ETV Bharat / state

ಗಂಗಮ್ಮ ಪ್ರಕರಣ ಕೂಲಿಕಾರ್ಮಿಕರ ಬದುಕು ಸಾಕ್ಷೀಕರಿಸುವಂತಿದೆ: ಕುಮಾರಸ್ವಾಮಿ - HD Kumaraswamy

ಕಾಲ್ನಡಿಗೆಯಲ್ಲಿ ತನ್ನ ಊರಿಗೆ ತೆರಳುವಾಗ ಅನ್ನ ನೀರು ಸಿಗದೇ ಮೃತಪಟ್ಟ ಗಂಗಮ್ಮ ಎಂಬ ಕೂಲಿ ಕಾರ್ಮಿಕ ಮಹಿಳೆಯ ಬಗ್ಗೆ ಇದೀಗ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಕುಮಾರಸ್ವಾಮಿ
ಕುಮಾರಸ್ವಾಮಿ
author img

By

Published : Apr 7, 2020, 8:03 PM IST

Updated : Apr 7, 2020, 8:54 PM IST

ಬೆಂಗಳೂರು : ಹುಟ್ಟೂರು ಸೇರಬೇಕೆಂಬ ಆಸೆಯೊಂದಿಗೆ ಹಸಿವಿನಲ್ಲೇ ರಾಯಚೂರಿನತ್ತ ಹೆಜ್ಜೆ ಹಾಕುತ್ತಿದ್ದ ಕಟ್ಟಡ ಕಾರ್ಮಿಕ ಮಹಿಳೆ ಗಂಗಮ್ಮ ಎಂಬುವರು ಮಾರ್ಗ ಮಧ್ಯೆ ಅನ್ನಾಹಾರವಿಲ್ಲದೇ, ಸಕಾಲಕ್ಕೆ ಚಿಕಿತ್ಸೆ ಸಿಗದೇ ಮೃತಪಟ್ಟರೆಂಬ ಸುದ್ದಿ ತೀವ್ರ ನೋವುಂಟು ಮಾಡಿತು. ಗಂಗಮ್ಮ ಅವರ ಈ ಪ್ರಕರಣ ವಲಸೆ ಕಾರ್ಮಿಕರು, ಕೂಲಿಕಾರ್ಮಿಕರ ಬದುಕನ್ನು ಸಾಕ್ಷಿಕರಿಸುವಂತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

  • ಹುಟ್ಟೂರು ಸೇರಬೇಕೆಂಬ ಆಸೆಯೊಂದಿಗೆ ಹಸಿವಿನಲ್ಲೇ ರಾಯಚೂರಿನತ್ತ ಹೆಜ್ಜೆ ಹಾಕುತ್ತಿದ್ದ ಕಟ್ಟಡ ಕಾರ್ಮಿಕ ಮಹಿಳೆ ಗಂಗಮ್ಮ ಎಂಬುವರು ಮಾರ್ಗ ಮಧ್ಯೆ ಅನ್ನಾಹಾರವಿಲ್ಲದೆ, ಸಕಾಲಕ್ಕೆ ಚಿಕಿತ್ಸೆ ಸಿಗದೇ ಮೃತಪಟ್ಟರೆಂಬ ಸುದ್ದಿ ತೀವ್ರ ನೋವುಂಟುಮಾಡಿತು. ಗಂಗಮ್ಮ ಅವರ ಈ ಪ್ರಕರಣ ವಲಸೆ ಕಾರ್ಮಿಕರು, ಕೂಲಿಕಾರ್ಮಿಕರ ಬದುಕನ್ನು ಸಾಕ್ಷಿಕರಿಸುವಂತಿದೆ.
    1/4

    — H D Kumaraswamy (@hd_kumaraswamy) April 7, 2020 " class="align-text-top noRightClick twitterSection" data=" ">

ಈ ಕುರಿತು ಟ್ವೀಟ್ ಮಾಡಿರುವ ಅವರು, ಗಂಗಮ್ಮ ಪ್ರಕರಣದಲ್ಲಿ ಕೂಲಿ ನೀಡದ ಗುತ್ತಿಗೆದಾರನೊಬ್ಬನದ್ದೇ ತಪ್ಪಿಲ್ಲ. ಸರ್ಕಾರದ್ದೂ ತಪ್ಪಿದೆ. ಕಾರ್ಮಿಕರ ಇಲಾಖೆಯಲ್ಲಿ 8000 ಕೋಟಿ ರೂ. ಹಣವಿದೆ. ಆದರೆ ಇಂತವರಿಗೆ ವಿನಿಯೋಗವಾಗುತ್ತಿಲ್ಲವೇಕೆ? ಆಕೆಯನ್ನು ಬಳ್ಳಾರಿ ಜಿಲ್ಲಾಡಳಿತ ನಿರಾಶ್ರಿತರ ಕ್ಯಾಂಪ್‌ನಲ್ಲಿ ಇರಿಸಿತ್ತಂತೆ. ಕ್ಯಾಂಪ್‌ನಲ್ಲಿದ್ದೂ ಆಕೆಗೆ ಆಹಾರ, ಚಿಕಿತ್ಸೆ ಸಿಗಲಿಲ್ಲ ಏಕೆ? ಎಂದು ಪ್ರಶ್ನಿಸಿದ್ದಾರೆ.

