ಬೆಂಗಳೂರು: ಕೋವಿಡ್ ಪರಿಸ್ಥಿತಿಯ ಬಗ್ಗೆ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಪಕ್ಷದ ಪ್ರಮುಖ ನಾಯಕರೊಂದಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮಂಗಳವಾರ ಸಂಜೆ ವಿಡಿಯೋ ಸಂವಾದ ನಡೆಸಿದರು.
ಓದಿ: ಕಾಂಗ್ರೆಸ್ ಪಕ್ಷ ಮನೆಗೆ ಮಗನೂ ಆಗಲಿಲ್ಲ, ಸ್ಮಶಾನಕ್ಕೆ ಹೆಣವೂ ಆಗಲಿಲ್ಲ: ಸಿ ಟಿ ರವಿ ಕಿಡಿ
ತಮ್ಮ ನಿವಾಸದಿಂದಲೇ ಹೆಚ್ಡಿಕೆ ವಿಡಿಯೋ ಸಂವಾದದ ಮೂಲಕ ಎರಡು ಜಿಲ್ಲೆಗಳ ಕೊರೊನಾ ಸ್ಥಿತಿಗತಿಯ ಕುರಿತು ವಿವರ ಪಡೆದರು. ಚಿಂತಾಮಣಿ ಶಾಸಕ ಕೃಷ್ಣಾರೆಡ್ಡಿ ಸೇರಿದಂತೆ ವಿಧಾನಪರಿಷತ್ ಸದಸ್ಯರು ಹಾಗೂ ಪಕ್ಷದ ಮುಖಂಡರಿಂದ ಜಿಲ್ಲೆ ಹಾಗೂ ತಾಲೂಕುಗಳಲ್ಲಿರುವ ಕೋವಿಡ್ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದರು.
ಜನರ ಸಂಕಷ್ಟಕ್ಕೆ ಸ್ಪಂದಿಸಬೇಕು, ಅವರಿಗೆ ಆತ್ಮವಿಶ್ವಾಸ ಮೂಡಿಸುವ ಕೆಲಸ ಮಾಡಬೇಕು. ಅಗತ್ಯವಿರುವ ಸವಲತ್ತುಗಳನ್ನು ಕಲ್ಪಿಸಬೇಕು ಎಂದು ಹೆಚ್ಡಿಕೆ ಸಲಹೆ ನೀಡಿದರು.
ಸೋಮವಾರ ಮಂಡ್ಯ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಕೋವಿಡ್ ಪರಿಸ್ಥಿತಿ ಬಗ್ಗೆ ಸಮಾಲೋಚನೆ ನಡೆಸಿದ ಬೆನ್ನಲ್ಲೇ, ಬೆಳಗ್ಗೆ ತುಮಕೂರು ಜಿಲ್ಲೆಯ ಪಕ್ಷದ ಶಾಸಕರು ಹಾಗೂ ಜನಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿದರು.