ಬೆಂಗಳೂರು: ವೈದ್ಯ ಶಿಕ್ಷಣವನ್ನು ಹಳ್ಳಿ ವಿದ್ಯಾರ್ಥಿಗಳಿಗೆ 'ನೀಟಾಗಿ' ತಪ್ಪಿಸುವ ಹುನ್ನಾರ ನಡೆಯುತ್ತಿದೆಯಾ? ಎನ್ನುವ ಅನುಮಾನ ಕಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಶಂಕೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಸಮಾನ ಶಿಕ್ಷಣ, ಸಮಾನ ಅವಕಾಶಗಳು ಎಂಬ ಸಂವಿಧಾನದ ಆಶಯವನ್ನು ಕೇಂದ್ರ ಸರ್ಕಾರ ಗಾಳಿಗೆ ತೂರಿದೆ. ನಾಲ್ಕು ತಿಂಗಳಿನಿಂದ ವೈದ್ಯ ಸೀಟುಗಳು ಹಂಚಿಕೆಯಾಗಿಲ್ಲ. ಪರಿಣಾಮ ಎಂಜಿನಿಯರಿಂಗ್ ಕೌನ್ಸೆಲಿಂಗ್ ಕೂಡ ತಡವಾಗಿ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ. ಸಮರ್ಪಕ ನಿರ್ವಹಣೆ, ಅದಕ್ಷತೆಗೆ ಹಿಡಿದ ಕನ್ನಡಿ ಇದು ಎಂದು ಟೀಕಿಸಿದ್ದಾರೆ.
ಉನ್ನತ ಶಿಕ್ಷಣ ಉಳ್ಳವರಿಗೆ ಮಾತ್ರವೇ? ಇದೇ ಸತ್ಯ ಎನ್ನುವಂತೆ ಕೇಂದ್ರ ಸರ್ಕಾರ ನಡೆದುಕೊಳ್ಳುತ್ತಿದೆ. ಗುಣಮಟ್ಟದ ಕೋಚಿಂಗ್ ಪಡೆಯಲು ಶಕ್ತಿ ಇಲ್ಲದ, ಆರ್ಥಿಕವಾಗಿ ದುರ್ಬಲರಾದ ಗ್ರಾಮೀಣ ವಿದ್ಯಾರ್ಥಿಗಳಿಗೆ ವೈದ್ಯ ಶಿಕ್ಷಣವನ್ನು ಶಾಶ್ವತವಾಗಿ ತಪ್ಪಿಸುವ ದುರಾಲೋಚನೆ ಈ ವಿಳಂಬ ದ್ರೋಹದ ಹಿಂದೆ ಇದೆಯಾ? ಎಂದು ಹೆಚ್ಡಿಕೆ ಪ್ರಶ್ನಿಸಿದ್ದಾರೆ.
-
ನೀಟ್ ಅವ್ಯವಸ್ಥೆ ಬಗ್ಗೆ ರಾಜ್ಯ ಸರಕಾರವು ನೆರೆ ರಾಜ್ಯಗಳಂತೆ ದನಿಯೆತ್ತಬೇಕು. ಹಾಗೆ ಮಾಡದಿದ್ದರೆ, ಖಾಸಗಿ ವೈದ್ಯ ಕಾಲೇಜುಗಳ ಜತೆ ಸರಕಾರ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ಜನರು ಭಾವಿಸಬೇಕಾಗುತ್ತದೆ. ಉನ್ನತ ಶಿಕ್ಷಣ ಎಲ್ಲರ ಹಕ್ಕು. 6/6#ನೀಟ್
— H D Kumaraswamy (@hd_kumaraswamy) December 20, 2021 " class="align-text-top noRightClick twitterSection" data="
">ನೀಟ್ ಅವ್ಯವಸ್ಥೆ ಬಗ್ಗೆ ರಾಜ್ಯ ಸರಕಾರವು ನೆರೆ ರಾಜ್ಯಗಳಂತೆ ದನಿಯೆತ್ತಬೇಕು. ಹಾಗೆ ಮಾಡದಿದ್ದರೆ, ಖಾಸಗಿ ವೈದ್ಯ ಕಾಲೇಜುಗಳ ಜತೆ ಸರಕಾರ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ಜನರು ಭಾವಿಸಬೇಕಾಗುತ್ತದೆ. ಉನ್ನತ ಶಿಕ್ಷಣ ಎಲ್ಲರ ಹಕ್ಕು. 6/6#ನೀಟ್
