ETV Bharat / state

ಪ್ರಚಲಿತ ವಿದ್ಯಮಾನಗಳ ಕುರಿತು ದೊಡ್ಡಗೌಡರ ಜೊತೆ ಸಿಎಂ ಚರ್ಚೆ…?

ಲೋಕಸಭೆ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದೆ. ಇದರ ನಡುವೆ ಎರಡೂ ಪಕ್ಷಗಳಲ್ಲಿ ರಾಜಕೀಯ ವಿದ್ಯಮಾನಗಳು ಗರಿಗೆದರಿದ್ದು. ಜೆಡಿಎಸ್ ನಿನ್ನೆಯಿಂದ ಸಭೆಗಳು, ಚರ್ಚೆಗಳು ನಡೆಸುತ್ತಿದ್ದರೆ, ಇದಕ್ಕೆ ಕಾಂಗ್ರೆಸ್ ಸಹ ಹೊರತಾಗಿಲ್ಲ.

ದೊಡ್ಡಗೌಡರ ಜೊತೆ ಸಿಎಂ ಚರ್ಚೆ
author img

By

Published : May 25, 2019, 4:38 PM IST

ಬೆಂಗಳೂರು: ಲೋಕಸಭೆ ಚುನಾವಣಾ ಫಲಿತಾಂಶ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟ ಸರ್ಕಾರಕ್ಕೆ ಭಾರಿ ಹೊಡೆತ ಕೊಟ್ಟಿದ್ದು, ಇದರಿಂದ ಚೇತರಿಸಿಕೊಳ್ಳಲು ಉಭಯ ನಾಯಕರು ಹರಸಾಹಸ ಪಡುತ್ತಿದ್ದಾರೆ.

ಪದ್ಮನಾಭನಗರದ ನಿವಾಸದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿದ್ದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು, ಲೋಕಸಭಾ ಚುನಾವಣಾ ಫಲಿತಾಂಶ, ಮೈತ್ರಿ ಸರ್ಕಾರಕ್ಕೆ ಎದುರಾಗಲಿರುವ ಗಂಡಾಂತರಗಳು, ನಿನ್ನೆ ಮಾಜಿ ಸಿಎಂ ಸಿದ್ದರಾಮಯ್ಯನವರ ಭೇಟಿ ವೇಳೆ ನಡೆದ ಪ್ರಚಲಿತ ರಾಜಕೀಯ ವಿದ್ಯಮಾನ, ಪಕ್ಷ ಸಂಘಟನೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಗೌಡರ ಜೊತೆ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.

ದೊಡ್ಡಗೌಡರ ಜೊತೆ ಸಿಎಂ ಚರ್ಚೆ

ಆಡಳಿತ ಪಕ್ಷದ ಶಾಸಕರನ್ನು ಸೆಳೆಯಲು ಬಿಜೆಪಿ ನಡೆಸುತ್ತಿರುವ ಯತ್ನಗಳ ಬಗ್ಗೆ ಗಂಭೀರ ಚರ್ಚೆ ನಡೆಸಿದ್ದು, ಆಪರೇಷನ್ ಕಮಲವನ್ನು ತಡೆಯುವ ಕಾರ್ಯತಂತ್ರದ ಬಗ್ಗೆಯೂ ಗಂಭೀರ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.

ಸರ್ಕಾರವನ್ನು ಉಳಿಸಿಕೊಂಡು ಮುನ್ನಡೆಸುವ ಬಗ್ಗೆ ಈಗಾಗಲೇ ಕಾಂಗ್ರೆಸ್ ನಾಯಕರು ಕುಮಾರಸ್ವಾಮಿ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಅದಕ್ಕೆ ಪೂರಕವಾಗಿ ಗೌಡರ ಮಾರ್ಗದರ್ಶನವನ್ನು ಪಡೆದಿದ್ದಾರೆ.

ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿ ಆಡಳಿತ ಪಕ್ಷದ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬಿಜೆಪಿಯ ಆಮಿಷಕ್ಕೆ ಒಳಗಾಗದಂತೆ ನೋಡಿಕೊಳ್ಳುವುದು ಆಗಲೂ ಆಪರೇಷನ್ ಕಮಲ ತಡೆಯಲು ಸಾಧ್ಯವಾಗದಿದ್ದರೆ ಪ್ರತಿತಂತ್ರ ರೂಪಿಸುವ ವಿಚಾರದ ಬಗ್ಗೆ ದೊಡ್ಡಗೌಡರ ಜೊತೆ ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ನಿನ್ನೆ ನಡೆದ ಅನೌಪಚಾರಿಕ ಸಚಿವ ಸಂಪುಟ ಸಭೆಗೂ ಮುನ್ನ ಗೌಡರನ್ನು ಮುಖ್ಯಮಂತ್ರಿ ಭೇಟಿಯಾಗಿದ್ದರು. ಜೆಡಿಎಸ್-ಕಾಂಗ್ರೆಸ್ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಸಮಾಧಾನ ಅತೃಪ್ತಿಯನ್ನುಹೋಗಲಾಡಿಸುವ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಇದಕ್ಕೂ ಮುನ್ನ ಇಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಅವರು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಜೆ.ಪಿ.ನಗರ ನಿವಾಸದಲ್ಲಿ ಭೇಟಿ ಮಾಡಿ ಪ್ರಚಲಿತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದರು.

ಜೆಡಿಎಸ್-ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ನಡೆಯುತ್ತಿರುವ ಪ್ರಯತ್ನಗಳು, ಮತ್ತೆ ಆಪರೇಷನ್ ಕಮಲದ ಯತ್ನ ಸೇರಿದಂತೆ ಹಲವು ವಿದ್ಯಮಾನಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.

ನಿನ್ನೆ ರಾತ್ರಿ ಕುಮಾರಸ್ವಾಮಿ ಅವರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ, ಸರ್ಕಾರವನ್ನು ಮುನ್ನಡೆಸುವ ಮತ್ತು ಆಡಳಿತ ಪಕ್ಷದ ಶಾಸಕರು ಪಕ್ಷಾಂತರಗೊಳ್ಳದಂತೆ ತಡೆಯುವ ಪ್ರಯತ್ನಗಳ ಸಮಾಲೋಚನೆ ಮಾಡಿದ್ದರು. ಇದರ ಬೆನ್ನಲ್ಲೇ ಹೆಚ್. ವಿಶ್ವನಾಥ್ ಭೇಟಿ ಸಂದರ್ಭದಲ್ಲಿ ಸಿದ್ದರಾಮಯ್ಯನವರೊಂದಿಗೆ ಸಮಾಲೋಚನೆ ನಡೆಸಲಾದ ವಿಚಾರಗಳ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

