ETV Bharat / state

ಪವರ್​ಸ್ಟಾರ್​ ಅಕಾಲಿಕ ನಿಧನಕ್ಕೆ ಹೆಚ್​ಡಿಕೆ ಸೇರಿ ಹಲವು ಗಣ್ಯರ ಕಂಬನಿ.. - ಪುನೀತ್ ರಾಜ್​ಕುಮಾರ್ ನಿಧನಕ್ಕೆ ಆನಂದ ಸಿಂಗ್ ಟ್ವೀಟ್​

ಕನ್ನಡ ಚಿತ್ರರಂಗದಲ್ಲಿ "ಪವರ್ ಸ್ಟಾರ್" ಎಂದೇ ಖ್ಯಾತರಾಗಿದ್ದ, ಜನಾನುರಾಗಿ ಹಾಗೂ ಶ್ರೇಷ್ಠನಟ ಪುನೀತ್ ರಾಜ್​ಕುಮಾರ್ ಅವರ ಹಠಾತ್ ನಿಧನ, ಅಪಾರವಾದ ನೋವು ಹಾಗೂ ದುಃಖ ತಂದಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

hdk
ಹೆಚ್​ಡಿಕೆ
author img

By

Published : Oct 29, 2021, 6:03 PM IST

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಅವರ ಅಕಾಲಿಕ ನಿಧನ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ. ವೈಯಕ್ತಿಕವಾಗಿ ನನಗೆ ಆಗಿರುವ ಆಘಾತ ಅಷ್ಟಿಷ್ಟಲ್ಲ. ಇಂತಹ ಸುದ್ದಿ ಕೇಳಬೇಕಾಗುತ್ತದೆ ಎಂದು ಕನಸು ಮನಸಿನಲ್ಲೂ ಎಣಿಸಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

  • ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಕಾಲಿಕ ನಿಧನ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ. ವೈಯಕ್ತಿಕವಾಗಿ ನನಗೆ ಆಗಿರುವ ಆಘಾತ ಅಷ್ಟಿಷ್ಟಲ್ಲ. ಇಂತಹ ಸುದ್ದಿ ಕೇಳಬೇಕಾಗುತ್ತದೆ ಎಂದು ಕನಸು ಮನಸಿನಲ್ಲೂ ಎಣಿಸಿರಲಿಲ್ಲ.1/2 pic.twitter.com/v9E0dXLkpy

    — H D Kumaraswamy (@hd_kumaraswamy) October 29, 2021 " class="align-text-top noRightClick twitterSection" data=" ">

ಈ ಕುರಿತು ಟ್ವೀಟ್ ಮಾಡಿರುವ ಅವರು, ವ್ಯಕ್ತಿಗತವಾಗಿ ನನಗೆ ಬಹಳ ಇಷ್ಟದ ವ್ಯಕ್ತಿ, ನಟ ಆಗಿದ್ದರು ಪುನೀತ್. ಅವರ ಜತೆ ಸಾಕಷ್ಟು ಸಮಯ ಕಳೆದಿದ್ದೇನೆ. ಜತೆಯಲ್ಲಿ ಹಲವು ಬಾರಿ ಊಟವನ್ನು ಮಾಡಿ ಚಿತ್ರರಂಗದ ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದೇನೆ. ಅಲ್ಲದೇ, ಡಾ. ರಾಜ್​ಕುಮಾರ್ ಅವರ ಕುಟುಂಬದ ಜತೆ ನನ್ನ ಬಾಂಧವ್ಯ ಇಂದು ನಿನ್ನೆಯದಲ್ಲ ಎಂದಿದ್ದಾರೆ.

  • ವ್ಯಕ್ತಿಗತವಾಗಿ ನನಗೆ ಬಹಳ ಇಷ್ಟದ ವ್ಯಕ್ತಿ, ನಟ ಆಗಿದ್ದರು ಪುನೀತ್. ಅವರ ಜತೆ ಸಾಕಷ್ಟು ಸಮಯ ಕಳೆದಿದ್ದೇನೆ. ಜತೆಯಲ್ಲಿ ಹಲವು ಬಾರಿ ಊಟವನ್ನು ಮಾಡಿ ಚಿತ್ರರಂಗದ ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದೇನೆ. ಅಲ್ಲದೆ, ಡಾ.ರಾಜಕುಮಾರ್ ಅವರ ಕುಟುಂಬದ ಜತೆ ನನ್ನ ಬಾಂಧವ್ಯ ಇಂದು ನಿನ್ನೆಯದಲ್ಲ. 2/3

