ಬೆಂಗಳೂರು: ಕೋವಿಡ್ ಪಾಸಿಟಿವ್ ಬಂದಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಶೀಘ್ರ ಗುಣಮುಖರಾಗಲಿ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪ್ರಾರ್ಥಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕೊರೊನಾ ಸೋಂಕು ತಗುಲಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಶೀಘ್ರ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಇಬ್ಬರು ನಾಯಕರು ತಿಳಿಸಿದ್ದಾರೆ.