ETV Bharat / state

ಸಿದ್ದರಾಮಯ್ಯ ʼಅಲ್ಪಸಂಖ್ಯಾತರ ನಾಯಕರ ಟರ್ಮಿನೇಟರ್ʼ: ಸರಣಿ ಟ್ವೀಟ್ ಮೂಲಕ ಕುಮಾರಸ್ವಾಮಿ ವಾಗ್ದಾಳಿ - ಹೆಚ್ ಡಿ ಕುಮಾರಸ್ವಾಮಿ

ಸಿದ್ದರಾಮಯ್ಯ ʼಅಲ್ಪಸಂಖ್ಯಾತರ ನಾಯಕರ ಟರ್ಮಿನೇಟರ್ʼ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಸರಣಿ ಟ್ವೀಟ್​ ಮಾಡಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

hd kumarswamy tweer against siddaramaiah
ಸರಣಿ ಟ್ವೀಟ್ ಮೂಲಕ ಕುಮಾರಸ್ವಾಮಿ ವಾಗ್ದಾಳಿ
author img

By

Published : Oct 16, 2021, 3:05 PM IST

Updated : Oct 16, 2021, 3:13 PM IST

ಬೆಂಗಳೂರು: ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಸೆಕ್ಯೂಲರ್ ಮತಗಳನ್ನು ವಿಭಜನೆ ಮಾಡಲು ಜೆಡಿಎಸ್ ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ ಎಂದು ಆರೋಪ ಮಾಡಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಇಂದು ಸಹ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಅವರನ್ನುʼಅಲ್ಪಸಂಖ್ಯಾತರ ನಾಯಕರ ಟರ್ಮಿನೇಟರ್ʼ ಎಂದು ಕರೆದಿರುವ ಹೆಚ್ ಡಿ ಕೆ, ಸರಣಿ ಟ್ವೀಟ್ ಮೂಲಕ ತರಾಟೆಗೆ ತೆಗೆದುಕೊಂಡಿದ್ದಾರೆ. ಜೆಡಿಎಸ್ ಪಕ್ಷವನ್ನು ಬಿಜೆಪಿ'ಬಿ' ಟೀಮ್ ಎಂದು ದೂರುವುದು ಸೇರಿದಂತೆ ಅಲ್ಪಸಂಖ್ಯಾತರ ವಿಷಯವನ್ನೇ ಮುಂದು ಮಾಡಿ ಪಕ್ಷವನ್ನು ಪದೇ ಪದೆ ಟೀಕೆ ಮಾಡಿದ್ದ ಸಿದ್ದರಾಮಯ್ಯ ಅವರಿಗೆ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.

  • ಆಗ ಭೈರತಿ ಸುರೇಶ್ ಪರ ಲಾಬಿ ಮಾಡಿದ್ದ ಸಿದ್ಧಕಲೆ ಸೂತ್ರಧಾರರು, ಅವರನ್ನೇ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸಿ ಒಳಸುಳಿ ಸೃಷ್ಟಿಸಿ ಷರೀಫರ ಮೊಮ್ಮಗನನ್ನು ಸೋಲಿಸುತ್ತಾರೆ! 2023ರ ಚುನಾವಣೆಯಲ್ಲಿ ಭೈರತಿ ಸುರೇಶ್ʼಗೇ ಹೆಬ್ಬಾಳದ ಕಾಂಗ್ರೆಸ್ ಟಿಕೆಟ್ ಗ್ಯಾರಂಟಿ. ಹಾಗಾದರೆ ಜಾಫರ್ ಷರೀಫರ ಮೊಮ್ಮಗನ ಕಥೆ ಏನು?6/12

    — H D Kumaraswamy (@hd_kumaraswamy) October 16, 2021 " class="align-text-top noRightClick twitterSection" data=" ">

“ಅಲ್ಪಸಂಖ್ಯಾತರ ಕಲ್ಯಾಣದ ಪೇಟೆಂಟ್ ತೆಗೆದುಕೊಂಡಂತೆ ಪೋಸು ಕೊಡುವ ʼಸಿದ್ದಹಸ್ತʼ ಶೂರನ ನಿಜಬಣ್ಣ ಬಯಲು ಮಾಡುವ ಸಂದರ್ಭ ಬಂದಿದೆ. ಸ್ವಾರ್ಥ, ಸ್ವಜನ ಪಕ್ಷಪಾತ, ತಮ್ಮ ಬೆಂಬಲಿಗರ ರಾಜಕೀಯ ಅಭಿವೃದ್ಧಿಗಾಗಿ ಪಕ್ಷಕ್ಕಾಗಿ ಅಹರ್ನಿಷಿ ದುಡಿದ ಅಲ್ಪಸಂಖ್ಯಾತ ನಾಯಕರನ್ನು ಗುರಿ ಇಟ್ಟು ಮುಗಿಸಲಾಗುತ್ತಿದೆ!”