ಅಣ್ಣಾವ್ರ ಪುತ್ರರಾದರೂ ತಮ್ಮದೇ ವಿಭಿನ್ನ ನಟನಾ ಪ್ರತಿಭೆ ಹೊಂದಿದ್ದ ಪುನೀತ್ ಅವರು; ಬಾಲ ನಟರಾಗಿಯೇ ಕನ್ನಡಕ್ಕೆ ರಾಷ್ಟ್ರ ಪ್ರಶಸ್ತಿ ತಂದುಕೊಟ್ಟವರು. ಆಮೇಲೆ ಹೀರೋ ಆಗಿ ಪ್ರತೀ ಕನ್ನಡಿಗನ ಮನೆಮನ ರಂಜಿಸಿದ್ದರು. ಗಾಯಕರಾಗಿ, ನಿರ್ಮಾಪಕರಾಗಿ ಚಿತ್ರರಂಗದ ಕಣ್ಮಣಿ ಆಗಿದ್ದವರು. ಪುನೀತ್ ಅಗಲಿಕೆ ಕನ್ನಡ ಚಿತ್ರರಂಗಕ್ಕೆ, ಕನ್ನಡಕ್ಕೆ, ನಾಡು ನುಡಿಗೆ ಭರಿಸಲಾಗದ ನಷ್ಟ.

ಅವರ ನಿಧನ ದೊಡ್ಡ ಶೂನ್ಯವನ್ನೇ ಸೃಷ್ಟಿಸಿದೆ. ನಮೆಲ್ಲರ ಅಪ್ಪು ಇನ್ನಿಲ್ಲ ಎನ್ನುವ ಸ್ಥಿತಿಯನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ಹಾಗೂ ಕೋಟ್ಯಂತರ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

  • ಅಣ್ಣಾವ್ರ ಪುತ್ರರಾದರೂ ತಮ್ಮದೇ ವಿಭಿನ್ನ ನಟನಾ ಪ್ರತಿಭೆ ಹೊಂದಿದ್ದ ಪುನೀತ್ ಅವರು; ಬಾಲ ನಟರಾಗಿಯೇ ಕನ್ನಡಕ್ಕೆ ರಾಷ್ಟ್ರ ಪ್ರಶಸ್ತಿ ತಂದುಕೊಟ್ಟವರು. ಆಮೇಲೆ ಹೀರೋ ಆಗಿ ಪ್ರತೀ ಕನ್ನಡಿಗನ ಮನೆಮನ ರಂಜಿಸಿದ್ದರು. ಗಾಯಕರಾಗಿ, ನಿರ್ಮಾಪಕರಾಗಿ ಚಿತ್ರರಂಗದ ಕಣ್ಮಣಿ ಆಗಿದ್ದವರು.3/4

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನಕ್ಕೆ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವರಾದ ಗೋವಿಂದ ಕಾರಜೋಳ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ, ಸಿ. ಸಿ ಪಾಟೀಲ್, ಆನಂದ್ ಸಿಂಗ್ ಸೇರಿದಂತೆ ಹಲವು ಸಚಿವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

  • ಪುನೀತ್ ಅಗಲಿಕೆ ಕನ್ನಡ ಚಿತ್ರರಂಗಕ್ಕೆ, ಕನ್ನಡಕ್ಕೆ, ನಾಡು ನುಡಿಗೆ ಭರಿಸಲಾಗದ ನಷ್ಟ. ಅವರ ನಿಧನ ದೊಡ್ಡ ಶೂನ್ಯವನ್ನೇ ಸೃಷ್ಟಿಸಿದೆ. ನಮೆಲ್ಲರ ಅಪ್ಪು ಇನ್ನಿಲ್ಲ ಎನ್ನುವ ಸ್ಥಿತಿಯನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ಹಾಗೂ ಕೋಟ್ಯಂತರ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ.4/4#ಪುನೀತ್_ರಾಜಕುಮಾರ್

