ETV Bharat / state

ಕೋವಿಡ್-19 ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲ: ಕುಮಾರಸ್ವಾಮಿ ಕಿಡಿ - hdk latest news

ಕೊರೊನಾ ಸೋಂಕು ಶರವೇಗದಲ್ಲಿ ಎಲ್ಲೆಡೆ ವ್ಯಾಪಿಸುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ರಾಜ್ಯದಾದ್ಯಂತ ಸೋಂಕಿತರು ಚಿಕಿತ್ಸೆಯಿಲ್ಲದೆ ಸಾಯುತ್ತಿರುವ ಘಟನೆಗಳು ಕರುಳು ಹಿಂಡುತ್ತಿವೆ. ಸರ್ಕಾರ ಇನ್ನೂ ಮೈಮರೆತರೆ ಸೋಂಕಿತರು ಬೀದಿ ಬೀದಿಯಲ್ಲಿ ಸಾಯುವ ಸ್ಥಿತಿ ನಿರ್ಮಾಣವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

hdk
hdk
author img

By

Published : Jul 2, 2020, 12:58 PM IST

ಬೆಂಗಳೂರು: ಕೊರೊನಾ ಸೋಂಕು ಪೀಡಿತರು ಬೆಡ್​ಗಳಿಲ್ಲದೆ, ಚಿಕಿತ್ಸೆ ಇಲ್ಲದೆ ಮನೆಯಲ್ಲೇ ನರಳಿ ಸಾಯುತ್ತಿದ್ದಾರೆ. ಆರಂಭಿಕ ಹಂತದಲ್ಲೇ ಕೋವಿಡ್-19 ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕಳೆದ ಮೂರು ತಿಂಗಳಿಂದ ಮುಖ್ಯಮಂತ್ರಿ ಸೇರಿದಂತೆ ಸಚಿವರುಗಳು ಮಾತಿನ ಮಂಟಪ ಕಟ್ಟುವುದರಲ್ಲಿ ಕಾಲ ಕಳೆದರು ಎಂದು ಟೀಕಿಸಿದ್ದಾರೆ.

hd kumaraswamy tweet
ಕುಮಾರಸ್ವಾಮಿ ಟ್ವೀಟ್

ಸರ್ಕಾರ ಈಗ ಇಂಗು ತಿಂದ ಮಂಗನಂತಾಗಿದ್ದು, ಸೋಂಕಿತರ ಸಂಖ್ಯೆಯ ಗಣನೀಯ ಏರಿಕೆಯನ್ನು ತಡೆಯಲು ಪೇಚಾಡುತ್ತಿದೆ. ನೆರೆಯ ಕೇರಳ ಸರ್ಕಾರ ಕೊರೊನಾ ತಡೆಗೆ ಕೈಗೊಂಡ ಕ್ರಮಗಳ 'ಸಿದ್ದ' ಮಾದರಿ ಕಣ್ಣೆದುರಿಗಿದೆ. ರಾಜ್ಯದ ಸಚಿವರಲ್ಲಿ ಸಮನ್ವಯವಿಲ್ಲ, ಒಬ್ಬೊಬ್ಬರದು ಒಂದೊಂದು ನಿಲುವು. ಇವರ ತಿಕ್ಕಾಟದಲ್ಲಿ ರಾಜ್ಯದ ಜನತೆ ಹೈರಾಣಾಗಿದ್ದಾರೆ ಎಂದು ದೂರಿದ್ದಾರೆ.

hd kumaraswamy tweet
ಕುಮಾರಸ್ವಾಮಿ ಟ್ವೀಟ್

ಕೊರೊನಾ ಸೋಂಕು ಶರವೇಗದಲ್ಲಿ ಎಲ್ಲೆಡೆ ವ್ಯಾಪಿಸುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ರಾಜ್ಯಾದ್ಯಂತ ಸೋಂಕಿತರು ಚಿಕಿತ್ಸೆಯಿಲ್ಲದೆ ಸಾಯುತ್ತಿರುವ ಘಟನೆಗಳು ಕರುಳು ಹಿಂಡುತ್ತಿವೆ. ಸರ್ಕಾರ ಇನ್ನೂ ಮೈಮರೆತರೆ ಸೋಂಕಿತರು ಬೀದಿ ಬೀದಿಯಲ್ಲಿ ಸಾಯುವ ಸ್ಥಿತಿ ನಿರ್ಮಾಣವಾಗುತ್ತದೆ ಎಂದು ಹೆಚ್​ಡಿಕೆ ಆತಂಕ ವ್ಯಕ್ತಪಡಿಸಿದ್ದಾರೆ.

ಸರ್ಕಾರ ಇನ್ನಾದರೂ ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಲಿ. ಕೊರೊನಾದ ಸಮರ್ಪಕ ನಿರ್ವಹಣೆಗೆ ನಾನು ಕೊಟ್ಟ ಹತ್ತಾರು ಸಲಹೆಗಳನ್ನು ಲಘುವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಇನ್ನಾದರೂ ಎಚ್ಚೆತ್ತುಕೊಳ್ಳಲಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಸರ್ಕಾರ ಕೇವಲ ಸರ್ವಪಕ್ಷಗಳ ಸಭೆ ಕರೆದರೆ ಸಾಲದು. ಆ ಸಭೆಯಲ್ಲಿ ನೀಡುವ ಸಲಹೆಗಳನ್ನು, ತೆಗೆದುಕೊಂಡ ನಿರ್ಣಯಗಳನ್ನು ಕಾರ್ಯರೂಪಕ್ಕೆ ತರಬೇಕು. ಕಳೆದ 3 ತಿಂಗಳಿನಿಂದ ನಾವು ನೀಡಿರುವ ಒಂದು ಸಲಹೆಯನ್ನೂ ಕಾರ್ಯರೂಪಕ್ಕೆ ತಂದಿಲ್ಲ. ಸರ್ಕಾರದ ಅವ್ಯವಸ್ಥೆಗೆ ಬಡ, ಮಧ್ಯಮ ವರ್ಗದ ಜನರು ಈಗ ಜೀವ ತೆರಬೇಕಾಗಿದೆ ಎಂದು ಅವರು ಟೀಕಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.