ETV Bharat / state

ತ್ರಿಭಾಷಾ ಸೂತ್ರಕ್ಕೆ ಸಮಾಧಿ ಕಟ್ಟಲು ಕೇಂದ್ರ ಸರ್ಕಾರ ಹೊರಟಿದೆ: ಕುಮಾರಸ್ವಾಮಿ ಅಸಮಾಧಾನ - ಕುಮಾರಸ್ವಾಮಿ ಟ್ವೀಟ್

ಕೇಂದ್ರ ಸರ್ಕಾರ ತ್ರಿಭಾಷಾ ಸೂತ್ರಕ್ಕೆ ಹೇಗಾದರೂ ಸಮಾಧಿ ಕಟ್ಟಲೇಬೇಕೆಂದು ಹೊರಟಂತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

HD Kumaraswamy
ಹೆಚ್.ಡಿ.ಕುಮಾರಸ್ವಾಮಿ
author img

By

Published : Oct 7, 2022, 1:38 PM IST

ಬೆಂಗಳೂರು: ಕೇಂದ್ರದ ಸಿಬ್ಬಂದಿ ಆಯ್ಕೆ ಆಯೋಗ (SSC) 20,000 ಹುದ್ದೆ ಆಯ್ಕೆಗೆ ಹಿಂದಿ - ಇಂಗ್ಲಿಷ್​​ನಲ್ಲಿ ಮಾತ್ರ ಪರೀಕ್ಷೆ ನಡೆಸುತ್ತಿದೆ. ಆಯ್ಕೆಯಾದ ಅಭ್ಯರ್ಥಿಯನ್ನು ಯಾವ ರಾಜ್ಯಕ್ಕಾದರೂ ಕಳುಹಿಸಬಹುದು. ಕನ್ನಡ ಸೇರಿ ಯಾವುದೇ ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆಗೆ ಅವಕಾಶವಿಲ್ಲ. ಹಿಂದಿ ಹೇರಿಕೆ, ಭಾಷಾ ತಾರತಮ್ಯಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

  • ಕೇಂದ್ರ @BJP4India ಸರಕಾರಕ್ಕೆ ಪ್ರಾದೇಶಿಕ ಭಾಷೆಗಳನ್ನು ಹತ್ತಿಕ್ಕಲೇಬೇಕು ಎನ್ನುವ ಕೆಟ್ಟ ಹಠವಿದ್ದಂತೆ ಇದೆ. ಕನ್ನಡವೂ ಸೇರಿ ದಕ್ಷಿಣದ ಪ್ರಾದೇಶಿಕ ಭಾಷೆಗಳ ಬಗ್ಗೆ ಇನ್ನಿಲ್ಲದ ಅಸಹನೆ, ದ್ವೇಷ ಮೈಗೂಡಿಸಿಕೊಂಡಿದೆ ಎನಿಸುತ್ತಿದೆ. ತ್ರಿಭಾಷಾ ಸೂತ್ರಕ್ಕೆ ಹೇಗಾದರೂ ಸಮಾಧಿ ಕಟ್ಟಲೇಬೇಕೆಂದು ಹೊರಟಂತಿದೆ. 2/5 pic.twitter.com/G7a0HTRiXK

    — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 7, 2022 " class="align-text-top noRightClick twitterSection" data=" ">

ಈ ಕುರಿತು ಟ್ವೀಟ್ ಮಾಡಿರುವ ಅವರು, ಕೇಂದ್ರ ಸರ್ಕಾರಕ್ಕೆ ಪ್ರಾದೇಶಿಕ ಭಾಷೆಗಳನ್ನು ಹತ್ತಿಕ್ಕಲೇಬೇಕು ಎನ್ನುವ ಕೆಟ್ಟ ಹಠವಿದ್ದಂತೆ ಇದೆ. ಕನ್ನಡವೂ ಸೇರಿ ದಕ್ಷಿಣದ ಪ್ರಾದೇಶಿಕ ಭಾಷೆಗಳ ಬಗ್ಗೆ ಇನ್ನಿಲ್ಲದ ಅಸಹನೆ, ದ್ವೇಷ ಮೈಗೂಡಿಸಿಕೊಂಡಿದೆ ಎನಿಸುತ್ತಿದೆ. ತ್ರಿಭಾಷಾ ಸೂತ್ರಕ್ಕೆ ಹೇಗಾದರೂ ಸಮಾಧಿ ಕಟ್ಟಲೇಬೇಕೆಂದು ಹೊರಟಂತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

  • ಒಕ್ಕೂಟ ತತ್ವದಲ್ಲಿ ಆಡಳಿತ ನಡೆಸುವ ಪಕ್ಷಕ್ಕೇ ಒಪ್ಪಿಗೆ ಇಲ್ಲ ಎನ್ನುವುದನ್ನು ಇದು ತೋರಿಸುತ್ತಿದೆ. ಹಿಂದಿ ಭಾಷಿಗರನ್ನು ಕರ್ನಾಟಕ ಹಾಗೂ ದಕ್ಷಿಣ ಭಾರತದಲ್ಲಿ ತುಂಬುವ ದುಸ್ಸಾಹಸವಷ್ಟೇ ಇದು.

