ETV Bharat / state

'ಜೆಡಿಎಸ್ ಅಧಿಕಾರಕ್ಕೆ ಬಂದರೆ ಹಣ ಫಿಕ್ಸ್ ಮಾಡಿ ಸರ್ಕಾರಿ ನೌಕರಿ ಕೊಡುವ ವ್ಯವಸ್ಥೆಗೆ ಇತಿಶ್ರೀ'

ಜೆಡಿಎಸ್​ ಸರ್ಕಾರ ಅಧಿಕಾರಕ್ಕೆ ಬಂದರೆ ಸರಕಾರಿ ನೇಮಕಾತಿ ವ್ಯವಸ್ಥೆಯನ್ನು ಬದಲಾಯಿಸುತ್ತೇವೆ. ಕೆಪಿಎಸ್​ಸಿ​ಗೆ ಸೂಕ್ತ ಚಿಕಿತ್ಸೆ ನೀಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.

Etv hd-kumarswamy-spoke-at-bengaluru
ಜೆಡಿಎಸ್ ಅಧಿಕಾರಕ್ಕೆ ಬಂದರೆ ಹಣ ಪಿಕ್ಸ್ ಮಾಡಿ ಸರ್ಕಾರಿ ನೌಕರಿ ಕೊಡುವ ವ್ಯವಸ್ಥೆಗೆ ಇತಿಶ್ರೀ : ಹೆಚ್ ಡಿಕೆ
author img

By

Published : Mar 28, 2023, 2:21 PM IST

ಜೆಡಿಎಸ್ ಅಧಿಕಾರಕ್ಕೆ ಬಂದರೆ ಹಣ ಪಿಕ್ಸ್ ಮಾಡಿ ಸರ್ಕಾರಿ ನೌಕರಿ ಕೊಡುವ ವ್ಯವಸ್ಥೆಗೆ ಇತಿಶ್ರೀ : ಹೆಚ್ ಡಿಕೆ

ಬೆಂಗಳೂರು : ರಾಜ್ಯದಲ್ಲಿ ಈ ಬಾರಿ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದರೆ, ಸರಕಾರಿ ನೇಮಕಾತಿ ವ್ಯವಸ್ಥೆಯನ್ನು ಆಮೂಲಾಗ್ರವಾಗಿ ಬದಲಾಯಿಸುತ್ತೇವೆ ಹಾಗೂ ಕರ್ನಾಟಕ ಲೋಕಸೇವಾ ಆಯೋಗಕ್ಕೆ (ಕೆಪಿಎಸ್​​​ಸಿ) ಸರಿಯಾದ ಚಿಕಿತ್ಸೆ ನೀಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಮೀಸಲಾತಿ ಎಂದು ಬಿಜೆಪಿ ಸರಕಾರ ಜನರನ್ನು ಯಾಮಾರಿಸುತ್ತಿದೆ. ಆದರೆ, ಸರಕಾರಿ ಹುದ್ದೆಗಳನ್ನು ಲಕ್ಷ, ಕೋಟಿ ಲೆಕ್ಕದಲ್ಲಿ ಮಾರಿಕೊಳ್ಳುತ್ತಿದೆ. ರಾಜ್ಯದಲ್ಲಿ ಈ ಬಾರಿ ಜೆಡಿಎಸ್ ಸರಕಾರ ಅಧಿಕಾರಕ್ಕೆ ಬಂದರೆ, ಈ ನೇಮಕಾತಿ ವ್ಯವಸ್ಥೆಯನ್ನು ಸರಿ ಮಾಡುತ್ತೇನೆ. ನೇಮಕಾತಿ ಮಾಡುವ ಸಂಸ್ಥೆಗಳಿಗೆ ತಕ್ಕ ಶಾಸ್ತಿ ಮಾಡಿ ವ್ಯವಸ್ಥೆಯನ್ನು ಸುಧಾರಿಸುತ್ತೇನೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲು ತೂರಾಟ ನಡೆದ ಘಟನೆಯನ್ನು ಗಮನಿಸಿದ್ದೇನೆ. ರಾಜ್ಯ ಸರಕಾರ ಲಘುವಾಗಿ ಪರಿಗಣಿಸದೆ ಗಂಭೀರವಾಗಿ ಪರಿಶೀಲನೆ ಮಾಡಬೇಕು. ಹಾಗೆ ನೋಡಿದರೆ ಇದಕ್ಕೆ ಸರ್ಕಾರವೇ ಕಾರಣ ಎಂದರು.

