ETV Bharat / state

ಡಿಸಿಎಂಗೆ ದೇವೇಗೌಡರ ಕುಟುಂಬವನ್ನು ಖರೀದಿಸುವ ಶಕ್ತಿ ಇಲ್ಲ : ಹೆಚ್​ ಡಿ ಕುಮಾರಸ್ವಾಮಿ - ಈಟಿವಿ ಭಾರತ ಕನ್ನಡ

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್​ ವಿರುದ್ಧ ಹೆಚ್ ​ಡಿ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.

ಹೆಚ್​ ಡಿ ಕುಮಾರಸ್ವಾಮಿ
ಹೆಚ್​ ಡಿ ಕುಮಾರಸ್ವಾಮಿ
author img

By ETV Bharat Karnataka Team

Published : Aug 22, 2023, 7:29 PM IST

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ದೇವೇಗೌಡರ ಕುಟುಂಬವನ್ನು ಬಿಟ್ಟು ಯಾರನ್ನು ಬೇಕಾದರೂ ಖರೀದಿ ಮಾಡುವ ಶಕ್ತಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಯಶವಂತಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಗೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ತಮ್ಮ ವಿರುದ್ಧ ದಾಖಲೆ ಬಿಡುಗಡೆ ಮಾಡಿದರೆ ಭಯ ಇಲ್ಲ ಎಂಬ ಹೇಳಿಕೆ ನೀಡಿದ ಡಿ ಕೆ ಶಿವಕುಮಾರ್ ಅವರ ಹೇಳಿಕೆಯ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದರು.

ಅವರು ಯಾರಿಗೂ ಹೆದರಲ್ಲ. ಅವರು ಯಾರನ್ನು ಬೇಕಾದರೂ ಖರೀದಿ ಮಾಡುತ್ತಾರೆ. ಬಿಜೆಪಿಯ ದೆಹಲಿಯ ನಾಯಕರನ್ನೇ ಖರೀದಿ ಮಾಡಿದರೂ ಅಚ್ಚರಿ ಇಲ್ಲ. ಯಾರನ್ನು ಬೇಕಾದರೂ ಅವರು ಖರೀದಿ ಮಾಡಬಹುದು, ಅವರಿಗೆ ಆ ಶಕ್ತಿ ಇದೆ ಎಂದು ಹೆಚ್​ಡಿಕೆ ವಾಗ್ದಾಳಿ ನಡೆಸಿದರು.

ಈವರೆಗೂ ಮಾಡಿಕೊಂಡಿದ್ದು ಸಾಕು. ಇನ್ನಾದರೂ ಲೂಟಿ ಹೊಡೆಯೋದು ನಿಲ್ಲಿಸಿ, ಅಣ್ಣ ಅಂತಿರಲ್ಲ. ಅಣ್ಣನಾಗಿ ಹೇಳುತ್ತೇನೆ. ಇನ್ನಾದರೂ ಈ ಲೂಟಿ ನಿಲ್ಲಿಸಿ. ಈ ಕಿವಿಮಾತು ಕೇಳಿದರೆ ನಿಮ್ಮನ್ನು ತಮ್ಮ ಎಂದು ಒಪ್ಪಿಕೊಳ್ಳುತ್ತೇನೆ ಎಂದು ಡಿಸಿಎಂ ಡಿಕೆಶಿ ವಿರುದ್ಧ ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು. ನೈಸ್ ಅಕ್ರಮಗಳ ದಾಖಲೆ ಶೀಘ್ರವೇ ಬಿಡುಗಡೆ ಮಾಡುತ್ತೇನೆ. ಇದರಲ್ಲಿ ಸಂಶಯ ಇಲ್ಲ. ಈ ಯೋಜನೆ ಹೆಸರಲ್ಲಿ ಏನೇನು ಆಗಿದೆ? ಎಷ್ಟೆಲ್ಲ ಅಕ್ರಮ ನಡೆದಿದೆ? ಯಾರೆಲ್ಲಾ ಫಲಾನುಭವಿಗಳು ಇದ್ದಾರೆ? ಎಲ್ಲವನ್ನೂ ಜನರ ಮುಂದಿಡುತ್ತೇನೆ. ಕೆಲವರ ಹಣೆಬರಹ ಆಚೆಗೆ ಬರುತ್ತದೆ ಎಂದು ಅವರು ಪ್ರಶ್ನೆಯೊಂದಕ್ಕೆ ಕುಮಾರಸ್ವಾಮಿ ಉತ್ತರ ನೀಡಿದರು.

