ETV Bharat / state

ಸಚಿವ ಡಿ ಸುಧಾಕರ್ ವಜಾ ಮಾಡಲು ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹ - Atrocity case against Minister D Sudhakar

Atrocity case against Minister D Sudhakar: ಜಾನಿ ನಿಂದನೆ ಆರೋಪದ ಮೇಲೆ ಎಫ್​ಐಆರ್ ದಾಖಲಾದ ಹಿನ್ನೆಲೆಯಲ್ಲಿ ಸಚಿವ ಸುಧಾಕರ್ ವಿರುದ್ಧ ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ
ಮಾಜಿ ಸಿಎಂ ಕುಮಾರಸ್ವಾಮಿ
author img

By ETV Bharat Karnataka Team

Published : Sep 12, 2023, 5:59 PM IST

Updated : Sep 12, 2023, 8:28 PM IST

ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ದಲಿತರಿಗೆ ಧಮ್ಕಿ ಹಾಕಿ ದೌರ್ಜನ್ಯ ಎಸಗಿಸಿದ ಆರೋಪ ಎದುರಿಸುತ್ತಿರುವ ಯೋಜನೆ ಹಾಗೂ ಸಾಂಖ್ಯಿಕ ಖಾತೆ ಸಚಿವ ಡಿ ಸುಧಾಕರ್ ಅವರನ್ನು ಕೂಡಲೇ ಸಂಪುಟದಿಂದ ವಜಾ ಮಾಡಬೇಕು ಹಾಗೂ ಅವರನ್ನು ಬಂಧಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯ ಮಾಡಿದರು. ಜೆಪಿ ನಗರದ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದಲಿತರ ರಕ್ಷಣೆ ಮಾಡುತ್ತೇವೆ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಈ ಸರ್ಕಾರದಲ್ಲಿ ಏನಾಗುತ್ತಿದೆ? ಸಚಿವರೇ ದಲಿತರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ. ಇಂತಹ ವ್ಯಕ್ತಿಯನ್ನು ಸಂಪುಟದಲ್ಲಿ ಇರಿಸಿಕೊಳ್ಳಬಾರದು ಎಂದರು.

ಎಫ್​ಐಆರ್ ದಾಖಲಿಸಿದ ಪೊಲೀಸ್ ಅಧಿಕಾರಿಗಳಿಗೆ ಬೆದರಿಕೆ ಆರೋಪ: ಸಿದ್ದರಾಮಯ್ಯನವರೇ ನೀವು ಬೇರೆ ಪಕ್ಷದವರಿಗೆ ಮಾನ ಮರ್ಯಾದೆ ಇದೆಯಾ ಅಂತ ಕೇಳ್ತೀರಲ್ವಾ? ನಿಮಗೆ ಏನಿದೆ ಅಂತ ನಾನು ಕೇಳಲು ಬಯಸುತ್ತೇನೆ. ಎಫ್​​ಐಆರ್ ದಾಖಲಿಸಿದ ಪೊಲೀಸ್ ಅಧಿಕಾರಿಗಳ ಮೇಲೆಯೇ ಒತ್ತಡ ಹೇರುವ ಕೆಲಸ ಮಾಡುತ್ತಿದ್ದೀರಿ. ನಿಮಗೆ ಆತ್ಮಸಾಕ್ಷಿ ಎನ್ನುವುದು ಇದೆಯಾ? ಎಂದು ಮಾಜಿ ಮುಖ್ಯಮಂತ್ರಿ ಖಾರವಾಗಿ ಪ್ರಶ್ನಿಸಿದರು.

