ETV Bharat / state

ಪಕ್ಷ ಉಳಿಸಿಕೊಳ್ಳಲು ಅನಿತಾ ಕುಮಾರಸ್ವಾಮಿ ಆಯ್ಕೆ: ಹೆಚ್​ ಡಿ ಕುಮಾರಸ್ವಾಮಿ - ಮಾಜಿ ಮುಖ್ಯಮಂತ್ರಿ

ನನ್ನ ಪತ್ನಿ ಪಕ್ಷ ಉಳಿಸಿಕೊಳ್ಳಲು ಚುನಾವಣೆ ನಿಂತರು ಅನ್ನೋದು ಬಿಟ್ಟರೆ ಬೇರೆ ಯಾವ ಉದ್ದೇಶವೂ ಇರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಜೊತೆಗೆ ಇನ್ನೆರಡು ದಿನಗಳಲ್ಲಿ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

jds
ಹೆಚ್​ ಡಿ ಕುಮಾರಸ್ವಾಮಿ
author img

By

Published : Apr 4, 2023, 12:27 PM IST

ಬೆಂಗಳೂರು : ನಮ್ಮ ಕುಟುಂಬದಲ್ಲಿ ಟಿಕೆಟ್​ಗಾಗಿ ಸೊಸೆ ಹೊಡೆದಾಟ ಏನೂ ಇಲ್ಲ, ಇವೆಲ್ಲಾ ಷಡ್ಯಂತ್ರ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್​ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಪಡಿಸಿದ್ದಾರೆ. ಜೆ ಪಿ ನಗರದ ತಮ್ಮ ನಿವಾಸದ ಬಳಿ ಮಾಧ್ಯಮದವರಿಗೆ ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನನ್ನ ಪತ್ನಿ ಪಕ್ಷ ಉಳಿಸಿಕೊಳ್ಳಲು ಚುನಾವಣೆ ನಿಂತರು ಅನ್ನೋದು ಬಿಟ್ಟರೆ ಬೇರೆ ಯಾವ ಉದ್ದೇಶವೂ ಇರಲಿಲ್ಲ. ಈಗ ಇದನ್ನು ಹಾಸನ ಅಭ್ಯರ್ಥಿ ಆಯ್ಕೆಗೂ ಹೊಂದಿಸಿ ಚರ್ಚೆ ಮಾಡುವುದು ಬೇಡ ಎಂದರು.

ಹಾಸನದಲ್ಲಿ ಭವಾನಿ ರೇವಣ್ಣ ಟಿಕೆಟ್ ಬೇಡಿಕೆ ವಿಚಾರ: ಅನಿತಾ ಕುಮಾರಸ್ವಾಮಿಗೂ ಟಿಕೆಟ್ ನೀಡಬೇಕು ಎಂಬ ಚರ್ಚೆ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಹೆಚ್ ಡಿ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಅವರನ್ನು ಈ ವಿಚಾರದ ನಡುವೆ ಎಳೆದು ತರಬೇಡಿ. ಅನಿತಾ ಅವರಿಗೆ ರಾಜಕೀಯ ಮಾಡಿ ಸಾಧಿಸುವುದು ಏನೂ ಇಲ್ಲ. ಅವರನ್ನು ಹಿಂದೆ ಶಾಸಕ ಸ್ಥಾನಕ್ಕೆ ನಿಲ್ಲಿಸಿದ್ದು ಪಕ್ಷ ಉಳಿಸಿಕೊಳ್ಳೋಕೆ. ನಮ್ಮ ಅಭ್ಯರ್ಥಿಗಳು ಕೈ ಕೊಟ್ಟು ಹೋದಾಗ ಪಕ್ಷ ಉಳಿಸಿಕೊಳ್ಳಲು ಅವರನ್ನು ಆಯ್ಕೆ ಮಾಡಿದ್ದೆವು. ಅವರನ್ನು ನಾನು ರಾಜಕೀಯವಾಗಿ ದುರುಪಯೋಗ ಮಾಡಿಕೊಂಡೆ ಅಂತ ಜನ ಮಾತಾಡಿಕೊಂಡರು. ಈ ಬಾರಿ ಚುನಾವಣೆ ಮೇಲೆ ಅನಿತಾ ಕುಮಾರಸ್ವಾಮಿಗೆ ಯಾವುದೇ ಆಸಕ್ತಿ ಇಲ್ಲ ಎಂದು ಸ್ಪಷ್ಟಪಡಿಸಿದ ಹೆಚ್​ ಡಿಕೆ, ಹಾಸನದ ರಾಜಕೀಯವೇ ಬೇರೆ, ಮಂಡ್ಯದ ರಾಜಕೀಯವೇ ಬೇರೆ. ಇವೆರಡನ್ನೂ ಒಟ್ಟಿಗೆ ಮಾಡಿ ನೋಡುವುದು ಬೇಡ ಎಂದರು.