ಕಂಬನಿ ಮಿಡಿದ ಕಾಗೇರಿ: ಕನ್ನಡ ಚಿತ್ರರಂಗದ ಹೆಸರಾಂತ ನಾಯಕ ನಟ ಪುನೀತ್ ರಾಜ್​ಕುಮಾರ್ ಅವರ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಗಿದ್ದು, ಏನು ಹೇಳಲೂ ತೋಚದಂತಾಗಿದೆ ಎಂದು ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ಪುನೀತ್ ರಾಜ್​ಕುಮಾರ್ ಅವರ ಅಕಾಲಿಕ ನಿಧನ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕಾಗೇರಿ ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಪುನೀತ್ ರಾಜ್​ಕುಮಾರ್ ತಮ್ಮದೇ ಆದ ಛಾಪು ಮೂಡಿಸಿದ್ದರು. ತಾವು ನಿರ್ವಹಿಸುತ್ತಿದ್ದ ಪಾತ್ರಕ್ಕೆ ಜೀವ ತುಂಬುತ್ತಿದ್ದರು. ಅವರ ಅಕಾಲಿಕ ನಿಧನ ನಿಜಕ್ಕೂ ದುರ್ದೈವ. ಬಹುಮುಖ ಪ್ರತಿಭೆಯ ಅದ್ಭುತ ನಟನ ಬದುಕು ಅರ್ಧಕ್ಕೇ ನಿಂತಿದ್ದು ನಿಜಕ್ಕೂ ದುರಾದೃಷ್ಟಕರ ಎಂದು ಅವರು ತಿಳಿಸಿದ್ದಾರೆ.

ಪುನೀತ್ ನಿಧನಕ್ಕೆ ಸಚಿವ ಸಿ. ಸಿ ಪಾಟೀಲ್​​ ಕಂಬನಿ: ತಮ್ಮ ಎಳೆ ವಯಸ್ಸಿನಲ್ಲಿಯೇ ಕನ್ನಡ ಚಿತ್ರರಂಗದ ಶ್ರೇಷ್ಠ ಕಲಾವಿದರಾಗಿ, ಅಭಿಮಾನಿಗಳಲ್ಲಿ ವಿಶೇಷ ಛಾಪು ಮೂಡಿಸಿದ್ದ ನಮ್ಮೆಲ್ಲರ ನೆಚ್ಚಿನ “ಅಪ್ಪು” ಆಗಿದ್ದ ಪುನೀತ್ ರಾಜ್​ಕುಮಾರ್ ಅವರು ಅಕಾಲಿಕವಾಗಿ ನಿಧನರಾಗಿರುವುದು ನಿಜಕ್ಕೂ ದುಃಖದ ಬೆಳವಣಿಗೆಯಾಗಿದೆ. ಈ ಆಘಾತಕಾರಿ ಸುದ್ದಿಯನ್ನು ನಮಗೆ ನಂಬಲು ಸಾಧ್ಯವಾಗುತ್ತಿಲ್ಲ. ಅಗಲಿದ ಈ ಚೇತನಕ್ಕೆ ನನ್ನ ಆಶ್ರುತರ್ಪಣ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

  • ಪ್ರತಿಭಾವಂತ ಚಿತ್ರನಟ, ದೊಡ್ಮನೆ ಹುಡುಗ, ಕೋಟ್ಯಂತರ ಕಲಾಭಿಮಾನಿಗಳ ಹೃದಯ ಗೆದ್ದಿದ್ದ, ನಮ್ಮೆಲ್ಲರ ಮೆಚ್ಚಿನ ಪುನೀತ್ ರಾಜಕುಮಾರ್ ಅವರ ಅಕಾಲಿಕ ಸಾವು ನಮ್ಮೆಲ್ಲರಿಗೆ ಆಘಾತ ಮತ್ತು ಅತೀವ ದುಃಖವನ್ನುಂಟು ಮಾಡಿದೆ.. ಅಗಾಧ ದುಃಖದಲ್ಲಿರುವ ಅವರ ಕುಟುಂಬಕ್ಕೆ ಮತ್ತು ಅಪಾರ ಅಭಿಮಾನಿಗಳಿಗೆ ನನ್ನ ಸಾಂತ್ವನಗಳು‌.. pic.twitter.com/M4jUldiV1W

    — C C Patil (@CCPatilBJP) October 29, 2021 " class="align-text-top noRightClick twitterSection" data=" ">

