ಬೆಂಗಳೂರು: "ಸಿದ್ದರಾಮಯ್ಯನವರೇ, ನೀವು ಈಗ ಕರ್ನಾಟಕದ ಮುಖ್ಯಮಂತ್ರಿ. ನನಗೂ ಮುಖ್ಯಮಂತ್ರಿ, ಮಹಾದೇವಪ್ಪ ಅವರಿಗೂ ಮುಖ್ಯಮಂತ್ರಿ, ಕಾಕಾ ಪಾಟೀಲರಿಗೂ ಮುಖ್ಯಮಂತ್ರಿ. ಇಂತಹ ನಿಮ್ಮನ್ನು 'ಸುಳ್ಳುರಾಮಯ್ಶ' ಎಂದು ಕರೆಯುವುದು ನನಗೆ ಸುತಾರಾಂ ಇಷ್ಟವಿಲ್ಲ. ಏಕೆಂದರೆ, ನಿಮ್ಮ ಹೆಸರಿನಲ್ಲೇ 'ರಾಮ'ರಿದ್ದಾರೆ. ತಾವು 'ಸತ್ಯರಾಮಯ್ಯ'ನವರೇ ಆಗಿದ್ದರೆ, ಸ್ವತಃ ತಾವುಗಳೇ ನೇಮಿಸಿದ್ದ, ತಮ್ಮದೇ ಸರ್ಕಾರದ ಕಾನೂನು ಸಚಿವರೇ ಮುಖ್ಯಸ್ಥರಾಗಿದ್ದ ಸದನ ಸಮಿತಿ ನೀಡಿದ್ದ ನೈಸ್ ಕರ್ಮಕಥೆಯನ್ನು ನೀವು ದಯಮಾಡಿ ಪುರುಸೊತ್ತು ಮಾಡಿಕೊಂಡು ಪಾರಾಯಣ ಮಾಡಿ" ಎಂದು ಸಿದ್ದರಾಮಯ್ಯಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.
-
ಮಾನ್ಯ @siddaramaiah ರವರೇ; ನೀವು ಈಗ ಕರ್ನಾಟಕದ ಮುಖ್ಯಮಂತ್ರಿ. ನನಗೂ ಮುಖ್ಯಮಂತ್ರಿ, ಮಹಾದೇವಪ್ಪ ಅವರಿಗೂ ಮುಖ್ಯಮಂತ್ರಿ! ಕಾಕಾ ಪಾಟೀಲರಿಗೂ ಮುಖ್ಯಮಂತ್ರಿ!! ಇಂಥಾ ನಿಮ್ಮನ್ನು 'ಸುಳ್ಳುರಾಮಯ್ಶ' ಎಂದು ಕರೆಯುವುದು ನನಗೆ ಸುತಾರಾಂ ಇಷ್ಟವಿಲ್ಲ. ಏಕೆಂದರೆ, ನಿಮ್ಮ ಹೆಸರಿನಲ್ಲೇ 'ರಾಮ'ರಿದ್ದಾರೆ. 1/8#ನೈಸಿಗೆ_ನ್ಯಾಯ_ಕೊಡಿ
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 23, 2023 " class="align-text-top noRightClick twitterSection" data="
