ETV Bharat / state

ಒಬ್ಬ ಸಿಎಂ ಸಾರ್ವಜನಿಕವಾಗಿ ಕಣ್ಣೀರು ಹಾಕಿದ್ದರೆ ಅದು ನಾನು ಮಾತ್ರ: ಹೆಚ್​ಡಿಕೆ ಬೇಸರ

ಒಬ್ಬ ಮುಖ್ಯಮಂತ್ರಿ ಸಾರ್ವಜನಿಕವಾಗಿ ಕಣ್ಣೀರು ಹಾಕಿದ್ದರೆ ಅದು ನಾನು ಮಾತ್ರ. ಅಂತಹ ಸ್ಥಿತಿಯಲ್ಲಿ ಕಾಂಗ್ರೆಸ್‌ನವರು ನನ್ನನ್ನು ಇಟ್ಟಿದ್ದರು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

hd kumaraswamy
ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ
author img

By

Published : Oct 29, 2020, 2:03 PM IST

ಬೆಂಗಳೂರು: ಕಾಂಗ್ರೆಸ್‌ ಜೊತೆಗಿನ ಸರ್ಕಾರದ ವೇಳೆ ಕಚೇರಿಗೆ ತಡವಾಗಿ ಹೋಗಿದ್ದಕ್ಕೆ ಕಾಂಗ್ರೆಸ್‌ ಶಾಸಕರೊಬ್ಬರು ಮುನಿಸಿಕೊಂಡಿದ್ದರು. ಅಷ್ಟು ಕಷ್ಟಪಟ್ಟು, ಸಹಿಸಿಕೊಂಡು ಮೈತ್ರಿ ಸರ್ಕಾರದಲ್ಲಿ ಕೆಲಸ ಮಾಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ರಾಜರಾಜೇಶ್ವರಿ ನಗರ ವ್ಯಾಪ್ತಿಯ ಲಕ್ಷ್ಮೀದೇವಿ ವಾರ್ಡ್‌ನಲ್ಲಿ ಇಂದು ಜೆಡಿಎಸ್‌ ಅಭ್ಯರ್ಥಿ ವಿ.ಕೃಷ್ಣಮೂರ್ತಿ ಪರ ಪ್ರಚಾರ ನಡೆಸಿ ಅವರು ಮಾತನಾಡಿದರು. ಮುಖ್ಯಮಂತ್ರಿ ಆಗಿದ್ದ ವೇಳೆ ಕೃಷ್ಣಾದಲ್ಲಿ ಜನರ ಸಮಸ್ಯೆ ಆಲಿಸಿ, ನನ್ನ ಕಚೇರಿಗೆ ಹೋಗಿದ್ದೆ. ಆಗ ನನ್ನ ಕಚೇರಿಗೆ ಬಂದ ಕಾಂಗ್ರೆಸ್‌ ಶಾಸಕರೊಬ್ಬರು ನಿಮಗೆ ಎಷ್ಟು ಹೊತ್ತು ಕಾಯೋದು ಅಂತಾ ಅವರು ತಂದಿದ್ದ 10-12 ಪತ್ರಗಳನ್ನು ಇಸ್ಪೀಟ್ ಎಲೆಯಂತೆ ಬಿಸಾಡಿದ್ದರು ಎಂದು ಆ ಘಟನೆಯನ್ನು ನೆನಪಿಸಿಕೊಂಡರು.

ಕಾಂಗ್ರೆಸ್ ಶಾಸಕರಿಗೆ ಬೇಕಾಗಿದ್ದು ತಮ್ಮ ಸ್ವಂತ ಲಾಭವೇ ಹೊರತು ಜನರ ಕಲ್ಯಾಣವಲ್ಲ ಎಂದು ತಮ್ಮ ಅಸಮಾಧಾನ ಹೊರಹಾಕಿದರು. ಕಾಂಗ್ರೆಸ್ಸಿಗರು ನೀಡಿದ ಕಿರುಕುಳದ ನಡುವೆಯೂ ರೈತರ ಹಿತ ಕಾಯಲು 25 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡಿದ್ದೆ. ಒಬ್ಬ ಮುಖ್ಯಮಂತ್ರಿ ಸಾರ್ವಜನಿಕವಾಗಿ ಕಣ್ಣೀರು ಹಾಕಿದ್ದರೆ ಅದು ನಾನು ಮಾತ್ರ. ಅಂತಹ ಸ್ಥಿತಿಯಲ್ಲಿ ಕಾಂಗ್ರೆಸ್‌ನವರು ನನ್ನನ್ನು ಇಟ್ಟಿದ್ದರು ಎಂದರು.