  • ಗಂಗಮ್ಮ ಪ್ರಕರಣದಲ್ಲಿ ಕೂಲಿ ನೀಡದ ಗುತ್ತಿಗೆದಾರನೊಬ್ಬನದ್ದೇ ತಪ್ಪಿಲ್ಲ.ಸರ್ಕಾರದ್ದೂ ತಪ್ಪಿದೆ. ಕಾರ್ಮಿಕರ ಇಲಾಖೆಯಲ್ಲಿ ₹8000 ಕೋಟಿ ಹಣವಿದೆ. ಆದರೆ ಇಂಥವರಿಗೆ ವಿನಿಯೋಗವಾಗುತ್ತಿಲ್ಲವೇಕೆ? ಆಕೆಯನ್ನು ಬಳ್ಳಾರಿ ಜಿಲ್ಲಾಡಳಿತ ನಿರಾಶ್ರಿತರ ಕ್ಯಾಂಪ್‌ನಲ್ಲಿ ಇರಿಸಿತ್ತಂತೆ. ಕ್ಯಾಂಪ್‌ನಲ್ಲಿದ್ದೂ ಆಕೆಗೆ ಆಹಾರ, ಚಿಕಿತ್ಸೆ ಸಿಗಲಿಲ್ಲ ಏಕೆ?
    2/4

ಲಾಕ್‌ ಡೌನ್‌ ಮಧ್ಯಮ ವರ್ಗ ಮತ್ತು ಶ್ರೀಮಂತರನ್ನು ಮನೆಯಲ್ಲಿ ಬಂಧಿಸಿಟ್ಟಿರಬಹುದು. ಆದರೆ, ಕೂಲಿಕಾರ್ಮಿಕರನ್ನು, ವಲಸಿಗರನ್ನು ಬೀದಿಗೆ ತಳ್ಳಿದೆ. ಸರ್ಕಾರ ಕೂಡಲೇ ಇಂಥವರ ಕಡೆಗೂ ಗಮನಹರಿಸಬೇಕು. ದೂರ ದೂರುಗಳಿಗೆ ಹೆಜ್ಜೆ ಹಾಕಿರುವವರ ಬದುಕು ಬವಣೆಯನ್ನು ನೋಡಬೇಕು. ಮೃತ ಗಂಗಮ್ಮನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

  • ಲಾಕ್‌ಡೌನ್‌ ಮಧ್ಯಮ ವರ್ಗ ಮತ್ತು ಶ್ರೀಮಂತರನ್ನು ಮನೆಯಲ್ಲಿ ಬಂಧಿಸಿಟ್ಟಿರಬಹುದು. ಆದರೆ, ಕೂಲಿಕಾರ್ಮಿಕರನ್ನು, ವಲಸಿಗರನ್ನು ಬೀದಿಗೆ ತಳ್ಳಿದೆ. ಸರ್ಕಾರ ಕೂಡಲೇ ಇಂಥವರ ಕಡೆಗೂ ಗಮನ ಹರಿಸಬೇಕು. ದೂರದೂರುಗಳಿಗೆ ಹೆಜ್ಜೆ ಹಾಕಿರುವವರ ಬದುಕು ಬವಣೆನ್ನು ನೋಡಬೇಕು. ಮೃತ ಗಂಗಮ್ಮನ ಕುಟುಂಬಕ್ಕೆ ಪರಿಹಾರ ನೀಡಬೇಕು.
    3/4

ವಿದೇಶದಿಂದ ಬಂದ ಸೋಂಕು ಅತ್ತ ಸಾವಿರಾರು ಸಂಖ್ಯೆಯಲ್ಲಿ ಜನರನ್ನು ಭಾದಿಸುತ್ತಿದೆ. ಇತ್ತ, ದೇಶದ ಅಭಿವೃದ್ಧಿಗೆ ಏಗಲಾದವರು, ದೇಶ ಕಟ್ಟಿದವರು, ಕಟ್ಟುವ ಕೆಲಸಕ್ಕೆ ಮಣ್ಣು, ಕಲ್ಲು, ಇಟ್ಟಿಗೆ ಹೊತ್ತವರು ತಾವು ಮಾಡದ ತಪ್ಪಿಗೆ ಅನ್ನಾಹಾರಗಳಿಲ್ಲದೇ ಸಾವಿಗೆ ಶರಣಾಗುತ್ತಿರುವುದು ವಿಧಿಯ ಕ್ರೂರ ವ್ಯಂಗ್ಯ ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

  • ವಿದೇಶದಿಂದ ಬಂದ ಸೋಂಕು ಅತ್ತ ಸಾವಿರಾರು ಸಂಖ್ಯೆಯಲ್ಲಿ ಜನರನ್ನು ಬಾಧಿಸುತ್ತಿದೆ. ಇತ್ತ, ದೇಶದ ಅಭಿವೃದ್ಧಿಗೆ ಹೆಗಲಾದವರು, ದೇಶ ಕಟ್ಟಿದವರು, ಕಟ್ಟುವ ಕೆಲಸಕ್ಕೆ ಮಣ್ಣು, ಕಲ್ಲು, ಇಟ್ಟಿಗೆ ಹೊತ್ತವರು ತಾವು ಮಾಡದ ತಪ್ಪಿಗೆ ಅನ್ನಾಹಾರಗಳಿಲ್ಲದೇ ಸಾವಿಗೆ ಶರಣಾಗುತ್ತಿರುವುದು ವಿಧಿಯ ಕ್ರೂರ ವ್ಯಂಗ್ಯ.
    4/4

Last Updated : Apr 7, 2020, 8:54 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.