ETV Bharat / state

ಪ್ರಾಣಹಾನಿ ಸಂಭವಿಸಿದ ಮೇಲೆ ಪಾಲಿಕೆ ಎಚ್ಚೆತ್ತುಕೊಳ್ಳುತ್ತಿರುವುದೇಕೆ? ಮಳೆ ಬಂದರೆ ಜನರು ಸಾಯಲೇಬೇಕೆ? : ಹೆಚ್​ಡಿಕೆ ಕಿಡಿ

ಬೆಂಗಳೂರಿನಲ್ಲಿ ಮಳೆಯಿಂದಾದ ಅವಾಂತರಗಳ ಕುರಿತು ಹೆಚ್ ಡಿ ಕುಮಾರಸ್ವಾಮಿ ಟ್ವೀಟ್​ ಮಾಡಿದ್ದಾರೆ.

ಹೆಚ್​.ಡಿ ಕುಮಾರಸ್ವಾಮಿ ಟ್ವೀಟ್
ಹೆಚ್​.ಡಿ ಕುಮಾರಸ್ವಾಮಿ ಟ್ವೀಟ್
author img

By

Published : May 21, 2023, 7:31 PM IST

ಬೆಂಗಳೂರು : ನಗರದಲ್ಲಿ ಇಂದು ಸುರಿದ ಭಾರಿ ಮಳೆಯಿಂದ ಕೆ. ಆರ್. ವೃತ್ತದ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಎಂಬ ಯುವತಿ ಸಾವನ್ನಪ್ಪಿರುವ ಸುದ್ದಿ ತಿಳಿದು ತೀವ್ರ ಆಘಾತವಾಯಿತು. ರಭಸ ಮಳೆಯ ಮುನ್ನೆಚ್ಚರಿಕೆ ಇದ್ದರೂ ಬಿಬಿಎಂಪಿ ಆಡಳಿತ ಎಚ್ಚೆತ್ತುಕೊಳ್ಳದೇ ಇರುವುದು ನಿರ್ಲಕ್ಷ್ಯದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ಅಂಡರ್ ಪಾಸ್ ಗಳಲ್ಲಿ ಕಸಕಡ್ಡಿ ತೆಗೆದು ಸರಾಗವಾಗಿ ನೀರು ಹರಿದು ಹೋಗುವಂತೆ ಮಾಡಬೇಕಾಗಿದ್ದ ಪಾಲಿಕೆ ಮೈಮರೆತು ಕರ್ತವ್ಯಲೋಪ ಎಸಗಿದೆ. ಪ್ರತಿ ಸಲವೂ ಮಳೆ ಬಂದಾಗ ಅವಾಂತರ, ಪ್ರಾಣಹಾನಿ ಸಂಭವಿಸಿದ ಮೇಲೆ ಪಾಲಿಕೆ ಎಚ್ಚೆತ್ತುಕೊಳ್ಳುತ್ತದೆ, ಯಾಕೆ? ಮಳೆ ಬಂದರೆ ಜನರು ಸಾಯಲೇಬೇಕೆ? ಎಂದು ಹೆಚ್​ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

  • ಮೃತ ನತದೃಷ್ಟ ಯುವತಿ ಕುಟುಂಬಕ್ಕೆ ಪರಿಹಾರ ನೀಡಿರುವುದು ಸ್ವಾಗತಾರ್ಹ. ಆದರೆ, ಇಂತಹ ದುರಂತಗಳು ಮರುಕಳಿಸದಂತೆ ರಾಜ್ಯ @INCKarnataka ಸರಕಾರ ಶಾಶ್ವತ ಪರಿಹಾರ ರೂಪಿಸಬೇಕು. ಅಂಡರ್ ಪಾಸ್, ರಸ್ತೆ, ಚರಂಡಿ, ಒಳಚರಂಡಿಗಳ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಬೇಕು ಎನ್ನುವುದು ನನ್ನ ಆಗ್ರಹ. 5/5

    — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 21, 2023 " class="align-text-top noRightClick twitterSection" data=" ">

