ETV Bharat / state

ಯಾರ್ರೀ ಮುನಿರತ್ನ, ನಮಗೆ ಯಾವತ್ತಿದ್ದರೂ ಜನಗಳೆ ಗಾಡ್‌ ಫಾದರ್ : ಹೆಚ್.ಡಿ ಕುಮಾರಸ್ವಾಮಿ

ರಾಜರಾಜೇಶ್ವರಿ ನಗರದಲ್ಲಿ ಜೆಡಿಎಸ್‌ ಅಭ್ಯರ್ಥಿ ವಿ.ಕೃಷ್ಣಮೂರ್ತಿ ಪರ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದು ಮತ ಪ್ರಚಾರ ನಡೆಸಿದರು.

RR Nagar by election
ಮತ ಪ್ರಚಾರ
author img

By

Published : Oct 28, 2020, 7:40 PM IST

ಬೆಂಗಳೂರು: ಜೆಡಿಎಸ್‌ ಬಗ್ಗೆ ಯಾವತ್ತಿಗೂ ಲಘುವಾಗಿ ಮಾತನಾಡಬೇಡಿ, 2018ರಲ್ಲಿ ನನ್ನ ಬಗ್ಗೆ ಲಘುವಾಗಿ ಮಾತನಾಡಿ ಬಳಿಕ ನನ್ನ ಮನೆ ಬಾಗಿಲಿಗೆ ಬಂದು ನೀವೇ ಮುಖ್ಯಮಂತ್ರಿ ಆಗಿ ಎಂದು ಬೇಡಿಕೊಂಡಿರುವುದು ನೆನಪಿರಲಿ. ಈ ಪಕ್ಷಕ್ಕೆ ಲಕ್ಷಾಂತರ ಬಡವರ ಶ್ರೀರಕ್ಷೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ರಾಜರಾಜೇಶ್ವರಿ ನಗರ ವಾರ್ಡ್‌ನ ಬಯಲು ರಂಗಮಂದಿರದಲ್ಲಿ ಜೆಡಿಎಸ್‌ ಅಭ್ಯರ್ಥಿ ವಿ.ಕೃಷ್ಣಮೂರ್ತಿ ಅವರ ಪರ ಇಂದು ಸಂಜೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನಿಖಿಲ್‌ಗೆ ಮುನಿರತ್ನ ನಿಮ್ಮ ಗಾಡ್‌ ಫಾದರ್ ಅಲ್ವಾ ಎಂದು ಕೇಳಿದ್ರಂತೆ, ಅವನ್ಯಾರು ನಮಗೆ ಗಾಡ್‌ಫಾದರ್ ಆಗೋದಕ್ಕೆ. ಯಾವತ್ತಿದ್ದರೂ ನಮ್ಮ ಗಾಡ್‌ಫಾದರ್ ಅಂದರೆ ಜನಗಳೆ ಎಂದರು.

ಸಿದ್ದರಾಮಯ್ಯ ಸರ್ಕಾರವನ್ನು ಪ್ರಧಾನಿ ಮೋದಿ ಬಂದು 10 ಪರ್ಸೆಂಟ್‌ ಸರ್ಕಾರ ಎಂದರು, ಕಾಂಗ್ರೆಸ್‌ನವರು ಬಿಜೆಪಿ ಸರ್ಕಾರವನ್ನು 10% ಗವರ್ನಮೆಂಟ್‌ ಎಂದರು. ಆದರೆ, ನಮ್ಮ ಸರ್ಕಾರವನ್ನು ಯಾರೂ ಪರ್ಸೆಂಟೇಜ್‌ ಸರ್ಕಾರ ಎಂದಿಲ್ಲ. ಬೆಂಗಳೂರು ಹಾಗೂ ಮೈಸೂರು ಹೊರವಲಯದ ಅಭಿವೃದ್ಧಿಗಾಗಿ 2006ರಲ್ಲಿ 25 ಸಾವಿರ ಕೋಟಿ ರೂ. ಅನುದಾನ ನೀಡಿದ್ದೆ. ಅದರ ಪ್ರತಿಫಲವೇ ಆರ್​ಆರ್​‌ ನಗರದಲ್ಲಿ ಇಷ್ಟೊಂದು ಅಭಿವೃದ್ಧಿ ಕಾರ್ಯಗಳು ಆಗಿವೆ ಎಂದು ಹೇಳಿದರು.

