ETV Bharat / state

ಎಕ್ಸ್​ಪ್ರೆಸ್ ಹೆದ್ದಾರಿಯೋ, ಎಕ್ಸ್​ಪ್ರೆಸ್ ಹೆಮ್ಮಾರಿಯೋ?: ಎಲ್ಲಾ ಕಾಮಗಾರಿ ಮುಗಿಯುವ ತನಕ ಟೋಲ್ ಕಟ್ಟಬೇಡಿ ಎಂದ ಹೆಚ್​ಡಿಕೆ - express way problems

ಬೆಂಗಳೂರು-ಮೈಸೂರು ಹೆದ್ದಾರಿ ಅವೈಜ್ಞಾನಿಕವಾಗಿ ನಿರ್ಮಾಣಗೊಂಡಿದೆ. ಈ ಎಕ್ಸ್​ಪ್ರೆಸ್ ಹೆಮ್ಮಾರಿ ಈಗ ಜನರ ಪಾಲಿಗೆ ಸಂಕಷ್ಟಗಳ ಸರಮಾಲೆಯನ್ನೇ ಸೃಷ್ಟಿ ಮಾಡುತ್ತಿದೆ ಎಂದು ಹೆಚ್​ಡಿಕೆ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.

hdk-said-not-to-pay-toll-until-all-the-work-is-completed
ಎಕ್ಸ್​ಪ್ರೆಸ್ ಹೆದ್ದಾರಿಯೋ, ಎಕ್ಸ್​ಪ್ರೆಸ್ ಹೆಮ್ಮಾರಿಯೋ?: ಎಲ್ಲಾ ಕಾಮಗಾರಿ ಮುಗಿಯುವ ತನಕ ಟೋಲ್ ಕಟ್ಟಬೇಡಿ ಎಂದ ಹೆಚ್​ಡಿಕೆ
author img

By

Published : Mar 18, 2023, 9:47 PM IST

ಬೆಂಗಳೂರು: ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆ ಮಾಡಿದ ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್ ವೇ ಹೆದ್ದಾರಿಯ ಸರ್ವೀಸ್ ರಸ್ತೆ ನಿರ್ಮಾಣ ಸೇರಿ ಎಲ್ಲಾ ಬಾಕಿ ಕಾಮಗಾರಿಗಳು ಮುಗಿಯುವ ತನಕ ಟೋಲ್ ಸಂಗ್ರಹ ಮಾಡಬಾರದು ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು ‘‘ಎಕ್ಸ್​ಪ್ರೆಸ್ ಹೆಮ್ಮಾರಿ’’ ಎಂಬ ಹ್ಯಾಷ್ ಟ್ಯಾಗ್ ಹಾಕಿರುವ ಅವರು, ಅಂಡರ್ ಪಾಸ್​ಗಳಲ್ಲಿ ನೀರು ನಿಲ್ಲದಂತೆ ಮಾಡಬೇಕು ಹಾಗೂ ಇಡೀ ರಸ್ತೆಯ ಕಾಮಗಾರಿಗಳು ಮುಗಿಯುವ ತನಕ ಜನರು ಕೂಡ ಟೋಲ್ ಕಟ್ಟುವ ಅಗತ್ಯ ಇಲ್ಲ ಎಂದು ಅವರು ಹೇಳಿದ್ದಾರೆ. ಕಳೆದ ವರ್ಷ ಸುರಿದ ಮಹಾಮಳೆಗೆ ಕೊಚ್ಚಿ ಹೋಗಿದ್ದ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ, ಬೆಳಗಿನ ಜಾವದ ಸಣ್ಣ ಮಳೆಗೂ ತತ್ತರಿಸಿ ಹೋಗಿದೆ.

  • ಕಳೆದ ವರ್ಷದ ಮಹಾಮಳೆಗೆ ಕೊಚ್ಚಿ ಹೋಗಿದ್ದ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ, ಬೆಳಗಿನಜಾವದ ಸಣ್ಣಮಳೆಗೂ ತತ್ತರಿಸಿದೆ. ಅವೈಜ್ಞಾನಿಕವಾಗಿ ನಿರ್ಮಾಣಗೊಂಡ ಈ ಹೆದ್ದಾರಿ ಈಗ ಜನರ ಪಾಲಿಗೆ ಸಂಕಷ್ಟಗಳ ಸರಮಾಲೆಯನ್ನೇ ಸೃಷ್ಟಿಸುತ್ತಿದೆ. ಇದು ಎಕ್ಸ್ ಪ್ರೆಸ್ ಹೆದ್ದಾರಿಯೋ, ಎಕ್ಸ್ ಪ್ರೆಸ್ ಹೆಮ್ಮಾರಿಯೋ? 1/3#ಎಕ್ಸ್_ಪ್ರೆಸ್_ಹೆಮ್ಮಾರಿ pic.twitter.com/VRZdPoTxw3

    — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 18, 2023 " class="align-text-top noRightClick twitterSection" data=" ">