ಇದನ್ನೂ ಓದಿ : ಬೆಂಗಳೂರಿನಲ್ಲಿ ವರುಣನ ಆರ್ಭಟ.. ಮಳೆಗೆ ಮಹಿಳೆ ಬಲಿ, 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಭಾರಿ ಮಳೆ ಸುರಿಯುತ್ತಿದ್ದ ಅಪಾಯದ ಸಮಯದಲ್ಲಿ ವಾಹನ ಚಾಲಕರು ಅತ್ಯಂತ ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಬೇಕು. ಅಂಡರ್ ಪಾಸ್ ನಲ್ಲಿ ನೀರು ತುಂಬಿಕೊಂಡಿದ್ದನ್ನು ಕಂಡ ಮೇಲೂ ಚಾಲಕ ಕಾರನ್ನು ಅಂಡರ್ ಪಾಸ್ ಮೂಲಕ ಚಾಲನೆ ಮಾಡಬಾರದಿತ್ತು. ಸಂಚಾರಿ ಪೊಲೀಸರು ಮೊದಲೇ ಮುನ್ನೆಚ್ಚರಿಕೆ ನೀಡಬೇಕಿತ್ತು. ಬಿಬಿಎಂಪಿ ಅಧಿಕಾರಿಗಳು ಕೂಡಲೇ ನಗರದ ಉದ್ದಗಲಕ್ಕೂ ಎಲ್ಲಾ ಅಂಡರ್ ಪಾಸ್ ಗಳನ್ನು ವಿಸ್ತೃತವಾಗಿ ಪರಿಶೀಲಿಸಿ, ಕಸಕಡ್ಡಿ ವಿಲೇವಾರಿ ಮಾಡಿಸಿ ಮಳೆನೀರು ಸರಾಗವಾಗಿ ಹರಿದುಹೋಗುವಂತೆ ಮಾಡಬೇಕು. ಇನ್ನೊಂದು ಪ್ರಾಣನಷ್ಟವೂ ಆಗುವುದಕ್ಕೆ ಅವಕಾಶ ನೀಡಬಾರದು ಎಂದು ಹೆಚ್​.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ : ಬೆಂಗಳೂರಿನಲ್ಲಿ ಆರ್ಭಟಿಸಿದ ವರುಣ.. ರಸ್ತೆಯ ಮೇಲೆ ಬಿದ್ದ ಮರದ ಕೊಂಬೆ ತೆರವುಗೊಳಿಸಿದ ಇನ್ಸ್‌ಪೆಕ್ಟರ್

ಮೃತ ನತದೃಷ್ಟ ಯುವತಿ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ಅವರು ಪರಿಹಾರ ನೀಡಿರುವುದು ಸ್ವಾಗತಾರ್ಹ. ಆದರೆ, ಇಂತಹ ದುರಂತಗಳು ಮರುಕಳಿಸದಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಶಾಶ್ವತ ಪರಿಹಾರ ರೂಪಿಸಬೇಕು. ಅಂಡರ್ ಪಾಸ್, ರಸ್ತೆ, ಚರಂಡಿ, ಒಳಚರಂಡಿಗಳ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಬೇಕು ಎಂದು ಹೆಚ್​ಡಿಕೆ ಆಗ್ರಹಿಸಿದ್ದಾರೆ.

ಅಂಡರ್​ ಪಾಸ್​ ನೀರಿನಲ್ಲಿ ಕಾರು ಮುಳುಗಡೆ : ಬಿರುಗಾಳಿ, ಗುಡುಗು ಸಹಿತ ಆಲಿಕಲ್ಲು ಸಹಿತ ವರುಣಾರ್ಭಟಕ್ಕೆ ರಾಜಧಾನಿ ಅಲ್ಲೋಲ ಕಲ್ಲೋಲವಾಗಿದೆ. ಈ ನಡುವೆ ಕೆ.ಆರ್. ಸರ್ಕಲ್ ನ ಅಂಡರ್ ಪಾಸ್ ನಲ್ಲಿ ತೆರಳುತ್ತಿದ್ದ ಕಾರು ನೀರಿನಲ್ಲಿ ಮುಳುಗಿದ್ದು, ಕಾರಿನಲ್ಲಿದ್ದ ಆಂಧ್ರ ಮೂಲದ ಯುವತಿ ಸಾವನ್ನಪ್ಪಿದ್ದಾರೆ.

ಪ್ರತಿ ಬಾರಿ ಮಳೆ ಬಂದಾಗಲೆಲ್ಲ ಒಂದಿಲ್ಲೊಂದು ಅವಘಡಗಳು ಸಿಲಿಕಾನ್​ ಸಿಟಿಯಲ್ಲಿ ನಡೆಯುತ್ತಿರುತ್ತಿವೆ. ಇದರಿಂದಾಗಿ ಹಿಂದಿನ ಬಿಜೆಪಿ ಸರ್ಕಾರ ಜನರಿಂದ ಅನೇಕ ಟೀಕೆಗಳನ್ನು ಎದುರಿಸಿತ್ತು. ಈಗ ಹೊಸ ಸರ್ಕಾರಕ್ಕೆ ಆರಂಭದಲ್ಲೇ ನಗರದಲ್ಲಿ ಮಳೆ ನೀರಿನಿಂದಾಗುವ ಅನಾಹುತಗಳನ್ನು ತಪ್ಪಿಸಲು ಯೋಜನೆಗಳನ್ನು ರೂಪಿಸುವ ಸವಾಲು ಎದುರಾಗಿದೆ.

ಇದನ್ನೂ ಓದಿ : ಕೋಲಾರದಲ್ಲೂ ವರುಣನ ಆರ್ಭಟ.. ವಾಹನ ಸವಾರರ ಪರದಾಟ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.