ಬೆಂಗಳೂರು: ಯುಪಿಎಸ್ಸಿ ಪರೀಕ್ಷೆಯಲ್ಲಿ ರ‍್ಯಾಂಕ್ ಪಡೆದ ಎಲ್ಲಾ ಅಭ್ಯರ್ಥಿಗಳಿಗೂ ಶುಭಾಶಯಗಳು. ಈ ಬಾರಿ ಕರ್ನಾಟಕದಿಂದ ಸುಮಾರು 40 ಜನ ಆಯ್ಕೆ ಆಗಿರುವುದು ಒಳ್ಳೆಯ ಬೆಳವಣಿಗೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಈ ಬಾರಿ ಆಯ್ಕೆ ಆಗದೇ ಇರುವವರು ಧೃತಿಗೆಡಬೇಡಿ. ಮುಂದಿನ ಬಾರಿ ಇನ್ನು ಹೆಚ್ಚಿನ ಪರಿಶ್ರಮ ಪಟ್ಟು ಕರ್ನಾಟಕದಿಂದ ಆಯ್ಕೆ ಆಗುವವರ ಸಂಖ್ಯೆಯನ್ನು ಹೆಚ್ಚಿಸೋಣ ಎಂದಿದ್ದಾರೆ. ಯುಪಿಎಸ್ಸಿ ಪರೀಕ್ಷೆಯಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಿದ ಎಲ್ಲ ಪ್ರತಿಭಾನ್ವಿತರಿಗೆ ಹೃತ್ಪೂರ್ವಕ ಅಭಿನಂದನೆಗಳು. ನಿಮ್ಮ ಆದರ್ಶ, ಕಠಿಣ ಪರಿಶ್ರಮ ಇತರರಿಗೆ ಮಾದರಿಯಾಗಲಿ ಎಂದು ಶ್ಲಾಘಿಸಿದ್ದಾರೆ.
-
UPSC ಪರೀಕ್ಷೆಯಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಿದ ಎಲ್ಲ ಪ್ರತಿಭಾನ್ವಿತರಿಗೆ ಹೃತ್ಪೂರ್ವಕ ಅಭಿನಂದನೆಗಳು. ನಿಮ್ಮ ಆದರ್ಶ, ಕಠಿಣ ಪರಿಶ್ರಮ ಇತರರಿಗೆ ಮಾದರಿಯಾಗಲಿ.
— H D Kumaraswamy (@hd_kumaraswamy) August 4, 2020 " class="align-text-top noRightClick twitterSection" data="
">UPSC ಪರೀಕ್ಷೆಯಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಿದ ಎಲ್ಲ ಪ್ರತಿಭಾನ್ವಿತರಿಗೆ ಹೃತ್ಪೂರ್ವಕ ಅಭಿನಂದನೆಗಳು. ನಿಮ್ಮ ಆದರ್ಶ, ಕಠಿಣ ಪರಿಶ್ರಮ ಇತರರಿಗೆ ಮಾದರಿಯಾಗಲಿ.
— H D Kumaraswamy (@hd_kumaraswamy) August 4, 2020UPSC ಪರೀಕ್ಷೆಯಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಿದ ಎಲ್ಲ ಪ್ರತಿಭಾನ್ವಿತರಿಗೆ ಹೃತ್ಪೂರ್ವಕ ಅಭಿನಂದನೆಗಳು. ನಿಮ್ಮ ಆದರ್ಶ, ಕಠಿಣ ಪರಿಶ್ರಮ ಇತರರಿಗೆ ಮಾದರಿಯಾಗಲಿ.
— H D Kumaraswamy (@hd_kumaraswamy) August 4, 2020
ಹೆಚ್.ಡಿ. ದೇವೇಗೌಡರಿಂದ ಅಭಿನಂದನೆ:
ಯುಪಿಎಸ್ಸಿ 2019ರ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಎಲ್ಲ ಅಭ್ಯರ್ಥಿಗಳಿಗೆ ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ. ದೇವೇಗೌಡರು ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ ಕರ್ನಾಟಕ ರಾಜ್ಯದಿಂದ ಸುಮಾರು 40 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದು, ನನಗೆ ಅತೀವ ಸಂತೋಷವನ್ನುಂಟು ಮಾಡಿದೆ. ಇವರೆಲ್ಲರ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ ಎಂದು ಹೇಳಿ, ಎಲ್ಲರಿಗೂ ಶುಭ ಹಾರೈಸಿದ್ದಾರೆ.