ಬೆಂಗಳೂರು: ಡಿನ್ನರ್-ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿಕೊಂಡು ಆಪರೇಷನ್ ಹಸ್ತದ ಬಗ್ಗೆಯೇ ನಿಮ್ಮ ಸಚಿವರ ಬಳಿ ಅಲವತ್ತುಕೊಳ್ಳುತ್ತಿದ್ದೀರಿ. ಪಂಚರಾಜ್ಯಗಳಿಗೆ ಹಣ ಹೊಂಚಲು ರಾಜ್ಯವನ್ನು ದೋಚುವುದು ಹೇಗೆಂದು ಗುಟ್ಟು ಗುಟ್ಟಾಗಿ ಪಾಠ ಮಾಡುತ್ತಿದ್ದೀರಿ ಎಂದು ಕಾಂಗ್ರೆಸ್ ನಾಯಕರು ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.
-
ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ʼಹೃದಯ ವೈಶಾಲ್ಯತೆʼಗೆ ನಾನು ಆಭಾರಿ. #ರೈತ_ಸಾಂತ್ವನ_ಯಾತ್ರೆ ಯನ್ನು ಸ್ವಾಗತ ಮಾಡಿರುವ ನಿಮ್ಮ ʼದೊಡ್ಡʼ ಗುಣವನ್ನು ಮನಸಾರೆ ಕೊಂಡಾಡುತ್ತೇನೆ. @JanataDal_S ಸಲ್ಲಿಸಲಿರುವ ಬರ ಅಧ್ಯಯನ ವರದಿಯನ್ನು ಗಂಭೀರವಾಗಿ ಪರಿಗಣಿಸುವುದಾಗಿ ಹೇಳಿದ್ದೀರಿ, ಬಹಳ ಸಂತೋಷ.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 6, 2023 " class="align-text-top noRightClick twitterSection" data="
*
‘ರೈತ ಸಾಂತ್ವನ ಯಾತ್ರೆ’ಯ ಅನುಭವವನ್ನು…
">ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ʼಹೃದಯ ವೈಶಾಲ್ಯತೆʼಗೆ ನಾನು ಆಭಾರಿ. #ರೈತ_ಸಾಂತ್ವನ_ಯಾತ್ರೆ ಯನ್ನು ಸ್ವಾಗತ ಮಾಡಿರುವ ನಿಮ್ಮ ʼದೊಡ್ಡʼ ಗುಣವನ್ನು ಮನಸಾರೆ ಕೊಂಡಾಡುತ್ತೇನೆ. @JanataDal_S ಸಲ್ಲಿಸಲಿರುವ ಬರ ಅಧ್ಯಯನ ವರದಿಯನ್ನು ಗಂಭೀರವಾಗಿ ಪರಿಗಣಿಸುವುದಾಗಿ ಹೇಳಿದ್ದೀರಿ, ಬಹಳ ಸಂತೋಷ.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 6, 2023
*
‘ರೈತ ಸಾಂತ್ವನ ಯಾತ್ರೆ’ಯ ಅನುಭವವನ್ನು…ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ʼಹೃದಯ ವೈಶಾಲ್ಯತೆʼಗೆ ನಾನು ಆಭಾರಿ. #ರೈತ_ಸಾಂತ್ವನ_ಯಾತ್ರೆ ಯನ್ನು ಸ್ವಾಗತ ಮಾಡಿರುವ ನಿಮ್ಮ ʼದೊಡ್ಡʼ ಗುಣವನ್ನು ಮನಸಾರೆ ಕೊಂಡಾಡುತ್ತೇನೆ. @JanataDal_S ಸಲ್ಲಿಸಲಿರುವ ಬರ ಅಧ್ಯಯನ ವರದಿಯನ್ನು ಗಂಭೀರವಾಗಿ ಪರಿಗಣಿಸುವುದಾಗಿ ಹೇಳಿದ್ದೀರಿ, ಬಹಳ ಸಂತೋಷ.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 6, 2023
*
‘ರೈತ ಸಾಂತ್ವನ ಯಾತ್ರೆ’ಯ ಅನುಭವವನ್ನು…
ಈ ಕುರಿತು ಟ್ವೀಟ್ ಮಾಡಿರುವ ಅವರು, ಜೆಡಿಎಸ್, ಬಿಜೆಪಿ ಶಾಸಕರು ಹಾಗೂ ಸೋತ ಅಭ್ಯರ್ಥಿಗಳನ್ನು ಆಪರೇಷನ್ ಮಾಡಲು ಗುಳ್ಳೆನರಿಗಳಂತೆ ಅವರ ಮನೆಗಳ ಮುಂದೆ ಕತ್ತಲಾದ ಮೇಲೆ ಹೊಂಚು ಹಾಕಿ ಕೂರುತ್ತಿದ್ದೀರಿ ಎಂದು ಕಿಡಿಕಾರಿದ್ದಾರೆ.
