರ್ದೇಶನ ಆಘಾತಕಾರಿ. ಯಾವ ಕಾರಣಕ್ಕೂ ರಾಜ್ಯ ಸರಕಾರ ನೀರು ಹರಿಸಬಾರದು.1/8#ಕಾವೇರಿ_ಕನ್ನಡಿಗರ_ಹಕ್ಕು

    — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 13, 2023 " class="align-text-top noRightClick twitterSection" data=" ">

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ (ಟ್ವಿಟರ್) ಪೋಸ್ಟ್​ ಮಾಡಿರುವ ಅವರು, ಸಂಕಷ್ಟ ಸೂತ್ರವೇ ಇಲ್ಲ, ಕರ್ನಾಟಕಕ್ಕಷ್ಟೇ ಸಂಕಷ್ಟವೇ?. ತಮಿಳುನಾಡಿಗೆ ಯಾವ ಸಂಕಷ್ಟವೂ ಇಲ್ಲ. ಆದೇಶ ಪಾಲನೆಗಷ್ಟೇ ಕರ್ನಾಟಕ, ಅನುಭವಿಸಲಿಕ್ಕೆ ತಮಿಳುನಾಡು. ಹೀಗಿದೆ ನಮ್ಮ ಸ್ಥಿತಿ. ಆ ರಾಜ್ಯವು ಎಷ್ಟು ವಿಸ್ತೀರ್ಣದಲ್ಲಿ ಬೆಳೆ ಬೆಳೆಯುತ್ತಿದೆ ಎಂಬ ಅಂಕಿ-ಅಂಶದ ಬಗ್ಗೆ ಸಮಿತಿಯಲ್ಲಿ ಚರ್ಚಿಸಿಲ್ಲ ಎನ್ನುವುದಕ್ಕೆ ಆ ಸಮಿತಿಯ ಆದೇಶವೇ ಸಾಕ್ಷಿ ಎಂದಿದ್ದಾರೆ.

ಸಮಿತಿ ಮತ್ತು ಪ್ರಾಧಿಕಾರದ ಸಭೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ಆ ಸಭೆಗಳಿಗೆ ಅಧಿಕಾರಿಗಳು ಆನ್‌ಲೈನ್‌ನಲ್ಲಿ ಹಾಜರಾದರೆ, ನೆರೆ ರಾಜ್ಯದವರು ಖುದ್ದು ಹಾಜರಿದ್ದು ಅಂಕಿ-ಅಂಶ ಸಮೇತ ವಾದ ಮಂಡಿಸುತ್ತಾರೆ. ಹೀಗಾದರೆ, ರಾಜ್ಯದ ಹಿತ ರಕ್ಷಣೆ ಹೇಗೆ ಸಾಧ್ಯ?. ನೆಲ, ಜಲ, ಭಾಷೆ ಬಗ್ಗೆ ತಮಿಳುನಾಡಿನವರಿಗೆ ಇರುವ ಬದ್ಧತೆ ನಮ್ಮವರಿಗಿಲ್ಲ. ಇದು ದುರಂತ ಎಂದು ಟೀಕಿಸಿದ್ದಾರೆ.

  • ರೈತರ ಬಗ್ಗೆ ಕಾಳಜಿ, ಬೆಂಗಳೂರಿನ ಜನರ ಕುಡಿಯುವ ನೀರಿನ ಬಗ್ಗೆ ಆತಂಕ ಇದ್ದಿದ್ದರೆ ಸರಕಾರ ನೀರು ಹರಿಸುತ್ತಿರಲಿಲ್ಲ. ಬೆಂಗಳೂರಿಗರ ಮೌನ ನನಗೆ ಅಚ್ಚರಿ ತಂದಿದೆ. ನೆರೆ ರಾಜ್ಯಗಳಿಂದ ವಲಸೆ ಬಂದು ನಮ್ಮ ನೆಲ, ಜಲ, ಆರ್ಥಿಕತೆಯ ಆಸರೆಯಲ್ಲಿ ನೆಮ್ಮದಿಯಾಗಿರುವವರು ಕೂಡ ಕಾವೇರಿ ಬಗ್ಗೆ ದನಿ ಎತ್ತಬೇಕು. ಇವರಾರಿಗೂ ಕಾವೇರಿ ನೀರಿನ ಚಿಂತೆಯೇ ಇಲ್ಲ. 7/8

