ETV Bharat / state

ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದನ್ನೇ ಆಡಳಿತಕ್ಕೆ ಬಂದಾಗ ಕದ್ದುಮುಚ್ಚಿ ಮಾಡುವುದು ಬಿಜೆಪಿಯ 'ಸಂಸ್ಕೃತಿ': ಹೆಚ್​ಡಿಕೆ ಕಿಡಿ - h d kumaraswamy tweet against bjp

ಜಿಂದಾಲ್‌ಗೆ ಭೂಮಿ ನೀಡಿದ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಸರಣಿ ಟ್ವೀಟ್​ ಮಾಡುವ ಮೂಲಕ ಕಟುವಾಗಿ ಟೀಕಿಸಿದ್ದಾರೆ.

HD Kumaraswamy
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ
author img

By

Published : Apr 27, 2021, 11:57 AM IST

ಬೆಂಗಳೂರು: ವಿರೋಧಕ್ಕಾಗಿಯೇ ವಿರೋಧ ಮಾಡುವುದು, ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದನ್ನೇ ಆಡಳಿತಕ್ಕೆ ಬಂದಾಗ ಕದ್ದುಮುಚ್ಚಿ ಮಾಡುವುದು ಬಿಜೆಪಿಯ 'ಸಂಸ್ಕೃತಿ' ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

  • 'ಬಿಎಸ್‌ವೈ ಅಹೋರಾತ್ರಿ ಧರಣಿ, ಬಿಜೆಪಿ ಯುವ ಮೋರ್ಚಾದಿಂದ ವಿಧಾನಸೌಧ ಮುತ್ತಿಗೆ, ಮೈತ್ರಿ ಸರ್ಕಾರದ ಮೇಲೆ ಕಿಕ್‌ ಬ್ಯಾಕ್‌ ಆರೋಪ...' ಜಿಂದಾಲ್‌ಗೆ 3677 ಎಕರೆ ಭೂಮಿ ಮಾರಾಟ ಮಾಡಲು ನಿರ್ಧರಿಸಿದ್ದ ಮೈತ್ರಿ ಸರ್ಕಾರದ ವಿರುದ್ಧ ಬಿಜೆಪಿ ನಡೆಸಿದ್ದ ಹೋರಾಟಗಳಿವು. ಆದರೆ ಇಂದು ಬಿಜೆಪಿ ಅದೇ ಜಿಂದಾಲ್‌ಗೆ ಅದೇ ಭೂಮಿಯನ್ನು ಸದ್ದಿಲ್ಲದೇ ಮಾರಿದೆ.
    1/7

    — H D Kumaraswamy (@hd_kumaraswamy) April 27, 2021 " class="align-text-top noRightClick twitterSection" data=" ">

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಜಿಂದಾಲ್‌ಗೆ ಭೂಮಿ ನೀಡುವ ವಿಚಾರದಲ್ಲಿ ಅಂದು ನನ್ನ ಸರ್ಕಾರದ ವಿರುದ್ಧ, ನನ್ನ ವಿರುದ್ಧ ಸಲ್ಲದ ಆರೋಪ ಮಾಡಿದ್ದ ಬಿಎಸ್‌ವೈ ಇಂದು ಅದೇ ಆರೋಪಗಳನ್ನು ತಮ್ಮ ಮೇಲೆ ಹೊತ್ತುಕೊಳ್ಳುವರೇ ಎಂದು ಪ್ರಶ್ನಿಸಿದ್ದಾರೆ.

'ಬಿಎಸ್‌ವೈ ಅಹೋರಾತ್ರಿ ಧರಣಿ, ಬಿಜೆಪಿ ಯುವ ಮೋರ್ಚಾದಿಂದ ವಿಧಾನಸೌಧ ಮುತ್ತಿಗೆ, ಮೈತ್ರಿ ಸರ್ಕಾರದ ಮೇಲೆ ಕಿಕ್‌ ಬ್ಯಾಕ್‌ ಆರೋಪ...' ಜಿಂದಾಲ್‌ಗೆ 3,677 ಎಕರೆ ಭೂಮಿ ಮಾರಾಟ ಮಾಡಲು ನಿರ್ಧರಿಸಿದ್ದ ಮೈತ್ರಿ ಸರ್ಕಾರದ ವಿರುದ್ಧ ಬಿಜೆಪಿ ನಡೆಸಿದ್ದ ಹೋರಾಟಗಳಿವು. ಆದರೆ ಇಂದು ಬಿಜೆಪಿ ಅದೇ ಜಿಂದಾಲ್‌ಗೆ ಅದೇ ಭೂಮಿಯನ್ನು ಸದ್ದಿಲ್ಲದೇ ಮಾರಿದೆ ಎಂದು ಆರೋಪಿಸಿದ್ದಾರೆ.

