ETV Bharat / state

ನೀವು ಭಾರತದ ಪ್ರಧಾನಿಯೋ ಅಥವಾ ಪಾಕ್‌ನ ಪ್ರಧಾನಿಯೋ.. ಹೆಚ್​ಡಿಕೆ ಟ್ವೀಟಾಸ್ತ್ರ

ಪ್ರಧಾನಿ ಮೋದಿಯವರನ್ನು ಸರಣಿ ಟ್ವೀಟ್​ ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

hd-kumaraswamy-tweet
ಹೆಚ್​ಡಿಕೆ ಆಕ್ರೋಶ
author img

By

Published : Jan 3, 2020, 1:43 PM IST

ಬೆಂಗಳೂರು: ಸಿಎಎ ವಿಷಯದಲ್ಲಿ ಪದೇಪದೆ ಪಾಕ್‌ನ ಜಪ ಮಾಡುವ ಮೋದಿ ಅವರೇ, ನೀವು ಭಾರತದ ಪ್ರಧಾನಿಯೋ ಅಥವಾ ಪಾಕಿಸ್ತಾನದ ಪ್ರಧಾನಿಯೋ? ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಪಾಕಿಸ್ತಾನದ ವಲಸಿಗರು, ನಿರಾಶ್ರಿತರು ನಿಮಗೆ ವೋಟು ಕೊಟ್ಟಿದ್ದಾರೋ?, ಭಾರತದ ಪ್ರಜೆಗಳು ವೋಟು ಕೊಟ್ಟಿದ್ದಾರೋ?, ಭಾರತದ ಸಂವಿಧಾನದಿಂದ ಪ್ರಧಾನಿ ಹುದ್ದೆ ಸಿಕ್ಕಿತೋ, ಪಾಕಿಸ್ತಾನದ ಸಂವಿಧಾನದಿಂದ ಪ್ರಧಾನಿ ಹುದ್ದೆ ಸಿಕ್ಕಿತೋ? ಎಂದು ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

  • ಸಿಎಎ ವಿಷಯದಲ್ಲಿ ಪದೇ ಪದೇ ಪಾಕಿಸ್ತಾನದ ಜಪ ಮಾಡುವ ಮೋದಿ ಅವರೇ ನೀವು ಭಾರತದ ಪ್ರಧಾನಿಯೋ ಅಥವಾ ಪಾಕಿಸ್ತಾನದ ಪ್ರಧಾನಿಯೋ? ಪಾಕಿಸ್ತಾನದ ವಲಸಿಗರು, ನಿರಾಶ್ರಿತರು ನಿಮಗೆ ವೋಟು ಕೊಟ್ಟರೋ? ಭಾರತದ ಪ್ರಜೆಗಳು ವೋಟು ಕೊಟ್ಟರೋ? ಭಾರತೀಯ ಸಂವಿಧಾನದಿಂದ ಪ್ರಧಾನಿ ಹುದ್ದೆ ಸಿಕ್ಕಿತೋ, ಪಾಕಿಸ್ತಾನದ ಸಂವಿಧಾನದಿಂದ ಪ್ರಧಾನಿ ಹುದ್ದೆ ಸಿಕ್ಕಿತೋ?
    1/5

    — H D Kumaraswamy (@hd_kumaraswamy) January 3, 2020 " class="align-text-top noRightClick twitterSection" data=" ">
ಭಾರತೀಯರ ವೋಟು ಪಡೆದು ಸಂವಿಧಾನದ ಪ್ರಕಾರ ಪ್ರಧಾನಿಯಾದ ನಿಮಗೆ ಇಲ್ಲಿನ ರಾಜ್ಯಗಳ ಅಭಿವೃದ್ಧಿ ಆದ್ಯತೆಯೋ ಪಾಕಿಸ್ತಾನದವರಿಗೆ ಪೌರತ್ವ ನೀಡುವುದು ಆದ್ಯತೆಯೋ? ಒಕ್ಕೂಟ ವ್ಯವಸ್ಥೆಯ ಭಾಗವಾಗಿರುವ ಕರ್ನಾಟಕಕ್ಕೆ ಕೊಡಬೇಕಾದ ಅನುದಾನ ಕೊಡಲಾಗದಿದ್ದರೂ ಪಾಕಿಸ್ತಾನದ ಮೇಲೆ ನಿಮ್ಗೆ ಪ್ರೀತಿ ಉಕ್ಕುತ್ತಿರುವುದೇಕೆ? ಅಲ್ಲಿನವರ ಮೇಲೆ ಯಾಕಿಷ್ಟು ಮಮಕಾರ? ಎಂದು ಪ್ರಶ್ನಿಸಿದ್ದಾರೆ.

ಇಪ್ಪತ್ತೈದು ಸಂಸದರನ್ನು ಕೊಟ್ಟ ಕರ್ನಾಟಕದಲ್ಲಿ ಉಂಟಾದ ನೆರೆಯಿಂದ 35 ಸಾವಿರ ಕೋಟಿ ರೂ. ನಷ್ಟವಾದರೂ ಕೊಟ್ಟಿದ್ದು ಬಿಡಿಗಾಸು. ನೆರೆ ಬಾಕಿ ಇನ್ನೂ ಕೊಟ್ಟಿಲ್ಲ. ತೆರಿಗೆಯಲ್ಲಿ ರಾಜ್ಯದ ಪಾಲು ಕೊಟ್ಟಿಲ್ಲ, ಬರ ಪರಿಹಾರವಿಲ್ಲ, ಇವುಗಳ ಬಗ್ಗೆ ಮಾತನಾಡಲಾಗದ ನೀವು, ಮೊದಲು ಪಾಕಿಸ್ತಾನದ ಜಪ ನಿಲ್ಲಿಸಿ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ನಮಿಸಿ, ವಿದ್ಯಾರ್ಥಿಗಳ ಎದುರು ಭಾಷಣ ಮಾಡಿದ ನೀವು ಅವರುಗಳ ಉಜ್ವಲ ಭವಿಷ್ಯಕ್ಕೆ ಏನಾದರೂ ಸಲಹೆ ಕೊಟ್ಟಿದ್ದೀರಾ?, ಇಲ್ಲ. ಅದು ಬಿಟ್ಟು ಪಾಕಿಸ್ತಾನದ ಜಪ ಮಾಡುತ್ತೀರಿ. ಇದು ನಿಮ್ಮ ರಾಜಕೀಯ, ಅಧಿಕಾರದ ಆಸೆಯನ್ನ ಸಾಬೀತು ಮಾಡುತ್ತದೆ ಎಂದು ಟ್ವೀಟ್​ ಮೂಲಕ ವಾಗ್ದಾಳಿ ನಡೆಸಿದ್ದಾರೆ.

