ETV Bharat / state

ರಾಹುಲ್, ಪ್ರಿಯಾಂಕಾ ಮೇಲೆ ಯುಪಿ ಪೊಲೀಸರ ದೌರ್ಜನ್ಯ ಖಂಡಿಸಿದ ಹೆಚ್​ಡಿಕೆ

author img

By

Published : Oct 1, 2020, 10:30 PM IST

ಯಾವುದೇ ಸರ್ಕಾರ ಶಾಂತಿಯುತ ಪ್ರತಿಭಟನೆಯನ್ನು ನಡೆಸುತ್ತಿದ್ದ ನಾಯಕರ ಕೊರಳಪಟ್ಟಿಗೆ ಕೈ ಹಾಕುತ್ತಾರೆ ಎಂದರೆ, ಉತ್ತರ ಪ್ರದೇಶ ಪೊಲೀಸರ ಹಿಂದೆ ಅಲ್ಲಿ ಅಧಿಕಾರ ಹಿಡಿದವರ "ನಿರ್ದೇಶನ" ಇಲ್ಲದಿರಲು ಸಾಧ್ಯವೇ? ಇಂತಹ ಧೋರಣೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕೊಡಲಿ ಪೆಟ್ಟು ಕೊಟ್ಟಂತಾಗಿದೆ ಎಂದು ಟ್ವೀಟ್ ನಲ್ಲಿ ಖಂಡಿಸಿದ್ದಾರೆ.

ಬೆಂಗಳೂರು: ಅತ್ಯಾಚಾರ ಹಾಗೂ ಹತ್ಯೆಗೀಡಾದ ದಲಿತ ಬಾಲಕಿಯ ಪೋಷಕರಿಗೆ ಸಾಂತ್ವನ ಹೇಳಲು ಕಾಲ್ನಡಿಗೆಯಲ್ಲಿ ಹೊರಟಿದ್ದ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಮೇಲೆ ಉತ್ತರ ಪ್ರದೇಶದ ಪೊಲೀಸರು ನಡೆಸಿದ ದೌರ್ಜನ್ಯ ತೀವ್ರ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ಈ ಕುರಿತು ಟ್ವೀಟ್ ಮಾಡಿರುವ ಅವರು, ಉತ್ತರ ಪ್ರದೇಶದ ಪೊಲೀಸರು ರಾಷ್ಟ್ರೀಯ ಪಕ್ಷದ ನಾಯಕರ ಮೇಲೆ ಅಮಾನವೀಯ ವರ್ತನೆ ತೋರಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಪ್ರತಿಭಟನಾ ಅಸ್ತ್ರವನ್ನು ಹಾಡಹಗಲೇ ಧಹಿಸುವ ಯತ್ನ ಎಂದಿದ್ದಾರೆ.

  • ಅತ್ಯಾಚಾರ ಹಾಗೂ ಹತ್ಯೆಗೀಡಾದ ದಲಿತ ಬಾಲಕಿಯ ಪೋಷಕರಿಗೆ ಸಾಂತ್ವನ ಹೇಳಲು ಕಾಲ್ನಡಿಗೆಯಲ್ಲಿ ಹೊರಟಿದ್ದ ಎಐಸಿಸಿ ಮಾಜಿ ಅಧ್ಯಕ್ಷರಾದ ರಾಹುಲ್ ಗಾಂಧಿ @RahulGandhi ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ @priyankagandhi ಅವರ ಮೇಲೆ ಉತ್ತರ ಪ್ರದೇಶ ಪೊಲೀಸರು ನಡೆಸಿದ ದೌರ್ಜನ್ಯ ತೀವ್ರ ಖಂಡನೀಯ.
    1/5

    — H D Kumaraswamy (@hd_kumaraswamy) October 1, 2020 " class="align-text-top noRightClick twitterSection" data=" ">

ವಿಶ್ವದ ಬಹುದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ರಾಜಕೀಯ ವಿರೋಧಿಗಳನ್ನು ಹಣಿಯಲು ಉತ್ತರ ಪ್ರದೇಶ ಪೊಲೀಸರು ಮುಂದಾಗಿದ್ದಾರೆ ಎಂದರೆ, ದಲಿತ ಬಾಲಕಿಯ ಪೋಷಕರನ್ನು ಹೊರಗಿಟ್ಟು ಆಕೆಯ ಶವವನ್ನು ಕತ್ತಲಲ್ಲಿ ಸುಟ್ಟಿದ್ದಾರೆ ಎಂಬುದರಲ್ಲಿ ನನಗೆ ಉತ್ಪ್ರೇಕ್ಷೆ ಕಾಣುತ್ತಿಲ್ಲ ಎಂದು ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.