  • ಅಲ್ಪಸಂಖ್ಯಾತರ ಕಲ್ಯಾಣದ ಪೇಟೆಂಟ್ ತೆಗೆದುಕೊಂಡಂತೆ ಪೋಸು ಕೊಡುವ ʼಸಿದ್ದಹಸ್ತʼ ಶೂರನ ನಿಜಬಣ್ಣ ಬಯಲು ಮಾಡುವ ಸಂದರ್ಭ ಬಂದಿದೆ. ಸ್ವಾರ್ಥ, ಸ್ವಜನ ಪಕ್ಷಪಾತ, ತಮ್ಮ ಬೆಂಬಲಿಗರ ರಾಜಕೀಯ ಅಭಿವೃದ್ಧಿಗಾಗಿ ಪಕ್ಷಕ್ಕಾಗಿ ಅಹರ್ನಿಷಿ ದುಡಿದ #ಅಲ್ಪಸಂಖ್ಯಾತ ನಾಯಕರನ್ನು ಗುರಿ ಇಟ್ಟು ಮುಗಿಸಲಾಗುತ್ತಿದೆ! 1/12

“ತನ್ನೆಲ್ಲ ಸಿದ್ದಕಲೆ, ಸಿದ್ದಸೂತ್ರಗಳೆನ್ನೆಲ್ಲ ಪೋಣಿಸಿ ʼಅಹಿಂದʼ ಎಂದು ಜನರನ್ನು 'ಅಡ್ಡದಾರಿ' ಹಿಡಿಸಿದ ʼಸಿದ್ದಹಸ್ತ ಶೂರರುʼ ತಮ್ಮ ಸ್ವಪಕ್ಷದಲ್ಲೇ ಮುಸ್ಲಿಂ ನಾಯಕರನ್ನು ಒಬ್ಬೊಬ್ಬರನ್ನಾಗಿಯೇ ಟಾರ್ಗೆಟ್ ಮಾಡುತ್ತಾ ʼಅಲ್ಪಸಂಖ್ಯಾತರ ಅಂತ್ಯ ರಾಜಕಾರಣʼದ ಟರ್ಮಿನೇಟರ್ ಆಗಿ ಹೊರ ಹೊಮ್ಮಿದ್ದಾರೆ.” ಎಂದು ಟೀಕಿಸಿದ್ದಾರೆ.

“ನಂಬಿ ಅಧಿಕಾರ ಕೊಟ್ಟ ಪಕ್ಷದ ಕತ್ತನ್ನೇ ಕುಯ್ಯುವ, ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುವ ʼಸಿದ್ದಹಸ್ತ ಸೂತ್ರಧಾರಿʼಯ ಒಳ ರಾಜಕೀಯಕ್ಕೆ ಬಲಿಯಾಗುತ್ತಿರುವ ಅಲ್ಪಸಂಖ್ಯಾತ ನಾಯಕರ ದೊಡ್ಡ ಪಟ್ಟಿಯೇ ಇದೆ. ಕಾಂಗ್ರೆಸ್ʼನಲ್ಲಿ ನಡೆದಿರುವ ಅಲ್ಪಸಂಖ್ಯಾತ ನಾಯಕರ ʼರಾಜಕೀಯ ನರಮೇಧʼಕ್ಕೆ ಯಾರು ಕಾರಣ ಎಂದು ಜನರಿಗೆ ಗೊತ್ತಾಗಲಿ.

2012ರ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಇಕ್ಬಾಲ್ ಅಹಮದ್ ಸರಡಗಿ ಸೋಲುತ್ತಾರೆ. ಪಕ್ಷೇತರ ಅಭ್ಯರ್ಥಿಯಾಗಿದ್ದ ಭೈರತಿ ಸುರೇಶ್ ತಮ್ಮ ಗೆಲುವಿಗೆ ಬೇಕಿದ್ದ 19 ಮತ ಮೀರಿ 23 ಮತ ಪಡೆದು ಗೆಲ್ಲುತ್ತಾರೆ!! ಇಲ್ಲಿ ಸರಡಗಿ ಸೋಲಿಗೆ, ಭೈರತಿ ಸುರೇಶ್ ಗೆಲುವಿಗೆ ಕಾರಣವಾದ ʼಸಿದ್ದಸೂತ್ರʼ ಹಣೆದಿದ್ದು ಯಾರು?” ಹೆಸರು ಹೇಳದೇ ಕುಟುಕಿದ್ದಾರೆ‌.

