ETV Bharat / state

ನೂತನ ಸಿಎಂ - ಡಿಸಿಎಂಗೆ ಶುಭ ಕೋರಿದ ಹೆಚ್​ಡಿಕೆ: ಜನತೆಗೆ ಅರ್ಪಣಾ ಮನೋಭಾವದಿಂದ ಸೇವೆ ಮಾಡಲಿ ಎಂದ ಕುಮಾರಸ್ವಾಮಿ

ಹೆಚ್​ ಡಿ ಕುಮಾರಸ್ವಾಮಿ ಪರೋಕ್ಷವಾಗಿ ಸರ್ಕಾರದ ಜೊತೆಗಿರುತ್ತೇವೆ ಎಂದು ಹೇಳಿದರೆ, ಬಿಜೆಪಿ ಮಾತ್ರ ಪರೋಕ್ಷವಾಗಿ ಕಾಂಗ್ರೆಸ್​ಗೆ ಟಾಂಗ್​ ನೀಡಿದೆ.

Former CM h D Kumaraswamy
ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ
author img

By

Published : May 20, 2023, 4:00 PM IST

Updated : May 20, 2023, 7:17 PM IST

ಬೆಂಗಳೂರು: ರಾಜ್ಯದ 2023 ರ ವಿಧಾನಸಭಾ ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿ 135 ಸ್ಥಾನಗಳನ್ನು ಗೆದ್ದು ಗದ್ದುಗೆ ಏರಿರುವ ಕಾಂಗ್ರೆಸ್​ ಪಕ್ಷದಿಂದ ಇಂದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಎಂಟು ಸಚಿವರ ಜೊತೆಗೆ ಸಿಎಂ ಹಾಗೂ ಡಿಸಿಎಂ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ಸರ್ಕಾರಕ್ಕೆ ಶುಭವಾಗಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್​ ಪಕ್ಷದ ಮುಖಂಡ ಹೆಚ್ ಡಿ ಕುಮಾರಸ್ವಾಮಿ ಅವರು ಹಾರೈಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಾಗೂ ಅವರ ಸಂಪುಟ ಸಹೋದ್ಯೋಗಿಗಳಿಗೆ ಹಾರ್ದಿಕ ಶುಭಾಶಯಗಳು ಎಂದು ಕೋರಿದ್ದಾರೆ. ಅಭೂತ ಪೂರ್ವ ಜಯದೊಂದಿಗೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್​ ಸರ್ಕಾರ ರಾಜ್ಯದ ಜನತೆಗೆ ಅರ್ಪಣಾ ಮನೋಭಾವದಿಂದ ಸೇವೆ ಮಾಡಲಿ. ಕನ್ನಡ ನಾಡಿನ ಜನಹಿತಕ್ಕಾಗಿ ಕಾಂಗ್ರೆಸ್ ಸರ್ಕಾರ ಕೈಗೊಳ್ಳುವ ಪ್ರತಿಯೊಂದು ಕ್ರಮಕ್ಕೂ ನಮ್ಮ ಜೆಡಿಎಸ್‌ ಪಕ್ಷ ಪರಿಪೂರ್ಣ ಬೆಂಬಲ ನೀಡಲಿದೆ ಎಂದು ಹೇಳಿದ್ದಾರೆ.

  • ರಾಜ್ಯದ ಜನತೆಗೆ ಅರ್ಪಣಾ ಮನೋಭಾವದಿಂದ ಅವರೆಲ್ಲರೂ ಸೇವೆ ಮಾಡಲಿ. ಕನ್ನಡನಾಡಿನ ಜನಹಿತಕ್ಕಾಗಿ @INCKarnataka ಸರಕಾರ ಕೈಗೊಳ್ಳುವ ಪ್ರತಿಯೊಂದು ಕ್ರಮಕ್ಕೂ ನಮ್ಮ @JanataDal_S ಪಕ್ಷ ಪರಿಪೂರ್ಣ ಬೆಂಬಲ ನೀಡಲಿದೆ. 2/2

    — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 20, 2023 " class="align-text-top noRightClick twitterSection" data=" ">

ಇದನ್ನೂ ಓದಿ: ಸಿದ್ದು, ಡಿಕೆಶಿ ಪ್ರಮಾಣ ವಚನ: ಬಿಜೆಪಿಯೇತರ ಸರ್ಕಾರದ ಬಗ್ಗೆ ಸುಳಿವು ನೀಡಿದ ರಾಷ್ಟ್ರೀಯ ನಾಯಕರು...