Intro:ಬೆಂಗಳೂರು : ಸಿಎಎ ವಿಷಯದಲ್ಲಿ ಪದೇ ಪದೇ ಪಾಕಿಸ್ತಾನದ ಜಪ ಮಾಡುವ ಮೋದಿ ಅವರೇ, ನೀವು ಭಾರತದ ಪ್ರಧಾನಿಯೋ ಅಥವಾ ಪಾಕಿಸ್ತಾನದ ಪ್ರಧಾನಿಯೋ? ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.Body:ಪಾಕಿಸ್ತಾನದ ವಲಸಿಗರು, ನಿರಾಶ್ರಿತರು ನಿಮಗೆ ವೋಟು ಕೊಟ್ಟರೋ?, ಭಾರತದ ಪ್ರಜೆಗಳು ವೋಟು ಕೊಟ್ಟರೋ?, ಭಾರತೀಯ ಸಂವಿಧಾನದಿಂದ ಪ್ರಧಾನಿ ಹುದ್ದೆ ಸಿಕ್ಕಿತೋ, ಪಾಕಿಸ್ತಾನದ ಸಂವಿಧಾನದಿಂದ ಪ್ರಧಾನಿ ಹುದ್ದೆ ಸಿಕ್ಕಿತೋ? ಎಂದು ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.
ಭಾರತೀಯರ ವೋಟು ಪಡೆದು ಸಂವಿಧಾನದ ಪ್ರಕಾರ ಪ್ರಧಾನಿಯಾದ ನಿಮಗೆ ಇಲ್ಲಿನ ರಾಜ್ಯಗಳ ಅಭಿವೃದ್ಧಿ ಆದ್ಯತೆಯೋ ಪಾಕಿಸ್ತಾನದವರಿಗೆ ಪೌರತ್ವ ನೀಡುವುದು ಆದ್ಯತೆಯೋ? ಒಕ್ಕೂಟ ವ್ಯವಸ್ಥೆಯ ಭಾಗವಾಗಿರುವ ಕರ್ನಾಟಕಕ್ಕೆ ಕೊಡಬೇಕಾದ ಅನುದಾನ ಕೊಡಲಾಗದಿದ್ದರೂ ಪಾಕಿಸ್ತಾನದ ಮೇಲೆ ನಿಮಗೆ ಪ್ರೀತಿ ಉಕ್ಕುತ್ತಿರುವುದೇಕೆ? ಅಲ್ಲಿನವರ ಮೇಲೆ ಯಾಕಿಷ್ಟು ಮಮಕಾರ? ಎಂದು ಪ್ರಶ್ನಿಸಿದ್ದಾರೆ.
ಇಪ್ಪತ್ತೈದು ಸಂಸದರನ್ನು ಕೊಟ್ಟ ಕರ್ನಾಟಕದಲ್ಲಿ ಉಂಟಾದ ನೆರೆಯಿಂದ 35 ಸಾವಿರ ಕೋಟಿ ರೂ. ನಷ್ಟವಾದರೂ ಕೊಟ್ಟಿದ್ದು ಚಿಕ್ಕಾಸು, ನರೇಗಾ ಬಾಕಿ ಕೊಟ್ಟಿಲ್ಲ, ತೆರಿಗೆಯಲ್ಲಿ ರಾಜ್ಯದ ಪಾಲು ಕೊಟ್ಟಿಲ್ಲ, ಬರ ಪರಿಹಾರವಿಲ್ಲ. ಇವುಗಳ ಬಗ್ಗೆ ಮಾತನಾಡಲಾಗದ ನೀವು ಮಾತಾಡುವುದು ಪಾಕಿಸ್ತಾನದ ಬಗ್ಗೆ. ಮೊದಲು ಪಾಕಿಸ್ತಾನದ ಜಪ ನಿಲ್ಲಿಸಿ ಕರ್ನಾಟಕಕ್ಕೆ ಬರಬೇಕಾದ ಹಣ ಕೊಡಿ ಎಂದು ಒತ್ತಾಯಿಸಿದ್ದಾರೆ.
ಕೇಂದ್ರ ಕಟ್ಟಿಸಿಕೊಂಡ ತೆರಿಗೆಯ ಕರ್ನಾಟಕದ ಪಾಲನ್ನು ಹಾಗೂ ನೆರೆ ಪರಿಹಾರದ ಹಣವನ್ನು ಯಡಿಯೂರಪ್ಪ ಪಾಕಿಸ್ತಾನವನ್ನು ಕೇಳಬೇಕೋ ಅಥವಾ ಭಾರತೀಯ ಮತದಾರರಿಂದ ಆಯ್ಕೆಯಾದ ನಿಮ್ಮನ್ನು ಕೇಳಬೇಕೋ? ಎಂದು ಪ್ರಶ್ನಿಸಿದ್ದಾರೆ.
ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ನಮಿಸಿ, ವಿದ್ಯಾರ್ಥಿಗಳ ಎದುರು ಭಾಷಣ ಮಾಡಿದ ನೀವು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಏನಾದರೂ ಸಲಹೆ ಕೊಟ್ಟಿರಾ? ಇಲ್ಲ... ಅದು ಬಿಟ್ಟು ಪಾಕಿಸ್ತಾನದ ಜಪ ಮಾಡುತ್ತೀರಿ. ಇದು ನಿಮ್ಮ ರಾಜಕೀಯ, ಅಧಿಕಾರದ ಆಸೆಯನ್ನು ಸಾಬೀತು ಮಾಡುತ್ತದೆ ಎಂದು ಟೀಕಿಸಿದ್ದಾರೆ.
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.