ETV Bharat / state

ಮುಸ್ಲಿಮರನ್ನು ಮತಗಳಾಗಿ ನೋಡುವುದು ಕಾಂಗ್ರೆಸ್‌ನ ಐತಿಹಾಸಿಕ ದುರಾಭ್ಯಾಸ: ಹೆಚ್​​ಡಿಕೆ - Ex CM HDK tweet

ಬಸವಕಲ್ಯಾಣ ಉಪಚುನಾವಣೆಗೆ ಜೆಡಿಎಸ್​ನಿಂದ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದರ ಬಗ್ಗೆ ಕಾಂಗ್ರೆಸ್ ನಾಯಕರ ಹೇಳಿಕೆಗಳಿಗೆ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ. ​

HDK Tweet against Congress
ಹೆಚ್​.ಡಿ ಕುಮಾಸ್ವಾಮಿ ಟ್ವೀಟ್
author img

By

Published : Mar 26, 2021, 10:38 PM IST

ಬೆಂಗಳೂರು : ಮಂಗಳೂರಿನಲ್ಲಿ ಸಿಎಎ ಪ್ರತಿಭಟನೆ ವೇಳೆ ಹೆಣಗಳು ಬಿದ್ದು, ಅಲ್ಪಸಂಖ್ಯಾತರು ಆತಂಕದಲ್ಲಿದ್ದಾಗ ಕಾಂಗ್ರೆಸ್‌ ನಾಯಕರು ಬಿಲ ಸೇರಿದ್ದರು. ಅಂದು ಮುಸ್ಲಿಮರ ಬೆಂಬಲಕ್ಕೆ ನಿಂತಿದ್ದು ಜೆಡಿಎಸ್‌. ಇಂದು ಬಸವಕಲ್ಯಾಣದಲ್ಲಿ ನಾವು ಮುಸ್ಲಿಂ ಅಭ್ಯರ್ಥಿಯನ್ನು ಹಾಕುತ್ತಲೇ, ಕಾಂಗ್ರೆಸ್‌ ತಾನೂ ಮುಸ್ಲಿಮರ ರಕ್ಷಕ ಎಂದು ಎದೆ ತಟ್ಟಿಕೊಂಡು ಮುಂದೆ ಬಂದಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ನಮ್ಮ ರಾಜ್ಯ, ನಮ್ಮ ನೆಲ, ನಮ್ಮ ಪಕ್ಷ, ನಮ್ಮ ಅಭ್ಯರ್ಥಿ. ಇದರಲ್ಲಿ ಜೆಡಿಎಸ್‌ ಯಾರ ಅಪ್ಪಣೆಗೆ ಕಾಯಬೇಕು? ಯಾವ ದೊಣ್ಣೆ ನಾಯಕನ ಆಜ್ಞೆ ಆಗಬೇಕು ನಮಗೆ. ಜನರಿಗೆ ಬೇಕಾದ ಅಭ್ಯರ್ಥಿಗಳನ್ನು ನಾವು ಹಾಕುತ್ತೇವೆ. ಅದರಲ್ಲಿ ನಮಗೆ ಧರ್ಮ ನಗಣ್ಯ. ಪ್ರತಿಯೊಂದರಲ್ಲೂ ಹಿಂದೂ-ಮುಸ್ಲಿಂ ಎಂದು ಹುಡುಕುವವರಿಗೆ ಜನ ಚುನಾವಣೆಯಲ್ಲಿ ತಕ್ಕ ಉತ್ತರ ಕೊಡಬೇಕು ಎಂದು ಹೇಳಿದ್ದಾರೆ.

  • ಮಂಗಳೂರಿನಲ್ಲಿ ಸಿಎಎ ಪ್ರತಿಭಟನೆ ವೇಳೆ ಹೆಣಗಳು ಬಿದ್ದು, ಅಲ್ಪಸಂಖ್ಯಾತರು ಆತಂಕದಲ್ಲಿದ್ದಾಗ ಕಾಂಗ್ರೆಸ್‌ ನಾಯಕರು ಬಿಲ ಸೇರಿದ್ದರು. ಅಂದು ಮುಸ್ಲಿಮರ ಬೆಂಬಲಕ್ಕೆ ನಿಂತಿದ್ದು ಜೆಡಿಎಸ್‌. ಇಂದು ಬಸವಕಲ್ಯಾಣದಲ್ಲಿ ನಾವು ಮುಸ್ಲಿಂ ಅಭ್ಯರ್ಥಿಯನ್ನು ಹಾಕುತ್ತಲೇ ಕಾಂಗ್ರೆಸ್‌ ತಾನು ಮುಸ್ಲಿಮರ ರಕ್ಷಕ ಎಂದು ಎದೆತಟ್ಟಿಕೊಂಡು ಮುಂದೆ ಬಂದಿದೆ.
    1/5