    ಈ ವಿಷಯದಲ್ಲಿ ನಮ್ಮ 2 ಬೇಡಿಕೆಗಳಿವೆ.
    1.ಕನ್ನಡದಲ್ಲೂ ಪರೀಕ್ಷೆ ನಡೆಸಬೇಕು.
    2.ಕರ್ನಾಟಕದ ಹುದ್ದೆಗಳಿಗೆ ಕನ್ನಡಿಗರನ್ನೇ ನೇಮಿಸಬೇಕು.
    3/5

ಒಕ್ಕೂಟ ತತ್ವದಲ್ಲಿ ಆಡಳಿತ ನಡೆಸುವ ಪಕ್ಷಕ್ಕೆ ಒಪ್ಪಿಗೆ ಇಲ್ಲ ಎನ್ನುವುದನ್ನು ಇದು ತೋರಿಸುತ್ತಿದೆ. ಹಿಂದಿ ಭಾಷಿಗರನ್ನು ಕರ್ನಾಟಕ ಹಾಗೂ ದಕ್ಷಿಣ ಭಾರತದಲ್ಲಿ ತುಂಬುವ ದುಸ್ಸಾಹಸವಷ್ಟೇ ಇದು ಎಂದು ಕಿಡಿಕಾರಿದ್ದಾರೆ.

  • ಕರ್ನಾಟಕದ ಹುದ್ದೆಗಳಿಗೆ ಕನ್ನಡಿಗರ ನೇಮಕವಾದರೆ, ಕರ್ನಾಟಕದ ಜನರಿಗೆ ಕನ್ನಡದಲ್ಲಿ ಸೇವೆ ದೊರೆಯುತ್ತದೆ. ತಪ್ಪಿದರೆ, ಕೇಂದ್ರವು ಕನ್ನಡಿಗರ ಆಗ್ರಹಕ್ಕೆ ಗುರಿಯಾಗಬೇಕಾಗುತ್ತದೆ. 5/5#ಕರ್ನಾಟಕದಲ್ಲಿ_ಕನ್ನಡವೇ_ಮೊದಲು

  • ಕನ್ನಡದಲ್ಲೂ ಪರೀಕ್ಷೆ ನಡೆಸಬೇಕು.
  • ಕರ್ನಾಟಕದ ಹುದ್ದೆಗಳಿಗೆ ಕನ್ನಡಿಗರನ್ನೇ ನೇಮಿಸಬೇಕು.

ಈ ಬದಲಾವಣೆ ನಂತರವಷ್ಟೇ ಸಿಬ್ಬಂದಿ ಆಯ್ಕೆ ಆಯೋಗ ಪರೀಕ್ಷೆ ನಡೆಸಬೇಕು ಎಂದು ಹೆಚ್​ಡಿಕೆ ಆಗ್ರಹಿಸಿದ್ದಾರೆ. ಕನ್ನಡದಲ್ಲೇ ಪರಿಕ್ಷೆ ನಡೆಸಿದರೆ ಕರ್ನಾಟಕದ ಅನೇಕ ಪ್ರತಿಭಾವಂತ ಯುವಜನರು ಆಯ್ಕೆ ಆಗಲು ಅನುಕೂಲವಾಗುತ್ತದೆ. ಕರ್ನಾಟಕದ ಹುದ್ದೆಗಳಿಗೆ ಕನ್ನಡಿಗರ ನೇಮಕವಾದರೆ, ಕರ್ನಾಟಕದ ಜನರಿಗೆ ಕನ್ನಡದಲ್ಲಿ ಸೇವೆ ದೊರೆಯುತ್ತದೆ. ತಪ್ಪಿದರೆ, ಕೇಂದ್ರವು ಕನ್ನಡಿಗರ ಆಗ್ರಹಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಹೆಚ್​ಡಿಕೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಕನ್ನಡಕ್ಕೆ ಕನ್ನಡ ನೆಲದಲ್ಲೇ ಅಪಚಾರ.. ಮಾಜಿ ಸಿಎಂ ಹೆಚ್​ಡಿಕೆ ಖಂಡನೆ..

ETV Bharat Logo

Copyright © 2025 Ushodaya Enterprises Pvt. Ltd., All Rights Reserved.