ಹುಟ್ಟಿದ ಪ್ರತಿಯೊಬ್ಬರಿಗೂ ಸಾವು ನಿಶ್ಚಿತ. ಆದರೆ, ತಮ್ಮ ಅಪ್ರತಿಮ ಪ್ರತಿಭೆ ಮತ್ತು ಸಾಧನೆಗಳಿಂದ ಕೋಟ್ಯಂತರ ಕಲಾಭಿಮಾನಿಗಳ ಹೃದಯ ಗೆದ್ದ ಪುನೀತ್ ಅವರಂತಹವರನ್ನು ಕಳೆದುಕೊಂಡಾಗ ಈ ಸಾವು ಸೃಷ್ಟಿಸುವ ದುರಂತ ಮತ್ತು ಶೋಕವು ದೀರ್ಘಕಾಲ ಮನಸ್ಸನ್ನು ಘಾಸಿಗೊಳಿಸುತ್ತದೆ. ಈ ರೀತಿಯ ಅಗಾಧ ದುಃಖದಲ್ಲಿರುವ ಅವರ ಕುಟುಂಬಕ್ಕೆ ಮತ್ತು ಅಪಾರ ಅಭಿಮಾನಿಗಳಿಗೆ ನನ್ನ ಹೃದಯಾಂತರಾಳದ ಸಾಂತ್ವನಗಳು. ಅಗಲಿದ ಪುನೀತ್ ಅವರ ಆತ್ಮಕ್ಕೆ ಸದ್ಗತಿ ದೊರೆಯಲೆಂದು ಅವರು ಪ್ರಾರ್ಥಿಸಿದ್ದಾರೆ.

ತಮ್ಮ ತಂದೆ ಡಾ. ರಾಜ್​ಕುಮಾರ್ ಮತ್ತು ಸಹೋದರರಾದ ಶಿವ ರಾಜ್​ಕುಮಾರ್ ಮತ್ತು ರಾಘವೇಂದ್ರ ರಾಜ್​ಕುಮಾರ್ ಅವರ ಸಾಧನೆಯ ಹಾದಿಯಲ್ಲೇ ಮುನ್ನಡೆದು, ಕನ್ನಡ ಚಿತ್ರರಂಗದಲ್ಲಿ ಹೊಸ ಸಂಚಲನ ಮೂಡಿಸಿದ್ದ ಪುನೀತ್ ಅವರು ಹಲವಾರು ಸಾಮಾಜಿಕ ಕೆಲಸ ಕಾರ್ಯಗಳಲ್ಲೂ ತಮ್ಮನ್ನು ತೊಡಗಿಸಿಕೊಂಡು ಇಂದಿನ ಯುವ ಜನಾಂಗಕ್ಕೆ ಮಾದರಿಯಾಗಿದ್ದಾರೆ.

ಪುನೀತ್ ಅವರ ಎಲ್ಲಾ ಸಾಧನೆಗಳನ್ನು ಬಣ್ಣಿಸಲು ಶಬ್ದಗಳು ಸಾಲುವುದಿಲ್ಲ. ಒಂದೇ ಮಾತಿನಲ್ಲಿ ಹೇಳುವುದಾದರೆ ಎಲ್ಲಾ ಸದಭಿರುಚಿಯ ಪಾತ್ರಗಳಿಗೂ ಸೈ ಎನಿಸಿಕೊಂಡಿದ್ದ ಅವರು, ತಮ್ಮ ಸಹಜ ನಟನೆಯಿಂದ, ಸುಸಂಸ್ಕೃತ ನಡತೆಯಿಂದ ನಿಜಕ್ಕೂ ಅಮರರಾಗಿದ್ದಾರೆ ಎಂದಿದ್ದಾರೆ.

ಸಚಿವ ಆರಗ ಜ್ಞಾನೇಂದ್ರ : ಕನ್ನಡ ಚಿತ್ರರಂಗದಲ್ಲಿ "ಪವರ್ ಸ್ಟಾರ್" ಎಂದೇ ಖ್ಯಾತರಾಗಿದ್ದ, ಜನಾನುರಾಗಿ ಹಾಗೂ ಶ್ರೇಷ್ಠನಟ ಪುನೀತ್ ರಾಜ್​ಕುಮಾರ್ ಅವರ ಹಠಾತ್ ನಿಧನ, ಅಪಾರವಾದ ನೋವು ಹಾಗೂ ದುಃಖ ತಂದಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