ಮೋದಿ ಹೆಚ್‌ಎಎಲ್‌ಅನ್ನು ಮಾರುವುದಕ್ಕೆ ಹೊರಟಿದ್ದಾರೆ. ಅದಾನಿಗೆ 6 ವಿಮಾನ ನಿಲ್ದಾಣಗಳನ್ನು ನೀಡಿದ್ದಾರೆ. ಮುಖೇಶ್‌ ಅಂಬಾನಿ ಆದಾಯ ಗಂಟೆಗೆ 94 ಕೋಟಿ ರೂ. ಇದೆಯಂತೆ. ಅವರ ಸಲಹೆಯನ್ನು ತೆಗೆದುಕೊಂಡು ಪ್ರತಿ ಕುಟುಂಬಕ್ಕೂ ದಿನಕ್ಕೆ ನೂರು ರೂಪಾಯಿ ಬರುವಂತೆ ಮಾಡಬಹುದಲ್ಲ ಎಂದು ಸಲಹೆ ನೀಡಿದರು.

ಬೆಂಗಳೂರು ನಗರದ ಅಭಿವೃದ್ಧಿಗೆ ದುಡ್ಡು ತಂದವರು ಯಾರೋ, ಹೆಸರು ಮಾಡಿಕೊಂಡದ್ದು ಯಾರೋ. ಐಟಿ ಸೆಕ್ಟರ್​ಗೆ ಹೊಸ ಆಯಾಮವನ್ನು ನೀಡಿದ್ದು ದೇವೇಗೌಡರು. ದೇವೇಗೌಡ ಸ್ಕೀಮ್ ಅಂತ ದಕ್ಷಿಣ ಆಫ್ರಿಕಾದಲ್ಲಿ ಆಕ್ಸಲರೆಟೆಡ್‌ ನೀರಾವರಿ ವ್ಯವಸ್ಥೆಯನ್ನು ಅಳವಡಿಸಿಕೊಂಡಿದ್ದಾರೆ. 1988ರಲ್ಲಿ ನಂದಿನಿ‌ ಬಡಾವಣೆಯನ್ನು ಒಡೆಯಬೇಕು ಎಂಬ ಆದೇಶ ಬಂದಾಗ ನಿಮ್ಮ ನೆರವಿಗೆ ಬಂದಿದ್ದು ದೇವೇಗೌಡರು ಎಂದ ಮಾಜಿ ಸಿಎಂ, ಬೆಂಗಳೂರಲ್ಲಿ ಮೆಟ್ರೋ ಪ್ರಾರಂಭ ಮಾಡಿದ್ದು ನಾನು ಎಂದರು.

ಜೆಡಿಎಸ್‌ ಅಭ್ಯರ್ಥಿ ವಿ.ಕೃಷ್ಣಮೂರ್ತಿ ಮಾತನಾಡಿ, ಈ ಕ್ಷೇತ್ರದ ಮನೆ ಮಗ ನಾನು. ಹನುಮಂತರಾಯಪ್ಪ ಒಬ್ಬನೇ ಒಬ್ಬ ಒಕ್ಕಲಿಗನಿಗೆ ಒಳಿತನ್ನು ಮಾಡಿಲ್ಲ. ಅವರು ಒಬ್ಬ ಸಮಯ ಸಾಧಕ. ಕಾಂಗ್ರೆಸ್‌ನವರು ಜಾತಿ ರಾಜಕೀಯ ಮಾಡುತ್ತಿದ್ದಾರೆ. ಇಂದು ಕೊರೊನಾದಿಂದ ಜನ ಬೀದಿಯಲ್ಲೇ ಸಾಯುತ್ತಿದ್ದಾರೆ. ಕುಮಾರಣ್ಣನವರು ಅಧಿಕಾರದಲ್ಲಿದ್ದಿದ್ರೆ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.