ETV Bharat / state

ಜೆಡಿಎಸ್ ಅಧಿಕಾರಕ್ಕೆ ಬಂದರೆ ಜನರ ಬೇಡಿಕೆ ಈಡೇರಿಸುವ ವಾಗ್ದಾನ ಮಾಡಿದ ಹೆಚ್​ಡಿಕೆ

ಬಿಬಿಎಂಪಿ ಚುನಾವಣೆಯನ್ನು ಗುರಿಯಾಗಿಸಿಕೊಂಡು ನಡೆದ ಜೆಡಿಎಸ್​ ಜನತಾ ಮಿತ್ರ ಕಾರ್ಯಕ್ರಮ ಯಶಸ್ವಿಯಾಗಿದೆ. ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಬೆಂಗಳೂರು ನಗರಕ್ಕೆ ಜೆಡಿಎಸ್​ ನೀಡುವ ಕೊಡುಗೆಗಳ ಬಗ್ಗೆ ವಿವರಿಸಿದರು.

author img

By

Published : Oct 8, 2022, 10:41 PM IST

hd-kumarswamy-spoke-at-the-janata-mitra-program
ಜೆಡಿಎಸ್ ಅಧಿಕಾರಕ್ಕೆ ಬಂದರೆ ಹೇಗೆ ಕೆಲಸ ಮಾಡಬೇಕು ಮತ್ತು ಜನತೆಯ ನಿರೀಕ್ಷೆಗಳೇನು? : ಎಳೆ ಎಳೆಯಾಗಿ ಬಿಚ್ಚಿಟ್ಟ ಹೆಚ್ ಡಿಕೆ

ಬೆಂಗಳೂರು : ಮುಂಬರುವ ವಿಧಾನಸಭೆ ಚುನಾವಣೆಯನ್ನು ಗುರಿಯಾಗಿಸಿಕೊಂಡು ಜೆಡಿಎಸ್ ನಡೆಸಿದ ಜಲಧಾರೆ ಸಮಾವೇಶ ಯಶಸ್ವಿಗೊಂಡ ಬೆನ್ನಲ್ಲೇ ಬಿಬಿಎಂಪಿ ಚುನಾವಣೆಯನ್ನು ಗುರಿಯಾಗಿಸಿಕೊಂಡು ಪಕ್ಷವನ್ನು ಬೆಂಗಳೂರಲ್ಲಿ ಬಲಗೊಳಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿದ್ದ ಜನತಾ ಮಿತ್ರ ಕಾರ್ಯಕ್ರಮವೂ ಯಶಸ್ವಿಯಾಗಿದೆ.

ಜೆಡಿಎಸ್ ಅಧಿಕಾರಕ್ಕೆ ಬಂದರೆ ಹೇಗೆ ಕೆಲಸ ಮಾಡಬೇಕು ಮತ್ತು ಜನತೆಯ ನಿರೀಕ್ಷೆಗಳೇನು? ಎಂಬುದರ ಕುರಿತು ಅಭಿಪ್ರಾಯಗಳನ್ನು ಸಂಗ್ರಹಿಸಲು ಜುಲೈ ತಿಂಗಳಲ್ಲಿ ಬೆಂಗಳೂರಿಗೆ ಸಿಮೀತವಾಗಿರುವಂತೆ ಆರಂಭಿಸಿದ ಜನತಾಮಿತ್ರ ಕಾರ್ಯಕ್ರಮಕ್ಕೆ ಜನತೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಒಂದು ಲಕ್ಷಕ್ಕೂ ಅಧಿಕ ಜನರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಜನತಾ ಮಿತ್ರ ಕಾರ್ಯಕ್ರಮದ ಸಮಾರೋಪದ ಸಮಾರಂಭ : ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಇಂದು ನಡೆದ ಜನತಾ ಮಿತ್ರ ಕಾರ್ಯಕ್ರಮದ ಸಮಾರೋಪದ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಜನತೆಯ ಅಭಿಪ್ರಾಯಗಳ ಕುರಿತು ಮಾಹಿತಿ ಹಂಚಿಕೊಂಡರು.

ನಗರದ 28 ವಿಧಾನಸಭಾ ಕ್ಷೇತ್ರಗಳಲ್ಲಿ ಜನತಾ ಮಿತ್ರ ವಾಹನಗಳು ಸಂಚಾರ ಮಾಡಿದ್ದವು. ಅಲ್ಲದೇ, ಆನ್‌ಲೈನ್ ಮೂಲಕವೂ ಅಭಿಪ್ರಾಯ ಸಂಗ್ರಹಿಸಲಾಗಿದೆ. ಈವರೆಗೆ ಜೆಡಿಎಸ್ ನಗರಕ್ಕೆ ನೀಡಿರುವ ಕೊಡುಗೆಗಳು ಮತ್ತು ಮುಂದೆ ಕೈಗೊಳ್ಳಬಹುದಾದ ಕಾರ್ಯಕ್ರಮಗಳ ಕುರಿತು ಜನತೆಗೆ ಮಾಹಿತಿ ನೀಡಲಾಗಿದೆ ಎಂದು ಹೇಳಿದರು.

