ETV Bharat / state

ನಾಗಮಂಗಲ ಕೈಗಾರಿಕಾ ಪ್ರದೇಶ ಭೂಸ್ವಾಧೀನಕ್ಕೆ ಮತ್ತೊಮ್ಮೆ ಸರ್ವೇ ಮಾಡಿಸಲು ಸಚಿವ ಶೆಟ್ಟರ್‌ ಸೂಚನೆ - Minister Jagadish Shetter latest news

ತೋಟಗಳು ಹಾಗೂ ನೀರಾವರಿ ಸೌಲಭ್ಯದಿಂದ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿರುವ ಜಮೀನಿನ ಸ್ವಾಧೀನ ಪ್ರಕ್ರಿಯೆ ಸರಿಯಲ್ಲ. ಆ ಜಾಗ ಬಿಟ್ಟು ಒಣ ಭೂಮಿ ಸ್ವಾಧೀನ ಪಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಆ ಭಾಗದ ರೈತರು ಹಾಗೂ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಬೇಕು. ಇನ್ನೊಮ್ಮೆ ಸರ್ವೇ ಕಾರ್ಯ ನಡೆಸಬೇಕು ಎಂದು ಸೂಚಿಸಿದರು..

Meeting
Meeting
author img

By

Published : Oct 3, 2020, 4:27 PM IST

ಬೆಂಗಳೂರು : ನಾಗಮಂಗಲ ತಾಲೂಕಿನಲ್ಲಿ ಉದ್ದೇಶಿತ ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ ಅಗತ್ಯವಿರುವ ಭೂಮಿಯ ಸ್ವಾಧೀನಕ್ಕೆ ಮತ್ತೊಮ್ಮೆ ಸರ್ವೇ ಮಾಡಿಸುವಂತೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಖನಿಜ ಭವನದ ಉದ್ಯೋಗ ಮಿತ್ರ ಸಭಾಂಗಣದಲ್ಲಿ ಇಂದು ಸಚಿವರನ್ನು ಭೇಟಿಯಾದ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ನೇತೃತ್ವದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಜಗದೀಶ್‌ ಶೆಟ್ಟರ್, ತೋಟಗಳು ಹಾಗೂ ನೀರಾವರಿ ಸೌಲಭ್ಯದಿಂದ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿರುವ ಜಮೀನಿನ ಸ್ವಾಧೀನ ಪ್ರಕ್ರಿಯೆ ಸರಿಯಲ್ಲ.

ಆ ಜಾಗವನ್ನು ಬಿಟ್ಟು ಒಣ ಭೂಮಿ ಪ್ರದೇಶದ ಜಮೀನನ್ನು ಸ್ವಾಧೀನ ಪಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಆ ಭಾಗದ ರೈತರು ಹಾಗೂ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಬೇಕು. ಇನ್ನೊಮ್ಮೆ ಸರ್ವೇ ಕಾರ್ಯ ನಡೆಸಬೇಕು ಎಂದು ಸೂಚಿಸಿದರು. ಇದಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಮಾತನಾಡಿ, ನಾಗಮಂಗಲ ತಾಲೂಕಿನಲ್ಲಿ ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ ಭೂಸ್ವಾಧೀಯ ಪ್ರಕ್ರಿಯೆ ಪ್ರಾರಂಭವಾಗಿದೆ. ಈ ಸ್ವಾಧೀನ ಪ್ರಕ್ರಿಯೆಯಲ್ಲಿ ಕೆಲ ಅಭಿವೃದ್ಧಿ ಹೊಂದಿರುವ ತೋಟಗಳನ್ನು ನಮೂದಿಸಲಾಗಿದೆ. ಇದನ್ನು ಕೈಬಿಟ್ಟು ಒಣ ಭೂಮಿ ಸ್ವಾಧೀನಪಡಿಸಿಕೊಳ್ಳಬೇಕು.

ಈ ಭಾಗದಲ್ಲಿ ಕೈಗಾರಿಕೆಗಳು ಬರುವ ಅಗತ್ಯತೆ ಇದೆ. ಆದರೆ, ಕೃಷಿಯಲ್ಲಿ ಅಭಿವೃದ್ಧಿ ಹೊಂದಿರುವ ನೀರಾವರಿ ಜಮೀನನ್ನು ಈ ಉದ್ದೇಶಕ್ಕೆ ಸ್ವಾಧೀನ ಪಡಿಸಿಕೊಳ್ಳುವುದು ಬೇಡ ಎಂದು ಸಲಹೆ ನೀಡಿದರು. ಇದೇ ವೇಳೆ ಸಭೆಯಲ್ಲಿ ಭಾಗವಹಿಸಿದ್ದ ನಾಗಮಂಗಲ ಶಾಸಕ ಸುರೇಶ್‌ ಗೌಡ, ಮಾಗಡಿ ಶಾಸಕ ಎ ಮಂಜುನಾಥ್‌ ಅವರ ವಿಧಾನಸಭಾ ಕ್ಷೇತ್ರಗಳಲ್ಲಿ ಕೈಗಾರಿಕೆಗಳ ಅಭಿವೃದ್ದಿಗೆ ಅವಕಾಶ ಇರುವ ಪ್ರದೇಶಗಳ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು. ಅಲ್ಲದೆ, ಅಧಿಕಾರಿಗಳನ್ನು ಸರ್ವೇ ಕಾರ್ಯಕ್ಕೆ ಕಳುಹಿಸಿ ಕೊಡುವಂತೆ ಮನವಿ ಮಾಡಿದರು.

ಇದಕ್ಕೆ ಸಚಿವರು ಸ್ಪಂದಿಸಿ ಸ್ಥಳದಲ್ಲೇ ಅಧಿಕಾರಿಗಳಿಗೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಸಭೆಯಲ್ಲಿ ವಿಧಾನಪರಿಷತ್‌ ಸದಸ್ಯ ಅಪ್ಪಾಜಿಗೌಡ, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ‍ ಗೌರವ್‌ ಗುಪ್ತಾ, ಕೆಐಎಡಿಬಿ ಸಿಇಒ ಶಿವಶಂಕರ್‌, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ರೇವಣ್ಣ ಗೌಡ ಉಪಸ್ಥಿತರಿದ್ದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.