ETV Bharat / state

ಕೆಪಿಎಸ್​ಸಿ ಪರೀಕ್ಷೆಯಲ್ಲಿ ಅಂಕ ಕಡಿತ: ದೇವೇಗೌಡರಿಂದ ಸಿಎಂಗೆ ಪತ್ರ - gazetted probationers recruitment

ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಗಳಿಂದ ಕೆಪಿಎಸ್‌ಸಿ ಕುರಿತು ಸಾರ್ವಜನಿಕರಲ್ಲಿ ಗೌರವ ಕಡಿಮೆಯಾಗುವುದರಲ್ಲಿ ಸಂಶಯವಿಲ್ಲ. ಈ ಎಲ್ಲ ತೀರ್ಮಾನಗಳನ್ನು ಕೈಬಿಡಬೇಕು. ಕೇಂದ್ರ ಲೋಕಸೇವಾ ಆಯೋಗದ ಮಾದರಿಯಲ್ಲೇ ಮುಖ್ಯ ಪರೀಕ್ಷೆಯ ಅಂಕಗಳು ಮತ್ತು ವ್ಯಕ್ತಿತ್ವ ಪರೀಕ್ಷೆಯ ಅಂಕಗಳನ್ನು ನಿಗದಿಪಡಿಸಬೇಕೆಂದು ಗೌಡರು ಆಗ್ರಹಿಸಿದ್ದಾರೆ.

HDD wrote letter to CM
HDD wrote letter to CM
author img

By

Published : Feb 24, 2022, 1:12 PM IST

ಬೆಂಗಳೂರು: ಗೆಜೆಟೆಡ್ ಪ್ರೊಬೇಷನರಿ ಅಧಿಕಾರಿಗಳ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್​ಸಿ) ನಡೆಸುವ ಪರೀಕ್ಷೆಗಳಲ್ಲಿ ಸಂದರ್ಶನದ ಅಂಕವನ್ನು 25ಕ್ಕೆ ಕಡಿತಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ, ಜೆಡಿಎಸ್‍ ವರಿಷ್ಠ ಹೆಚ್.ಡಿ.ದೇವೇಗೌಡರು, ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ಕೆಪಿಎಸ್​ಸಿ ಇತ್ತೀಚಿನ ದಿನಗಳಲ್ಲಿ ಬದಲಾವಣೆಯ ನೆಪದಲ್ಲಿ ಸರ್ವಸಮ್ಮತವಾದ ಮತ್ತು ಬಹುಕಾಲದಿಂದ ಅನುಸರಿಸುತ್ತಿರುವ ಪ್ರಮಾಣಿತ ಕಾರ್ಯವಿಧಾನಗಳಿಗೆ ವಿರುದ್ಧವಾಗಿ ಸಾಗುವಂತೆ ಕಂಡು ಬರುತ್ತಿದೆ. ಇಂತಹ ದೂರದೃಷ್ಟಿಯಿಲ್ಲದ ಬದಲಾವಣೆಗಳಿಂದ ಭವಿಷ್ಯದಲ್ಲಿ ಉತ್ತಮ ಮತ್ತು ಕಾರ್ಯದಕ್ಷತೆವುಳ್ಳ ಅಧಿಕಾರಿಗಳನ್ನು ಆಯ್ಕೆಮಾಡಲು ಕಷ್ಟವಾಗಬಹುದು ಎಂದು ಹೇಳಿದ್ದಾರೆ.

ಕೆಪಿಎಸ್‌ಸಿಯಲ್ಲೂ ಕಾಲಕಾಲಕ್ಕೆ ಬದಲಾವಣೆ ಅಗತ್ಯ. ಆದರೆ, ಅಂತಹ ಬದಲಾವಣೆಗಳು ಸಮ್ಮತವಾಗಿರಬೇಕು ಮತ್ತು ಕೇಂದ್ರ ಲೋಕ ಸೇವಾ ಆಯೋಗದ ಮಾದರಿಯಲ್ಲೇ ಇರಬೇಕು ಎಂದಿದ್ದಾರೆ.

ಆಯೋಗದಲ್ಲಿ ದೀರ್ಘಕಾಲದಿಂದ ಜಾರಿಯಲ್ಲಿದ್ದ ಪ್ರಮಾಣಿತ ಕಾರ್ಯವಿಧಾನವನ್ನು 2020ರ ಜೂನ್ 4ರಂದು ಬದಲಾವಣೆ ಮಾಡಲಾಗಿತ್ತು. ವ್ಯಕ್ತಿತ್ವ ಪರೀಕ್ಷೆಯ ಅಂಕಗಳನ್ನು 150 ರಿಂದ 50ಕ್ಕೆ ಇಳಿಕೆ ಮಾಡಲಾಗಿತ್ತು. ಈಗ ಅದನ್ನು 25ಕ್ಕೆ ಇಳಿಸುವ ತೀರ್ಮಾನ ಮಾಡಲಾಗಿದೆ. ಇಂತಹ ತೀರ್ಮಾನದಿಂದ ಗ್ರಾಮೀಣ ಪ್ರದೇಶದ ಸ್ಪರ್ಧಾ ಆಕಾಂಕ್ಷಿಗಳಿಗೆ ಸಮಸ್ಯೆ ಆಗಲಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಗಳಿಂದ ಕೆಪಿಎಸ್‌ಸಿ ಕುರಿತು ಸಾರ್ವಜನಿಕರಲ್ಲಿ ಗೌರವ ಕಡಿಮೆಯಾಗುವುದರಲ್ಲಿ ಸಂಶಯವಿಲ್ಲ. ಈ ಎಲ್ಲ ತೀರ್ಮಾನಗಳನ್ನು ಕೈಬಿಡಬೇಕು. ಕೇಂದ್ರ ಲೋಕಸೇವಾ ಆಯೋಗದ ಮಾದರಿಯಲ್ಲೇ ಮುಖ್ಯ ಪರೀಕ್ಷೆಯ ಅಂಕಗಳು ಮತ್ತು ವ್ಯಕ್ತಿತ್ವ ಪರೀಕ್ಷೆಯ ಅಂಕಗಳನ್ನು ನಿಗದಿಪಡಿಸಬೇಕೆಂದು ಗೌಡರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕೆಪಿಎಸ್​​​​ಸಿ 2011ರ ಗಜೆಟೆಡ್ ಅಧಿಕಾರಿಗಳ ಹುದ್ದೆ ಆಯ್ಕೆ ‌ಪಟ್ಟಿಗೆ ಸಂಪುಟ ಸಭೆ ಅಸ್ತು : ಮಸೂದೆ ಮಂಡನೆಗೆ ತೀರ್ಮಾನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.