  • ಅಲ್ಪಸಂಖ್ಯಾತರ ಕಲ್ಯಾಣ ಎಂದರೆ ಇದೇನಾ ಸಿದ್ದಹಸ್ತರೇ? ತೊಟ್ಟಿಲನ್ನೂ ತೂಗುತ್ತಾ, ಮಗುವನ್ನೂ ಚಿವುಟುತ್ತಾ, ಸಾಧ್ಯವಾದರೆ ಆ ಮಗುವಿನ ಕತ್ತನ್ನೂ ಕುಯ್ಯುತ್ತಾ ನಡೆಸುತ್ತಿರುವ ಇಂಥ ನೀಚ ರಾಜರಾರಣ ಮುಸ್ಲೀಂ ಬಾಂಧವರಿಗೆ ಈಗ ಗೊತ್ತಾಗಿಬಿಟ್ಟಿದೆ. 10/12

ಈ ʼಸಿದ್ದಹಸ್ತರ ಸಿದ್ದಸೂತ್ರʼ ಅಲ್ಲಿಗೇ ನಿಲ್ಲುವುದಿಲ್ಲ. 2016ರಲ್ಲಿ ಹೆಬ್ಬಾಳ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಹಿರಿಯ ನಾಯಕ ಸಿ.ಕೆ.ಜಾಫರ್ ಷರೀಫ್ ಮೊಮ್ಮಗ ರೆಹಮಾನ್ ಷರೀಫ್ ಅವರಿಗೆ ಅಧಿಕೃತ ಟಿಕೆಟ್ ಕೊಡುತ್ತದೆ. ಆಗ ಭೈರತಿ ಸುರೇಶ್ ಪರ ಲಾಬಿ ಮಾಡಿದ್ದ ಸಿದ್ಧಕಲೆ ಸೂತ್ರಧಾರರು, ಅವರಿಗೆ ಟಿಕೆಟ್ ಕೊಡಿಸಲು ಯತ್ನಿಸುತ್ತಾರೆ. ಅದಕ್ಕೆ ಹೈಕಮಾಂಡ್ ಸೊಪ್ಪು ಹಾಕುವುದಿಲ್ಲ.

ರಾಜಕೀಯ ಒಳಸುಳಿ ಸೃಷ್ಟಿಸಿ ಷರೀಫರ ಮೊಮ್ಮಗನನ್ನು ಸೋಲಿಸುತ್ತಾರೆ! ಇನ್ನು; 2023ರ ಚುನಾವಣೆಯಲ್ಲಿ ಭೈರತಿ ಸುರೇಶ್ʼಗೇ ಹೆಬ್ಬಾಳದ ಕಾಂಗ್ರೆಸ್ ಟಿಕೆಟ್ ಗ್ಯಾರಂಟಿ. ಹಾಗಾದರೆ ಜಾಫರ್ ಷರೀಫರ ಮೊಮ್ಮಗನ ಕಥೆ ಏನು?” ಎಂದು ಪ್ರಶ್ನಿಸಿದ್ದಾರೆ.

“ಕಳೆದ ಲೋಕಸಭೆ ಚುನಾವಣೆ ನಂತರ ತಮಗೆ ಆಗುತ್ತಿರುವ ಅನ್ಯಾಯ ಪ್ರಶ್ನಿಸಿದ ರೋಷನ್ ಬೇಗ್ʼಗೆ ಶೋಕಾಸ್ ನೊಟೀಸ್ ನೀಡಿ, ತಮ್ಮನ್ನು ಬಹಿರಂಗವಾಗಿ ಪ್ರಶ್ನಿಸಿದರು ಎಂಬ ಕಾರಣಕ್ಕೆ ಅವರನ್ನು ಬೇಕಾಬಿಟ್ಟಿ ನಡೆಸಿಕೊಂಡು ಅಪಮಾನ ಮಾಡುತ್ತಾರೆ ಸಿದ್ದಹಸ್ತರು. ಕೊನೆಗೆ ರೋಷನ್ ಬೇಗ್ ಕಾಂಗ್ರೆಸ್ ಪಕ್ಷದಿಂದಲೇ ದೂರವಾಗುತ್ತಾರೆ.