  • ಕನ್ನಡದ ಪ್ರತಿಭಾವಂತ ನಟರು, ಬಾಲ್ಯದಿಂದಲೂ ಚಿತ್ರರಂಗಕ್ಕೆ ಮಹತ್ವಪೂರ್ಣ ಕೊಡುಗೆ ನೀಡುತ್ತಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿಧನದ ಸುದ್ದಿ ತೀವ್ರ ಆಘಾತ ಹಾಗೂ ದುಃಖ ತಂದಿದೆ. ಇದು ಕನ್ನಡ ಕಲಾಲೋಕಕ್ಕೆ ಅತಿದೊಡ್ಡ ನಷ್ಟ. ಅವರ ನಿಧನದಿಂದಾಗಿ ಕಲಾರಂಗ ಬರಿದಾಗಿದೆ. (1/2)#PunitRajkumar pic.twitter.com/DxmQtlHykB

    — Araga Jnanendra (@JnanendraAraga) October 29, 2021 " class="align-text-top noRightClick twitterSection" data=" ">

ಬರ ಸಿಡಿಲಿನಂತೆ ಬಂದೆರಗಿದ ಪುನೀತ್ ರಾಜಕುಮಾರ್ ಅವರ ಹಠಾತ್ ನಿಧನದ ಸುದ್ದಿಯಿಂದ ಇಡೀ ಕನ್ನಡ ಚಿತ್ರರಂಗ ಹಾಗೂ ನಾಡಿನ ಜನತೆ, ಆಘಾತಗೊಂಡಿದ್ದು ನಾಡಿನಾದ್ಯಂತ, ದುಃಖದ ಛಾಯೆ ಆವರಿಸಿದೆ. ಕನ್ನಡ ಚಿತ್ರ ಜಗತ್ತಿನ, ಮೇರು ನಟರಾಗಿದ್ದ, ಡಾ. ರಾಜ್​ಕುಮಾರ್ ಅವರ ಪುತ್ರರೂ ಆಗಿದ್ದ, ಪುನೀತ್ ರಾಜ್​ಕುಮಾರ್, ತಮ್ಮ ಸಹಜ ಅಭಿನಯ ಚಾತುರ್ಯದಿಂದ, ಸದಭಿರುಚಿಯ ಹಾಗೂ ವೈಚಾರಿಕ ನೆಲೆಯುಳ್ಳಮಾದರಿ ಪಾತ್ರಗಳಲ್ಲಿ ಅಭಿನಯಿಸಿ, ನಾಡಿನ ಮೂಲೆ ಮೂಲೆಯಲ್ಲಿ ಹಾಗೂ ನಾಡಿನ ಹೊರಗೂ, ಅಭಿಮಾನಿಗಳ ಸಾಗರವನ್ನೇ ಹೊಂದಿದ್ದರು.

ಪುನೀತ್ ರಾಜ್​ಕುಮಾರ್ ಅವರು ಇನ್ನಿಲ್ಲ ಎಂಬ ಸುದ್ದಿಯನ್ನು ನಂಬುವುದಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಕಂಬನಿ ಮಿಡಿರುವ ಸಚಿವರು, ಪುನೀತ್ ರಾಜ್​ಕುಮಾರ್ ಅವರ ಅಕಾಲಿಕ ನಿಧನದಿಂದ ನಾನು ದಿಗ್ಮೂಢನಾಗಿದ್ದು, ಮೃತರ ಕುಟುಂಬದಸದಸ್ಯರಿಗೆ ಹಾಗೂ ಅವರ ಅಪಾರ ಪ್ರಮಾಣದ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ಸಚಿವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಸಚಿವ ಆನಂದ್ ಸಿಂಗ್ ಸಂತಾಪ: ನನ್ನ ದೀರ್ಘಕಾಲದ ಸ್ನೇಹಿತ ಕನ್ನಡ ಚಿತ್ರರಂಗದ ಖ್ಯಾತ ನಟ ಪುನೀತ್ ರಾಜ್​ಕುಮಾರ್ ಅವರ ಅಕಾಲಿನ ನಿಧನದ ಸುದ್ದಿ ನನಗೆ ದಿಗ್ಭ್ರಮೆ ಉಂಟು ಮಾಡಿದೆ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.