">ಮಾನ್ಯ @siddaramaiah ರವರೇ; ನೀವು ಈಗ ಕರ್ನಾಟಕದ ಮುಖ್ಯಮಂತ್ರಿ. ನನಗೂ ಮುಖ್ಯಮಂತ್ರಿ, ಮಹಾದೇವಪ್ಪ ಅವರಿಗೂ ಮುಖ್ಯಮಂತ್ರಿ! ಕಾಕಾ ಪಾಟೀಲರಿಗೂ ಮುಖ್ಯಮಂತ್ರಿ!! ಇಂಥಾ ನಿಮ್ಮನ್ನು 'ಸುಳ್ಳುರಾಮಯ್ಶ' ಎಂದು ಕರೆಯುವುದು ನನಗೆ ಸುತಾರಾಂ ಇಷ್ಟವಿಲ್ಲ. ಏಕೆಂದರೆ, ನಿಮ್ಮ ಹೆಸರಿನಲ್ಲೇ 'ರಾಮ'ರಿದ್ದಾರೆ. 1/8#ನೈಸಿಗೆ_ನ್ಯಾಯ_ಕೊಡಿ
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 23, 2023ಮಾನ್ಯ @siddaramaiah ರವರೇ; ನೀವು ಈಗ ಕರ್ನಾಟಕದ ಮುಖ್ಯಮಂತ್ರಿ. ನನಗೂ ಮುಖ್ಯಮಂತ್ರಿ, ಮಹಾದೇವಪ್ಪ ಅವರಿಗೂ ಮುಖ್ಯಮಂತ್ರಿ! ಕಾಕಾ ಪಾಟೀಲರಿಗೂ ಮುಖ್ಯಮಂತ್ರಿ!! ಇಂಥಾ ನಿಮ್ಮನ್ನು 'ಸುಳ್ಳುರಾಮಯ್ಶ' ಎಂದು ಕರೆಯುವುದು ನನಗೆ ಸುತಾರಾಂ ಇಷ್ಟವಿಲ್ಲ. ಏಕೆಂದರೆ, ನಿಮ್ಮ ಹೆಸರಿನಲ್ಲೇ 'ರಾಮ'ರಿದ್ದಾರೆ. 1/8#ನೈಸಿಗೆ_ನ್ಯಾಯ_ಕೊಡಿ
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 23, 2023
ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯನವರಿಗೆ ಟಕ್ಕರ್ ನೀಡಿರುವ ಹೆಚ್ಡಿಕೆ, ನೈಸ್ ಅಕ್ರಮ ತನಿಖೆಗೆ ನಾನೇನು ಮಾಡಿದ್ದೆ ಎಂದು ಸಿಎಂ ಸಾಹೇಬರು ಕೇಳಿದ್ದಾರೆ. ಈ ಬಾಲಿಶ ಪ್ರಶ್ನೆಗೆ ಗೌರವದಿಂದಲೇ ಉತ್ತರಿಸುವೆ. ನಾನು ಸಿಎಂ ಆಗಿದ್ದಾಗ ನನ್ನ ಜತೆಗಿದ್ದ ಅಡ್ವೋಕೇಟ್ ಜನರಲ್, ಅವರ ಕಾನೂನು ತಂಡ ನೈಸ್ ದೌಲತ್ತಿನ ಹುಟ್ಟಡಗಿಸಿತ್ತು. ಅದುವರೆಗೆ ಅಧಿಕಾರಿಗಳನ್ನು ಬೆದರಿಸಿಟ್ಟುಕೊಂಡಿದ್ದ ಆ ಕಂಪನಿಗೆ ಬೊಂಬೆ ತೋರಿಸಿದ್ದೆವು ಎಂದಿದ್ದಾರೆ.