ಅವೈಜ್ಞಾನಿಕವಾಗಿ ನಿರ್ಮಾಣಗೊಂಡ ಈ ಎಕ್ಸ್​ಪ್ರೆಸ್ ಹೆಮ್ಮಾರಿ ಈಗ ಜನರ ಪಾಲಿಗೆ ಸಂಕಷ್ಟಗಳ ಸರಮಾಲೆಯನ್ನೇ ಸೃಷ್ಟಿ ಮಾಡುತ್ತಿದೆ. ಇದು ಎಕ್ಸ್​​ಪ್ರೆಸ್ ಹೆದ್ದಾರಿಯೋ, ಎಕ್ಸ್​​ಪ್ರೆಸ್ ಹೆಮ್ಮಾರಿಯೋ? ಎಂದು ಹೆಚ್​ಡಿಕೆ ಕಿಡಿಕಾರಿದ್ದಾರೆ. ಸಣ್ಣ ಮಳೆಯಿಂದಲೇ ಹೆದ್ದಾರಿಯ ಅಂಡರ್ ಪಾಸ್​ಗಳು ಜಲಾವೃತವಾಗಿವೆ. ವಾಹನಗಳು ಸಿಕ್ಕಸಿಕ್ಕಲ್ಲಿ ನೀರಿನಲ್ಲಿ ಮುಳುಗಿವೆ. ಸರಣಿ ಅಪಘಾತಗಳಾಗಿ ವಾಹನ ಸವಾರರು ಹೈರಾಣಾಗಿದ್ದಾರೆ.

ಅವೈಜ್ಞಾನಿಕ ಕಾಮಗಾರಿಯಿಂದಲೇ ಈ ಅವಾಂತರ ಸೃಷ್ಟಿ ಆಗಿದೆ. ಇದಕ್ಕೆ ರಾಜ್ಯ, ಕೇಂದ್ರ ಸರ್ಕಾರಗಳು, ಹೆದ್ದಾರಿ ಪ್ರಾಧಿಕಾರ ಹಾಗೂ ಗುತ್ತಿಗೆದಾರರೇ ನೇರ ಹೊಣೆ ಎಂದು ಹೇಳಿದ್ದಾರೆ.
ಇವರು ಮಾಡಿದ ಪಾಪಕ್ಕೆ ಜನರು ನೋಯುವಂತಾಗಿದೆ. ತಕ್ಷಣವೇ ಟೋಲ್ ಸಂಗ್ರಹ ನಿಲ್ಲಿಸಬೇಕು, ಸರ್ವೀಸ್ ರಸ್ತೆ ನಿರ್ಮಾಣ ಸೇರಿ ಬಾಕಿ ಬಿದ್ದಿರುವ ಎಲ್ಲಾ ಕಾಮಗಾರಿಗಳನ್ನು ಕೂಡಲೇ ಮುಗಿಸಬೇಕು. ಅದುವರೆಗೂ ಟೋಲ್ ಸಂಗ್ರಹ ಮಾಡಬಾರದು. ಜನರೂ ಟೋಲ್ ಕಟ್ಟುವ ಅವಶ್ಯಕತೆ ಇಲ್ಲ ಎಂದು ಅವರು ಜನರಿಗೆ ತಿಳಿಸಿದ್ದಾರೆ.

ಇದ್ನನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಗೆ ಎಫ್‌ಕೆಸಿಸಿಐ ಮೆಚ್ಚುಗೆ.. ಟೋಲ್ ಪಾವತಿಗೆ ಕಳವಳ

ಮೈಸೂರು- ಬೆಂಗಳೂರು ದಶಪಥ ಬಗೆಗಿನ ಟೀಕೆಗೆ ಸಿಎಂ ಬೊಮ್ಮಾಯಿ ಸ್ಪಷ್ಟನೆ: ರಾಷ್ಟ್ರೀಯ ಹೆದ್ದಾರಿ ಸಂಬಂಧಿತ ಪ್ರಶ್ನೆಗೆ ಚಾಮರಾಜನಗರದಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಮೈಸೂರು ಎಕ್ಸ್​ಪ್ರೆಸ್ ವೇ ಇಡೀ ದೇಶವೇ ಹೆಮ್ಮೆ ಪಡಬೇಕಾದ ಕಾಮಗಾರಿ, ಇಡೀ ದೇಶವೇ ಮೈಸೂರಿಗೆ ಕನೆಕ್ಟ್ ಆಗಲಿದ್ದು, ಇಂಥ ಮಹತ್ವದ ಕೆಲಸಗಳಿಗೆ ಪ್ರಧಾನಿ ಮೋದಿ ಅವರನ್ನು ಕರೆಸದೇ ಬೇರೆ ಯಾವುದಕ್ಕೆ ಕರೆಸಬೇಕು? ಮೊದಲ ಮಳೆ ಬಂದ ಬಳಿಕ ಸಣ್ಣಪುಟ್ಟ ಸಮಸ್ಯೆ ಆಗಲಿದ್ದು, ಶೀಘ್ರವೇ ಎಲ್ಲ ಸಮಸ್ಯೆ ನಿವಾರಣೆ ಆಗಲಿದೆ, ಅಲ್ಲಲ್ಲಿ ಆಗಿರುವ ಎಲ್ಲ ಗೊಂದಲಗಳನ್ನು ಬಗೆಹರಿಸಲಾಗುವುದು ಎಂದು ಸಿಎಂ ಇದೇ ವೇಳೆ ಭರವಸೆ ನೀಡಿದ್ದಾರೆ. ಇದೇ ವೇಳೆ ವಿಪಕ್ಷಗಳ ಟೀಕೆಗೂ ಸಿಎಂ ತಿರುಗೇಟು ಕೊಟ್ಟಿದ್ದಾರೆ.

ಇದನ್ನೂ ಓದಿ: ಮೂರನೆಯ ಹಂತದಲ್ಲಿ ನಾಲ್ಕು ಹೊಸ ಮೆಟ್ರೋ ಕಾರಿಡಾರ್‌ ನಿರ್ಮಾಣಕ್ಕೆ ಮುಂದಾದ ನಮ್ಮ ಮೆಟ್ರೋ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.