ಬೆಂಗಳೂರು: ಜೀವ ವೈವಿಧ್ಯ ತಾಣ ರೋರಿಚ್ ಎಸ್ಟೇಟ್ನಲ್ಲಿ ಫಿಲ್ಮ್ ಸಿಟಿ ನಿರ್ಮಿಸುವುದು ಮುಖ್ಯಮಂತ್ರಿ ಯಡಿಯೂರಪ್ಪನವರ ದ್ವೇಷ-ನಾಶ ರಾಜಕಾರಣದ ಪ್ರತೀಕವೆಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಫಿಲ್ಮ್ ಸಿಟಿಯನ್ನು ರಾಮನಗರದಲ್ಲಿ ಕಟ್ಟಬೇಕೆಂದು ನಮ್ಮ ಸರ್ಕಾರದಲ್ಲಿ ತೀರ್ಮಾನಿಸಲಾಗಿತ್ತು. ಈ ಮೂಲಕ ರಾಮನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯುವಕರಿಗೆ ಉದ್ಯೋಗ ಸೃಷ್ಟಿಸುವುದು ಯೋಜನೆಯ ಉದ್ದೇಶಗಳಲ್ಲಿ ಒಂದಾಗಿತ್ತು. ಆದರೀಗ ಅದನ್ನು ಸ್ಥಳಾಂತರಿಸುವ ನಿರ್ಧಾರದ ಮೂಲಕ ಬಿಎಸ್ವೈ ರಾಮನಗರದ ವಿಚಾರದಲ್ಲಿ ದ್ವೇಷ ರಾಜಕಾರಣ ಮಾಡುತ್ತಿದ್ದಾರೆಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.
ಬೆಂಗಳೂರು ಹೊರವಲಯದಲ್ಲಿ ಅತಿಕ್ರಮಣಕ್ಕೆ ತುತ್ತಾಗದೇ ಜೀವ ವೈವಿಧ್ಯ ಉಳಿಸಿಕೊಂಡಿರುವ ತಾಣ ರೋರಿಚ್ ಎಸ್ಟೇಟ್. ಇದು ಫಿಲ್ಮ್ ಸಿಟಿಗೆ ಸೂಕ್ತವಲ್ಲ. ಹಾಗೇನಾದರೂ ಅಲ್ಲಿ ಫಿಲ್ಮ್ ಸಿಟಿ ಕಟ್ಟಿದರೆ ಪರಿಸರ ನಾಶದ ಜತೆಗೆ ಮಾನವ-ವನ್ಯ ಮೃಗಗಳ ಸಂಘರ್ಷಕ್ಕೆ ದಾರಿ ಮಾಡಿಕೊಟ್ಟಂತಾಗುತ್ತದೆ ಎಂದು ಹೆಚ್ಡಿಕೆ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.