ವಿವಿಧ ನ್ಯಾಯಾಲಯಗಳಲ್ಲಿ ಹೂಡಲಾಗಿದ್ದ ಎಲ್ಲ ನಿಂದನಾ ಅರ್ಜಿಗಳನ್ನು 2019 ಜುಲೈನಲ್ಲಿ ಸುಪ್ರೀಂ ಕೋರ್ಟ್ ವಜಾ ಮಾಡಿತ್ತು. ಅದಕ್ಕಾಗಿ ಅಂದಿನ ಅಡ್ವೋಕೇಟ್ ಜನರಲ್, ಮತ್ತವರ ಕಾನೂನು ತಂಡವನ್ನು ನಾನು ಅಭಿನಂದಿಸಲೇಬೇಕು. ಹಿಂದಿನ ಬಿಜೆಪಿ ಸರ್ಕಾರವೂ ಈ ಲೂಟಿ ಕಂಪನಿಯ ರೆಕ್ಕೆಪುಕ್ಕ ಕತ್ತರಿಸಿ ಹಾಕಿತ್ತು. ಅಂದಿಗೆ (2018) ನೈಸ್ನ ಕೊಚ್ಚೆಯಲ್ಲಿ ಹೊರಳಾಡಿ ಪೊಗದಸ್ತಾಗಿ ಮೇಯ್ದು ಬಲಿತಿದ್ದ ಪ್ರಾಣಿಗಳನ್ನು ಎದುರು ಹಾಕಿಕೊಂಡು ನಾನು ತೆಗೆದುಕೊಂಡ ರಿಸ್ಕ್ ಸಣ್ಣದೇನಲ್ಲ ಸಿದ್ದರಾಮಯ್ಯ ಅವರೇ. ನನ್ನ ಮೇಲೆ ಬಂದ ಒತ್ತಡಗಳ ಬಗ್ಗೆ ನಿಮಗೂ ಮಾಹಿತಿ ಇರಬಹುದು. ಆಗ ನೀವು ಮತ್ತು ನಿಮ್ಮ ಟೀಂ ನನಗೆ ಕೊಟ್ಟ 'ನಿತ್ಯ ಕಿರುಕುಳ'ವನ್ನು ಮರೆಯಲಾದೀತೆ? ಎಂದು ಪ್ರಶ್ನಿಸಿದ್ದಾರೆ.
-
ನೈಸ್ ಯೋಜನೆಗೆ ಶ್ರೀ @H_D_Devegowda ಅವರೇ ಸಹಿ ಹಾಕಿದ್ದು ಎಂದು ಹೇಳುವ ಮೂಲಕ ತಾವು ಎಸಗಿದ ಅಕ್ರಮಕ್ಕೆ ತೇಪೆ ಹಚ್ಚಲು ಹೊರಟಿದ್ದಾರೆ ಉಪ ಮುಖ್ಯಮಂತ್ರಿ ಶ್ರೀ @DKShivakumar ಅವರು. ಆದರೆ, ಅದೇ ದೇವೇಗೌಡರ ಕಾಲದಲ್ಲಿ ಆಗಿದ್ದ ಮೂಲ ಒಪ್ಪಂದದ ಬಗ್ಗೆ ಅವರದ್ದು ಧ್ಯಾನಸ್ಥ ಮೌನ!! ಯಾಕೆ?? 1/10#ಬುಲ್ಡೋಜ್_ಬೆಂಗಳೂರು #ಬುಲ್ಡೋಜ್_ಕರ್ನಾಟಕ
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 22, 2023 " class="align-text-top noRightClick twitterSection" data="
">ನೈಸ್ ಯೋಜನೆಗೆ ಶ್ರೀ @H_D_Devegowda ಅವರೇ ಸಹಿ ಹಾಕಿದ್ದು ಎಂದು ಹೇಳುವ ಮೂಲಕ ತಾವು ಎಸಗಿದ ಅಕ್ರಮಕ್ಕೆ ತೇಪೆ ಹಚ್ಚಲು ಹೊರಟಿದ್ದಾರೆ ಉಪ ಮುಖ್ಯಮಂತ್ರಿ ಶ್ರೀ @DKShivakumar ಅವರು. ಆದರೆ, ಅದೇ ದೇವೇಗೌಡರ ಕಾಲದಲ್ಲಿ ಆಗಿದ್ದ ಮೂಲ ಒಪ್ಪಂದದ ಬಗ್ಗೆ ಅವರದ್ದು ಧ್ಯಾನಸ್ಥ ಮೌನ!! ಯಾಕೆ?? 1/10#ಬುಲ್ಡೋಜ್_ಬೆಂಗಳೂರು #ಬುಲ್ಡೋಜ್_ಕರ್ನಾಟಕ