ಆಗ ಕಾಂಗ್ರೆಸ್‌ ಶಾಸಕರಾಗಿದ್ದ, ಈಗ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿರುವ ಆನಂದ್‌ ಸಿಂಗ್‌ ಜಿಂದಾಲ್‌ಅನ್ನು' ಈಸ್ಟ್‌ ಇಂಡಿಯಾ ಕಂಪನಿ' ಎಂದಿದ್ದರು. ಜಿಂದಾಲ್‌ ವಿರುದ್ಧ ಅಂದಿನ ಗೃಹ ಸಚಿವರಿಗೆ ಪತ್ರ ಬರೆದಿದ್ದರು. ಅವರೇ ಇರುವ ಈಗಿನ ಸಂಪುಟ ಸಭೆ ಜಿಂದಾಲ್‌ಗೆ ಭೂಮಿ ನೀಡಿದೆ. ಆನಂದ್‌ ಸಿಂಗ್‌ ಈಗ ಈಸ್ಟ್‌ ಇಂಡಿಯಾ ಕಂಪನಿ ಪರವಾಗಿದ್ದಾರಾ? ಎಂದು ವ್ಯಂಗ್ಯವಾಡಿದ್ದಾರೆ.

ಜಿಂದಾಲ್‌ಗೆ ಭೂಮಿ ನೀಡುವ ವಿಚಾರವಾಗಿ ಅಂದು ಮೈತ್ರಿ ಸರ್ಕಾರದ ಭಾಗವಾಗಿದ್ದುಕೊಂಡೇ ಟೀಕೆ ಮಾಡಿದ್ದ, ದಾಖಲೆ ಪತ್ರಗಳನ್ನು ಬಿಡುಗಡೆ ಮಾಡಿದ್ದ ಹೆಚ್‌.ಕೆ.ಪಾಟೀಲ್‌ ಅವರು ಈಗ ಏನು ಮಾಡುತ್ತಿದ್ದಾರೆ. ಅವರ ದಾಖಲೆ ಪತ್ರಗಳೆಲ್ಲವೂ ಎಲ್ಲಿ ಅಡಗಿಕೊಂಡಿವೆ? ಈಗ ಅವುಗಳನ್ನು ಮತ್ತೊಮ್ಮೆ ಬಿಡುಗಡೆ ಮಾಡಲು ಯಾರು ಅಡ್ಡ ಇದ್ದಾರೆ? ಎಂದು ಪ್ರಶ್ನಿಸಿದ್ದಾರೆ.

  • ಬಿಜೆಪಿ ಸರ್ಕಾರ ಜಿಂದಾಲ್‌ ಮುಂದೆ ಏಕಾಏಕಿ ಮಂಡಿಯೂರಲೂ ಒಂದು ಕಾರಣವಿದೆ. ಅದೇನೆಂದು ಯಡಿಯೂರಪ್ಪರಿಗೆ ಚನ್ನಾಗಿ ಗೊತ್ತಿದೆ. ಅದನ್ನು ಅವರೇ ಬಹಿರಂಗಪಡಿಸಲಿ. ಲೀಸ್‌ ಕಂ ಸೇಲ್‌ ಆಧಾರದ ಭೂಮಿಯನ್ನು ಅಂತಿಮವಾಗಿ ಕ್ರಯ ಮಾಡಿಕೊಡಲೇಬೇಕಾದ ಕಾನೂನು ಬಿಜೆಪಿಗೆ ಈಗಲಾದರೂ ಅರಿವಿಗೆ ಬಂದಿದ್ದರೆ ಸಾಕು. ಇನ್ನಾದರೂ ಬಿಜೆಪಿ ಸಲ್ಲದ ಕಿತಾಪತಿ ಮಾಡದಿರಲಿ.
    7/7

