ETV Bharat / state

ಹೆಚ್.ಡಿ.ಕುಮಾರಸ್ವಾಮಿ ಗುಣಮುಖ; ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ - ಬೆಂಗಳೂರು ನ್ಯೂಸ್​​

ಕೆಲವು ದಿನಗಳ ಹಿಂದೆ ಲಘು ಬ್ರೈನ್ ಸ್ಟ್ರೋಕ್‌ನಿಂದ ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಇಂದು ಡಿಸ್ಚಾರ್ಜ್ ಆಗಲಿದ್ದಾರೆ.

Former CM HD Kumaraswamy
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ
author img

By ETV Bharat Karnataka Team

Published : Sep 3, 2023, 6:54 AM IST

Updated : Sep 3, 2023, 9:12 AM IST

ಬೆಂಗಳೂರು: ಅನಾರೋಗ್ಯದಿಂದಾಗಿ ಕಳೆದ ಕೆಲವು ದಿನಗಳಿಂದ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜೆಡಿಎಸ್‌ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್.ಡಿ‌.ಕುಮಾರಸ್ವಾಮಿ ಗುಣಮುಖರಾಗಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕುಮಾರಸ್ವಾಮಿ ಕಳೆದ ಬುಧವಾರ ಬೆಳಗಿನ ಜಾವ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗಿತ್ತು. ಗುರುವಾರ ವಿಶೇಷ ವಾರ್ಡ್​ಗೆ ಶಿಫ್ಟ್ ಮಾಡಲಾಗಿದೆ.

ಇದೀಗ ಆರೋಗ್ಯವಾಗಿದ್ದು, ದೈನಂದಿನ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ತಮ್ಮ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಿದ ಗಣ್ಯರೊಂದಿಗೆ ಮಾತುಕತೆ ನಡೆಸಿದ್ದಾರೆ. ವೈದ್ಯರು ವಿಶ್ರಾಂತಿ ಪಡೆಯಬೇಕು ಎಂದು ಸಲಹೆ ನೀಡಿದ ಹಿನ್ನೆಲೆಯಲ್ಲಿ ಎರಡು ದಿನಗಳಿಂದ ಆಸ್ಪತ್ರೆಯ ವಾರ್ಡ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಆಸ್ಪತ್ರೆಗೆ ಗಣ್ಯರ ಭೇಟಿ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹೆಚ್​​ಡಿಕೆ ಅವರನ್ನು ಸಿಎಂ ಸಿದ್ದರಾಮಯ್ಯ, ಸಚಿವ ಚಲುವರಾಯಸ್ವಾಮಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಚಿವರಾದ ಸಿ.ಪಿ.ಯೋಗೇಶ್ವರ್, ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಆರ್.ಅಶೋಕ್, ಸಂಸದರಾದ ಪ್ರಜ್ವಲ್ ರೇವಣ್ಷ, ಪ್ರತಾಪ್ ಸಿಂಹ, ಮಾಜಿ ಸಚಿವ ಹೆಚ್.ಡಿ.ರೇವಣ್ಣ, ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಶ್ರೀ ಸೇರಿದಂತೆ ಹಲವು ಗಣ್ಯರು ಭೇಟಿಯಾಗಿದ್ದು, ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗಲೆಂದು ಹಾರೈಸಿದ್ದರು.

ಜೆಡಿಎಸ್ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು.

ಇದನ್ನೂ ಓದಿ: ಅನಾರೋಗ್ಯದ ಹಿನ್ನೆಲೆ ಮಾಜಿ ಸಿಎಂ ಹೆಚ್​ಡಿಕೆ ಆಸ್ಪತ್ರೆಗೆ ದಾಖಲು.. ಕೋಲಾರ ಭೇಟಿ ರದ್ದು

ಆರೋಗ್ಯ ವಿಚಾರಿಸಿದ್ದ ಸಿಎಂ ಸಿದ್ದರಾಮಯ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಆ.31ರಂದು ಆಸ್ಪತ್ರೆಗೆ ಭೇಟಿ ನೀಡಿ ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದ್ದರು. ಗುರುವಾರ ಸಂಜೆ ಆಸ್ಪತ್ರೆಗೆ ತೆರಳಿದ್ದ ಅವರು, ಆರೋಗ್ಯ ವಿಚಾರಿಸಿದ ನಂತರ ವೈದ್ಯರಿಂದ ಮಾಹಿತಿ ಪಡೆದುಕೊಂಡಿದ್ದರು.

ಇದನ್ನೂ ಓದಿ: ಆಸ್ಪತ್ರೆಗೆ ಭೇಟಿ ನೀಡಿ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ, ಸಚಿವ ಚಲುವರಾಯಸ್ವಾಮಿ

ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ಹೆಚ್‌ಡಿಕೆ: ಸುಸ್ತು ಹಾಗೂ ತೀವ್ರ ಜ್ವರದಿಂದಾಗಿ ಆ.30ರಂದು ಬೆಳಗಿನ ಜಾವ 3:40ರ ಸುಮಾರಿಗೆ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗಿದ್ದರು. ತಕ್ಷಣ ತಪಾಸಣೆ ನಡೆಸಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ, ಆರೋಗ್ಯದ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿತ್ತು.

ಅಪೋಲೋ ಆಸ್ಪತ್ರೆಯ ಡಾ.ಸತೀಶ್ ಚಂದ್ರ ಮಾತನಾಡಿ, ''ಕುಮಾರಸ್ವಾಮಿ ಮುಂಜಾನೆ 3 ಗಂಟೆ ಸುಮಾರಿಗೆ ನಮ್ಮ ಆಸ್ಪತ್ರೆಗೆ ಬಂದ್ರು. ಅವರು ಬಂದಾಗ ಮಾತಿನಲ್ಲಿ ತೊದಲು ಇತ್ತು. ಕೈಯಲ್ಲಿ ವೀಕ್ನೆಸ್ ಇತ್ತು. ತಕ್ಷಣವೇ ಆರೋಗ್ಯ ತಪಾಸಣೆ ನಡೆಸಲಾಯಿತು. ಎಂಆರ್​ಐ ಸ್ಕ್ಯಾನ್ ಮಾಡಿ ಚಿಕಿತ್ಸೆ ನೀಡಿದ್ದೇವೆ. ಸೂಕ್ತ ಚಿಕಿತ್ಸೆ ನೀಡಿರುವುದರಿಂದ ಗುಣಮುಖರಾಗಿದ್ದಾರೆ. ಈಗ ಎಲ್ಲರ ಜೊತೆಗೆ ಚೆನ್ನಾಗಿ ಮಾತನಾಡುತ್ತಿದ್ದಾರೆ'' ಎಂದು ಮಾಹಿತಿ ನೀಡಿದ್ದರು.

ಇದನ್ನೂ ಓದಿ: ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಿಎಂ ಕುಮಾರಸ್ವಾಮಿ ಆರೋಗ್ಯ ಸ್ಥಿರ: ಅಪೋಲೋ ಆಸ್ಪತ್ರೆ

Last Updated : Sep 3, 2023, 9:12 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.