ಕುತ್ತಿಗೆಗೆ ಗ್ಯಾರಂಟಿ ಬೋರ್ಡ್ ತಗಲಾಕ್ಕೊಂಡು ಹಾದಿ ಬೀದಿಯಲ್ಲಿ ಓಡಾಡುತ್ತಿದ್ದೀರಿ. ಐದು ತಿಂಗಳಿಗೆ ಭದ್ರತೆಯ ಗ್ಯಾರಂಟಿ ಇಲ್ಲದೆ ಬಾಲಗ್ರಹಪೀಡಿತ ನಿಮ್ಮ ಸರ್ಕಾರ ಭಿನ್ನಮತ ಪೀಡಿತವಾಗಿದೆ. ಕುರ್ಚಿ ಉಳಿಸಿಕೊಳ್ಳಲು ನೀವೂ ಹೆಣಗಾಡುತ್ತಿದ್ದೀರಿ. ಇದಕ್ಕೆ ಸಿದ್ದರಾಮಯ್ಯನವರೇ ಉತ್ತರಿಸಿ ಎಂದು ಆಗ್ರಹಿಸಿದ್ದಾರೆ.
ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ 'ಹೃದಯ ವೈಶಾಲ್ಯತೆ'ಗೆ ನಾನು ಆಭಾರಿ. ರೈತ ಸಾಂತ್ವನ ಯಾತ್ರೆಯನ್ನು ಸ್ವಾಗತ ಮಾಡಿರುವ ನಿಮ್ಮ 'ದೊಡ್ಡ' ಗುಣವನ್ನು ಮನಸಾರೆ ಕೊಂಡಾಡುತ್ತೇನೆ. ಜೆಡಿಎಸ್ನಲ್ಲಿ ಸಲ್ಲಿಸಲಿರುವ ಬರ ಅಧ್ಯಯನ ವರದಿಯನ್ನು ಗಂಭೀರವಾಗಿ ಪರಿಗಣಿಸುವುದಾಗಿ ಹೇಳಿದ್ದೀರಿ. ಬಹಳ ಸಂತೋಷ. ರೈತ ಸಾಂತ್ವನ ಯಾತ್ರೆಯ ಅನುಭವವನ್ನು ಕೇಂದ್ರದ ಜೊತೆಗೂ ಹಂಚಿಕೊಳ್ಳುತ್ತೇವೆ. ನಿಮಗೆ ಸಂಶಯ ಬೇಡ. ರಾಜ್ಯದ ಅಗತ್ಯಗಳಿಗೆ ಕೇಂದ್ರ ಸರ್ಕಾರ ಹೇಗೆ ಸ್ಪಂದಿಸುತ್ತಿದೆ? ಅದಕ್ಕೆ ನಿಮ್ಮ ನೇತೃತ್ವದ ಸರ್ಕಾರ ಎಷ್ಟು ಗಂಭೀರ ಪ್ರಯತ್ನ ಮಾಡಿದೆ, ಮಾಡುತ್ತಿದೆ ಎನ್ನುವುದು ನನಗೂ ತಿಳಿದಿದೆ. ಬರದ ಜೊತೆಗೆ, ವಿದ್ಯುತ್ ಬಿಕ್ಕಟ್ಟು, ಕಾವೇರಿ ಸಂಕಷ್ಟದ ವಿಷಯದಲ್ಲಿ ನಿಮ್ಮ ಸರ್ಕಾರದ 'ಅಪರಿಮಿತ ಅಸಡ್ಡೆ'ಯನ್ನು ಅರಿಯದಷ್ಟು ಮುಗ್ಧನೇ ನಾನು? ಎಂದು ಪ್ರಶ್ನಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಹೆಚ್.ಡಿ.