    — H D Kumaraswamy (@hd_kumaraswamy) March 26, 2021 " class="align-text-top noRightClick twitterSection" data=" ">

ಮುಸ್ಲಿಮರನ್ನು ಮತಗಳಾಗಿ ನೋಡುವುದು ಕಾಂಗ್ರೆಸ್‌ನ ಐತಿಹಾಸಿಕ ದುರಭ್ಯಾಸ. ಅದಕ್ಕಾಗಿಯೇ ಮುಸ್ಲಿಮರನ್ನು ಕಾಂಗ್ರೆಸ್‌ ನಮ್ಮ ಮತ ಎನ್ನುತ್ತದೆ. ನಮ್ಮವರು ಅನ್ನುವುದಿಲ್ಲ. ಕಾಂಗ್ರೆಸ್‌ನ ಇಂಥ ತಪ್ಪುಗಳಿಂದಲೇ ಬಿಜೆಪಿ ಈ ಹಂತಕ್ಕೆ ಬೆಳೆದಿದೆ. ದೇಶದಲ್ಲಿ ಕೋಮು ಭಾವನೆಗಳು ಈ ಮಟ್ಟಕ್ಕೆ ಕೆರಳಿರುವುದರ ಹಿಂದೆ ಕಾಂಗ್ರೆಸ್‌ನ ಪ್ರಮಾದಗಳಿವೆ ಎಂದಿದ್ದಾರೆ.

ಇದನ್ನೂ ಓದಿ : ಉಪಚುನಾವಣೆಗೆ ಬಸವಕಲ್ಯಾಣ ಕ್ಷೇತ್ರದಲ್ಲಿ ಮಾತ್ರ ಅಭ್ಯರ್ಥಿ ಕಣಕ್ಕೆ: ಹೆಚ್​ಡಿಕೆ

ಬಸವಕಲ್ಯಾಣದಲ್ಲಿ ಜೆಡಿಎಸ್‌, ಬಿಜೆಪಿಯೊಂದಿಗೆ ಒಳ ಒಪ್ಪಂದ ಮಾಡಿಕೊಂಡಿದೆ ಎಂದು 'ಮಹಾನ್‌ ನಾಯಕ'ರು ಹೇಳಿದ್ದಾರೆ. ಪ್ರತಿಯೊಂದಕ್ಕೂ ಒಳ ಒಪ್ಪಂದ, ಒಳಸಂಚು ಮಾಡಿದವರಿಗಷ್ಟೇ ಒಳ ಒಪ್ಪಂದದ ಕನವರಿಕೆ. ಆಪರೇಷನ್‌ ಕಮಲದಲ್ಲಿ, ಮೈತ್ರಿ ಸರ್ಕಾರ ಉರುಳಿದ್ದರಲ್ಲಿ ಅಂಥ ಒಳ ಒಪ್ಪಂದಗಳು ಈಗಾಗಲೇ ಬಯಲಾಗಿವೆ. ಜೆಡಿಎಸ್‌ಗೆ ಇಂಥ ದುರ್ಬುದ್ಧಿ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.

ನಮ್ಮ ಆಯ್ಕೆ, ನಿರ್ಧಾರಗಳ ಬಗ್ಗೆ ಮಾತನಾಡುವುದನ್ನು ಕಾಂಗ್ರೆಸ್‌ನ ಮಹಾನ್‌ ನಾಯಕರು ನಿಲ್ಲಿಸಿದರೆ ಉತ್ತಮ. ಇಲ್ಲವಾದಲ್ಲಿ ಜಾತ್ಯತೀತವಾದಿ ಮುಖವಾಡ ಧರಿಸಿರುವ ಅವರ ಕೋಮುವಾದಿ ಮುಖವನ್ನು ಬಯಲು ಮಾಡಬೇಕಾಗುತ್ತದೆ. ಶತಮಾನಗಳಿಂದ ವೀರನಾಗಿ ಮಲಗಿದ್ದ ಟಿಪ್ಪು ಸುಲ್ತಾನನ್ನು ದೇಶದ್ರೋಹಿಯನ್ನಾಗಿ ಮಾಡಿದ ಮಹಾನ್‌ ನಾಯಕರು ತೆಪ್ಪಗಿದ್ದರೆ ಸರಿ ಎಂದು ಎಚ್ಚರಿಕೆ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.