ನಮ್ಮವರಲ್ಲಿ ಉಪೇಕ್ಷೆ, ಉಡಾಫೆ ಹೆಚ್ಚು. ಟ್ರಿಬ್ಯುನಲ್‌ ಆದೇಶ ಉಲ್ಲಂಘಿಸಿರುವ ತಮಿಳುನಾಡು ವಿರುದ್ಧ ಸಮರ್ಥ ವಾದ ಮಂಡಿಸಲು ಏಕೆ ಸಾಧ್ಯವಾಗಿಲ್ಲ?. ನೀರಾವರಿ ಪ್ರದೇಶವನ್ನು ನೆರೆ ರಾಜ್ಯ ಅಕ್ರಮವಾಗಿ ವಿಸ್ತರಣೆ ಮಾಡಿಕೊಂಡಿರುವುದನ್ನು ಹೇಳಲೇಬೇಕಿತ್ತು. ಮೊದಲು ಸಂಕಷ್ಟಸೂತ್ರ ರೂಪಿಸಿ ಎಂದು ಪಟ್ಟು ಹಿಡಿಯಬೇಕಿತ್ತು ಎಂದು ಹೆಚ್​ಡಿಕೆ ಹೇಳಿದ್ದಾರೆ.

ಇದನ್ನೂ ಓದಿ: Cauvery water dispute: 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಪ್ರಾಧಿಕಾರ ಹೇಳಿದೆ, ಆದರೆ ನಮ್ಮ ಬಳಿ ನೀರಿಲ್ಲ: ಡಿಕೆಶಿ

ಜಲ ನಿರ್ವಹಣೆ ಪ್ರಾಧಿಕಾರ, ಜಲ ನಿಯಂತ್ರಣ ಸಮಿತಿ ಏನು ಮಾಡುತ್ತಿವೆ?, ಟ್ರಿಬ್ಯುನಲ್ ಆದೇಶ ಉಲ್ಲಂಘಿಸಿ, ನೀರಾವರಿ ಪ್ರದೇಶ ಹೆಚ್ಚಿಸಿಕೊಂಡಿರುವ ತಮಿಳುನಾಡು ಬಗ್ಗೆ ಇವುಗಳಿಗೆ ಮಾಹಿತಿ ಇಲ್ಲವೇ? ರಾಜ್ಯಗಳ ನೈಜಸ್ಥಿತಿ ಅರಿಯುವ ಕರ್ತವ್ಯ ಅವುಗಳಿಗೆ ಇಲ್ಲವೇ? ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಎನ್ನುವ ನೀತಿ ಯಾಕೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

  • ಸರಕಾರ ಹೆಜ್ಜೆಹೆಜ್ಜೆಗೂ ಎಡವಿದೆ. ತಮಿಳುನಾಡು ಸುಪ್ರೀಂ ಕೋರ್ಟಿಗೆ ಅರ್ಜಿ ಹಾಕಿದಾಕ್ಷಣ ರಾಜ್ಯ ಸರಕಾರವೂ ತಕ್ಷಣವೇ ಆಕ್ಷೇಪ ಸಲ್ಲಿಸಬೇಕಿತ್ತು. ವಾಸ್ತವ ಸ್ಥಿತಿಯ ಬಗ್ಗೆ ದಾಖಲೆಗಳನ್ನು ಒದಗಿಸಿ, ಸಮರ್ಥವಾಗಿ ಎದುರಿಸಬೇಕಿತ್ತು. ಕಾಲಹರಣ ಮಾಡಿದ್ದಲ್ಲದೆ, ಈಗ ಕಾವೇರಿ ಬಗ್ಗೆ ಮೊಸಳೆ ಕಣ್ಣೀರು ಹಾಕಿದರೆ ಕನ್ನಡಿಗರು ನಂಬಬೇಕಾ? 8/8