  • ನನ್ನ ದೀರ್ಘಕಾಲದ ಸ್ನೇಹಿತರಾದ ಕನ್ನಡ ಚಿತ್ರರಂಗದ ಖ್ಯಾತ ನಟ ಪುನೀತ್ ರಾಜ್ ಕುಮಾರ್ ಅವರ ಅಕಾಲಿನ ನಿಧನದ ಸುದ್ದಿ ನನಗೆ ದಿಗ್ಭ್ರಮೆ ಉಂಟು ಮಾಡಿದೆ.

    ಪುನೀತ್ ರಾಜ್ ಕುಮಾರ್ ಅವರು ಹೃದಯ ಶ್ರೀಮಂತಿಕೆಯ ವ್ಯಕ್ತಿತ್ವವುಳ್ಳವರಾಗಿದ್ದು, ಅಪರೂಪದ ವ್ಯಕ್ತಿ ಆಗಿದ್ದರು. ಹಾಗಾಗಿ ಪ್ರತಿಯೊಬ್ಬರಿಂದ ಗೌರವಕ್ಕೆ ಪಾತ್ರರಾಗಿದ್ದರು.#PuneethRajkumar pic.twitter.com/tlSJUKul0Y

    — Anand Singh (@AnandSinghBS) October 29, 2021 " class="align-text-top noRightClick twitterSection" data=" ">

ಪುನೀತ್ ರಾಜ್​ಕುಮಾರ್ ಅವರು ಹೃದಯ ಶ್ರೀಮಂತಿಕೆಯ ವ್ಯಕ್ತಿತ್ವವುಳ್ಳವರಾಗಿದ್ದು, ಅಪರೂಪದ ವ್ಯಕ್ತಿ ಆಗಿದ್ದರು. ಹಾಗಾಗಿ ಪ್ರತಿಯೊಬ್ಬರಿಂದ ಗೌರವಕ್ಕೆ ಪಾತ್ರರಾಗಿದ್ದರು. ಪುನೀತ್ ಅವರು ನನ್ನೊಂದಿಗೆ ತೀರ ಆತ್ಮೀಯತೆ ಹೊಂದಿದ್ದರು. ರಾಜಕಾರಣ ಮತ್ತು ಚಿತ್ರರಂಗವನ್ನು ಮೀರಿದ ಸ್ನೇಹ ನಮ್ಮದಾಗಿತ್ತು. ನಾನು ರಾಜಕೀಯಕ್ಕೆ ಬರುವ ಮೊದಲು ಸಮಾಜಸೇವೆಯಲ್ಲಿ ತೊಡಗಿದ್ದ ಸಂದರ್ಭದಲ್ಲಿಯೂ ಸಹ ನನ್ನೊಂದಿಗೆ ಕೈಜೋಡಿಸಿದ್ದರು. ಪುನೀತ್ ಅವರ ಅಕಾಲಿಕ ಮರಣ ದೊಡ್ಡ ಶೂನ್ಯವನ್ನು ಸೃಷ್ಟಿಸಿದ್ದು, ಕನ್ನಡ ಚಿತ್ರರಂಗ ಹಾಗೂ ರಾಜ್ಯಕ್ಕೆ ದೊಡ್ಡ ನಷ್ಟ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

  • ಪುನೀತ್ ಅವರ ಅಕಾಲಿಕ ಮರಣ ದೊಡ್ಡ ಶೂನ್ಯವನ್ನು ಸೃಷ್ಟಿಸಿದ್ದು, ಕನ್ನಡ ಚಿತ್ರರಂಗ ಹಾಗೂ ರಾಜ್ಯಕ್ಕೆ ದೊಡ್ಡ ನಷ್ಟ.

    ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ.#PuneethRajkumar

ಸಚಿವ ಮುರುಗೇಶ್ ನಿರಾಣಿ : ಅಭಿಮಾನಿಗಳ ಪಾಲಿನ ಪವರ್ ಸ್ಟಾರ್ ಎಂದೇ ಖ್ಯಾತಿಯಾಗಿದ್ದ ಪುನೀತ್ ರಾಜ್‍ಕುಮಾರ್ ಅವರ ಹಠಾತ್ ನಿಧನದ ಸುದ್ದಿ ಕೇಳಿ ನನಗೆ ಯಾವ ರೀತಿ ದುಃಖವನ್ನು ವ್ಯಕ್ತಪಡಿಸಬೇಕೆಂಬುದೇ ಅರ್ಥವಾಗುತ್ತಿಲ್ಲ ಎಂದು ಸಚಿವ ಮುರುಗೇಶ್ ನಿರಾಣಿ ಸಂತಾಪ ವ್ಯಕ್ತಪಡಿಸಿದ್ದಾರೆ.