Intro:ಬೆಂಗಳೂರು : ಲೋಕಸಭೆ ಚುನಾವಣಾ ಫಲಿತಾಂಶ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟ ಸರ್ಕಾರಕ್ಕೆ ಭಾರಿ ಹೊಡೆತ ಕೊಟ್ಟಿದ್ದು, ಇದರಿಂದ ಚೇತರಿಸಿಕೊಳ್ಳಲು ಉಭಯ ನಾಯಕರು ಹರಸಾಹಸ ಪಡುತ್ತಿದ್ದಾರೆ. Body:ಇದರ ನಡುವೆ ಎರಡೂ ಪಕ್ಷಗಳಲ್ಲಿ ರಾಜಕೀಯ ವಿದ್ಯಮಾನಗಳು ಗರಿಗೆದರಿವೆ. ಜೆಡಿಎಸ್ ನಿನ್ನೆಯಿಂದ ಸಭೆಗಳು, ಚರ್ಚೆಗಳು ನಡೆಸುತ್ತಿದ್ದರೆ, ಇದಕ್ಕೆ ಕಾಂಗ್ರೆಸ್ ಸಹ ಹೊರತಾಗಿಲ್ಲ.
ಪದ್ಮನಾಭನಗರದ ನಿವಾಸದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿದ್ದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು, ಲೋಕಸಭಾ ಚುನಾವಣಾ ಫಲಿತಾಂಶ, ಮೈತ್ರಿ ಸರ್ಕಾರಕ್ಕೆ ಎದುರಾಗಲಿರುವ ಗಂಡಾಂತರಗಳು, ನಿನ್ನೆ ಮಾಜಿ ಸಿಎಂ ಸಿದ್ದರಾಮಯ್ಯನವರ ಭೇಟಿ ವೇಳೆ ನಡೆದ ಪ್ರಚಲಿತ ರಾಜಕೀಯ ವಿದ್ಯಾಮಾನ, ಪಕ್ಷ ಸಂಘಟನೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಗೌಡರ ಜೊತೆ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.
ಆಡಳಿತ ಪಕ್ಷದ ಶಾಸಕರನ್ನು ಸೆಳೆಯಲು ಬಿಜೆಪಿ ನಡೆಸುತ್ತಿರುವ ಯತ್ನಗಳ ಬಗ್ಗೆ ಗಂಭೀರ ಚರ್ಚೆ ನಡೆಸಿದ್ದು, ಆಪರೇಷನ್ ಕಮಲವನ್ನು ತಡೆಯುವ ಕಾರ್ಯತಂತ್ರದ ಬಗ್ಗೆಯೂ ಗಂಭೀರ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.
ಸರ್ಕಾರವನ್ನು ಉಳಿಸಿಕೊಂಡು ಮುನ್ನಡೆಸುವ ಬಗ್ಗೆ ಈಗಾಗಲೇ ಕಾಂಗ್ರೆಸ್ ನಾಯಕರು ಕುಮಾರಸ್ವಾಮಿ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಅದಕ್ಕೆ ಪೂರಕವಾಗಿ ಗೌಡರ ಮಾರ್ಗದರ್ಶನವನ್ನು ಪಡೆದಿದ್ದಾರೆ.
ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿ ಆಡಳಿತ ಪಕ್ಷದ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬಿಜೆಪಿಯ ಆಮಿಷಕ್ಕೆಒಳಗಾಗದಂತೆ ನೋಡಿಕೊಳ್ಳುವುದು ಆಗಲೂ ಆಪರೇಷನ್ ಕಮಲ ತಡೆಯಲು ಸಾಧ್ಯವಾಗದಿದ್ದರೆ ಪ್ರತಿತಂತ್ರ ರೂಪಿಸುವ ವಿಚಾರದ ಬಗ್ಗೆ ದೊಡ್ಡಗೌಡರ ಜೊತೆ ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ನಿನ್ನೆ ನಡೆದ ಅನೌಪಚಾರಿಕ ಸಚಿವ ಸಂಪುಟ ಸಭೆಗೂ ಮುನ್ನ ಗೌಡರನ್ನು ಮುಖ್ಯಮಂತ್ರಿ ಭೇಟಿಯಾಗಿದ್ದರು. ಜೆಡಿಎಸ್-ಕಾಂಗ್ರೆಸ್ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಸಮಾಧಾನ ಅತೃಪ್ತಿಯನ್ನುಹೋಗಲಾಡಿಸುವ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಇದಕ್ಕೂ ಮುನ್ನಇಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಅವರು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಜೆ.ಪಿ.ನಗರ ನಿವಾಸದಲ್ಲಿ ಭೇಟಿ ಮಾಡಿ ಪ್ರಚಲಿತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದರು.
ಜೆಡಿಎಸ್-ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ನಡೆಯುತ್ತಿರುವ ಪ್ರಯತ್ನಗಳು, ಮತ್ತೆ ಆಪರೇಷನ್ ಕಮಲದ ಯತ್ನ ಸೇರಿದಂತೆ ಹಲವು ವಿದ್ಯಮಾನಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.
ನಿನ್ನೆ ರಾತ್ರಿ ಕುಮಾರಸ್ವಾಮಿ ಅವರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ, ಸರ್ಕಾರವನ್ನು ಮುನ್ನಡೆಸುವ ಮತ್ತು ಆಡಳಿತ ಪಕ್ಷದ ಶಾಸಕರು ಪಕ್ಷಾಂತರಗೊಳ್ಳದಂತೆ ತಡೆಯುವ ಪ್ರಯತ್ನಗಳ ಸಮಾಲೋಚನೆ ಮಾಡಿದ್ದರು. ಇದರ ಬೆನ್ನಲ್ಲೇ ಹೆಚ್. ವಿಶ್ವನಾಥ್ ಭೇಟಿ ಸಂದರ್ಭದಲ್ಲಿ ಸಿದ್ದರಾಮಯ್ಯನವರೊಂದಿಗೆ ಸಮಾಲೋಚನೆ ನಡೆಸಲಾದ ವಿಚಾರಗಳ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.