ದೇವೇಗೌಡರು ಮತ್ತವರ ಕುಟುಂಬಕ್ಕೆ ಆತ್ಮೀಯತೆ ಇದೆ ಎಂಬುದರಲ್ಲಿ ಎರಡು ಮಾತಿಲ್ಲ. ಬಿಜೆಪಿ-ಜೆಡಿಎಸ್ ನಡುವೆ ಮೈತ್ರಿ ಏರ್ಪಟ್ಟಿದೆ ಎನ್ನುವುದೂ ನಿಜ. ರಾಜ್ಯದ ಹಿತಕ್ಕಾಗಿ ನಾವು ಪ್ರಧಾನಿಯವರ ಮುಂದೆಯೂ ದನಿ ಎತ್ತುತ್ತೇವೆ, ಅದು ನಮ್ಮ ಬದ್ಧತೆ. ಆದರೆ, ನಿಮಗೆ ರಾಜ್ಯದ ಬರ ಮತ್ತಿತರೆ ಸಂಕಷ್ಟಗಳಿಗಿಂತ ಈ ಮೈತ್ರಿಯೇ ಬಹುದೊಡ್ಡ ಸಂಕಷ್ಟವಾಗಿ ಪರಿಣಮಿಸಿದಂತೆ ತೋರುತ್ತಿದೆ ಎಂದು ಮಾಜಿ ಸಿಎಂ ವಾಗ್ದಾಳಿ ನಡೆಸಿದರು.
ಪ್ರತಿಪಕ್ಷಗಳಾಗಿ ನಮ್ಮ ಪ್ರಯತ್ನ ನಾವು ಮಾಡುತ್ತೇವೆ, ಸರ್ಕಾರವಾಗಿ ನಿಮ್ಮ ಸಾಧನೆ ಏನು? ಎಷ್ಟು ರೈತರಿಗೆ ಬೆಳೆ ವಿಮೆ ಕೊಡಿಸಿದ್ದೀರಿ? ಎಷ್ಟು ಪರಿಹಾರ ನೀಡಿದ್ದೀರಿ?. 216 ತಾಲೂಕು ಬರಪೀಡಿತವಾಗಿದ್ದು, 33,710 ಕೋಟಿ ರೂ. ಮೌಲ್ಯದ ಬೆಳೆಹಾನಿ ಆದ ಕಾರಣ ಕೇಂದ್ರಕ್ಕೆ 17,901 ಕೋಟಿ ರೂ. ಪರಿಹಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದ್ದೀರಿ. ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿ 'ವಿಶ್ವವಿಖ್ಯಾತ ವಿತ್ತತಜ್ಞ'ರಾಗಿ ಮೆರೆಯುತ್ತಿರುವವರು ನೀವು (ಸಿದ್ದರಾಮಯ್ಯ) ಕೇಂದ್ರ ಸರ್ಕಾರವು ಬರಕ್ಕೆ, ಪ್ರವಾಹಕ್ಕೆ ಯಾವ ರೀತಿ ಪರಿಹಾರ ಕೊಡುತ್ತದೆ ಎನ್ನುವ ಸಾಮಾನ್ಯ ತಿಳಿವಳಿಕೆಯೂ ಇಲ್ಲವೇ? ಎಂದು ಟೀಕಿಸಿದ್ದಾರೆ.
ರಾಜ್ಯದ ನೆಲ-ಜಲ ಇನ್ನಿತರೆ ಸಂಕಷ್ಟದ ವೇಳೆ ಈ ಇಳಿವಯಸ್ಸಿನಲ್ಲಿಯೂ ದೇವೇಗೌಡರು ನಡೆಸುತ್ತಿರುವ ಹೋರಾಟ ನಿಮಗೆ ಕಾಣಿಸಿಲ್ಲವೇ? ಕಾವೇರಿ ಬಗ್ಗೆ ಅವರು ಸಂಸತ್ತಿನಲ್ಲಿ ಸಿಡಿದೆದ್ದಾಗ ನಿಮ್ಮ ಪಕ್ಷದ ಸದಸ್ಯರೆಲ್ಲರೂ ಎಲ್ಲಿ ಅವಿತು ಕುಳಿತಿದ್ದರು ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಸಚಿವ ಸತೀಶ್ ಜಾರಕಿಹೊಳಿಗೆ ನಾಡಿನ ದೊರೆಯಾಗುವ ಶಕ್ತಿ ಇದೆ: ಪ್ರಸನ್ನಾನಂದ ಸ್ವಾಮೀಜಿ