ETV Bharat / state

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ 'ಐಎಎಸ್ ಜೀತ ಪದ್ಧತಿ' ಜಾರಿಗೆ ತಂದಿದೆ: ಹೆಚ್‌.ಡಿ.ಕುಮಾರಸ್ವಾಮಿ - ಈಟಿವಿ ಭಾರತ ಕನ್ನಡ

ರಾಜಕಾರಣಿಗಳ ಸೇವೆಗೆ ಐಎಎಸ್ ಅಧಿಕಾರಿಗಳನ್ನು ಕಳುಹಿಸಿದ್ದು ತಪ್ಪು ಎಂದು ಹೆಚ್.​ಡಿ.ಕುಮಾರಸ್ವಾಮಿ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯ ಸರ್ಕಾರದ ನಡೆಗೆ ಹೆಚ್​ಡಿಕೆ ಕಿಡಿ
ರಾಜ್ಯ ಸರ್ಕಾರದ ನಡೆಗೆ ಹೆಚ್​ಡಿಕೆ ಕಿಡಿ
author img

By

Published : Jul 18, 2023, 2:27 PM IST

ಬೆಂಗಳೂರು: ಅಧಿಕಾರ ಬಂಧನಕ್ಕಾಗಿ ಘಟಬಂಧನಕ್ಕೆ ಒಳಗಾದ ಕಾಂಗ್ರೆಸ್ ಪಕ್ಷವು ಕರ್ನಾಟಕದ ಹೆಮ್ಮೆ, ಪರಂಪರೆ, ಸ್ವಾಭಿಮಾನಕ್ಕೆ ಘಟಶ್ರಾದ್ಧ ಮಾಡಿದೆ. ಘಟಬಂಧನಕ್ಕೆ ಬಂದ ಹೊರರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಹೆಮ್ಮೆಯ ಐಎಎಸ್ ಅಧಿಕಾರಿಗಳನ್ನು ಕಳುಹಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ತಪ್ಪು. ನುಡಿದಂತೆ ನಡೆಯುವುದು ಎಂದರೆ ಇದೇನಾ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಅವರು, ಇದು ರಾಜ್ಯ ಸರ್ಕಾರಿ ಕಾರ್ಯಕ್ರಮ ಅಲ್ಲ. ಹೊಸ ಸರ್ಕಾರದ ಪ್ರಮಾಣ ಸ್ವೀಕಾರವೂ ಅಲ್ಲ. ಕೇವಲ ರಾಜಕೀಯ ಸಭೆಯಷ್ಟೇ. ಇಂಥ ಸಭೆಗೆ ಬಂದ ರಾಜಕೀಯ ನಾಯಕರಿಗೆ ಆತಿಥ್ಯ ನೀಡಲು ಜವಾಬ್ದಾರಿಯುತ ಅಧಿಕಾರಿಗಳನ್ನು ಕಳಿಸಿದ್ದು ಆರೂವರೆ ಕೋಟಿ ಕನ್ನಡಿಗರಿಗೆ ಎಸಗಿದ ಘೋರ ಅಪಚಾರ. ರಾಜ್ಯದ ಪಾಲಿಗೆ ಮಹಾ ದುರಂತ ಎಂದಿದ್ದಾರೆ. ಯಾವುದೇ ಒಂದು ರಾಜ್ಯದ ಅಭಿವೃದ್ಧಿ, ಆಡಳಿತ, ಮುನ್ನಡೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಐಎಎಸ್ ಅಧಿಕಾರಿಗಳು ಕೇವಲ ಅಧಿಕಾರಿಗಳಷ್ಟೇ ಅಲ್ಲ, ಆಯಾ ರಾಜ್ಯಗಳ ಕ್ಷಮತೆ, ದಕ್ಷತೆಯ ಪ್ರತೀಕ. ಅಂಥವರನ್ನು ಇನ್ನೊಬ್ಬರ ಆಜ್ಞಾಪಾಲಕರನ್ನಾಗಿ ಮಾಡಿ, ಬಾಗಿಲು ಕಾಯುವ ಕೆಲಸಕ್ಕೆ ಹಚ್ಚಿದ್ದು ಆಡಳಿತ ಪಕ್ಷದ ಅಹಂಕಾರದ ಪರಮಾವಧಿ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

