ETV Bharat / state

ರಾಮವಿಲಾಸ್ ಪಾಸ್ವಾನ್ ನಿಧನ ದೇಶಕ್ಕೆ ದೊಡ್ಡ ನಷ್ಟ : ದೇವೇಗೌಡ ಟ್ವೀಟ್ - ರಾಮವಿಲಾಸ್ ಪಾಸ್ವಾನ್

ನನ್ನ ಸಂಪುಟದಲ್ಲಿ ರೈಲ್ವೆ ಸಚಿವರಾಗಿ ಕೆಲಸ ಮಾಡಿದ್ದರು. ಅವರಂತಹ ಅತ್ಯಂತ ಹಿರಿಯ ನಾಯಕನನ್ನು ಕಳೆದುಕೊಂಡಿರುವುದು ನಮ್ಮ ದೇಶಕ್ಕೆ ದೊಡ್ಡ ನಷ್ಟವಾಗಿದೆ ಎಂದು ರಾಮವಿಲಾಸ್ ಪಾಸ್ವಾನ್ ಅವರ ಹೆಚ್.ಡಿ. ದೇವೇಗೌಡ ಸಂತಾಪ ವ್ಯಕ್ತಪಡಿಸಿದ್ದಾರೆ.

HDD Condolences to  ra,avilas paswan
ರಾಮವಿಲಾಸ್ ಪಾಸ್ವಾನ್ ನಿಧನ ದೇಶಕ್ಕೆ ದೊಡ್ಡ ನಷ್ಟ : ದೇವೇಗೌಡ ಟ್ವೀಟ್
author img

By

Published : Oct 8, 2020, 10:38 PM IST

ಬೆಂಗಳೂರು : ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಾಮವಿಲಾಸ್ ಪಾಸ್ವಾನ್ ಅವರ ನಿಧನಕ್ಕೆ ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ. ದೇವೇಗೌಡ ತೀವ್ರ ಸಂತಾಪ ಸೂಚಿಸಿದ್ದಾರೆ.

HDD Condolences to  ra,avilas paswan
ದೇವೇಗೌಡ ಟ್ವೀಟ್​​​

ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಮವಿಲಾಸ ಪಾಸ್ವಾನ್ ನಿಧನ ನನಗೆ ತೀವ್ರ ಬೇಸರವಾಗಿದೆ. ಅವರು ನನಗೆ ತುಂಬಾ ಆತ್ಮೀಯರಾಗಿದ್ದರು. 8 ಬಾರಿ ಸಂಸದರಾಗಿದ್ದ ಪಾಸ್ವಾನ್ ಅವರು, ನನ್ನ ಸಂಪುಟದಲ್ಲಿ ರೈಲ್ವೆ ಸಚಿವರಾಗಿ ಕೆಲಸ ಮಾಡಿದ್ದರು. ಅವರಂತಹ ಅತ್ಯಂತ ಹಿರಿಯ ನಾಯಕನನ್ನು ಕಳೆದುಕೊಂಡಿರುವುದು ನಮ್ಮ ದೇಶಕ್ಕೆ ದೊಡ್ಡ ನಷ್ಟವಾಗಿದೆ ಎಂದು ಹೇಳಿದ್ದಾರೆ.

ಅವರ ಕುಟುಂಬ ಮತ್ತು ಹಿತೈಷಿಗಳಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ, ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕರ ಸಂತಾಪ​

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ರಾಮ್ ವಿಲಾಸ್ ಪಾಸ್ವಾನ್ ಇಂದು ನಿಧನರಾಗಿದ್ದಾರೆ ಎಂದು ಅವರ ಉತ್ತರ ಮೂಲಕ ತಿಳಿಸಿದ್ದಾರೆ. ಈ ಹಿನ್ನೆಲೆ ರಾಜ್ಯ ಕಾಂಗ್ರೆಸ್ ನಾಯಕರು ತಮ್ಮ ಸಂತಾಪ ವ್ಯಕ್ತಪಡಿಸಿದ್ದು ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಬರಲಿ ಎಂದು ಆಶಿಸಿದ್ದಾರೆ.

ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ರಾಮ್ ವಿಲಾಸ್ ಪಾಸ್ವಾನ್ ನಿಧನ ಬೇಸರ ಉಂಟುಮಾಡಿದೆ. ಅವರು ನಮ್ಮ ದೇಶದ ಅತ್ಯುತ್ತಮ ನಾಯಕರಲ್ಲಿ ಒಬ್ಬರಾಗಿದ್ದರು. ಮತ್ತು ಅವರು ನಡೆಸಿದ ಕಾರ್ಯನಿರ್ವಹಣೆಯ ಅವರ ಕಾರ್ಯಕ್ಷೇತ್ರದ ಬದ್ಧತೆಯನ್ನು ತೋರಿಸುತ್ತಿತ್ತು. ಅವರ ಪುತ್ರ ಹಾಗೂ ಕುಟುಂಬ ಸದಸ್ಯರಿಗೆ ನನ್ನ ಸಾಂತ್ವನ ಹೇಳಬಯಸುತ್ತೇನೆ ಎಂದಿದ್ದಾರೆ.

HDD Condolences to  ra,avilas paswan
ಸಿದ್ದರಾಮಯ್ಯ ಟ್ವೀಟ್​

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದು, ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನ ಸುದ್ದಿ ಕೇಳಿ ತುಂಬಾ ನೋವಾಗಿದೆ. ಅವರ ಅಗಲಿಕೆಗೆ ಸಂತಾಪ ಸೂಚಿಸುತ್ತೇನೆ. ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ಬರಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.

HDD Condolences to  ra,avilas paswan
ಡಿಕೆ ಶಿವಕುಮಾರ್​ ಟ್ವೀಟ್​​​

ಕೆಪಿಸಿಸಿ ಮಾಜಿ ಅಧ್ಯಕ್ಷ ಹಾಗೂ ತಮಿಳುನಾಡು ಸೇರಿದಂತೆ ಮೂರು ರಾಜ್ಯಗಳ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದು, ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನರಾಗಿದ್ದಾರೆ ಎಂಬ ಸುದ್ದಿ ಕೇಳಿ ಆಘಾತವಾಯಿತು. ಸ್ನೇಹಪರ ಹಾಗೂ ಪ್ರಾಯೋಗಿಕ ವ್ಯಕ್ತಿಯಾಗಿದ್ದ ಅವರನ್ನ ರಾಜ್ಯದ ಆಹಾರ ಸಚಿವನಾಗಿದ್ದ ಸಂದರ್ಭ ಸಾಕಷ್ಟು ಸಾರಿ ಭೇಟಿ ಮಾಡಿದ್ದೆ. ದೇಶದ ಅತ್ಯುನ್ನತ ದಲಿತ ನಾಯಕರಲ್ಲಿ ಒಬ್ಬರಾಗಿದ್ದ ಅವರು ರಾಷ್ಟ್ರೀಯ ಮಟ್ಟದಲ್ಲಿ ತಮ್ಮದೇ ಆದ ವ್ಯಕ್ತಿತ್ವವನ್ನು ಹೊಂದಿದ್ದರು ಎಂದು ತಿಳಿಸಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಟ್ವೀಟ್ ಮಾಡಿದ್ದು, ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನರಾಗಿದ್ದಾರೆ ಎಂಬ ಸುದ್ದಿ ಆಘಾತ ತಂದಿದೆ. ಸುದೀರ್ಘಕಾಲ ಸಂಸದರಾಗಿ ಸಾರ್ವಜನಿಕ ಜೀವನದಲ್ಲಿ ಅತ್ಯುತ್ತಮ ಕೊಡುಗೆಯನ್ನು ನೀಡಿದ್ದರು. ರಾಜಕೀಯ ಕ್ಷೇತ್ರದಲ್ಲಿ ನೆನಪಿನಲ್ಲಿ ಉಳಿಯುವಂತಹ ಹೆಸರು ಅವರದ್ದು. ಉತ್ತರ ಚಿರಾಗ್ ಪಾಸ್ವಾನ್ ಹಾಗೂ ಕುಟುಂಬದ ಎಲ್ಲಾ ಸದಸ್ಯರಿಗೂ ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ಬರಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.

HDD Condolences to  ra,avilas paswan
ಈಶ್ವರ ಖಂಡ್ರೆ ಟ್ವೀಟ್​​

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಮಾಜಿ ಸಚಿವರಾದ ಜಮೀರ್ ಅಹಮದ್, ಡಾ. ಎಚ್ ಸಿ ಮಹದೇವಪ್ಪ, ರಾಜ್ಯಸಭೆ ಸದಸ್ಯ ಜಿಸಿ ಚಂದ್ರಶೇಖರ್, ಮಾಜಿ ಡಿಸಿಎಂ ಜಿ ಪರಮೇಶ್ವರ್ ಮತ್ತಿತರ ನಾಯಕರು ರಾಮವಿಲಾಸ್ ಪಾಸ್ವಾನ್ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.