ETV Bharat / state

ಸಾರಿಗೆ ನೌಕರರ ವೇತನ ವಿಳಂಬ: ಸರ್ಕಾರವನ್ನ ತರಾಟೆಗೆ ತೆಗೆದುಕೊಂಡ ಹೆಚ್​​ಡಿಕೆ - ಹೆಚ್​​ಡಿ ಕುಮಾರಸ್ವಾಮಿ ಟ್ಟೀಟ್​

ಮಕ್ಕಳು ತಪ್ಪು ಮಾಡುವುದು ಸಹಜ. ತಂದೆ ತಾಯಿ ಸ್ಥಾನದಲ್ಲಿರುವ ಸರ್ಕಾರ ಕ್ಷಮಿಸಿ ಔದಾರ್ಯ ತೋರಿಸುವ ದೊಡ್ಡ ಮನಸ್ಸು ಮಾಡಬೇಕು. ಅದಕ್ಕಾಗಿ ಸರ್ಕಾರ ತಕ್ಷಣವೇ ಸಾರಿಗೆ ನೌಕರರ ವೇತನ ಬಿಡುಗಡೆ ಮಾಡಬೇಕು. ಅಲ್ಲದೆ, ಪ್ರತಿ ತಿಂಗಳು ಸಕಾಲಕ್ಕೆ ಸಂಬಳ ಪಾವತಿಸಲು ಸಿಎಂ ಹಾಗೂ ಸಾರಿಗೆ ಸಚಿವರು ಕ್ರಮ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್​. ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

hd-kumaraswamy-tweet-on-transport-employees-salary-problem
ಹೆಚ್ ಡಿ ಕುಮಾರಸ್ವಾಮಿ
author img

By

Published : Oct 5, 2021, 3:21 PM IST

Updated : Oct 5, 2021, 7:44 PM IST

ರಾಮನಗರ: ರಾಜ್ಯ ಸಾರಿಗೆ ನೌಕರರಿಗೆ ವೇತನ ವಿಳಂಬ ಮಾಡುತ್ತಿರುವ ಸರ್ಕಾರದ ನಡೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಅವರು, ಕೂಡಲೇ ಸಾರಿಗೆ ನೌಕರರಿಗೆ ವೇತನ ಪಾವತಿ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರನ್ನು ಒತ್ತಾಯಿಸಿದ್ದಾರೆ.

ಕೊರೊನಾ ಮಹಾಮಾರಿಯಿಂದ ತತ್ತರಿಸಿರುವ ಕೆಎಸ್ಆರ್​ಟಿಸಿ ಮತ್ತು ಬಿಎಂಟಿಸಿ ನೌಕರರ ಮೇಲೆ ಸರ್ಕಾರಕ್ಕೆ ಅನಾದರ ಏಕೆ? ಸಾರಿಗೆ ನೌಕರರಿಗೆ ಅಗಸ್ಟ್ ತಿಂಗಳಲ್ಲಿ ಅರ್ಧ ಸಂಬಳವೇ ಆಗಿದ್ದು, ಸೆಪ್ಟೆಂಬರ್ ತಿಂಗಳ ಪೂರ್ಣ ಸಂಬಳ ಆಗಿಲ್ಲ ಎನ್ನುವ ಮಾಹಿತಿ ನನಗೆ ಬಂದಿದೆ. ಮಕ್ಕಳು ತಪ್ಪು ಮಾಡುವುದು ಸಹಜ. ತಂದೆ-ತಾಯಿ ಸ್ಥಾನದಲ್ಲಿರುವ ಸರ್ಕಾರ ಕ್ಷಮಿಸಿ ಔದಾರ್ಯ ತೋರಿಸುವ ದೊಡ್ಡ ಮನಸ್ಸು ಮಾಡಬೇಕು. ಸಾರಿಗೆ ನೌಕರರ ಮೇಲೆ ಹಗೆತನ ಸಾಧಿಸುವುದು ಬೇಡ. ಜೀವದ ಹಂಗು ತೊರೆದು, ಮಹಾಮಾರಿಯನ್ನು ಲೆಕ್ಕಿಸದೆ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಸಾರಿಗೆ ನೌಕರರ ವೇತನ ವಿಳಂಬ ಮಾಡುವುದನ್ನು ಒಪ್ಪಲು ಸಾಧ್ಯವಿಲ್ಲ. ತಕ್ಷಣವೇ ವೇತನ ಬಿಡುಗಡೆ ಮಾಡಬೇಕು. ಪ್ರತಿ ತಿಂಗಳು ಸಕಾಲಕ್ಕೆ ವೇತನ ಪಾವತಿಸಲು ಸಿಎಂ ಹಾಗೂ ಸಾರಿಗೆ ಸಚಿವರು ಕೂಡಲೇ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸರ್ಕಾರವನ್ನ ತರಾಟೆಗೆ ತೆಗೆದುಕೊಂಡ ಹೆಚ್​​ಡಿಕೆ