ಜಿಂದಾಲ್‌ ಕಂಪನಿಗೆ 3,667 ಎಕರೆ ಭೂಮಿ ಮಾರಾಟ ಮಾಡಲು ಬಿಜೆಪಿ ಸರ್ಕಾರದ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಆದರೆ, ಎಕರೆವಾರು ಶುದ್ಧ ಕ್ರಯಕ್ಕೆ ನಿಗದಿ ಮಾಡಿದ ಮೊತ್ತವೆಷ್ಟು ಎಂಬ ಪ್ರಶ್ನೆಗೆ ಗೃಹ ಸಚಿವರೇ 'ಗೊತ್ತಿಲ್ಲ' ಎಂಬ ಉತ್ತರ ನೀಡಿದ್ದಾರೆ. ಸ್ವತಃ ಗೃಹ ಸಚಿವರಿಗೇ ಮಾಹಿತಿ ಇಲ್ಲ ಎಂದರೆ ಏನು ಅರ್ಥ? ಇದನ್ನು ನಂಬಲು ಸಾಧ್ಯವೇ ಎಂದು ಹೇಳಿದ್ದಾರೆ.

ಲೀಸ್‌ ಕಂ ಸೇಲ್‌ ಆಧಾರದ ಭೂಮಿಯನ್ನು ಶುದ್ಧ ಕ್ರಯ ಮಾಡಿಕೊಡಬೇಕಾದ್ದು ಕಾನೂನು. ಅದನ್ನೇ ನನ್ನ ಸರ್ಕಾರ ಮಾಡಲು ಹೊರಟಿತ್ತು. ಆದರೆ ಬಿಜೆಪಿ ಕಿತಾಪತಿ ಮಾಡಿತ್ತು. ಜನರಲ್ಲಿ ಮೂಡಬಹುದಾದ ಸಂಶಯ ನಿವಾರಣೆ ಮಾಡಿ ನಂತರ ಭೂಮಿ ನೀಡುವ ನಿರ್ಧಾರಕ್ಕೆ ಬಂದ ನನ್ನ ಸರ್ಕಾರ ಮಾರಾಟ ಪ್ರಕ್ರಿಯೆಯನ್ನು ನಿಲ್ಲಿಸಿತ್ತು. ಬಿಜೆಪಿಗೆ ಈಗ ಜ್ಞಾನೋದಯವಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ಹುಟ್ಟೂರು ಕೊಡಿಗೆಹಳ್ಳಿಯಲ್ಲಿ ನಿರ್ಮಾಪಕ ರಾಮು ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ

ಬಿಜೆಪಿ ಸರ್ಕಾರ ಜಿಂದಾಲ್‌ ಮುಂದೆ ಏಕಾಏಕಿ ಮಂಡಿಯೂರಲೂ ಒಂದು ಕಾರಣವಿದೆ. ಅದೇನೆಂದು ಯಡಿಯೂರಪ್ಪರಿಗೆ ಚನ್ನಾಗಿ ಗೊತ್ತಿದೆ. ಅದನ್ನು ಅವರೇ ಬಹಿರಂಗಪಡಿಸಲಿ. ಲೀಸ್‌ ಕಂ ಸೇಲ್‌ ಆಧಾರದ ಭೂಮಿಯನ್ನು ಅಂತಿಮವಾಗಿ ಕ್ರಯ ಮಾಡಿಕೊಡಲೇಬೇಕಾದ ಕಾನೂನು ಬಿಜೆಪಿಗೆ ಈಗಲಾದರೂ ಅರಿವಿಗೆ ಬಂದಿದ್ದರೆ ಸಾಕು. ಇನ್ನಾದರೂ ಬಿಜೆಪಿ ಸಲ್ಲದ ಕಿತಾಪತಿ ಮಾಡದಿರಲಿ ಎಂದು ಸಲಹೆ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.