ಇದನ್ನೂ ಓದಿ: ಕೆಆರ್​ಪಿಪಿ ಪಕ್ಷದ ಪ್ರಣಾಳಿಕೆಯನ್ನು ಒಪ್ಪುವ ಪಕ್ಷಕ್ಕೆ ನಮ್ಮ ಬೆಂಬಲ: ಗಾಲಿ ಜನಾರ್ದನ್ ರೆಡ್ಡಿ

ಎರಡು ದಿನಗಳಲ್ಲಿ ಎರಡನೇ ಪಟ್ಟಿ : ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಇನ್ನೆರಡು ದಿನಗಳಲ್ಲಿ ಪ್ರಕಟ ಮಾಡುತ್ತೇನೆ. ಕೆಲವೊಂದು ಕೆಲಸ ಕಾರ್ಯಗಳ‌ ನಿಮಿತ್ತ ಪಟ್ಟಿ ಬಿಡುಗಡೆ ಆಗುತ್ತಿದೆ. ಎಲ್ಲಾ ಅಭ್ಯರ್ಥಿಗಳ ವಿಚಾರದಲ್ಲೂ ಚರ್ಚಿಸಿ ಫೈನಲ್ ಮಾಡಿದ್ದೇನೆ. ಇನ್ನೆರಡು ದಿನಗಳಲ್ಲಿ ಪಟ್ಟಿ ಬಿಡುಗಡೆ ಮಾಡುತ್ತೇನೆ ಎಂದು ಅವರು ಮಾಹಿತಿ ನೀಡಿದರು.

ನಾನು ಕಿಂಗ್ ಆಗೋದನ್ನು ತಪ್ಪಿಸೋಕೆ‌ ಸಾಧ್ಯ ಇಲ್ಲ- ಹೆಚ್​ಡಿಕೆ: ಕಾಂಗ್ರೆಸ್​ನಲ್ಲಿ ಸಿಎಂ ಬಯಕೆ ವ್ಯಕ್ತಪಡಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯಗೆ ತಿರುಗೇಟು ಕೊಟ್ಟ ಕುಮಾರಸ್ವಾಮಿ, ನಾನು ಕಿಂಗ್ ಆಗೋದನ್ನು ಯಾರಿಂದಲೂ ತಪ್ಪಿಸೋಕೆ‌ ಸಾಧ್ಯ ಇಲ್ಲ. ಈ ಬಾರಿ 100 - 120 ಸೀಟ್ ನಾನು ತೆಗೆದುಕೊಳ್ಳುತ್ತೇನೆ. ಕಾಂಗ್ರೆಸ್ - ಬಿಜೆಪಿ ಎರಡೂ ಕೂಡ 60-70 ಸೀಟ್ ತಲುಪಲ್ಲ. ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿಗಳ ಕೋಟಾ ದೊಡ್ಡದಿದೆ. ಸಿದ್ದರಾಮಯ್ಯ ನಾನೇ ಸಿಎಂ ಆಗುತ್ತೀನಿ ಅಂತ ಅಂದುಕೊಂಡಿದ್ದಾರೆ. ಆದರೆ ಯಾವ ಕಾರಣಕ್ಕೂ ಅವರಿಗೆ ಅಷ್ಟು ನಂಬರ್ಸ್ ಬರಲ್ಲ. ಕಾಂಗ್ರೆಸ್ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರಲ್ಲ. ಅಂತಿಮವಾಗಿ ಜನ ತೀರ್ಮಾನ ಮಾಡಬೇಕಲ್ಲಾ ಎಂದು ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: ಏಪ್ರಿಲ್​ 8 ರಂದು ಸಂಸದೀಯ ಮಂಡಳಿ ಸಭೆಯಲ್ಲಿ ಪಟ್ಟಿ ಅಂತಿಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.