ಬೆಂಗಳೂರು: ಶಿರಾ ಕ್ಷೇತ್ರದ ಉಪಚುನಾವಣೆಗೆ ಮಾಜಿ ಸಚಿವ ದಿ. ಸತ್ಯನಾರಾಯಣ ಅವರ ಪತ್ನಿಯನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿರುವ ಜೆಡಿಎಸ್, ಉಪ ಚುನಾವಣೆಯಲ್ಲಿ ಗೆಲುವು ಸಾಧಿಸುವ ವಿಶ್ವಾಸದಲ್ಲಿದೆ. ಈ ಕುರಿತು ಕಾರ್ಯತಂತ್ರ ರೂಪಿಸಲು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಸಭೆ ನಡೆಸಲಾಯಿತು.
ಪಕ್ಷದ ಕಚೇರಿ ಜೆ ಪಿ ಭವನದಲ್ಲಿಂದು ನಡೆದ ಸಭೆಯಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಗೌರಿಶಂಕರ್ ಹಾಗೂ ಶಿರಾ ಕ್ಷೇತ್ರದ ಜೆಡಿಎಸ್ ಮುಖಂಡರು, ಪಕ್ಷದ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಸತ್ಯನಾರಾಯಣ ಅವರ ಗೆಲುವಿಗೆ ಯಾವ ರೀತಿ ಕಾರ್ಯತಂತ್ರ ರೂಪಿಸಬೇಕು ಎಂಬುದರ ಬಗ್ಗೆ ಕುಮಾರಸ್ವಾಮಿ ಚರ್ಚೆ ನಡೆಸುತ್ತಿದ್ದಾರೆ.
ಪ್ರತಿಯೊಬ್ಬರ ಅಭಿಪ್ರಾಯ ಪಡೆದುಕೊಳ್ಳುತ್ತಿರುವ ಹೆಚ್ಡಿಕೆ, ಯಾವ ರೀತಿ ಚುನಾವಣಾ ತಯಾರಿ ಮಾಡಿಕೊಳ್ಳಬೇಕೆಂಬುದರ ಬಗ್ಗೆ ಸಲಹೆ, ಸೂಚನೆಗಳನ್ನು ನೀಡುತ್ತಿದ್ದಾರೆ.