ಮೀಸಲು ವಿಷಯದಲ್ಲಿ ಜೆಡಿಎಸ್ ನಿಲುವು ಸಂವಿಧಾನದ ಪರ. ಸಂವಿಧಾನದಲ್ಲಿರುವ ಮಾರ್ಗಸೂಚಿಯಂತೆ ಮೀಸಲಾತಿ ಇರಬೇಕು. ಸಮಾಜ ಹಾಳು ಮಾಡುವ, ಜಾತಿಗಳ ಮಧ್ಯೆ ತಂದಿಡುವ ಕೆಲಸ ಆಗಬಾರದು. ಹತ್ತು ಜಿಲ್ಲೆಯಲ್ಲಿ ಬಡತನ ರೇಖೆಗಿಂತಲೂ ಕೆಳಗಿರುವವರು ಇದ್ದಾರೆ. ಹೀಗಿದ್ದರೂ ಯಾವುದೇ ಮುಂದಾಲೋಚನೆ ಇಲ್ಲದೆ, ಬೇಜವಾಬ್ದಾರಿಯಿಂದ ಆದೇಶ ಹೊರಡಿಸಿದ್ದು ಯಾಕೆ? ಕೇವಲ ಮತಕ್ಕಾಗಿ, ಚುನಾವಣೆಗಾಗಿ ಹೀಗೆ ಮಾಡಿದೆ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಸಮಾಜವನ್ನು ಒಡೆಯಬೇಕು ಎನ್ನುವ ದುರುದ್ದೇಶದಿಂದಲೇ ಬಿಜೆಪಿ ಸರಕಾರ ಮೀಸಲು ನಾಟಕ ಅಡಿದೆ. ಮುಸ್ಲಿಮರು ಗಲಾಟೆಗೆ ಮುಂದಾಗಲಿ, ಆ ಮೂಲಕ ತನ್ನ ಬೇಳೆ ಬೇಯಿಸಿಕೊಳ್ಳುವ ಈ ಸರ್ಕಾರದ ದುರುದ್ದೇಶವಾಗಿತ್ತು. ಒಂದು ವೇಳೆ ಮುಸ್ಲಿಮರು ಬೀದಿಗಿಳಿದಿದ್ದರೆ ಪರಿಸ್ಥಿತಿ ಏನಾಗಿರುತ್ತಿತ್ತು? ಅಮಾಯಕ ಜನ ಬಲಿಯಾಗಿದ್ದರೆ ಯಾರು ಹೊಣೆ ಆಗುತ್ತಿದ್ದರು? ರಕ್ತಪಾತ ಮಾಡಲು ಬಿಜೆಪಿಯವರು ಕುತಂತ್ರ ಹೂಡಿದ್ದಾರೆ. ಸಂಘರ್ಷ ಆಗಬೇಕು ಅಷ್ಟೆ ಅವರಿಗೆ. ಆದರೆ, ಮುಸ್ಲಿಮರು ತಾಳ್ಮೆ ಇರಲಿ. ಹುಡುಗಾಟಿಕೆಯಿಂದ ಮಾಡಿರುವ ಈ ಮೀಸಲಾತಿಗೆ ಬೆಂಬಲ ಇಲ್ಲ ಎಂದು ಹೇಳಿದರು.

