ETV Bharat / state

ಸಚಿವ ಸ್ಥಾನ ಸಿಕ್ಕಿರುವುದು ಸನ್ಮಾನ ಸ್ವೀಕರಿಸಲು ಅಲ್ಲ, ಜನ ಸೇವೆ ಮಾಡಲು: ಹೆಚ್​ಡಿಕೆ - ನೂತನ ಸಚಿವರು

ಸಿಎಂ ಬಸವರಾಜ ಬೊಮ್ಮಾಯಿಯವರ ಹೊಸ ಸಂಪುಟ ಸಚಿವರ ವಿರುದ್ಧ ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ಟೀಕಿಸಿದ್ದಾರೆ.

New Cabinet Ministers
ಕುಮಾರಸ್ವಾಮಿ ಟ್ವೀಟ್
author img

By

Published : Aug 9, 2021, 11:24 AM IST

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸದಾಶಯದಿಂದ ಜವಾಬ್ದಾರಿ ನೀಡಿದರೆ, ಸಚಿವರು ಜಿಲ್ಲೆಗಳಲ್ಲಿ ವಿಜಯೋತ್ಸವ ಆಚರಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

  • ಸಿಎಂ@BSBommai ತಮ್ಮ ಸಂಪುಟದ ಸಚಿವರಿಗೆ ತಾತ್ಕಾಲಿಕವಾಗಿ ಒಂದೊಂದು ಜಿಲ್ಲೆಯ ಉಸ್ತುವಾರಿ ನೀಡಿ, ಅಲ್ಲಿನ ಪ್ರವಾಹ ಪರಿಸ್ಥಿತಿ, ಕೋವಿಡ್‌ ಸ್ಥಿತಿಗಳ ನಿರ್ವಹಣೆ ಮಾಡುವಂತೆ ಸೂಚಿಸಿದ್ದರು. ಸಿಎಂ ಬೊಮ್ಮಾಯಿ ಅವರು ಸದಾಶಯದಿಂದ ಜವಾಬ್ದಾರಿ ನೀಡಿದರೆ, ಜವಾಬ್ದಾರಿ ಮರೆತ ಸಚಿವರು ತಮಗೆ ನಿಗದಿಪಡಿಸಿದ ಜಿಲ್ಲೆಯಲ್ಲಿ ವಿಜಯೋತ್ಸವ ಆಚರಿಸಿದ್ದಾರೆ.1/4

    — H D Kumaraswamy (@hd_kumaraswamy) August 9, 2021 " class="align-text-top noRightClick twitterSection" data=" ">

ಬಿಜೆಪಿ ತನ್ನ ಇಮೇಜ್‌ ಬದಲಿಸಿಕೊಳ್ಳಲು ಮುಖ್ಯಮಂತ್ರಿಯನ್ನೇನೋ ಬದಲಿಸಿತು. ಆದರೆ, ಹಿಂದಿನ ಸರ್ಕಾರದ ಮಂತ್ರಿ ಮಂಡಲವನ್ನೇ ಬೊಮ್ಮಾಯಿ ಅವರಿಗೂ ನೀಡಿತು. ಅದೇ ಹಳೆ ಸಚಿವರು ಹೊಸದಾಗಿ ಪ್ರಮಾಣ ಸ್ವೀಕರಿಸಿ, ತಮ್ಮ ಅದೇ ಹಳೆ ಚಾಳಿಯನ್ನು ಮುಂದುವರಿಸಿದ್ದಾರೆ. ಇವರಿಗೆ ಜನರ ಸಂಕಷ್ಟ ಪರಿಹರವಾಗಬೇಕಿಲ್ಲ. ವಿಜಯೋತ್ಸವಗಳು ಬೇಕು, ಸನ್ಮಾನಗಳಾಗಬೇಕು ಎಂದಿದ್ದಾರೆ.

ಇದನ್ನೂ ಓದಿ: ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಹೊಸ ಸ್ಪರ್ಶ: ಸಚಿವ ಸುನಿಲ್ ಕುಮಾರ್

ಹೊಸ ಸಚಿವರು ತಮಗೆ ನಿಗದಿಪಡಿಸಿದ ಜಿಲ್ಲೆಗಳಿಗೆ ಹೋದಾಗ ಮಾಡಿಸಿಕೊಂಡ ಸನ್ಮಾನಗಳು, ವಿಜಯೋತ್ಸವ, ಅದ್ದೂರಿ ಸ್ವಾಗತ ಕಂಡು ಜನ ನಾಚಿಕೆಪಟ್ಟಿದ್ದಾರೆ, ಮರುಗಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಬದಲಾದರೂ, ಸರ್ಕಾರ ಮತ್ತು ಅದರ ವರ್ತನೆ ಬದಲಾದ ಭಾವನೆ ಯಾರಲ್ಲಿಯೂ ಕಾಣುತ್ತಿಲ್ಲ. ಸಿಎಂ ಬದಲಾದರೆ ಸಾಲದು, ಸಿಎಂ ರೀತಿಯೇ ಸಚಿವರೂ ನಡೆದುಕೊಳ್ಳಬೇಕು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕೋವಿಡ್‌ ಪರಿಸ್ಥಿತಿ, ನೆರೆ ಆತಂಕಗಳು ದೂರವಾಗಿಲ್ಲ. 3ನೇ ಅಲೆಯೊಂದು ಬಾಗಿಲ ಬಳಿಯಲ್ಲೇ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಅದಕ್ಕೆ ಪೂರಕವೆಂಬಂತೆ ಕೋವಿಡ್‌ ಪ್ರಕರಣಗಳೂ ಏರುತ್ತಿವೆ. ಹಾಗಾಗಿ, ಸಚಿವವರಿಗೆ ಸ್ಥಾನ ಸಿಕ್ಕಿರಿವುದು ಸನ್ಮಾನ ಸ್ವೀಕರಿಸಲಲ್ಲ, ಸೇವೆ ನೀಡಲು ಎಂಬುವುದು ಈ ಮಂತ್ರಿ ಕೂಟಕ್ಕೆ ಅರಿವಾಗಲಿ ಎಂದು ಹೆಚ್​ಡಿಕೆ ಹೇಳಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.