  • In Sathya Yuga, Hiranyakashyap was destroyed for capturing astadikpalakas & making them his stepping stones. Congress too has initiated its own decline by deputing 30 IAS officers as gatekeepers of its alliance partners 7/7

    — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 18, 2023 " class="align-text-top noRightClick twitterSection" data=" ">

ಐಎಎಸ್ ಜೀತ ಪದ್ಧತಿ: ಇದು ನಿಶ್ಚಿತವಾಗಿಯೂ ಐಎಎಸ್ ಸೇವಾ ನೀತಿ ಸಂಹಿತೆಯ ಉಲ್ಲಂಘನೆ. ಇದು ತಮ್ಮ ಸ್ವಾಭಿಮಾನ, ಗೌರವಕ್ಕೆ ಧಕ್ಕೆ ತರುವಂಥದ್ದು ಎಂದು ಗೊತ್ತಿದ್ದರೂ ಅಧಿಕಾರಿಗಳು ಈ ಕೆಲಸಕ್ಕೆ ಒಪ್ಪಿದ್ದು ಅಚ್ಚರಿ, ಆಘಾತ ಉಂಟುಮಾಡಿದೆ. ಇಂಥ ವಿವಾದಾಸ್ಪದ ಆದೇಶ ಹೊರಡಿಸಿದ ಮುಖ್ಯ ಕಾರ್ಯದರ್ಶಿಗಳು ಜನತೆಗೆ ಉತ್ತರ ಕೊಡಲೇಬೇಕಿದೆ. ಬಂಡವಾಳಶಾಹಿ ವ್ಯವಸ್ಥೆಯಲ್ಲಿ ನಂಬಿಕೆ ಹೊಂದಿರುವ ಕಾಂಗ್ರೆಸ್ ಪಕ್ಷ, ರಾಜ್ಯದಲ್ಲಿ 'ಐಎಎಸ್ ಜೀತ ಪದ್ಧತಿ'ಯನ್ನು ಜಾರಿಗೆ ತರುವ ಮೂಲಕ ಹೊಸ ನಮೂನೆಯ 'ರಾಜಕೀಯ, ಆಡಳಿತ ವಸಾಹತುಶಾಹಿ'ಯನ್ನು ದೇಶಕ್ಕೆ ಪರಿಚಯಿಸಿದೆ.

ಅಂಥ ಅಪಾಯಕಾರಿ ಹಸ್ತವಾಸಿಯೇ ಕೈ ಪಕ್ಷದ ಆಸ್ತಿ. 135 ಸೀಟು ಕೊಟ್ಟ ತಪ್ಪಿಗೆ ಕನ್ನಡಿಗರಿಗೆ ವಿಪರೀತ ದರ್ಪ ತೋರಿದೆ ಕಾಂಗ್ರೆಸ್. ಸತ್ಯಯುಗದಲ್ಲಿ ಹಿರಣ್ಯಕಶಿಪು ಅಷ್ಟದಿಕ್ಪಾಲಕರನ್ನು ಸೆರೆಹಿಡಿದು ಮೆಟ್ಟಿಲು ಮಾಡಿಕೊಂಡ ಪಾಪಕ್ಕೆ ಸರ್ವನಾಶವಾದ. ಕಾಂಗ್ರೆಸ್ ಕೂಡ 30 ಐಎಎಸ್ ಅಧಿಕಾರಿಗಳನ್ನು ರಾಜಕಾರಣಿಗಳ ದ್ವಾರಪಾಲಕರನ್ನಾಗಿ ಮಾಡುವ ಮೂಲಕ ತನ್ನ ನಾಶಕ್ಕೆ ತಾನೇ ನಾಂದಿ ಹಾಡಿದೆ ಎಂದು ಹೆಚ್‌.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಇದನ್ನೂ ಓದಿ: ಮಹಾಘಟಬಂಧನ್‌ ನಾಯಕರಿಗೆ ಮಧ್ಯಾಹ್ನ ಡಿಕೆಶಿ, ಸಂಜೆ ಸೋನಿಯಾ ಔತಣಕೂಟ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.