ಕಾಂಗ್ರೆಸ್​ಗೆ ಮತ ಹಾಕಿ ಎಂದು ನಾನೇ ಹೇಳಿದ್ದೇನೆ:

ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕೆಂಬ ಉದ್ದೇಶದಿಂದ ಕಾಂಗ್ರೆಸ್ ಎರಡನೇ ಸ್ಥಾನ ಬರುವಂತಹ ಕ್ಷೇತ್ರಗಳಲ್ಲಿ ಕಾಂಗ್ರೆಸ್​​ಗೇ ಮತ ನೀಡಿ ಎಂದು ನಾನೇ ಹೇಳಿದ್ದೇನೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಅಲ್ಪಸಂಖ್ಯಾತ ಸಮುದಾಯ ಕಾರ್ಯಾಗಾರದಲ್ಲಿ ನಾನು ಮುಸ್ಲಿಂ ಬಾಂಧವರಲ್ಲಿ ಮನವಿ ಮಾಡಿದ್ದು ಸತ್ಯ. ರಾಜ್ಯದಲ್ಲಿ ಎಲ್ಲೆಲ್ಲಿ ಜೆಡಿಎಸ್ ಪಾರ್ಟಿ ಶಕ್ತಿ‌ ಕಡಿಮೆ ಇದೆಯೋ ಆ ಭಾಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ ಎಂದು ನಾನೇ ಹೇಳಿದ್ದೇನೆ. ಈ ರೀತಿಯ ಔದಾರ್ಯ ಕಾಂಗ್ರೆಸ್ ನಾಯಕರಿಗೆ ಇಲ್ಲ. ಅವರು ನಮಗೆ ಇಷ್ಟೆಲ್ಲಾ ತೊಂದರೆ ಕೊಟ್ಟರೂ ನಾನು ಈ ಮಾತು ಹೇಳ್ತಿದ್ದೇನೆ ಎಂದರು.

ಮತಾಂತಕ್ಕೆ ನಮ್ಮ ವಿರೋಧವು ಇದೆ:

ರಾಜ್ಯದಲ್ಲಿ ಬಲವಂತದ ಮತಾಂತರಕ್ಕೆ ನಮ್ಮ ವಿರೋಧ ಕೂಡ ಇದೆ. ಯಾರು ಕೂಡ ಬಲವಂತವಾಗಿ ಮತಾಂತರ ಮಾಡುವ ಹಾಗಿಲ್ಲ. ನಮ್ಮ ಕಾರ್ಯಾಗಾರದಲ್ಲಿ ಮೊದಲ ವಿಷಯವಾಗಿ ಮತಾಂತರ ಬಗ್ಗೆ ಕೂಡ ಚರ್ಚೆ ನಡೆಯಿತು. ಈ ವೇಳೆ ಕ್ರೈಸ್ತ ಮುಖಂಡರೇ ತಾವೆಂದು ಕೂಡ ಬಲವಂತದ ಮತಾಂತರ ಮಾಡುವುದಿಲ್ಲ ಎಂದಿದ್ದಾರೆ. ಇದಲ್ಲದೆ ಮತಾಂತರ ನಿಷೇಧ ಕಾಯ್ದೆಗಳು ಅಥವಾ ಬೆದರಿಕೆಗಳಿಂದ ಇದನ್ನು ತಡೆಯಲು ಸಾಧ್ಯವಿಲ್ಲ. ಮೊದಲಿಗೆ ಬಡತನ ತೊಡೆದು ಹಾಕಬೇಕು. ಬಡವರಿಗೆ ಸೌಲಭ್ಯವನ್ನು ಕೊಡಬೇಕು. ಆಗ ಮಾತ್ರ ಇದು ಸಾಧ್ಯ. ಎರಡು ಹೊತ್ತಿನ ಊಟಕ್ಕೆ ಅನುಕೂಲ ಮಾಡಿಕೊಟ್ಟರೆ ಯಾರೂ ಮತಾಂತರಕ್ಕೆ ಒಳಗಾಗುವುದಿಲ್ಲ ಎಂದು ಅಭಿಪ್ರಾಯಪಟ್ಟರು.

Last Updated : Oct 5, 2021, 7:44 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.