— H D Kumaraswamy (@hd_kumaraswamy) December 20, 2021ನೀಟ್ ಅವ್ಯವಸ್ಥೆ ಬಗ್ಗೆ ರಾಜ್ಯ ಸರಕಾರವು ನೆರೆ ರಾಜ್ಯಗಳಂತೆ ದನಿಯೆತ್ತಬೇಕು. ಹಾಗೆ ಮಾಡದಿದ್ದರೆ, ಖಾಸಗಿ ವೈದ್ಯ ಕಾಲೇಜುಗಳ ಜತೆ ಸರಕಾರ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ಜನರು ಭಾವಿಸಬೇಕಾಗುತ್ತದೆ. ಉನ್ನತ ಶಿಕ್ಷಣ ಎಲ್ಲರ ಹಕ್ಕು. 6/6#ನೀಟ್
— H D Kumaraswamy (@hd_kumaraswamy) December 20, 2021
ಇದನ್ನೂ ಓದಿ: ಮುಂದಿನ ಹೋರಾಟಕ್ಕೆ ತಂತ್ರ: ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ
ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಸರ್ಕಾರಗಳು ಅಸಹಾಯಕತೆಯ ನಾಟಕವಾಡುತ್ತಾ ವಿದ್ಯಾರ್ಥಿ-ಪೋಷಕರನ್ನು ಯಾಮಾರಿಸುತ್ತಿವೆ. ನೀಟ್ ವಿಳಂಬದಿಂದ ವೈದ್ಯ, ಎಂಜಿನಿಯರಿಂಗ್ ಸೀಟುಗಳ ಕಾಳಸಂತೆ ಬಿಕರಿಗೆ ಸರ್ಕಾರಗಳೇ ಅವಕಾಶ ಮಾಡಿಕೊಟ್ಟಂತಾಗಿದೆ. ಇದ್ಯಾವ ಸೀಮೆ ಶಿಕ್ಷಣ ನೀತಿ?. ರಾಜ್ಯ ಸರ್ಕಾರ ಕೂಡಲೇ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿ ತ್ವರಿತ ತೀರ್ಪು ನೀಡುವಂತೆ ಮನವಿ ಮಾಡುವುದು ಸೇರಿ, ಕೇಂದ್ರದ ಮೇಲೆ ಒತ್ತಡ ಹೇರಬೇಕು. ಭಾರತವನ್ನು ವಿಶ್ವಗುರು ಮಾಡುವ ಉಮೇದಿನಲ್ಲಿರುವ ಕೇಂದ್ರವು, ಮೊದಲು ಗ್ರಾಮೀಣ ವಿದ್ಯಾರ್ಥಿಗಳ ಹಿತ ಕಾಯಬೇಕು ಎಂದು ಒತ್ತಾಯಿಸಿದ್ದಾರೆ.
ನೀಟ್ ಅವ್ಯವಸ್ಥೆ ಬಗ್ಗೆ ರಾಜ್ಯ ಸರ್ಕಾರವು ನೆರೆ ರಾಜ್ಯಗಳಂತೆ ದನಿಯೆತ್ತಬೇಕು. ಹಾಗೆ ಮಾಡದಿದ್ದರೆ, ಖಾಸಗಿ ವೈದ್ಯ ಕಾಲೇಜುಗಳ ಜತೆ ಸರ್ಕಾರ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ಜನರು ಭಾವಿಸಬೇಕಾಗುತ್ತದೆ ಎಂದ ಅವರು ಉನ್ನತ ಶಿಕ್ಷಣ ಎಲ್ಲರ ಹಕ್ಕು ಎಂದು ಬರೆದಿದ್ದಾರೆ.