ETV Bharat / state

'ಜಾತ್ಯತೀತ' ಎನ್ನುವ ಟ್ಯಾಗ್ ಲೈನ್ ಇಟ್ಟುಕೊಂಡು, ಕುಕ್ಕರ್, ಇಸ್ತ್ರಿ ಪೆಟ್ಟಿಗೆ ಹಂಚುವುದು ಜಾತ್ಯತೀತವೇ?: ಸಿಎಂಗೆ ಹೆಚ್​ಡಿಕೆ ತಿರುಗೇಟು

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಎಕ್ಸ್​ನಲ್ಲಿ ಸಿಎಂ ಸಿದ್ದರಾಮಯ್ಯರ ವಿರುದ್ಧ ಜಾತ್ಯತೀತದ ಬಗ್ಗೆ ಪೋಸ್ಟ್​ ಮಾಡಿ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

ಹೆಚ್​ಡಿಕೆ
ಹೆಚ್​ಡಿಕೆ
author img

By ETV Bharat Karnataka Team

Published : Sep 30, 2023, 11:05 AM IST

ಬೆಂಗಳೂರು: "ಅವರ ಬೆನ್ನು ಅವರಿಗೆ ಕಾಣುವುದಿಲ್ಲ. ನಾಲಿಗೆಗೂ ಮೂಳೆ ಇರುವುದಿಲ್ಲ. ಸಿಎಂ ಸೀಟಿನಲ್ಲಿ ಕೂತರೂ 'ಸಿದ್ದಸುಳ್ಳು'ಗಳಿಗೆ ಕೊರತೆಯೇನೂ ಇಲ್ಲ" ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕಾಂಗ್ರೆಸ್​ ಪಕ್ಷಕ್ಕೆ ತಿರುಗೇಟು ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, 'ಜಾತ್ಯತೀತ' ಎನ್ನುವ ಟ್ಯಾಗ್​ಲೈನ್​ ಇಟ್ಟುಕೊಂಡು ಜಾತಿ ಸಭೆಗಳನ್ನು ಮಾಡಿ ಕುಕ್ಕರ್​​, ಇಸ್ತ್ರಿ ಪೆಟ್ಟಿಗೆ ಹಂಚುವುದು ಜಾತ್ಯತೀತವೇ? ಅಹಿಂದ ಎಂದು ಹೇಳಿಕೊಂಡು ಧರ್ಮಕ್ಕೊಂದು ಸಮಾವೇಶ, ಜಾತಿಗೊಂದು ಸಭೆ ನಡೆಸುವುದು ಜಾತ್ಯತೀತವೇ? ಸ್ವಲ್ಪ ಹೇಳುವಿರಾ ಸಿದ್ದರಾಮಯ್ಯನವರೇ? ಎಂದು ಪ್ರಶ್ನಿಸಿದ್ದಾರೆ.

ಕೋಮುವಾದಿ ಎಂದು ಬಿಜೆಪಿಯನ್ನು ಹೀಗಳೆಯುತ್ತಾ ಆ ಪದದಿಂದಲೇ ರಾಜಕೀಯ ಲಾಭಗಿಟ್ಟಿಸಿಕೊಳ್ಳುವ ಡೋಂಗಿ ಸಮಾಜವಾದಿ ನೀವು. ನಿಮ್ಮ ಅಡ್ಜಸ್ಟ್'ಮೆಂಟ್ ರಾಜಕಾರಣ ಜಗತ್ಪ್ರಸಿದ್ಧಿ. I.N.D.I.A ಎಂಬ ಮೈತ್ರಿಕೂಟದಲ್ಲಿ ಅದೇ ಬಿಜೆಪಿಯ ಬಿ ಟೀಂಗಳನ್ನು ಇಟ್ಟುಕೊಂಡು, ಅವುಗಳ ಬಾಲಂಗೋಚಿ ಆಗಿರುವ ಇಂಡಿಯಾ ಕಾಂಗ್ರೆಸ್ ಪಕ್ಷ ಜಾತ್ಯತೀತವೇ? ಉತ್ತರಿಸಿ ಮುಖ್ಯಮಂತ್ರಿಗಳೇ? ಎಂದು ಹೆಚ್​ಡಿಕೆ ವ್ಯಂಗ್ಯವಾಡಿದ್ದಾರೆ.

  • ಅವರ ಬೆನ್ನು ಅವರಿಗೆ ಕಾಣುವುದಿಲ್ಲ. ನಾಲಿಗೆಗೂ ಮೂಳೆ ಇರುವುದಿಲ್ಲ. ಸಿಎಂ ಸೀಟಿನಲ್ಲಿ ಕೂತರೂ 'ಸಿದ್ದಸುಳ್ಳು'ಗಳಿಗೆ ಕೊರತೆಯೇನೂ ಇಲ್ಲ.