ವರನಟ ಡಾ.ರಾಜ್‍ಕುಮಾರ್ ಅವರಂತೆ ಸರಳತೆಯನ್ನೇ ಮೈಗೂಡಿಸಿಕೊಂಡಿದ್ದ ಪವರ್ ಸ್ಟಾರ್ ಪುನೀತ್‍ರಾಜ್‍ಕುಮಾರ್ ಎಂದೂ ಗರ್ವದಿಂದ ನಡೆಸಿಕೊಂಡವರಲ್ಲ. ಅದೇ ಕಾರಣಕ್ಕಾಗಿ ಬಹುಬೇಗನೆ ಎತ್ತರಕ್ಕೆ ಬೆಳೆದಿದ್ದರು. 'ನಾನೊಂದು ಬಗೆದರೆ, ದೈವ ಇನ್ನೊಂದು ಬಗೆಯಿತು ಎಂಬಂತಾಗಿದೆ!' ಎಂದು ಟ್ವೀಟ್ ಮಾಡಿದ್ದಾರೆ.

ಸಚಿವೆ ಶಶಿಕಲಾ ಜೊಲ್ಲೆ ಸಂತಾಪ : ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ಈ ನಾಡು ಕಂಡ ಯಶಸ್ವಿ ನಾಯಕ ನಟ, ಕನ್ನಡಿಗರ ಕಣ್ಮಣಿ, ಯುವ ನಟ ಪುನೀತ್ ರಾಜ್​ಕುಮಾರ್ ಅವರ ನಿಧನ ಬರಸಿಡಿಲು ಬಡಿದಂತಾಗಿದೆ ಎಂದು ಮುಜರಾಯಿ, ವಕ್ಫ್ ಹಜ್ ಸಚಿವೆ ಶಶಿಕಲಾ ಜೊಲ್ಲೆ ದುಃಖ ವ್ಯಕ್ತಪಡಿಸಿದ್ದಾರೆ.

  • ಕನ್ನಡ ಚಿತ್ರರಂಗದ ಜನಪ್ರಿಯ ನಟ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಕಲಾವಿದ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ವಿಧಿವಶರಾದ ಸುದ್ದಿ ಕೇಳಿ ಆಘಾತವಾಯಿತು. ಓರ್ವ ಅತ್ಯುತ್ತಮ ನಟನನ್ನು ಕಳೆದುಕೊಂಡು ಕನ್ನಡ ಚಿತ್ರರಂಗ ಬಡವಾಗಿದೆ. pic.twitter.com/JxlfOAsNMg

    — Shashikala Jolle (@ShashikalaJolle) October 29, 2021 " class="align-text-top noRightClick twitterSection" data=" ">

ಪುನೀತ್ ಅವರ ನಿಧನದ ಸುದ್ದಿ ಮನಸ್ಸಿಗೆ ತೀವ್ರ ದು:ಖ ಉಂಟಾಗುತ್ತಿದೆ. ಡಾಕ್ಟರ್ ರಾಜ್​ಕುಮಾರ್ ಅವರ ಪುತ್ರರಾಗಿದ್ದರೂ ಯಾವುದೇ ಅಹಂ ಇಲ್ಲದೇ ಎಲ್ಲರ ಪ್ರೀತಿಯ ಅಪ್ಪು ಆಗಿ ನಾಡಿಗಷ್ಟೆ ಅಲ್ಲದೇ ವಿಶ್ವದ ಕನ್ನಡಿಗರು ಹಾಗೂ ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಈ ದಿನ ಕರ್ನಾಟಕದ ಪಾಲಿಗೆ ಕರಾಳ ದಿನ. ಕನ್ನಡ ಭಾಷೆ, ನೆಲ, ಜಲದ ವಿಚಾರ ಬಂದಾಗ ಮುಂಚೂಣಿಯಲ್ಲಿ ನಿಲ್ಲುತ್ತಿದ್ದರು. ಎಲ್ಲರ ಮನಗಳಲ್ಲಿ ನೆಲೆಸಿರುವ ಅಪ್ಪು ಅವರ ನಿಧನದ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗ, ಅಭಿಮಾನಿಗಳಿಗೆ ಆ ದೇವರು ಕರುಣಿಸಲಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಆ ದೇವರಲ್ಲಿ ಪ್ರಾರ್ಥಿಸಿದ್ದಾರೆ.

