ಬೆಂಗಳೂರು: ಇನ್ಫೋಸಿಸ್ ಸಂಸ್ಥಾಪಕರಾದ ಎನ್ ಆರ್ ನಾರಾಯಣ ಮೂರ್ತಿ ಹಾಗೂ ಸುಧಾಮೂರ್ತಿ ಅವರ ಅಳಿಯ ಬ್ರಿಟನ್ ದೇಶದ ಪ್ರಧಾನಿಯಾಗಿ ಆಯ್ಕೆಯಾಗಿರುವ ಹಾಗು ಕನ್ನಡ ನೆಲದ ನಂಟು ಹೊಂದಿರುವ ಕನ್ಸರ್ವೇಟಿವ್ ಪಕ್ಷದ ನಾಯಕ ರಿಷಿ ಸುನಕ್ ಅವರ ಆಯ್ಕೆ ನನಗೆ ಅತೀವ ಸಂತಸ ತಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
-
ಬ್ರಿಟನ್ ದೇಶದ ಪ್ರಧಾನಿಯಾಗಿ ಆಯ್ಕೆಯಾಗಿರುವ ಕನ್ನಡ ನೆಲದ ನಂಟು ಹೊಂದಿರುವ ಕನ್ಸರ್ವೇಟಿವ್ ಪಕ್ಷದ ನಾಯಕರಾದ ಶ್ರೀ @RishiSunak ಅವರಿಗೆ ಹೃದಯಪೂರ್ವಕ ಅಭಿನಂದನೆಗಳು.1/3 pic.twitter.com/y1zdfozb2i
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 24, 2022 " class="align-text-top noRightClick twitterSection" data="
">ಬ್ರಿಟನ್ ದೇಶದ ಪ್ರಧಾನಿಯಾಗಿ ಆಯ್ಕೆಯಾಗಿರುವ ಕನ್ನಡ ನೆಲದ ನಂಟು ಹೊಂದಿರುವ ಕನ್ಸರ್ವೇಟಿವ್ ಪಕ್ಷದ ನಾಯಕರಾದ ಶ್ರೀ @RishiSunak ಅವರಿಗೆ ಹೃದಯಪೂರ್ವಕ ಅಭಿನಂದನೆಗಳು.1/3 pic.twitter.com/y1zdfozb2i
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 24, 2022ಬ್ರಿಟನ್ ದೇಶದ ಪ್ರಧಾನಿಯಾಗಿ ಆಯ್ಕೆಯಾಗಿರುವ ಕನ್ನಡ ನೆಲದ ನಂಟು ಹೊಂದಿರುವ ಕನ್ಸರ್ವೇಟಿವ್ ಪಕ್ಷದ ನಾಯಕರಾದ ಶ್ರೀ @RishiSunak ಅವರಿಗೆ ಹೃದಯಪೂರ್ವಕ ಅಭಿನಂದನೆಗಳು.1/3 pic.twitter.com/y1zdfozb2i
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 24, 2022
ಈ ಕುರಿತು ಟ್ವೀಟ್ ಮಾಡಿರುವ ಅವರು, ರಿಷಿ ಸುನಕ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು. ಆರ್ಥಿಕ ಸಂಕಷ್ಟದ ಕಾಲದಲ್ಲಿ ಬ್ರಿಟನ್ ದೇಶದ ಚುಕ್ಕಾಣಿ ಹಿಡಿಯುತ್ತಿದ್ದು ಸಮರ್ಥವಾಗಿ ಮುನ್ನಡೆಸುತ್ತಾರೆ ಎಂಬ ವಿಶ್ವಾಸವಿದೆ ಎಂದಿದ್ದಾರೆ.
ಇದನ್ನೂ ಓದಿ: ಬ್ರಿಟನ್ಗೆ ಕರುನಾಡ ಅಳಿಯ ಪ್ರಧಾನಿ.. ರಿಷಿ ಸುನಕ್ ನೂತನ ಸಾರಥಿ