ಬೆಂಗಳೂರು: ಪಿಎಸ್ಐ ಹಗರಣದ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಿಗೆಳೆದು, ಇಂದು ಎಡಿಜಿಪಿ ದರ್ಜೆಯ ಉನ್ನತ ಅಧಿಕಾರಿಯನ್ನೇ ಬಂಧಿಸಿರುವ ಘಟನೆ ರಾಜ್ಯ ಪೊಲೀಸ್ ವ್ಯವಸ್ಥೆಯಲ್ಲೇ ಐತಿಹಾಸಿಕ ದಿನ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಿಐಡಿ ತನಿಖಾ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
-
ಪಿಎಸ್ಐ ಹಗರಣದ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಿಗೆಳೆದು, ಇಂದು ಎಡಿಜಿಪಿ ದರ್ಜೆಯ ಉನ್ನತ ಅಧಿಕಾರಿಯನ್ನೇ ಬಂಧಿಸಿರುವ ಘಟನೆ ರಾಜ್ಯ ಪೊಲೀಸ್ ವ್ಯವಸ್ಥೆಯಲ್ಲೇ ಐತಿಹಾಸಿಕ. ಸಿಐಡಿ ತನಿಖಾ ತಂಡಕ್ಕೆ ನನ್ನ ಹೃತ್ಪೂರ್ವಕ ಅಭಿನಂದನೆಗಳು.1/4#PSIಹಗರಣ
— H D Kumaraswamy (@hd_kumaraswamy) July 4, 2022 " class="align-text-top noRightClick twitterSection" data="
">ಪಿಎಸ್ಐ ಹಗರಣದ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಿಗೆಳೆದು, ಇಂದು ಎಡಿಜಿಪಿ ದರ್ಜೆಯ ಉನ್ನತ ಅಧಿಕಾರಿಯನ್ನೇ ಬಂಧಿಸಿರುವ ಘಟನೆ ರಾಜ್ಯ ಪೊಲೀಸ್ ವ್ಯವಸ್ಥೆಯಲ್ಲೇ ಐತಿಹಾಸಿಕ. ಸಿಐಡಿ ತನಿಖಾ ತಂಡಕ್ಕೆ ನನ್ನ ಹೃತ್ಪೂರ್ವಕ ಅಭಿನಂದನೆಗಳು.1/4#PSIಹಗರಣ
— H D Kumaraswamy (@hd_kumaraswamy) July 4, 2022ಪಿಎಸ್ಐ ಹಗರಣದ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಿಗೆಳೆದು, ಇಂದು ಎಡಿಜಿಪಿ ದರ್ಜೆಯ ಉನ್ನತ ಅಧಿಕಾರಿಯನ್ನೇ ಬಂಧಿಸಿರುವ ಘಟನೆ ರಾಜ್ಯ ಪೊಲೀಸ್ ವ್ಯವಸ್ಥೆಯಲ್ಲೇ ಐತಿಹಾಸಿಕ. ಸಿಐಡಿ ತನಿಖಾ ತಂಡಕ್ಕೆ ನನ್ನ ಹೃತ್ಪೂರ್ವಕ ಅಭಿನಂದನೆಗಳು.1/4#PSIಹಗರಣ
— H D Kumaraswamy (@hd_kumaraswamy) July 4, 2022
ಈ ಕುರಿತು ಟ್ವೀಟ್ ಮಾಡಿರುವ ಅವರು, ಸಿಐಡಿ ನೇತೃತ್ವ ವಹಿಸಿರುವ ದಕ್ಷ ಅಧಿಕಾರಿ, ಪಿ.ಎಸ್.ಸಂಧು ಅವರು ಎಷ್ಟೇ ರಾಜಕೀಯ ಮತ್ತು ಅಧಿಕಾರಿಶಾಹಿ ಮಟ್ಟದಲ್ಲಿ ಒತ್ತಡ ಎದುರಾದರೂ ಮಣಿಯದೇ ತನಿಖಾ ತಂಡವನ್ನು ಮುನ್ನಡೆಸಿದ್ದಾರೆ. ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದಿದ್ದಾರೆ.
ಇನ್ನು ಪಿಎಸ್ಐ ಕರ್ಮಕಾಂಡದ ತನಿಖೆಯಲ್ಲಿ ಸಿಐಡಿ ಸಾಗಬೇಕಿರುವ ದೂರ ಬಹಳಷ್ಟಿದೆ. ಕೆಳ, ಹಿರಿಯ ಹಂತದ ಅಧಿಕಾರಿಗಳ ಜತೆಗೆ ಸರ್ಕಾರದ ಮಟ್ಟದಲ್ಲಿ ಅತ್ಯಂತ ಪ್ರಭಾವಿ ಸ್ಥಾನಗಳಲ್ಲಿರುವ ಕಿಂಗ್ಪಿನ್ಗಳನ್ನು ಸಿಐಡಿ ಹಿಡಿಯಬೇಕಿದೆ. ಯಾವುದೇ ಕಾರಣಕ್ಕೂ ಈ ಪ್ರಭಾವಿಗಳು ತಪ್ಪಿಸಿಕೊಳ್ಳಬಾರದು ಎಂದು ಹೇಳಿದ್ದಾರೆ.
ಹೆಚ್ಚಿನ ಓದಿಗೆ:ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ: ಹಿರಿಯ ಐಪಿಎಸ್ ಅಧಿಕಾರಿಯೇ ಅರೆಸ್ಟ್
ನಾನು ಮೊದಲೇ ಹೇಳಿದ್ದೆ. ಪಿಎಸ್ಐ ಹಗರಣದಲ್ಲಿ ಒಬ್ಬರು ಮಹಾನ್ ಕಿಂಗ್ ಪಿನ್ ಇದ್ದಾರೆ. ಅವರ ಹೆಸರು ಹೇಳಿದರೆ ಸರ್ಕಾರವೇ ಬಿದ್ದು ಹೋಗುತ್ತದೆ. ಹೀಗೆ ಹೇಳಿದಾಗ ಕುಮಾರಸ್ವಾಮಿ ಹಿಟ್ ಅಂಡ್ ರನ್ ಮಾಡ್ತಾರೆ ಎಂದಿದ್ದರು. ದಾಖಲೆ ಕೊಡಿ ಎಂದಿದ್ದರು. ಈಗ ಅವರು ಏನು ಹೇಳುತ್ತಾರೆ? ಎಂದು ಹೆಚ್ಡಿಕೆ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಐದು ವರ್ಷದ ಬಾಲಕನಿಗೆ ಮನಬಂದಂತೆ ಥಳಿಸಿದ ಶಿಕ್ಷಕ.. ಪ್ರಜ್ಞೆ ತಪ್ಪಿದ ವಿದ್ಯಾರ್ಥಿ