    ' ಜಾತ್ಯತೀತ ' ಎನ್ನುವ ಟ್ಯಾಗ್ ಲೈನ್ ಇಟ್ಟುಕೊಂಡು ಜಾತಿ ಸಭೆಗಳನ್ನು ಮಾಡಿ ಕುಕ್ಕರ್, ಇಸ್ತ್ರೀ ಪೆಟ್ಟಿಗೆ ಹಂಚುವುದು ಜಾತ್ಯತೀತವೇ? ಅಹಿಂದ ಎಂದು ಹೇಳಿಕೊಂಡು ಧರ್ಮಕ್ಕೊಂದು ಸಮಾವೇಶ, ಜಾತಿಗೊಂದು ಸಭೆ… pic.twitter.com/MeyrSH2mHa

    — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 30, 2023 " class="align-text-top noRightClick twitterSection" data=" ">

ಸ್ಟಾಲಿನ್, ಮಮತಾ ಬ್ಯಾನರ್ಜಿ, ಫಾರೂಕ್ ಅಬ್ದುಲ್ಲಾ, ನಿತೀಶ್ ಕುಮಾರ್, ಹೇಮಂತ್ ಸೊರೇನ್, ವೈಕೋ, ಮೆಹಬೂಬಾ ಮುಫ್ತಿ, ಅಖೈರಿಗೆ ಶಿವಸೇನೆಯ ಉದ್ಧವ್ ಠಾಕ್ರೆ. ಇವರೆಲ್ಲರೂ ಬಿಜೆಪಿ ಪಡಸಾಲೆಯಲ್ಲಿ ಪೊಗದಸ್ತಾಗಿ ಅಧಿಕಾರದ ಭೋಜನ ಉಂಡವರಲ್ಲವೇ? ಅವರ ಪಕ್ಕ ಕುರ್ಚಿ ಹಾಕಿಕೊಂಡು ಕೂರಲು ನಿಮಗೆ ನಾಚಿಕೆ ಆಗುವುದಿಲ್ಲವೇ? ಎಂದು ಹೆಚ್​ಡಿಕೆ ಕಿಡಿಕಾರಿದ್ದಾರೆ.

2006ರಲ್ಲಿ ರಾಜ್ಯ ಬಿಜೆಪಿ ಜೊತೆ ಸರ್ಕಾರ ರಚಿಸಿದ ಏಕೈಕ ಕಾರಣಕ್ಕೆ ಬಿಜೆಪಿ ಬಿ ಟೀಂ ಎಂದು @JanataDal_Sಗೆ ಮುದ್ರೆ ಹಾಕಿದಿರಿ. 2018ರಲ್ಲಿ ಅದೇ ಬಿ ಟೀಂ ಜತೆ ಸರ್ಕಾರ ರಚಿಸಲು ಮಾನ್ಯ ದೇವೇಗೌಡರ ಮನೆಗೆ ಬಂದು ಸಾಲಾಗಿ ಕೈಕಟ್ಟಿ ನಿಂತುಕೊಂಡಿರಿ!. ಮರೆತಿರಾ ಛದ್ಮವೇಷಧಾರಿ?. ಪಾಪ.. ನಿಮಗೆ ಕೋಮುವಾದ, ಜಾತ್ಯತೀತ ಸಿದ್ಧಾಂತದ ಕನಸು ಈಗ ಬಿದ್ದಿದೆ. ನಿಮ್ಮ ರಾಜಕೀಯ ಬದುಕಿಗಾಗಿ ಜಾತಿ ಜಾತಿಗಳನ್ನು ಒಡೆದು ಬೆಂಕಿ ಇಟ್ಟು ಆ ಕೆನ್ನಾಲಗೆಯಲ್ಲೇ ಚಳಿ ಕಾಯಿಸಿಕೊಳ್ಳುವುದಷ್ಟೇ ನಿಮಗೆ ಗೊತ್ತು ಎಂದು ಸಿದ್ದರಾಮಯ್ಯ ವಿರುದ್ಧ ಕುಮಾಸ್ವಾಮಿ ಹರಿಹಾಯ್ದಿದ್ದಾರೆ.

ಜಾತ್ಯತೀತ ಎನ್ನುವುದು ನಾಲಿಗೆ ಮೇಲಿನ ಮಾತಲ್ಲ, ಹೃದಯದ ಆಳದಲ್ಲಿರುವ ನಿಷ್ಠೆ. ಸ್ವಾರ್ಥ ರಾಜಕಾರಣವನ್ನೇ ಹಾಸಿಹೊದ್ದು, ಅಧಿಕಾರದ ದಾಹವೇ ಹಾಸುಹೊಕ್ಕಾಗಿರುವ ನಿಮಗೆ ಜಾತ್ಯತೀತತೆ ಕೇವಲ ಭಾಷಣದ ಸರಕಷ್ಟೇ. ಜಾತ್ಯತೀತತೆ ಕುರಿತು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್. ಡಿ. ದೇವೇಗೌಡ ಅವರು ಹಾಗೂ ನಾನು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೇವೆ, ಅದೂ ಜನರಿಗೆ?. ನಮ್ಮ ಬದ್ಧತೆ, ಅಚಲತೆ, ಜಾತ್ಯತೀತತೆಯನ್ನು ಪ್ರಶ್ನಿಸುವ ಯೋಗ್ಯತೆ ನಿಮಗೆ ಖಂಡಿತಾ ಇಲ್ಲ. ಈ ಗುಣಗಳು ನಿಮಗೆ ಅನ್ವಯ ಆಗುವುದೂ ಇಲ್ಲ. ಏನಂತೀರಿ? ಎಂದಿದ್ದಾರೆ.

ಇದನ್ನೂ ಓದಿ: "ಕರ್ನಾಟಕ A ಟೀಂ ತಮಿಳುನಾಡು B ಟೀಂ": ಕಾಂಗ್ರೆಸ್​ ವಿರುದ್ಧ ಹೆಚ್​ ಡಿ ರೇವಣ್ಣ ವಾಗ್ದಾಳಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.