ETV Bharat / state

ಮೇಕೆದಾಟು ಯೋಜನೆ ತಡೆಗೆ ತಮಿಳುನಾಡು, ಕೇಂದ್ರ ಸರ್ಕಾರ ಷಡ್ಯಂತ್ರ ಹೆಣೆದ ಶಂಕೆ ಮೂಡಿದೆ: ಹೆಚ್​ಡಿಕೆ

author img

By

Published : Jun 20, 2021, 6:32 PM IST

ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸರ್ಕಾರ ಒತ್ತಡ ಹೇರಿತ್ತೇ? ಅದರ ಮಾತು ಕೇಳಿ ಅನುಮತಿ ವಿಳಂಬ ಮಾಡಲಾಯಿತೇ? ಈ ಬಗ್ಗೆ ಪ್ರಧಾನಿ ಸ್ಪಷ್ಟನೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

hd kumaraswamy
ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಮೇಕೆದಾಟು ಯೋಜನೆ ತಡೆಯಲು ತಮಿಳುನಾಡು ಸರ್ಕಾರ ಮತ್ತು ಕೇಂದ್ರ ಸರ್ಕಾರ ಷಡ್ಯಂತ್ರ ಹೆಣೆದ ಅನುಮಾನ ಮೂಡುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಶಂಕೆ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮೇಕೆದಾಟು ಯೋಜನೆ ಜಾರಿಗೆ ತಂದು ನನ್ನ ಸರ್ಕಾರ ಧೈರ್ಯ ಪ್ರದರ್ಶಿಸಿತ್ತು. ಪರಿಸರ ಇಲಾಖೆಯ ಅನುಮತಿ ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ, ಈವರೆಗೆ ಅನುಮತಿ ಸಿಕ್ಕಿಲ್ಲ. ಇತ್ತ, ಯೋಜನೆ ವಿರುದ್ಧ ಅರ್ಜಿಗಳು ಸಲ್ಲಿಕೆಯಾಗುತ್ತಾ ಬಂದವು. ಇದೆಲ್ಲ ಗಮನಿಸಿದರೆ ಯೋಜನೆ ತಡೆಯಲು ತಮಿಳುನಾಡು, ಕೇಂದ್ರ ಷಡ್ಯಂತ್ರ ಹೆಣೆದ ಅನುಮಾನ ಮೂಡುತ್ತಿದೆ ಎಂದಿದ್ದಾರೆ.

  • ಮೇಕೆದಾಟು ಯೋಜನೆ ಜಾರಿಗೆ ತಂದು ನನ್ನ ಸರ್ಕಾರ ಧೈರ್ಯ ಪ್ರದರ್ಶಿಸಿತ್ತು. ಪರಿಸರ ಅನುಮತಿ ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ, ಈ ವರೆಗೆ ಅನುಮತಿ ಸಿಕ್ಕಿಲ್ಲ. ಇತ್ತ, ಯೋಜನೆ ವಿರುದ್ಧ ಅರ್ಜಿಗಳು ಸಲ್ಲಿಕೆಯಾಗುತ್ತಾ ಬಂದವು. ಇದೆಲ್ಲ ಗಮನಿಸಿದರೆ ಯೋಜನೆ ತಡೆಯಲು ತಮಿಳುನಾಡು–ಕೇಂದ್ರ ಷಡ್ಯಂತ್ರ ಹೆಣೆದ ಅನುಮಾನ ಮೂಡುತ್ತಿದೆ.
    2/3

    — H D Kumaraswamy (@hd_kumaraswamy) June 20, 2021 " class="align-text-top noRightClick twitterSection" data=" ">

ಮೇಕೆದಾಟು ಡ್ಯಾಂಗೆ ಅನುಮತಿ ನೀಡಬಾರದೆಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿರುವ ತಮಿಳುನಾಡು ಮಾಜಿ ಸಿಎಂ ಪಳನಿಸ್ವಾಮಿ, ಯೋಜನೆ ತಡೆಯಲು ಪ್ರಧಾನಿ ಮೇಲೆ ಒತ್ತಡ ಹೇರುತ್ತಾ ಬಂದಿದ್ದಾಗಿ ಹೇಳಿದ್ದಾರೆ. ಕೇಂದ್ರವು ತಮಿಳುನಾಡಿನ ಒತ್ತಡಕ್ಕೆ ಮಣಿದು ಅನುಮತಿ ಮುಂದೂಡುತ್ತಾ ಬಂದಿದ್ದೇ ಆದರೆ ಅದು ಕನ್ನಡಿಗರಿಗೆ ಬಗೆದ ದ್ರೋಹವಾಗಿದೆ‌ ಎಂದು ಹೆಚ್​ಡಿಕೆ ಕಿಡಿಕಾರಿದ್ದಾರೆ.

ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಒತ್ತಡ ಹೇರಿತ್ತೇ? ಅದರ ಮಾತು ಕೇಳಿ ಅನುಮತಿ ವಿಳಂಬ ಮಾಡಲಾಯಿತೇ? ಈ ಬಗ್ಗೆ ಪ್ರಧಾನಿ ಸ್ಪಷ್ಟನೆ ನೀಡಬೇಕು. ಇಲ್ಲವೇ ರಾಜ್ಯದಿಂದ ಆಯ್ಕೆಯಾಗಿ ಹೋಗಿರುವ ‘ಭಾಷಾ ದುರಭಿಮಾನಿ ಬಿಜೆಪಿ ಸಂಸದರು’ ಪ್ರಶ್ನೆ ಮಾಡಿ ಉತ್ತರ ಪಡೆದುಕೊಂಡು ಬರಬೇಕು. ಇಲ್ಲವೇ ಬಾಕಿ ಇರುವ ಪರಿಸರ ಇಲಾಖೆಯ ಅನುಮತಿಯನ್ನು ಶೀಘ್ರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಗೊಂದಲಕ್ಕೆ ತೆರೆ : ಧಾರವಾಡ ಜಿಲ್ಲೆಗೂ ಅನ್‌ಲಾಕ್ -2 ಮಾರ್ಗಸೂಚಿ ಅನ್ವಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.