ಟ್ವೀಟ್​ ಮಾಡಿದ ಬಿಜೆಪಿ: ನೂತನ ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟಕ್ಕೆ ಅಭಿನಂದನೆ ಸಲ್ಲಿಸಿರುವ ಬಿಜೆಪಿ, ರಾಜ್ಯದಲ್ಲಿ ಶಾಂತಿ ನೆಲಸಲಿದೆ. ಪಂಚ ಗ್ಯಾರಂಟಿಗಳ ಅನುಷ್ಠಾನ ಆಗಲಿದೆ ಎಂದು ಭಾವಿಸಿದ್ದೇವೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ ಅವರು ಹಾಗೂ ಅವರ ಸಚಿವ ಸಂಪುಟ ಸದಸ್ಯರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ. ಅದೇ ರೀತಿ ಕರ್ನಾಟಕದ ನೂತನ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನವನ್ನು ಸ್ವೀಕರಿಸಿರುವ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು.

  • ಕರ್ನಾಟಕದ ನೂತನ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣವಚನವನ್ನು ಸ್ವೀಕರಿಸಲಿರುವ ಶ್ರೀ @siddaramaiah ಮತ್ತು ಶ್ರೀ @DKShivakumar ಅವರಿಗೆ ಅಭಿನಂದನೆಗಳು.

    ತಮ್ಮ ಅವಧಿಯಲ್ಲಿ ಕರ್ನಾಟಕದಲ್ಲಿ ಶಾಂತಿ ನೆಲೆಸಲಿದೆ ಹಾಗೂ ಕನ್ನಡಿಗರು ಸುರಕ್ಷಿತರಾಗಿರುತ್ತಾರೆ ಎಂದು ನಾವು ಭಾವಿಸಿದ್ದೇವೆ.

    ಅದೇ ರೀತಿ, ಚುನಾವಣಾ ಪೂರ್ವದಲ್ಲಿ…

    — BJP Karnataka (@BJP4Karnataka) May 20, 2023 " class="align-text-top noRightClick twitterSection" data=" ">

ತಮ್ಮ ಅವಧಿಯಲ್ಲಿ ಕರ್ನಾಟಕದಲ್ಲಿ ಶಾಂತಿ ನೆಲೆಸಲಿದೆ ಹಾಗೂ ಕನ್ನಡಿಗರು ಸುರಕ್ಷಿತರಾಗಿರುತ್ತಾರೆ ಎಂದು ನಾವು ಭಾವಿಸಿದ್ದೇವೆ. ಅದೇ ರೀತಿ, ಚುನಾವಣಾ ಪೂರ್ವದಲ್ಲಿ ತಾವು ರಾಜ್ಯದ ಜನತೆಗೆ ನೀಡಿದ್ದ ಐದು 'ಗ್ಯಾರಂಟಿಗಳ' ಆಶ್ವಾಸನೆಯನ್ನು ರಾಜಸ್ಥಾನ, ಛತ್ತಿಸ್‌ಗಡ, ಹಿಮಾಚಲ ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದ ನಂತರ ಕೈಕೊಟ್ಟ ಹಾಗೆ ಕೊಡದೇ, ತಕ್ಷಣವೇ ಅನುಷ್ಠಾನಗೊಳಿಸುತ್ತೀರಿ ಎಂದು ನಾವು ನಂಬಿದ್ದೇವೆ ಎಂದು ಪರೋಕ್ಷವಾಗಿ ಬಿಜೆಪಿ ಟಾಂಗ್ ನೀಡಿದೆ.

  • 1. ರಾಜ್ಯದ ಈ ವರ್ಷದ ಬಜೆಟ್ ಗಾತ್ರವೆಷ್ಟು?

    2. ಈ ದಿನದವರೆಗಿನ ನಮ್ಮ ಒಟ್ಟು ಸಾಲ ಎಷ್ಟಿದೆ?

    3. ವಾರ್ಷಿಕ ಬಡ್ಡಿ ಮತ್ತು ಅಸಲು ಮರುಪಾವತಿಗೆ ಎಷ್ಟು ಬೇಕು?

    4 ಸರ್ಕಾರಿ ಉದ್ಯೋಗಿಗಳ ಸಂಬಳಕ್ಕೆ ಎಷ್ಟು ಸಾವಿರ ಕೋಟಿ ಬೇಕು?

    5. ಸರ್ಕಾರಿ ಯೋಜನೆಗಳ ಮುಂದುವರಿಕೆಗೆ ಎಷ್ಟು ಬೇಕು? 2/2

    — Pratap Simha (@mepratap) May 20, 2023 " class="align-text-top noRightClick twitterSection" data=" ">

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನಿರೀಕ್ಷೆಗೂ ಕಡಿಮೆ ಸ್ಥಾನಗಳನ್ನು ಗಳಿಸುವ ಮೂಲಕ ಹೀನಾಯವಾಗಿ ಸೋಲನ್ನು ಅನುಭವಿಸಿತ್ತು.

ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ ಪ್ರಮಾಣ ವಚನಕ್ಕೆ ಹರಿದು ಬಂದ ಜನಸಾಗರ.. ಕಂಠೀರವ ಕ್ರೀಡಾಂಗಣದಲ್ಲಿ ಮೊಳಗಿದ ಜಯಘೋಷ

Last Updated : May 20, 2023, 7:17 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.