ದಾಖಲೆ ಬಿಡುಗಡೆ ಸಮಸ್ಯೆ ಇದೆ: ಬುಧವಾರ ಚಂದ್ರಯಾನ -3 ರೋವರ್ ಚಂದ್ರನ ಮೇಲೆ ಇಳಿಯಲಿದೆ. ಎಲ್ಲರಂತೆ ನನಗೂ ಕುತೂಹಲ ಇದೆ. ಪ್ರತಿಯೊಬ್ಬರ ಗಮನವೂ ಆ ಕಡೆಯೇ ಇರುತ್ತದೆ. ಹೀಗಾಗಿ ಕೆಲ ದಿನದಲ್ಲಿ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ. ಕೆಲವರು ನೈಸ್ ಯೋಜನೆ ದೇವೇಗೌಡರ ಪಾಪದ ಕೂಸು ಎಂದು ಹೇಳಿದ್ದಾರೆ. ಅವರಿಗೆ ಗೊತ್ತಿರಲಿ, ಯೋಜನೆಯ ಮೂಲ ಒಪ್ಪಂದ ಏನಿದೆ? ಅದನ್ನು ಅವರು ಓದಿಕೊಳ್ಳಬೇಕು. ಅದನ್ನು ಪೂರ್ಣವಾಗಿ ತಿಳಿದು ಮಾತನಾಡಿದರೆ ಚೆನ್ನಾಗಿರುತ್ತದೆ ಎಂದು ಹೇಳಿದರು.

ಇವರ ಮಹಾನ್ ಸಾಧನೆಗಳನ್ನೆಲ್ಲ ಬಿಡುಗಡೆ ಮಾಡುತ್ತೇನೆ: ದೇವೇಗೌಡರು ಒಪ್ಪಂದ ಮಾಡಿಕೊಂಡಿದ್ದು ರಸ್ತೆ ಮಾಡಲಿ ಎಂದು, ಬೆಂಗಳೂರು ಮತ್ತು ಮೈಸೂರು ನಡುವೆ ಓಡಾಡುವ ಜನರಿಗೆ ಒಳ್ಳೆಯದಾಗಲಿ ಎಂದು ಈ ಮಹಾನುಭಾವರು ಮಾಡಿದ್ದೇನು? ಮೂಲ ಒಪ್ಪಂದವನ್ನು ಹೇಗೆಲ್ಲ ತಿರುಚಿದರು, ಇವರ ಮಹಾನ್ ಸಾಧನೆಗಳನ್ನೆಲ್ಲ ಬಿಡುಗಡೆ ಮಾಡುತ್ತೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಗುಡುಗಿದರು.

ಕಾವೇರಿ ಸರ್ವಪಕ್ಷ ಸಭೆಗೆ ಹಾಜರಾಗುತ್ತೇನೆ: ಕಾವೇರಿ ನೀರಿನ ವಿಚಾರದ ಬಗ್ಗೆ ಚರ್ಚೆ ನಡೆಸಲು ಕರೆಯಲಾಗುವ ಸರ್ವಪಕ್ಷ ಸಭೆಯಲ್ಲಿ ಭಾಗಿಯಾಗುತ್ತೆನೆ. ಅಲ್ಲಿ ನಮ್ಮ ಪಕ್ಷದ ನಿಲುವನ್ನು ಸ್ಪಷ್ಟವಾಗಿ ಹೇಳಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದರು. ತಮಿಳುನಾಡಿಗೆ ನೀರು ಬಿಟ್ಟ ಕೂಡಲೇ ಮೊದಲು ದನಿ ಎತ್ತಿದವನೇ ನಾನು. ಸರ್ವಪಕ್ಷ ಸಭೆ ಕರೆಯಬೇಕು ಎಂದು ಒತ್ತಾಯ ಮಾಡಿದವನು ಕೂಡ ನಾನೇ. ಆದರೆ, ರಾಜ್ಯದ ಹಿತ ಪರಿಗಣನೆಗೆ ಕ್ರಮ ಕೈಗೊಳ್ಳಬೇಕಾದ ಜಲಸಂಪನ್ಮೂಲ ಸಚಿವರೂ ಆದ ಉಪ ಮುಖ್ಯಮಂತ್ರಿ ಅವರು, ಯಾವುದೋ ಹಳೆಯ ಟ್ವಿಟ್ ಪ್ರಸ್ತಾಪ ಮಾಡಿದ್ದಾರೆ. ಆ ಟ್ವೀಟ್ ನಲ್ಲಿ ಏನು ಹೇಳಿದ್ದೇನೆ? ಎರಡೂ ರಾಜ್ಯಗಳ ಜನರು ಅಣ್ಣತಮ್ಮಂದಿರ ರೀತಿ ಇರಬೇಕೆಂದು ಹೇಳಿದ್ದೇನೆ. ಇದರಲ್ಲಿ ಹುಳುಕು ಹುಡುಕುವಂತಹ ಅಂಶ ಏನಿದೆ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜೆಡಿಎಸ್ ಶಾಸಕರು ಪಕ್ಷ ಬಿಡಲ್ಲ: ಕಾಂಗ್ರೆಸ್ ಪಕ್ಷ ಜೆಡಿಎಸ್ ಪಕ್ಷದ ಶಾಸಕರನ್ನು ಸೆಳೆಯುತ್ತಿದೆಯಲ್ಲ ಎನ್ನುವ ಪ್ರಶ್ನೆಗೆ ಖಾರವಾಗಿ ಉತ್ತರಿಸಿದ ಹೆಚ್​ಡಿಕೆ, ನಮ್ಮ ಶಾಸಕರು ಪಕ್ಷ ಬಿಡುವ ಸಾಧ್ಯತೆ ಇಲ್ಲ. ಕಾಂಗ್ರೆಸ್ ನವರು ಯಾಕೆ ಈ ರೀತಿಯ ಚರ್ಚೆ ಹುಟ್ಟುಹಾಕಿದ್ದಾರೆ ಎಂದರೇ ಅವರದೇ ಪಕ್ಷದ 30 ಶಾಸಕರು ಪಕ್ಷ ಬಿಡಲು ಮುಂದಾಗಿದ್ದಾರೆ. ಅದನ್ನು ಸರಿಮಾಡಿಕೊಳ್ಳಲು ಸಾಧ್ಯ ಅಗದ ಕಾಂಗ್ರೆಸ್ ನವರು ಬೇರೆ ಪಕ್ಷಗಳ ಶಾಸಕರು ಬರುತ್ತಿದ್ದಾರೆ ಎಂದು ಗುಲ್ಲು ಹಬ್ಬಿಸುತ್ತಿದ್ದಾರೆ. ಕಾಂಗ್ರೆಸ್ ಶಾಸಕರು ಪಕ್ಷ ಬಿಡುವುದನ್ನು ತಡೆಯಲು ಈ ಗುಮ್ಮ ಬಿಟ್ಟುಕೊಂಡು ತಿರುಗಾಡುತ್ತಿದ್ದಾರೆ ಎಂದು ತಿರುಗೇಟು ಕೊಟ್ಟರು.

ಚಲುವರಾಯಸ್ವಾಮಿ ವಿರುದ್ಧದ ಆರೋಪಗಳ ಬಗ್ಗೆಯೂ ತನಿಖೆ ಮಾಡಿ: ಕೃಷಿ ಸಚಿವ ಚಲುವರಾಯ ಸ್ವಾಮಿ ಅವರ ವಿರುದ್ಧ ಅಧಿಕಾರಿಗಳು ಬರೆದಿರುವ ದೂರಿನ ಪತ್ರದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರ ನೀಡಿದ ಕುಮಾರಸ್ವಾಮಿ; ಯಾಕೆ ಆ ಪತ್ರ ಬರೆಯಲಾಗಿದೆ? ಸಿಐಡಿ ಅವರು ಆ ಪತ್ರ ನಕಲಿನಾ? ಅಸಲಿನಾ ಅಂತ ತನಿಖೆ ಮಾಡ್ತಾ ಇದ್ದಾರೆ. ಆದರೆ, ಪತ್ರದಲ್ಲಿ ಉಲ್ಲೇಖ ಮಾಡಿರುವ ಅಂಶಗಳ ಬಗ್ಗೆ ಅವರು ತನಿಖೆ ಮಾಡುತ್ತಿಲ್ಲ. ಅಧಿಕಾರಿಗಳು ದುಡ್ಡು ಕೊಟ್ಟಿರುವ ಬಗ್ಗೆ ಹೇಳೋಕೆ ಆಗುತ್ತಾ? ಈ ಲಂಚ‌ ವ್ಯವಹಾರದ ವಿಚಾರದ ಸತ್ಯವನ್ನು ಜನರ ಮುಂದೆ ಇಡಿ ಎಂದು ಆಗ್ರಹಿಸಿದರು.

ಇದನ್ನೂ ಓದಿ: ಕಾವೇರಿ ನೀರಿನ ವಿಚಾರದಲ್ಲಿ ಜೆಡಿಎಸ್, ಬಿಜೆಪಿ ರಾಜಕೀಯ ಮಾಡಬಾರದು: ಸಚಿವ ಚಲುವರಾಯಸ್ವಾಮಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.