ETV Bharat / state

ಲಾಕ್‌ಡೌನ್‌ ವಿಸ್ತರಿಸುವುದೇ ಆದರೆ, ಅದು 'ಜನಹಿತದ ಲಾಕ್‌ಡೌನ್‌' ಆಗಿರಲಿ: ಹೆಚ್​ಡಿಕೆ ಸಲಹೆ

ಕೊರೊನಾ ಕಂಟ್ರೋಲ್​ ಮಾಡಲು ಒಂದು ವೇಳೆ ಸರ್ಕಾರ ಈಗಿರುವ ಲಾಕ್​ಡೌನ್​ ಅನ್ನು ವಿಸ್ತರಿಸುವ ನಿರ್ಧಾರ ಕೈಗೊಳ್ಳುವುದಾದರೆ, ಜನಹಿತದ ಲಾಕ್‌ಡೌನ್‌ ಮಾಡುವುದರತ್ತ ಸರ್ಕಾರ ಗಮನ ನೀಡಬೇಕು. ಜನರ ಜೀವ ಉಳಿಸುತ್ತಲೇ, ಜೀವನಕ್ಕೂ ನೆರವಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

kumarswamy
kumarswamy
author img

By

Published : May 17, 2021, 3:41 PM IST

ಬೆಂಗಳೂರು: ರಾಜ್ಯ ಸರ್ಕಾರ ಲಾಕ್​ಡೌನ್​ ವಿಸ್ತರಿಸುವುದಾದರೆ ಅದು ಜನ ಹಿತಕಾರಿಯಾಗಿರಲಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ಟ್ವೀಟ್ ಮೂಲಕ ಈ ಸಲಹೆ ನೀಡಿರುವ ಅವರು, ಸರ್ಕಾರ ಲಾಕ್‌ಡೌನ್‌ ವಿಸ್ತರಿಸುವ ಚಿಂತನೆಯಲ್ಲಿದೆ ಎಂದು ವರದಿಯಾಗುತ್ತಿದೆ. ಲಾಕ್‌ಡೌನ್‌ ವಿಸ್ತರಿಸುವುದೇ ಆದರೆ, ಅದು 'ಜನಹಿತದ ಲಾಕ್‌ಡೌನ್‌' ಆಗಿರಲಿ. ಆರ್ಥಿಕ, ಆಹಾರ ಪ್ಯಾಕೇಜ್‌, ಪರಿಹಾರ ಕ್ರಮಗಳು ಉದ್ದೇಶಿತ ವಿಸ್ತರಿತ ಲಾಕ್‌ಡೌನ್‌ನಲ್ಲಿರಲಿ. ಸರ್ವಪಕ್ಷಗಳ ಸಭೆಯಲ್ಲಿ ನಾವು ಸೂಚಿಸಿದ್ದೂ 'ಜನಹಿತದ ಲಾಕ್‌ಡೌನ್‌' ಕಲ್ಪನೆಯೇ ಆಗಿತ್ತು ಎಂದಿದ್ದಾರೆ.

ನೆರೆಯ ರಾಜ್ಯಗಳಲ್ಲಿ ಲಾಕ್‌ಡೌನ್‌ ಹೇಗಿದೆ? ಜನರಿಗೆ ಹೇಗೆ ನೆರವು ಸಿಗುತ್ತಿದೆ ಎಂಬುದನ್ನು ರಾಜ್ಯ ಸರ್ಕಾರ ಒಂದು ಬಾರಿ ಅವಲೋಕಿಸಬೇಕು. ಜನರನ್ನು ಮನೆಗಳಿಂದ ಹೊರ ಬಾರದಂತೆ ತಡೆಯುವುದಷ್ಟೇ ಈ ಲಾಕ್‌ಡೌನ್‌ನ ಉದ್ದೇಶವಾಗಬಾರದು. ಜನರ ಸಹಭಾಗಿತ್ವದೊಂದಿಗೆ ವೈರಾಣುವನ್ನು ನಿಗ್ರಹಿಸುವುದು ಉದ್ದೇಶವಾಗಬೇಕು. ಅದಕ್ಕಾಗಿ ಜನರಿಗೆ ಪರಿಹಾರ ಅಗತ್ಯ ಎಂದು ‌ಹೇಳಿದ್ದಾರೆ.

ಜನರಿಗೆ ಪರಿಹಾರ ನೀಡಬೇಕಾಗುತ್ತದೆ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಲಾಕ್‌ಡೌನ್‌ನ ಉಸಾಬರಿಯನ್ನು ರಾಜ್ಯ ಸರ್ಕಾರಗಳಿಗೆ ವಹಿಸಿ ಕೈತೊಳೆದುಕೊಂಡಿದೆ. ಕೇಂದ್ರ ಸರ್ಕಾರ ಜನರ ಕೈಬಿಟ್ಟಂತೆ ರಾಜ್ಯ ಸರ್ಕಾರ ಜನರನ್ನು ನಿರ್ಲಕ್ಷಿಸಬಾರದು. ಅವರ ಅಗತ್ಯಗಳನ್ನು ಪೂರೈಸುವುದರತ್ತ ರಾಜ್ಯ ಗಮನಹರಿಸಬೇಕು. ಲಾಕ್‌ಡೌನ್‌ನಲ್ಲಿ ಪರಿಹಾರ ಕ್ರಮಗಳು ಇರಬೇಕು ಎಂದು ಸಲಹೆ ನೀಡಿದ್ದಾರೆ.

ಲಾಕ್‌ಡೌನ್‌ ಜನರ ಜೀವ ಉಳಿಸುವ ಕ್ರಮ ಹೌದು. ಆದರೆ, ಈ ಲಾಕ್‌ಡೌನ್‌ ಜನರ ಬದುಕನ್ನು ಹೈರಾಣಾಗಿಸುತ್ತಿದೆ ಎಂಬುದು ನಮಗೆಲ್ಲರಿಗೂ ಅರಿವಿಗೆ ಬಂದಿರುವ ವಿಚಾರ. ಹೀಗಾಗಿಯೇ ನಾವು ಸೂಚಿಸುತ್ತಿರುವ ಜನಹಿತದ ಲಾಕ್‌ಡೌನ್‌ ಮಾಡುವುದರತ್ತ ಸರ್ಕಾರ ಆದ್ಯತೆ ನೀಡಬೇಕು. ಜನರ ಜೀವ ಉಳಿಸುತ್ತಲೇ, ಜೀವನಕ್ಕೂ ನೆರವಾಗುವುದು ಜನಪರ ಸರ್ಕಾರವೊಂದರ ಕರ್ತವ್ಯ ಎಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.