ETV Bharat / state

ಕೋವಿಡ್​​ ಕಾಲದಲ್ಲಿ ರೈತರನ್ನು ಅಲ್ಲಿ ಬಿಡುವುದು ಆರೋಗ್ಯದ ದೃಷ್ಟಿಯಿಂದ ಸೂಕ್ತವಲ್ಲ: ಕೇಂದ್ರಕ್ಕೆ ಹೆಚ್​ಡಿಕೆ ಸಲಹೆ - Haryana farmers protesting

ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ಸ್ಥಿತಿಗತಿ ಕಂಡು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್​ ಮಾಡಿದ್ದಾರೆ. ನೀವು ತಂದ ಕಾನೂನು ಅರ್ಥವಾಗದಿದ್ದರೆ ಅವರಿಗೆ ಸರಿಯಾಗಿ ಅರ್ಥ ಮಾಡಿಸಿ ಎಂದಿದ್ದಾರೆ.

HDK tweet about farmers protest
ಮಾಜಿ ಸಿಎಂ ಕುಮಾರಸ್ವಾಮಿ
author img

By

Published : Nov 30, 2020, 6:39 PM IST

ಬೆಂಗಳೂರು: ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಹೊರವಲಯದಲ್ಲಿ ರೈತರು ನಡೆಸುತ್ತಿರುವ ಹೋರಾಟ 5ನೇ ದಿನ ತಲುಪಿದೆ. ರೈತರ ಹಿತಕ್ಕಾಗಿ ಕಾಯ್ದೆ ತಂದಿರುವುದಾಗಿ ಹೇಳಿರುವ ಕೇಂದ್ರ ಸರ್ಕಾರ, ಕೂಡಲೇ ಪ್ರತಿಭಟನಾಕಾರರೊಂದಿಗೆ ಮಾತನಾಡಿ ಅವರ ಅನುಮಾನಗಳನ್ನು ನಿವಾರಿಸುವ ಪ್ರಯತ್ನ ಮಾಡುವುದು ಸೂಕ್ತ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

HDK tweet about farmers protest
ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್​

ಈ ಕುರಿತು ಟ್ವೀಟ್ ಮಾಡಿರುವ ಅವರು, ಅನುಮಾನಗಳ ಬಗ್ಗೆ ಸ್ಪಷ್ಟತೆ ನೀಡದಿದ್ದರೆ ರೈತರು, ಜನರ ಅನುಮಾನಗಳು ಬೆಳೆಯುತ್ತಾ ಹೋಗುತ್ತದೆ ಎಂದಿದ್ದಾರೆ. ರೈತರ ಸಮಸ್ಯೆ ಆಲಿಸಬೇಕಿದ್ದರೆ ಬುರಾಡಿ ಉದ್ಯಾನಕ್ಕೆ ಬರಬೇಕು ಎಂದು ಕೇಂದ್ರ ರೈತರಲ್ಲಿ ಮನವಿ ಮಾಡಿದೆ. ಆದರೆ ಇದನ್ನು ರೈತರು ಒಪ್ಪಿಲ್ಲ. ಇದು ತಮಗೆ ಒಡ್ಡಿರುವ ಷರತ್ತು ಎಂದು ರೈತರು ಭಾವಿಸಿದ್ದಾರೆ. ಅದ್ದರಿಂದ ಈ ಷರತ್ತು ಹಿಂದಕ್ಕೆ ಪಡೆಯುವುದೇ ಸೂಕ್ತ. ರೈತರು ಇರುವಲ್ಲಿಯೇ, ಅವರು ಇಚ್ಛಿಸಿದಲ್ಲಿಯೇ ಸಮಸ್ಯೆಗಳನ್ನು ಆಲಿಸಿ ಎಂದು ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಕೈ ಮುಗಿಯುತ್ತೇನೆ, ಹೆಚ್​ಡಿಕೆ ಬಗ್ಗೆ ನನ್ನನ್ನು ಕೇಳಬೇಡಿ: ಮಾಧುಸ್ವಾಮಿ

ಐದು ದಿನಗಳಿಂದ ರೈತರು ಸಿಂಗು ಗಡಿಯಲ್ಲೇ ಧರಣಿ ಕುಳಿತಿದ್ದಾರೆ. ಇದು ಚಳಿಗಾಲ. ದೆಹಲಿ ಚಳಿ ಯಾರಿಗಾದರೂ ಮೈ ನಡುಗಿಸುತ್ತದೆ. ಕೋವಿಡ್‌ ಕಾಲದಲ್ಲಿ ರೈತರನ್ನು ಹಾಗೆ ಅಲ್ಲಿ ಬಿಡುವುದು ಆರೋಗ್ಯದ ದೃಷ್ಟಿಯಿಂದ ಸೂಕ್ತವಲ್ಲ. ಅಲ್ಲಿರುವ ಯಾರಿಗಾದರೂ ಅಪಾಯವಾದರೆ ಅದಕ್ಕೆ ಕೇಂದ್ರ ಸರ್ಕಾರ ಹೊಣೆಯಾಗಬೇಕಾಗುತ್ತದೆ. ಹೀಗಾಗಿ ಕೂಡಲೇ ಮನವಿ ಆಲಿಸುವುದು ಸಮಂಜಸ ಎಂದು ಹೇಳಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.