ಕಂಬನಿ‌ ಮಿಡಿದ ಸಚಿವ ಕಾರಜೋಳ : ಆಡಿಸಿಯೇ ನೋಡು, ಬೀಳಿಸಿಯೇ ನೋಡು, ಎಂದೂ ಸೋಲದು, ಸೋತು ತಲೆಯಾ ಬಾಗದು ಎಂದು ಹೇಳುತ್ತಲೇ ನಮ್ಮನ್ನೆಲ್ಲಾ ಅಗಲಿದ ಪುನೀತ್ ರಾಜ್ ಕುಮಾರ್ ಅವರು ನಮ್ಮ ಗಂಧದ ಗುಡಿಯ ನಿಜವಾದ ರಾಜರತ್ನ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕಂಬನಿ ಮಿಡಿದಿದ್ದಾರೆ.

ಪವರ್ ಸ್ಟಾರ್ ಆಗಿದ್ದರೂ ಯಾವುದೇ ಗರ್ವವಿಲ್ಲದೇ ಎಲ್ಲರೊಂದಿಗೆ ಬೆರೆಯುತ್ತಿದ್ದ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ‌ ನಿಧನ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟು ಮಾಡಿದೆ ಎಂದು ಹೇಳಿದ್ದಾರೆ.

ತಂದೆ ಡಾ. ರಾಜ್​ಕುಮಾರ್ ಅವರಂತೆಯೆ ಸರಳತೆಯನ್ನು ಮೈಗೂಡಿಸಿಕೊಂಡಿದ್ದ ಪುನೀತ್, ಬಾಲನಟನಾಗಿ ರಾಷ್ಟ್ರಪ್ರಶಸ್ತಿ ಪಡೆದಿದ್ದರು. ಅವರ ಅಭಿನಯ ಜನ ಮಾನಸದಲ್ಲಿ ಅಚ್ಚಳಿಯದೇ ನಿಂತಿದೆ ಎಂದು ಸಚಿವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

  • ಕರುನಾಡಕುವರ, ಅಭಿಮಾನಿಗಳ ಹೃದಯ ಮನಸೂರೆಗೊಂಡಿದ್ದ ನಟ, ರಾಷ್ಟ್ರ ಪ್ರಶಸ್ತಿ ವಿಜೇತ,ಯುವ ನಟ ಪುನೀತ್ ರಾಜಕುಮಾರ್ ರವರ ಅಕಾಲಿಕ ನಿಧನದಿಂದ ಕನ್ನಡ ನಾಡು ಬಡವಾಗಿದೆ. ಈ ಸಂದರ್ಭದಲ್ಲಿ ಭಗವಂತನು ಅವರ ಆತ್ಮಕ್ಕೆ ಸದ್ಗತಿ ಮತ್ತು ಚಿರಶಾಂತಿಯನ್ನೀಯಲಿ ಹಾಗೂ ಅವರ ಕುಟುಂಬಕ್ಕೆ ಆಗಿರುವ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/JQXkpCDbVa

    — Govind M Karjol (@GovindKarjol) October 29, 2021 " class="align-text-top noRightClick twitterSection" data=" ">

ನಾಯಕ ನಟನಾಗಿ ಅನೇಕ ಚಿತ್ರಗಳಲ್ಲಿ ಅಮೋಘವಾಗಿ ಅಭಿನಯಿಸಿ ಕೋಟ್ಯಂತರ ಅಭಿಮಾನಿಗಳ ಮನ ಗೆದ್ದಿದ್ದ ಪುನೀತ್ ಅವರ ಮೃತ ಆತ್ಮಕ್ಕೆ ಚಿರಶಾಂತಿ ಸಿಗಲಿ ಮತ್ತು ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಗೋವಿಂದ ಕಾರಜೋಳ ಪ್ರಾರ್ಥಿಸಿದ್ದಾರೆ.

ಓದಿ: ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಸ್ಟಾರ್​... ಅಪ್ಪನ ಹಾದಿ ಹಿಡಿದ ಅಪ್ಪು..

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.