ಜನರ ಬೇಡಿಕೆಯನ್ನು ಈಡೇರಿಸುವ ವಾಗ್ದಾನ ಮಾಡಿದ ಹೆಚ್​ಡಿಕೆ: ಅಭಿಯಾನದ ವೇಳೆ ಬೆಂಗಳೂರಿನಲ್ಲಿ ಸಮಸ್ಯೆಯಾಗಿರುವ ಶುದ್ಧ ನೀರು ಮತ್ತು ನೈರ್ಮಲ್ಯ ಸರಿಪಡಿಸಬೇಕು ಎಂದು ಶೇ.33 ರಷ್ಟು ಮಂದಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅದೇ ರೀತಿ ಅತ್ಯಾಧುನಿಕ ಶಿಕ್ಷಣದ ಅಗತ್ಯತೆ ಕುರಿತು ಶೇ.33 ರಷ್ಟು, ಗುಂಡಿ ಮುಕ್ತ ರಸ್ತೆ ಮತ್ತು ಉತ್ತಮ ಪಾದಚಾರಿ ಮಾರ್ಗ ಶೇ.27 ರಷ್ಟು ಮಂದಿಯ ನಿರೀಕ್ಷೆಯನ್ನು ಹೊಂದಿದ್ದಾರೆ.

ಭ್ರಷ್ಟಾಚಾರ ಮುಕ್ತ ಸರ್ಕಾರ, ಸಂಚಾರ ದಟ್ಟಣೆ ನಿವಾರಣೆ, ಕೆರೆಗಳ ಸಂರಕ್ಷಣೆ, ಮಹಿಳೆಯರ ಸುರಕ್ಷತಾ ಕ್ರಮಗಳು ಸೇರಿದಂತೆ ಹಲವು ಸಲಹೆಗಳನ್ನು ನಗರದ ಜನತೆ ನೀಡಿದ್ದು, ಅವುಗಳನ್ನು ಸರ್ಕಾರದಿಂದ ನಿರೀಕ್ಷಿಸಿದ್ದಾರೆ. ಜೆಡಿಎಸ್ ಅಧಿಕಾರಕ್ಕೆ ಬಂದಲ್ಲಿ ಇವುಗಳನ್ನು ನೆರವೇರಿಸಲಾಗುವುದು ಎಂದು ನಗರದ ಜನತೆಗೆ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾನ ನೀಡಿದರು.

ಬಡವರ ಕಲ್ಯಾಣಕ್ಕೆ ಒತ್ತು ನೀಡುವ ಸಂಕಲ್ಪ : ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಮುಖ್ಯಮಂತ್ರಿ ಮತ್ತು ಪ್ರಧಾನಿಯಾಗಿದ್ದ ವೇಳೆ ರಾಜ್ಯಕ್ಕೆ ನೀಡಿದ ಕೊಡುಗೆ ಹಾಗೂ ಕುಮಾರಸ್ವಾಮಿ ಆಡಳಿತಾವಧಿಯಲ್ಲಿ ನೀಡಿದ ಯೋಜನೆಗಳ ಕುರಿತು ಸಮಾವೇಶದಲ್ಲಿ ಜನತೆಗೆ ತಿಳಿಸಲಾಯಿತು. ಆಡಳಿತರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್‌ನ ಮೇಲೆ ಭ್ರಷ್ಟಾಚಾರದ ಆರೋಪ ಇದ್ದು, ಜೆಡಿಎಸ್ ಮೇಲೆ ಯಾವುದೇ ಇಂತಹ ಯಾವುದೇ ಆರೋಪಗಳಿಲ್ಲ ಎಂಬುದರ ಕುರಿತು ಬೆಳಕು ಚೆಲ್ಲಲಾಯಿತು.

ಇದೇ ವೇಳೆ ಶಿಕ್ಷಣ, ಆರೋಗ್ಯ, ಮಳೆಯಿಂದ ಅನಾಹುತವಾಗದಂತೆ ಕ್ರಮ ಕೈಗೊಳ್ಳುವುದು, ಬಡವರ ಕಲ್ಯಾಣಕ್ಕೆ ಹೆಚ್ಚು ಒತ್ತು ನೀಡುವ ಸಂಕಲ್ಪವನ್ನು ಸಮಾವೇಶದಲ್ಲಿ ಕೈಗೊಳ್ಳಲಾಯಿತು. ಸಮಾವೇಶದಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್‍ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ, ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ, ತಿಪ್ಪೇಸ್ವಾಮಿ, ಬೋಜೇಗೌಡ, ಶಾಸಕರಾದ ನಿಸರ್ಗ ನಾರಾಯಣಸ್ವಾಮಿ, ಶ್ರೀನಿವಾಸಮೂರ್ತಿ, ಡಾ.ಕೆ. ಅನ್ನದಾನಿ ಸೇರಿದಂತೆ ಮಾಜಿ ಸಚಿವರು, ಶಾಸಕರು, ಪಕ್ಷದ ಮುಖಂಡರು ಭಾಗವಹಿಸಿದ್ದರು.

ಇದನ್ನೂ ಓದಿ : ವಿಧಾನಸೌಧ ಸೇರಿಕೊಂಡಿರುವ ಚಂಬಲ್ ಕಣಿವೆ ದರೋಡೆಕೋರರನ್ನು ಓಡಿಸಬೇಕಿದೆ : ಹೆಚ್​​ಡಿಕೆ ಗುಡುಗು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.