ಬಿಜೆಪಿ ಸರ್ಕಾರವು ಸರಕಾರಿ ನೌಕರಿಯನ್ನು ಯಾವ ರೀತಿ ಕೊಡ್ತಾ ಇದೆ ಎನ್ನುವುದು ಜಗಜ್ಜಾಹೀರು. ಹಣ ಪಡೆದು ನೌಕರಿ ಕೊಡ್ತಾ ಇದ್ದಾರೆ. ಮೀಸಲಾತಿ ಮೇಲೆ ನೌಕರಿ‌ ಕೊಡ್ತಾ ಇಲ್ಲ. ಹಾಗಾದರೆ, ಮೀಸಲಾತಿ ತಗೊಂಡು ಏನ್ ಮಾಡೋದು ? ಹಣ ಕೊಟ್ಟವರಿಗೆ ಸರಕಾರಿ ನೌಕರಿ ಮಾರಾಟ ಆಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಈ ಬಾರಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಇಂಥ ಅವೈಜ್ಞಾನಿಕ, ತಾರತಮ್ಯದ ಮೀಸಲಾತಿ ವ್ಯವಸ್ಥೆಯನ್ನು ತೆಗೆದುಹಾಕುತ್ತೇವೆ. ಅಷ್ಟೆ ಅಲ್ಲ, ಈ ಹಣ ಫಿಕ್ಸ್ ಮಾಡಿ ನೌಕರಿ ಕೊಡ್ತೀರಲ್ಲಾ, ಅದನ್ನು ನಿರ್ನಾಮ ಮಾಡುತ್ತೇವೆ. ಈ ವ್ಯವಸ್ಥೆಯನ್ನು ಸ್ವಚ್ಚ ಮಾಡಬೇಕು ಅಂದರೆ ಮಾಡಬೇಕು ಕೆಪಿಎಸ್ ಸಿ ಯನ್ನು ಸ್ವಚ್ಚ ಮಾಡಬೇಕು. ಅದನ್ನು ನಾವು ಮಾಡುತ್ತೇವೆ ಎಂದರು.

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಬಂಧನ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಯಾವಾಗಲೋ ಅವರ ಬಂಧನ ಆಗಬೇಕಿತ್ತು. ಸತ್ಯಾಂಶ ಏನಿದೆ ನೋಡಬೇಕಲ್ಲವೇ? ತಾವು ಅಡಿಕೆ ಬೆಳೆಗಾರ ಅಂತ ಹೇಳ್ತಾ ಇದ್ದಾರೆ. ಪ್ರತಿ ವರ್ಷ ನೂರಾರು ಕೋಟಿ ವ್ಯವಹಾರ ಮಾಡ್ತೀವಿ ಅಂತಾರೆ. ಅಷ್ಟು ವ್ಯವಹಾರ ಮಾಡಿದರೂ ಅಷ್ಟು ದೊಡ್ಡ ಮೊತ್ತದ ನಗದು ಇಟ್ಟುಕೊಳ್ಳುವ ಹಾಗಿಲ್ಲವಲ್ಲ. ಆದಾಯ ತೆರಿಗೆ ಇಲಾಖೆ ಹಾಗೂ ಜಾರಿ ನಿರ್ದೇಶನಾಲಯ ಈ ಬಗ್ಗೆ ಗಮನ ಕೊಡಬೇಕಲ್ವೇ? ಇನ್ನೇನು ನಾಟಕ ನಡೆಯುತ್ತೆ ನೋಡೋಣ ಎಂದು ಮಾರ್ಮಿಕವಾಗಿ ಹೇಳಿದರು.

80 ಕ್ಷೇತ್ರ ದಾಟಲ್ಲ : ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಕೇವಲ ಅಬ್ಬರ ಮಾಡುತ್ತಿವೆ ಅಷ್ಟೇ. ಆದರೆ ಈ ಎರಡೂ ಪಕ್ಷಗಳು 80 ಕ್ಷೇತ್ರ ದಾಟಲ್ಲ. ಈ ಬಗ್ಗೆ ಅಧಿಕಾರಿಗಳೇ ಚರ್ಚೆ ಮಾಡ್ತಾ ಇದ್ದಾರೆ. ಪಕ್ಷಗಳು ಒಳಗೆ ನಡೆಯುತ್ತಿರುವುದು ಬೇರೆ, ಹೊರಗೆ ನಡೆಯುತ್ತಿರುವುದು ಬೇರೆ ಎಂದರು.

ಇದನ್ನೂ ಓದಿ : ಬಿಎಸ್​ವೈ ಮನೆ ಮೇಲೆ ದಾಳಿ ಹಿಂದೆ ಬಿಜೆಪಿ ಕುತಂತ್ರ: ಡಿ.ಕೆ. ಶಿವಕುಮಾರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.