ETV Bharat / state

ಸುಳ್ಳು ಸೃಷ್ಟಿ ಮಾಡುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು: ಹೆಚ್​ಡಿಕೆ ಕಿಡಿ - HD Kumaraswamy tweet about MC managuli

ವ್ಯಕ್ತಿ ಇಲ್ಲವಾದ ಮೇಲೆ ಅವರ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸುವುದು ರಾಜಕೀಯವಾಗಿ ಹಾಗೂ ವೈಯಕ್ತಿಕವಾಗಿ ʼಅನೈತಿಕʼ ಎಂಬುದು ನನ್ನ ಅಭಿಪ್ರಾಯ. ಡಿ.ಕೆ. ಶಿವಕುಮಾರ್ ಸುಳ್ಳು ಹೇಳುವ ಮೂಲಕ ದಿವಂಗತ ನಾಯಕ ಎಂ ಸಿ ಮನಗೂಳಿ ಕುರಿತು ಅಪ ಪ್ರಚಾರ ಮಾಡಿದ್ದಾರೆ ಎಂದು ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

HD Kumaraswamy
HD Kumaraswamy
author img

By

Published : Oct 9, 2021, 12:07 PM IST

ಬೆಂಗಳೂರು : ಸುಳ್ಳು ಹೇಳುವುದಕ್ಕೂ ಮಿತಿ ಇರಬೇಕು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಪ್ಪಟ ಸುಳ್ಳು ಹೇಳುವ ಮೂಲಕ ಮಾಜಿ ಶಾಸಕ ದಿವಂಗತ ಎಂ ಸಿ ಮನಗೂಳಿ ಕುರಿತು ಅಪ ಪ್ರಚಾರ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ತಾವು ನಿಧನರಾಗುವುದಕ್ಕೆ 15 ದಿನ ಮೊದಲು ಮನಗೂಳಿ ತಮ್ಮ ಪುತ್ರ ಅಶೋಕ್ ಅವರನ್ನು ಕರೆದುಕೊಂಡು ನಮ್ಮ ಮನೆಗೆ ಬಂದಿದ್ದರು. ನನಗೆ ವಯಸ್ಸಾಗಿದೆ, ಆರೋಗ್ಯ ಸರಿ ಇಲ್ಲ. ಎಷ್ಟು ದಿನ ಇರುತ್ತೇನೋ ಗೊತ್ತಿಲ್ಲ, ಅಶೋಕನನ್ನು ನಿಮ್ಮ ಹಾಗೂ ಸಿದ್ದರಾಮಯ್ಯ ಮಡಿಲಿಗೆ ಹಾಕುತ್ತಿದ್ದೇನೆ ಎಂದು ಡಿ.ಕೆ ಶಿವಕುಮಾರ್‌ ಅವರಿಗೆ ಹೇಳಿದ್ದರಂತೆ. ಸುಳ್ಳುಗಳನ್ನು ಸೃಷ್ಟಿ ಮಾಡುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು ಎನ್ನುವುದಕ್ಕೆ ಇದಕ್ಕಿಂತ ಅತ್ಯುತ್ತಮ ಉದಾಹರಣೆ ಬೇರೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಸುಳ್ಳುಗಳನ್ನು ಸೃಷ್ಟಿ ಮಾಡುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು ಎನ್ನುವುದಕ್ಕೆ ಇದಕ್ಕಿಂತ ಅತ್ಯುತ್ತಮ ಉದಾಹರಣೆ ಬೇರೆ ಇಲ್ಲ. ಸತ್ಯ ಏನೆಂದರೆ; ಕೋವಿಡ್ ಸೋಂಕಿತರಾಗಿದ್ದ ಮನಗೂಳಿ ಅವರನ್ನು ಬೆಂಗಳೂರಿನ ಅಪೊಲೋ ಆಸ್ಪತ್ರೆಗೆ ನಾವೇ ಸೇರಿಸಿದ್ದೆವು. 19 ದಿನಗಳ ಕಾಲ ಅವರು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ್ದರು.3/6

    — H D Kumaraswamy (@hd_kumaraswamy) October 9, 2021 " class="align-text-top noRightClick twitterSection" data=" ">

ಸತ್ಯ ಏನಂದ್ರೆ, ಕೋವಿಡ್ ಸೋಂಕಿತರಾಗಿದ್ದ ಮನಗೂಳಿ ಅವರನ್ನು ಬೆಂಗಳೂರಿನ ಅಪೊಲೋ ಆಸ್ಪತ್ರೆಗೆ ನಾವೇ ಸೇರಿಸಿದ್ದೆವು. 19 ದಿನಗಳ ಕಾಲ ಅವರು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ್ದರು. ಜನವರಿ 9 ರಂದು ಮನಗೂಳಿ ಅವರು ಅಪೊಲೋ ಆಸ್ಪತ್ರೆಗೆ ದಾಖಲಾಗಿ, ಜನವರಿ 28 ರಂದು ಅಲ್ಲಿಯೇ ನಿಧನರಾದರು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮನಗೂಳಿ ಅವರನ್ನು ನಾನೂ ಸೇರಿದಂತೆ ಅವರ ಮಕ್ಕಳು ಸಹ ನೋಡಲಾಗಲಿಲ್ಲ. ಅದಕ್ಕೂ ಮೊದಲು ಅವರು ಒಂದೂವರೆ ತಿಂಗಳ ಕಾಲ ವಿಜಯಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಹಾಗಾದ್ರೆ, ಮನಗೂಳಿ ಅವರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮನೆಗೆ ಹೋಗಿದ್ದು ಯಾವಾಗ?, ಮಕ್ಕಳನ್ನು ಮಡಿಲಿಗೆ ಹಾಕಿಕೊಳ್ಳಿ ಎಂಬ ಅವರ ಹಸಿಸುಳ್ಳುಗಳು ಅಸಹ್ಯ ಹುಟ್ಟಿಸುವಂತಿವೆ. ನಮ್ಮ ಪಕ್ಷದ ಅಭ್ಯರ್ಥಿಯಾಗಬೇಕಿದ್ದ ಅಶೋಕ್ ಮನಗೂಳಿ ಅವರನ್ನು ಹೈಜಾಕ್ ಮಾಡಿದ್ದಲ್ಲದೆ, ಈಗ ಸುಳ್ಳುಗಳ ಸರಮಾಲೆ ಹೆಣೆಯುತ್ತಾ ಜನರಿಗೆ ಟೋಪಿ ಹಾಕಲು ಹೊರಟಿದ್ದಾರೆ ಎಂದು ಟೀಕಿಸಿದ್ದಾರೆ.

ಸಿಂಧಗಿ ಜನತೆಗೆ ಯಾಮಾರಿಸುವ ಪ್ರಯತ್ನ ಬೇಡ. ದಿಕ್ಕಿಲ್ಲದ ಕಾಂಗ್ರೆಸ್ ಪಕ್ಷದ ನಾಯಕರು ಈಗ ದಿಕ್ಕು ತೋಚದ ಸ್ಥಿತಿಯಲ್ಲಿದ್ದಾರೆ. ನಮ್ಮ ಪಕ್ಷ ಹಾಗೂ ಹೆಚ್.ಡಿ.ದೇವೇಗೌಡರ ಬಗ್ಗೆ ಅಚಲ ನಿಷ್ಠೆ ಹೊಂದಿದ್ದ ದಿವಂಗತ ಮನಗೂಳಿ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನ ಸರಿಯಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.