ETV Bharat / state

ರೈತರ ಬಗ್ಗೆ ಮೃದುವಾಗಿ ಮಾತನಾಡುತ್ತಲೇ ರೈತರ ಬೆನ್ನಿಗೆ ಬಿಜೆಪಿ ಸರ್ಕಾರ ಚೂರಿ ಹಾಕುತ್ತಿದೆ: ಹೆಚ್​​ಡಿಕೆ ಕಿಡಿ - ಬೆಂಗಳೂರು ಲೇಟೆಸ್ಟ್ ನ್ಯೂಸ್

ಬಾಯಿ ಮಾತಿನಿಂದ ರೈತರ ಬಾಳು ಬೆಳಗಲು ಸಾಧ್ಯವಿಲ್ಲ. ರೈತರ ಮತಗಳ ಮೇಲೆ ಕಣ್ಣಿಟ್ಟು ಎಷ್ಟು ದಿನ ಸುಳ್ಳಿನ ಅರಮನೆ ಕಟ್ಟುತ್ತೀರಿ? ಇನ್ನಾದರೂ ರೈತರಿಗೆ ಸಹನೀಯ ಬದುಕು ಕಟ್ಟಿಕೊಳ್ಳಲು ಅವಕಾಶ ಕೊಡಿ ಎಂದು ಹೆಚ್​ಡಿಕೆ ಆಗ್ರಹಿಸಿದ್ದಾರೆ.

h d kumaraswamy
ಹೆಚ್​ ಡಿ ಕುಮಾರಸ್ವಾಮಿ
author img

By

Published : Apr 11, 2021, 3:37 PM IST

ಬೆಂಗಳೂರು: ಅಧಿಕಾರಕ್ಕೆ ಬಂದ ಕೆಲವೇ ಗಂಟೆಗಳಲ್ಲಿ ರೈತರ ಮೇಲೆ ಗೋಲಿಬಾರ್ ನಡೆಸಿದ್ದ ಬಿಜೆಪಿ ಸರ್ಕಾರ, ರೈತರ ಬಗ್ಗೆ ಮೃದುವಾಗಿ ಮಾತಾಡುತ್ತಲೇ ರೈತರ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡುತ್ತಿದೆ. ಇದೀಗ ರಸಗೊಬ್ಬರ ದರವನ್ನು ಶೇ. 60ರಷ್ಟು ಹೆಚ್ಚಳ ಮಾಡಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

  • ಬಾಯಿ ಮಾತಿನಿಂದ ರೈತರ ಬಾಳು ಬೆಳಗಲು ಸಾಧ್ಯವಿಲ್ಲ. ರೈತರ ಮತಗಳ ಮೇಲೆ ಕಣ್ಣಿಟ್ಟು ಎಷ್ಟು ದಿನ ಸುಳ್ಳಿನ ಅರಮನೆ ಕಟ್ಟುತ್ತೀರಿ? ಇನ್ನಾದರೂ ರೈತರಿಗೆ ಸಹನೀಯ ಬದುಕು ಕಟ್ಟಿಕೊಳ್ಳಲು ಅವಕಾಶ ಕೊಡಿ. ರಸಗೊಬ್ಬರದ ಮೇಲಿನ ದರ ಹೆಚ್ಚಳ ವಾಪಸ್ ಪಡೆಯಿರಿ.
    4/4

    — H D Kumaraswamy (@hd_kumaraswamy) April 11, 2021 " class="align-text-top noRightClick twitterSection" data=" ">

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕೇಂದ್ರದ ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡರು ರಸಗೊಬ್ಬರ ಕಂಪನಿಗಳ ಪ್ರತಿನಿಧಿಗಳ ಜತೆ ಸಭೆ ನಡೆಸುವುದರಿಂದ ಈ ಸಮಸ್ಯೆ ಬಗೆಹರಿಯುವುದಿಲ್ಲ. ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಬಾರದು. ಸದಾನಂದಗೌಡರು ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಮಾತನಾಡಿ ರಸಗೊಬ್ಬರಕ್ಕಾಗಿ ನೀಡುತ್ತಿದ್ದ 1.5 ಲಕ್ಷ ಕೋಟಿಯಷ್ಟು ಸಬ್ಸಿಡಿ ಮುಂದುವರೆಸುವಂತೆ ಮನವರಿಕೆ ಮಾಡಿಕೊಡಬೇಕು. ಈಗ ಅದನ್ನು ಶೇ. 50ರಷ್ಟು ಕಡಿತ ಮಾಡಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ಕೋವಿಡ್​ ತಡೆಗೆ ನಿರ್ದಿಷ್ಟ ಕ್ರಮ ಕೈಗೊಳ್ಳಲು ತಾಂತ್ರಿಕ ಸಮಿತಿ ಸೂಚನೆ ನೀಡಿದೆ: ಸಚಿವ ಸುಧಾಕರ್​​​​

ಬಾಯಿ ಮಾತಿನಿಂದ ರೈತರ ಬಾಳು ಬೆಳಗಲು ಸಾಧ್ಯವಿಲ್ಲ. ರೈತರ ಮತಗಳ ಮೇಲೆ ಕಣ್ಣಿಟ್ಟು ಎಷ್ಟು ದಿನ ಸುಳ್ಳಿನ ಅರಮನೆ ಕಟ್ಟುತ್ತೀರಿ? ಇನ್ನಾದರೂ ರೈತರಿಗೆ ಸಹನೀಯ ಬದುಕು ಕಟ್ಟಿಕೊಳ್ಳಲು ಅವಕಾಶ ಕೊಡಿ. ರಸಗೊಬ್ಬರದ ಮೇಲಿನ ದರ ಹೆಚ್ಚಳ ವಾಪಸ್ ಪಡೆಯಿರಿ ಎಂದು ಆಗ್ರಹಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.