ನಮ್ಮ ರೈತರಿಗೇ ನೀರಿಲ್ಲದಿದ್ದರೂ, ಅವರು ಬೆಳೆಯನ್ನೇ ಬೆಳೆಯದಿದ್ದರೂ ನೀರು ಬಿಡಲು ಸರ್ಕಾರ ಒಪ್ಪಿದೆ. ಈ ವಿಷಯದಲ್ಲಿ ರಾಜ್ಯ ಸರ್ಕಾರ ಪೂರ್ಣ ವಿಫಲವಾಗಿದೆ. ರೈತರ ತಾಳ್ಮೆಯನ್ನೂ ದುರುಪಯೋಗ ಮಾಡಿಕೊಂಡಿದೆ. ಸುಪ್ರೀಂ ಕೋರ್ಟ್ ಏನು ಹೇಳುತ್ತದೋ ಅಲ್ಲಿಯವರೆಗೆ ಕಾಯಬೇಕಿತ್ತು. ಪ್ರಾಧಿಕಾರ, ಸಮಿತಿ ಹೇಳಿದವೆಂದು ನೀರು ಬಿಟ್ಟಿದ್ದು ತಪ್ಪು ಎಂದರು.

ಬೆಂಗಳೂರಿಗರ ಮೌನ ಅಚ್ಚರಿ ತಂದಿದೆ: ರೈತರ ಬಗ್ಗೆ ಕಾಳಜಿ, ಬೆಂಗಳೂರಿನ ಜನರ ಕುಡಿಯುವ ನೀರಿನ ಬಗ್ಗೆ ಆತಂಕ ಇದ್ದಿದ್ದರೆ ಸರ್ಕಾರ ನೀರು ಹರಿಸುತ್ತಿರಲಿಲ್ಲ. ಬೆಂಗಳೂರಿಗರ ಮೌನ ನನಗೆ ಅಚ್ಚರಿ ತಂದಿದೆ. ನೆರೆ ರಾಜ್ಯಗಳಿಂದ ವಲಸೆ ಬಂದು ನಮ್ಮ ನೆಲ, ಜಲ, ಆರ್ಥಿಕತೆಯ ಆಸರೆಯಲ್ಲಿ ನೆಮ್ಮದಿಯಾಗಿರುವವರು ಕೂಡ ಕಾವೇರಿ ಬಗ್ಗೆ ದನಿ ಎತ್ತಬೇಕು. ಇವರಾರಿಗೂ ಕಾವೇರಿ ನೀರಿನ ಚಿಂತೆಯೇ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸರ್ಕಾರ ಹೆಜ್ಜೆಹೆಜ್ಜೆಗೂ ಎಡವಿದೆ. ತಮಿಳುನಾಡು ಸುಪ್ರೀಂ ಕೋರ್ಟಿಗೆ ಅರ್ಜಿ ಹಾಕಿದಾಕ್ಷಣ ರಾಜ್ಯ ಸರ್ಕಾರವೂ ತಕ್ಷಣವೇ ಆಕ್ಷೇಪ ಸಲ್ಲಿಸಬೇಕಿತ್ತು. ವಾಸ್ತವ ಸ್ಥಿತಿಯ ಬಗ್ಗೆ ದಾಖಲೆಗಳನ್ನು ಒದಗಿಸಿ, ಸಮರ್ಥವಾಗಿ ಎದುರಿಸಬೇಕಿತ್ತು. ಕಾಲಹರಣ ಮಾಡಿದ್ದಲ್ಲದೆ, ಈಗ ಕಾವೇರಿ ಬಗ್ಗೆ ಮೊಸಳೆ ಕಣ್ಣೀರು ಹಾಕಿದರೆ ಕನ್ನಡಿಗರು ನಂಬಬೇಕಾ? ಎಂದು ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡಿಗೆ ಮತ್ತೆ ನೀರು ಬಿಡಲು ಆದೇಶ : ಶ್ರೀರಂಗಪಟ್ಟಣದಲ್ಲಿ ರಸ್ತೆ ತಡೆದು ರೈತರ ಆಕ್ರೋಶ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.