ಇವತ್ತು ಮೋದಿಯವರು ಭಾರತವನ್ನು ಬಾಂಗ್ಲಾದೇಶದ ಜೊತೆ ತಲಾ‌ ಆದಯದಲ್ಲಿ ಪೈಪೋಟಿ ಮಾಡುವ ಪರಿಸ್ಥಿತಿಗೆ ತಂದಿದ್ದಾರೆ. ಕೊರೊನಾ ಕಾಲದಲ್ಲಿ ದೀಪ ಬೆಳಗಿಸಿ, ಚಪ್ಪಾಳೆ ತಟ್ಟಿ ಎಂದು ಮೋದಿ ಹೇಳಿದರು. ಆದರೆ, ಬಿಜೆಪಿಯವರು ತಮ್ಮ ಮನೆಗೆ ದೀಪ ಬೆಳಗಿಸಿಕೊಂಡರೆ ಹೊರತು ಜನರ ಜೀವನಕ್ಕೆ ದೀಪ ಬೆಳಗಿಸಲಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.

ಇನ್ನು, ಜೆಡಿಎಸ್‌ ಅಭ್ಯರ್ಥಿ ವಿ.ಕೃಷ್ಣಮೂರ್ತಿ ಮಾತನಾಡಿ, ಕುಮಾರಣ್ಞನವರು ಈ ಕ್ಷೇತ್ರಕ್ಕೆ 450 ಕೋಟಿ ರೂ. ಅನುದಾನ ನೀಡಿದರೂ ಮುನಿರತ್ನ ಪಕ್ಷ ಬದಲಾಯಿಸಿ, ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದ್ದಾರೆ. ಕಳೆದ ಚುನಾವಣೆಯಲ್ಲಿ ರಾಮಚಂದ್ರಪ್ಪ ಅವರ ಮುಖ ನೋಡಿ ಜೆಡಿಎಸ್‌ಗೆ 65,000 ವೋಟ್‌ ಬಿದ್ದಿದ್ದಿಲ್ಲ. ರಾಮಚಂದ್ರಪ್ಪ ಅಂತ ಹೆಸರು ಇಟ್ಕೊಂಡು ರಾವಣನ ಕೆಲಸ ಅವರು ಮಾಡಿದ್ದಾರೆ. ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ಟಿಕೆಟ್ ನೀಡಿರುವುದು ತಪ್ಪಾ..? ಎಂದು ಪ್ರಶ್ನಿಸಿದ ಅವರು, ಮಾರಾಟ ಆಗಿರೋರು ನಾವಲ್ಲ. ಬಿಜೆಪಿ ಮತ್ತು ಕಾಂಗ್ರೆಸ್‌ನವರು ಎಂದು ವಾಗ್ದಾಳಿ ನಡೆಸಿದರು.

ಮಳವಳ್ಳಿ ಶಾಸಕ ಅನ್ನದಾನಿ ಮಾತನಾಡಿ, ಮಾಜಿ ಪ್ರಧಾನಿ ದೇವೇಗೌಡರು ಬೆಂಗಳೂರಿಗೆ ಹೈಟೆಕ್‌ ಸ್ವರ್ಶ ನೀಡಿದ್ದಾರೆ. ನಮ್ಮ ರಾಜ್ಯದಲ್ಲಿ ಕುಮಾರಣ್ಣನಿಗೆ ಯಾರು ಸಾಟಿಯಿಲ್ಲ. ಅವರು ನೀಡಿದಂತಹ ಯೋಜನೆಗಳನ್ನು ಮತ್ತಾರಿಗೂ ನೀಡುವುದಕ್ಕೆ ಆಗಲ್ಲ. ತಮ್ಮನ್ನೇ ತಾವು ಮಾರಿಕೊಂಡವರು ಮುಂದೊಂದು ದಿನ ರಾಜ್ಯ ಹಾಗೂ ಆರ್‌ ಆರ್‌ ನಗರ ಕ್ಷೇತ್ರವನ್ನು ಮಾರುವುದಿಲ್ಲ ಎಂಬುದಕ್ಕೆ ಏನು ಗ್ಯಾರಂಟಿ ಎಂದು ಪ್ರಶ್ನಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.