ಅಧಿಕಾರಿಗಳನ್ನು ಬಹಳ ಕೀಳಾಗಿ ನಡೆಸಿಕೊಳ್ಳುತ್ತಿದ್ದೀರಿ. ಎಪ್​​ಐಆರ್ ದಾಖಲಿಸಿದ ಅಧಿಕಾರಿಗೆ ದಾಖಲೆಗಳನ್ನು ತೆಗೆದುಕೊಂಡು ಮನೆಗೆ ಬಾ ಅಂತ ಬೆದರಿಕೆ ಹಾಕುತ್ತೀರಿ. ಇದಾ ದಲಿತರ ರಕ್ಷಣೆ? ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು. ಈ ಭೂಮಿ ಪ್ರಕರಣ ಮುಗಿದೇ ಹೋಗಿತ್ತು. ಈಗ ಕಾನೂನುಬದ್ಧವಾಗಿ ಜೀವ ಕೊಟ್ಟಿದ್ದಾರೆ. ಎಲ್ಲದಕ್ಕೂ ತನಿಖೆ ತನಿಖೆ ಅಂತ ಹೇಳ್ತೀರಲ್ಲಾ, ಇದಕ್ಕೆ ಯಾವ ತನಿಖೆ ಮಾಡುತ್ತೀರಾ? ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರ ಮೇಲೆ ಕಾಗದದ ಚೂರು ಎಸೆದರು ಎಂದು ನೀವೆಲ್ಲಾ ಉದ್ದುದ್ದ ಭಾಷಣ ಮಾಡಿದ್ರಿ. ಇವತ್ತು ಆ ದಲಿತ ಸಮುದಾಯದ ಹೆಣ್ಣು ಮಗಳ ಮೇಲೆ ಮಚ್ವು ಕೊಡಲಿ ಹಿಡಿದು ಬೆದರಿಸಲು ಹೊರಟಿದ್ದೀರಲ್ಲಾ? ಜನ ಇದಕ್ಕೆನಾ ನಿಮಗೆ ಮತ ಹಾಕಿದ್ದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸಿಎಂ ಕುಮಾರಸ್ವಾಮಿ
ಮಾಜಿ ಸಿಎಂ ಕುಮಾರಸ್ವಾಮಿ

ಮಚ್ಚು, ಕೊಡಲಿ, ಕತ್ತಿ ಹಿಡಿಯುವವರನ್ನು ಮಂತ್ರಿ ಮಾಡಿಕೊಂಡಿದ್ದೀರಲ್ಲಾ? ದಲಿತರ ಪರ ಕಾಳಜಿ ಇರುವ ವಿಧೇಯಕವನ್ನು ಬೇರೆ ಬೇರೆ ಸದನದಲ್ಲಿ ಪಾಸ್ ಮಾಡಿಕೊಂಡಿರುವುದು ಕಸದ ಬುಟ್ಟಿಗೆ ಹಾಕಲಿಕ್ಕಾ? ತಕ್ಷಣ ನಿಮ್ಮ ಸಚಿವರನ್ನು ಸಂಪುಟದಿಂದ ವಜಾ ಮಾಡಿ, ಬಂಧಿಸಬೇಕು ಎಂದು ಹೆಚ್​ಡಿಕೆ ಒತ್ತಾಯಿಸಿದರು. ನಾವು ಟೀಕೆ ಮಾಡಿದರೆ ಅಸೂಯೆ ಅಂತಾರೆ. ಇಂತಹ ಕೆಲಸ ಮಾಡಿದರೆ ನಾವು ನೋಡಿಕೊಂಡು ಸುಮ್ಮನೆ ಇರಬೇಕಾ? ಹೀಗೆನಾ ನೀವು ದಲಿತರನ್ನು ಉದ್ದಾರ ಮಾಡುವುದು? ಇದು ದಲಿತ ವಿರೋಧಿ, ಜನವಿರೋಧಿ ಸರ್ಕಾರ ಎಂದು ಕಿಡಿಕಾರಿದರು. ದಲಿತ ಸಂಘಟನೆಗಳಿಗೂ ನಾನು ಮನವಿ ಮಾಡುತ್ತೇನೆ. ಅವರೂ ಇದನ್ನು ಗಮನಿಸಲಿ. ಅವರು ಈ ಅನ್ಯಾಯವನ್ನು ನೋಡಿಕೊಂಡು ಸುಮ್ಮನೆ ಇರಬಾರದು. ಈ ಸಚಿವರ ವಿರುದ್ಧ ಹೋರಾಟ ನಡೆಸಬೇಕು ಎಂದರು.

ಹಲ್ಲೆ, ದೌರ್ಜನ್ಯ ಮತ್ತು ಜಾತಿ ನಿಂದನೆ ಆರೋಪದ ಮೇಲೆ ಸಚಿವ ಡಿ ಸುಧಾಕರ್ ವಿರುದ್ಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಸಚಿವರ ವಿರುದ್ಧ ಕ್ರಮಕ್ಕೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಆಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ: ಸಚಿವ ಸುಧಾಕರ್​ ವಿರುದ್ಧ ಎಫ್​ಐಆರ್​ ದಾಖಲು.. ಜಾತಿ ನಿಂದನೆಯಾಗಿದ್ದರೆ ರಾಜೀನಾಮೆ ನೀಡಲಿ ಎಂದ ಬಸವರಾಜ ಬೊಮ್ಮಾಯಿ

Last Updated : Sep 12, 2023, 8:28 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.