ETV Bharat / state

ಡಿ.ಕೆ. ಶಿವಕುಮಾರ್ ಒಕ್ಕಲಿಗ ಜಾತಿಯನ್ನು ಗುತ್ತಿಗೆ ತೆಗೆದುಕೊಂಡಿದ್ದಾರೆಯೇ? : ಹೆಚ್‌ಡಿಕೆ ಗರಂ

ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಶಿವಕುಮಾರ್ ಜಾತಿ ರಾಜಕಾರಣ ಆರಂಭಿಸಿದ್ದಾರೆ. ಹಿಂದೆ ಜಾತಿ ಮೇಲೆ ದಬ್ಬಾಳಿಕೆಯಾದಾಗ ಏಕೆ ಕ್ರಮ ತೆಗೆದುಕೊಳ್ಳಲಿಲ್ಲ. ಈಗ ಜಾತಿಯವರೆಲ್ಲ ಒಂದಾಗಬೇಕು. ನಮ್ಮವರಿಗೆ ತೊಂದರೆ ಕೊಡುತ್ತಾರೆ ಎನ್ನುವುದೆಷ್ಟು ಸರಿ? ಎಂದು ಮಾರ್ಮಿಕವಾಗಿ ಪ್ರಶ್ನಿಸಿದರು.

hdk
ಹೆಚ್‌ಡಿಕೆ
author img

By

Published : Oct 9, 2020, 10:42 PM IST

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒಕ್ಕಲಿಗ ಜಾತಿಯನ್ನು ಗುತ್ತಿಗೆ ತೆಗೆದುಕೊಂಡಿದ್ದಾರೆಯೇ? ಇವರೇನು ಜಾತಿ ರಕ್ಷಕರೇ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಪಕ್ಷದ ಕಚೇರಿಯಲ್ಲಿಂದು ರಾಜರಾಜೇಶ್ವರಿನಗರ ಕ್ಷೇತ್ರದ ಮುಖಂಡರ ಜತೆ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಒಕ್ಕಲಿಗರ ಹೆಸರು ಪ್ರಸ್ತಾಪ ಮಾಡಿಲ್ಲ. ಒಕ್ಕಲಿಗರನ್ನು ಉಳಿಸಬೇಕು ಎಂದು ನಾನು ಹೇಳಿಲ್ಲ. ಆಗ ಬೆಳಸಬೇಕಾದರೆ, ಜಾತಿ ಹೆಸರು ನೆನಪಾಗಲಿಲ್ಲ. ಈಗ ಸೋಲಿಸಲು ಜಾತಿ ಹೆಸರು ನೆನಪಾಗುತ್ತಿದೆ. ಕ್ಷೇತ್ರದ ಜನ ಎಲ್ಲವನ್ನೂ ನೋಡುತ್ತಿದ್ದಾರೆ ಎಂದರು.

ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಶಿವಕುಮಾರ್ ಜಾತಿ ರಾಜಕಾರಣ ಆರಂಭಿಸಿದ್ದಾರೆ. ಹಿಂದೆ ಜಾತಿ ಮೇಲೆ ದಬ್ಬಾಳಿಕೆಯಾದಾಗ ಏಕೆ ಕ್ರಮ ತೆಗೆದುಕೊಳ್ಳಲಿಲ್ಲ. ಈಗ ಜಾತಿಯವರೆಲ್ಲ ಒಂದಾಗಬೇಕು. ನಮ್ಮವರಿಗೆ ತೊಂದರೆ ಕೊಡುತ್ತಾರೆ ಎನ್ನುವುದೆಷ್ಟು ಸರಿ? ಎಂದು ಮಾರ್ಮಿಕವಾಗಿ ಪ್ರಶ್ನಿಸಿದರು.

ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸುವ ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗುವುದೆಂದು ಹೇಳುತ್ತಿರುವ ಶಿವಕುಮಾರ್‌ ಅವರಿಗೆ ಈಗ ಜ್ಞಾನೋದಯವಾದಂತಿದೆ. ಮೊದಲೇ ಇವೆಲ್ಲ ತಿಳಿದಿರಲಿಲ್ಲವೇ? ಇಂತಹ ವಾತಾವರಣ ಯಾವಾಗ ಸೃಷ್ಟಿಯಾಯಿತು? ಯಾರು ಬೆಂಬಲ ಕೊಡುತ್ತಾ ಬಂದರು ಎನ್ನುವುದನ್ನು ಹೇಳಬೇಕು. ಚುನಾವಣೆಗಾಗಿ ಈಗ ಮಾತನಾಡುತ್ತಿರುವ ಅವರು ಮುನಿರತ್ನ ಕಾಂಗ್ರೆಸ್‌ನಲ್ಲಿದ್ದಾಗ ಏಕೆ ತಡೆಯುವ ಪ್ರಯತ್ನ ಮಾಡಲಿಲ್ಲ ಎಂದು ಡಿಕೆಶಿಗೆ ತಿರುಗೇಟು ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.