ETV Bharat / state

ಧರ್ಮದ ಹೆಸರಲ್ಲಿ ಯಾರೇ ಕಾನೂನು ಕೈಗೆತ್ತಿಕೊಂಡರೂ ಮುಲಾಜಿಲ್ಲದೆ ಮಟ್ಟಹಾಕಬೇಕು: ಹೆಚ್​​ಡಿಕೆ

ನಿನ್ನೆ ರಾತ್ರಿ ಡಿ.ಜೆ ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್​ ಮಾಡಿದ್ದಾರೆ.

author img

By

Published : Aug 12, 2020, 12:20 PM IST

Kumaraswamy
Kumaraswamy

ಬೆಂಗಳೂರು: ಡಿ.ಜೆ ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದ ಘಟನೆ ಖಂಡನೀಯವಾಗಿದೆ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು. ಧರ್ಮದ ಹೆಸರಲ್ಲಿ ಯಾರೇ ಗೂಂಡಾಗಿರಿ, ಕಾನೂನು ಕೈಗೆತ್ತಿಕೊಂಡರೂ ಅಂತವರನ್ನು ಮುಲಾಜಿಲ್ಲದೆ ಮಟ್ಟಹಾಕಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ನೆಲದ ಕಾನೂನನ್ನು ಗೌರವಿಸದ ಪ್ರತಿಯೊಬ್ಬರೂ ಶಿಕ್ಷೆಗೆ ಅರ್ಹರು. ಸರ್ಕಾರ ಪುಂಡಾಟ ನಡೆಸಿದವರ ವಿರುದ್ಧ ಕಠಿಣ ಕ್ರಮ ‌ಕೈಗೊಳ್ಳಬೇಕು. ಮುಂದೆಂದೂ ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು.

ಪೈಗಂಬರ್ ಬಗ್ಗೆ ಅವಹೇಳನ ಮಾಡಿದ ಆತನಿಗೆ ಶಿಕ್ಷೆಯಾಗಬೇಕು ನಿಜ. ಆದರೆ ಪೈಗಂಬರ್ ಅನುಯಾಯಿಗಳು ದಾಂಧಲೆಗಿಳಿಯುವ ಮೂಲಕ ಪ್ರವಾದಿಯ ಪವಿತ್ರ ಸಂದೇಶಗಳನ್ನು ಮಣ್ಣುಪಾಲು ಮಾಡುವುದು ಆ ಧರ್ಮಕ್ಕೆ ಮಾಡಿದ ಅಪಚಾರ ಎಂದಿದ್ದಾರೆ.

ಕಾನೂನು ಪಾಲಕ ಪೊಲೀಸರು ಮತ್ತು ವರದಿಗಾಗಿ ತೆರಳಿದ್ದ ಪತ್ರಕರ್ತರ ಮೇಲೆ ಅಮಾನುಷ ದೌರ್ಜನ್ಯ ನಡೆಸುವ ಮೂಲಕ ನಾಗರಿಕ ಸಮಾಜಕ್ಕೆ ಯಾವ ಸಂದೇಶ ರವಾನಿಸುತ್ತದೆ ಎಂಬ ಕನಿಷ್ಠ ಪ್ರಜ್ಞೆಯೂ ಇಲ್ಲದೆ ವರ್ತಿಸಿರುವುದನ್ನು ಹೆಚ್​ಡಿಕೆ ಖಂಡಿಸಿದ್ದಾರೆ.

ಧರ್ಮದ ಹೆಸರಿನಲ್ಲಿ ಪುಂಡಾಟಿಕೆ ನಡೆಸುವ ಮೂಲಕ ಸಂವಿಧಾನದ ಮೇಲೆ ಸವಾರಿ ಮಾಡುವ ಇಂತಹ ಘಟನೆಗಳಿಂದ ಸಾರ್ವತ್ರಿಕ ತಿರಸ್ಕಾರಕ್ಕೆ ಮತ್ತು ಅವಗಣನೆಗೆ ಸಮುದಾಯವೊಂದು ಪದೇ ಪದೆ ಗುರಿಯಾಗುತ್ತಿರುವುದು ಸ್ವಯಂಕೃತ ಅಪರಾಧವಲ್ಲದೆ ಬೇರೇನಿಲ್ಲ. ಈ ಘಟನೆ ಪೂರ್ವಯೋಜಿತ ಸಂಚು ಎಂಬ ಅನುಮಾನಕ್ಕೂ ಪುಷ್ಠಿ ನೀಡಿದೆ. ಸ್ಥಳೀಯ ಜನಪ್ರತಿನಿಧಿಗಳ ಸ್ವಜನಪಕ್ಷಪಾತ, ಅಧಿಕಾರ ಲಾಲಸೆಗಳಿಂದಾಗಿ ಇಂಥದೊಂದು ಸಣ್ಣ ಕಿಡಿ ಬೆಂಕಿಯುಂಡೆ ಆಗುವ ಮೂಲಕ ಅಮಾಯಕ ಜನರ ಸಿಟ್ಟು-ಸೆಡವು ಸ್ಫೋಟಗೊಂಡಿದೆ. ನಿರುಪದ್ರವಿಗಳ ರಕ್ತ ಚೆಲ್ಲಾಡಿದೆ. ಕೌಟುಂಬಿಕ ದ್ವೇಷಾಸೂಯೆಗಳು ದುರ್ವರ್ತನೆಗೆ ವೇದಿಕೆಯಾಗಿರುವುದು ಸುಳ್ಳಲ್ಲ ಎಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.