ಮೈಸೂರಿನ ಹಿರಿಯ ನಾಯಕ ತನ್ವೀರ್ ಸೇಠ್ ಅವರನ್ನು ಅಪಮಾನಕರವಾಗಿ ನಡೆಸಿಕೊಂಡಿದ್ದು ಇದೇ ಸಿದ್ದಹಸ್ತರು. ಅಲ್ಲಿನ ಪಾಲಿಕೆಯಲ್ಲಿ ಜಾತ್ಯತೀತ ಶಕ್ತಿಗಳನ್ನು ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ನಡೆಸಿದ ತನ್ವೀರ್ ಮೇಲೆ ಕೂಗಾಡಿದ ಸಿದ್ದಸೂತ್ರ ಪ್ರವೀಣರು, ಇನ್ನಿಲ್ಲದ ಅಪಮಾನ ಮಾಡಿ ನಿಂದಿಸುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

“ಈಗ ಆಡಿಯೋ ನೆಪದಲ್ಲಿ ಸಲೀಂ ಮೊಹಮದ್ ಬಲಿ ಪಡೆದಾಗಿದೆ. ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಬಿಟ್ಟು ದೊಡ್ಡವರ ರಕ್ಷಣೆ ಮಾಡಲಾಗಿದೆ. ಸಲೀಂ ಹೇಳಿದ್ದೆಲ್ಲವನ್ನೂ ಕೇಳಿಕೊಂಡು ʼರಸಸ್ವಾದʼ ಮಾಡಿ ಪುಕ್ಕಟೆ ಮನರಂಜನೆ ಪಡೆದ ವ್ಯಕ್ತಿಗೆ ರಕ್ಷಣೆ ನೀಡಿ ಓರ್ವ ಅಲ್ಪಸಂಖ್ಯಾತ ನಾಯಕನನ್ನು 6 ವರ್ಷ ಉಚ್ಚಾಟಿಸಲಾಗಿದೆ. ಇದು ಯಾವ ಸೀಮೆ ನ್ಯಾಯ?.

ಅಲ್ಪಸಂಖ್ಯಾತರ ಕಲ್ಯಾಣ ಎಂದರೆ ಇದೇನಾ ಸಿದ್ದಹಸ್ತರೇ? ತೊಟ್ಟಿಲನ್ನೂ ತೂಗುತ್ತಾ, ಮಗುವನ್ನೂ ಚಿವುಟುತ್ತಾ, ಸಾಧ್ಯವಾದರೆ ಆ ಮಗುವಿನ ಕತ್ತನ್ನೂ ಕುಯ್ಯುತ್ತಾ ನಡೆಸುತ್ತಿರುವ ಇಂಥ ನೀಚ ರಾಜರಾರಣ ಮುಸ್ಲೀಂ ಬಾಂಧವರಿಗೆ ಈಗ ಗೊತ್ತಾಗಿಬಿಟ್ಟಿದೆ.

ಇಕ್ಬಾಲ್ ಸರಡಗಿ ಅವರನ್ನು ಸೋಲಿಸಿದಿರಿ, ಜಾಫರ್ ಷರೀಫರ ಮೊಮ್ಮಗನನ್ನು ಮುಗಿಸಿದಿರಿ, ರೋಷನ್ ಬೇಗ್ ವಿರುದ್ಧ ರೋಷ ತೀರಿಸಿಕೊಂಡಿರಿ, ತನ್ವೀರ್ ಸೇಠ್ ಮೇಲೆ ಹಗೆ ಸಾಧಿಸಿದಿರಿ, ಇನ್ನೊಬ್ಬರ ಮೇಲಿನ ಸೇಡನ್ನು ಬಡಪಾಯಿ ಸಲೀಂ ಮೇಲೆ ತಿರುಗಿಸಿ ಒಂದೇ ಕಲ್ಲಿನಲ್ಲಿ 2 ಹಕ್ಕಿ ಹೊಡೆದು ʼಕಿರಾತಕ ರಾಜಕಾರಣʼ ಮಾಡಿದಿರಿ ಎಂದು ಟೀಕಿಸಿದ್ದಾರೆ.

“ಚಕ್ರ ತಿರುಗುತ್ತಿದೆ, ನಿಮ್ಮ ಅಂತ್ಯಕಾಲವೂ ಆರಂಭವಾಗಿದೆ. ಅಲ್ಪಸಂಖ್ಯಾತ ಬಾಂಧವರಿಗೆ ನಿಮ್ಮ ನಿಜಬಣ್ಣ ಗೊತ್ತಾಗಿದೆ ಸಿದ್ದಹಸ್ತರೇ. ನಿಮಗೆ ಪಾಠ ಕಲಿಸುವ #ಜನತಾಪರ್ವ ಈಗಷ್ಟೇ ಆರಂಭವಾಗಿದೆ. ಕಾದು ನೋಡಿ” ಎಂದು ಹೇಳಿದ್ದಾರೆ.

Last Updated : Oct 16, 2021, 3:13 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.