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 22, 2023ನೈಸ್ ಯೋಜನೆಗೆ ಶ್ರೀ @H_D_Devegowda ಅವರೇ ಸಹಿ ಹಾಕಿದ್ದು ಎಂದು ಹೇಳುವ ಮೂಲಕ ತಾವು ಎಸಗಿದ ಅಕ್ರಮಕ್ಕೆ ತೇಪೆ ಹಚ್ಚಲು ಹೊರಟಿದ್ದಾರೆ ಉಪ ಮುಖ್ಯಮಂತ್ರಿ ಶ್ರೀ @DKShivakumar ಅವರು. ಆದರೆ, ಅದೇ ದೇವೇಗೌಡರ ಕಾಲದಲ್ಲಿ ಆಗಿದ್ದ ಮೂಲ ಒಪ್ಪಂದದ ಬಗ್ಗೆ ಅವರದ್ದು ಧ್ಯಾನಸ್ಥ ಮೌನ!! ಯಾಕೆ?? 1/10#ಬುಲ್ಡೋಜ್_ಬೆಂಗಳೂರು #ಬುಲ್ಡೋಜ್_ಕರ್ನಾಟಕ
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 22, 2023
'ಸಿದ್ದನೆಪ' ಹೇಳಿ ಸಮಯವನ್ನು ಕೊಲ್ಲಬೇಡಿ: ಇಡೀ ಯೋಜನೆಯನ್ನು ಸರ್ಕಾರದ ವಶಕ್ಕೆ ಪಡೆಯಲು ದಿಟ್ಟಹೆಜ್ಜೆ ಇಡಿ. 'ಸಿದ್ದನೆಪ' ಹೇಳಿ ಸಮಯವನ್ನು ಕೊಲ್ಲಬೇಡಿ. ಬಹುಮತ ಇದ್ದರೆ ಸಾಲದು, ಬದ್ಧತೆಯೂ ಇರಬೇಕು. ಅಲ್ಲವೇ? ಎಂದು ಹೆಚ್ಡಿಕೆ ಕುಟುಕಿದ್ದಾರೆ. ನಾನು ರೈತರ ಸಾಲಮನ್ನಾ ಮಾಡಿದೆ ಎನ್ನುವುದು ಎಷ್ಟು ಸತ್ಯವೋ, ಅದಕ್ಕೆ ನೀವು ಹೆಜ್ಜೆಹೆಜ್ಜೆಗೂ ಅಡ್ಡಿ ಮಾಡಿದ್ದೂ ಅಷ್ಟೇ ಸತ್ಯ. ಭಾಗ್ಯಗಳಿಗೆ ನಯಾಪೈಸೆ ಕಡಿಮೆ ಆಗಬಾರದು ಎಂದು ನನಗೆ ಕೊಟ್ಟ ಚಿತ್ರಹಿಂಸೆ ಅಸತ್ಯವೇ?. ಗಟ್ಟಿ ದನಿಯಲ್ಲಿ ಅಬ್ಬರಿಸಿ ಹೇಳಿದರೆ ಸುಳ್ಳು ಸತ್ಯವಾಗುವುದಿಲ್ಲ. ಸತ್ಯರಾಮಯ್ಯರಾಗಿ ಇತಿಹಾಸದಲ್ಲಿ ದಾಖಲಾಗಿ ಎಂದು ಹೆಚ್ಡಿಕೆ ಸವಾಲೆಸೆದಿದ್ದಾರೆ.
ಇದನ್ನೂ ಓದಿ: ನೈಸ್ ಹಗರಣದ ತನಿಖೆ ನಡೆಸಲು ಕಾಂಗ್ರೆಸ್ ಕೈಕಟ್ಟಿ ಹಾಕಿತ್ತು ಎಂಬುದು ಸುಳ್ಳು: ಸಿಎಂ ಸಿದ್ದರಾಮಯ್ಯ