ರಾಮನಗರ : ಈ ಹಿಂದಿನ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದಾಗ ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಮಂಜೂರು ಮಾಡಿದ್ದ ಹಲವು ಯೋಜನೆಗಳನ್ನು ಜಿಲ್ಲೆಯಿಂದ ಸ್ಥಳಾಂತರಿಸಲು ಪ್ರಸ್ತುತ ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ನಡೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಖಂಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಮನಗರ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ವಿವಿಧ ಯೋಜನೆಗಳನ್ನು 2018ರ ಅವಧಿಯಲ್ಲಿ ಮಂಜೂರು ಮಾಡಿದ್ದೆ. ಆದರೆ, ನನ್ನ ಮೇಲಿನ ವೈಯಕ್ತಿಕ ದ್ವೇಷಕ್ಕಾಗಿ ರಾಮನಗರವೂ ಸೇರಿ ಹಲವಾರು ಜಿಲ್ಲೆಗಳಿಗೆ ಮಂಜೂರಾಗಿದ್ದ ಯೋಜನೆಗಳನ್ನು ತಡೆ ಹಿಡಿಯುವ ಮೂಲಕ ಜನರಿಗೆ ಅನ್ಯಾಯ ಮಾಡಬೇಡಿ ಎಂದು ಸಿಎಂ ಯಡಿಯೂರಪ್ಪ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
-
ಯಡಿಯೂರಪ್ಪನವರೇ, ರಾಮನಗರ ಜಿಲ್ಲೆಯ ಅಭಿವೃದ್ಧಿಯ ದೃಷ್ಟಿಯಿಂದ ವಿವಿಧ ಅಭಿವೃದ್ಧಿ ಯೋಜನೆಗಳನ್ನು 2018ರ ಅವಧಿಯಲ್ಲಿ ಮಂಜೂರು ಮಾಡಿದ್ದೆ. ಆದರೆ ನನ್ನ ಮೇಲಿನ ವೈಯಕ್ತಿಕ ದ್ವೇಷಕ್ಕಾಗಿ ರಾಮನಗರವೂ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಮಂಜೂರಾಗಿರುವ ಯೋಜನೆಗಳನ್ನು ತಡೆ ಹಿಡಿಯುವ ಮೂಲಕ ಜನರಿಗೆ ಅನ್ಯಾಯ ಮಾಡಬೇಡಿ.
— H D Kumaraswamy (@hd_kumaraswamy) December 12, 2019 " class="align-text-top noRightClick twitterSection" data="
">ಯಡಿಯೂರಪ್ಪನವರೇ, ರಾಮನಗರ ಜಿಲ್ಲೆಯ ಅಭಿವೃದ್ಧಿಯ ದೃಷ್ಟಿಯಿಂದ ವಿವಿಧ ಅಭಿವೃದ್ಧಿ ಯೋಜನೆಗಳನ್ನು 2018ರ ಅವಧಿಯಲ್ಲಿ ಮಂಜೂರು ಮಾಡಿದ್ದೆ. ಆದರೆ ನನ್ನ ಮೇಲಿನ ವೈಯಕ್ತಿಕ ದ್ವೇಷಕ್ಕಾಗಿ ರಾಮನಗರವೂ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಮಂಜೂರಾಗಿರುವ ಯೋಜನೆಗಳನ್ನು ತಡೆ ಹಿಡಿಯುವ ಮೂಲಕ ಜನರಿಗೆ ಅನ್ಯಾಯ ಮಾಡಬೇಡಿ.
— H D Kumaraswamy (@hd_kumaraswamy) December 12, 2019ಯಡಿಯೂರಪ್ಪನವರೇ, ರಾಮನಗರ ಜಿಲ್ಲೆಯ ಅಭಿವೃದ್ಧಿಯ ದೃಷ್ಟಿಯಿಂದ ವಿವಿಧ ಅಭಿವೃದ್ಧಿ ಯೋಜನೆಗಳನ್ನು 2018ರ ಅವಧಿಯಲ್ಲಿ ಮಂಜೂರು ಮಾಡಿದ್ದೆ. ಆದರೆ ನನ್ನ ಮೇಲಿನ ವೈಯಕ್ತಿಕ ದ್ವೇಷಕ್ಕಾಗಿ ರಾಮನಗರವೂ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಮಂಜೂರಾಗಿರುವ ಯೋಜನೆಗಳನ್ನು ತಡೆ ಹಿಡಿಯುವ ಮೂಲಕ ಜನರಿಗೆ ಅನ್ಯಾಯ ಮಾಡಬೇಡಿ.
— H D Kumaraswamy (@hd_kumaraswamy) December 12, 2019
ಜಿಲ್ಲೆಯಲ್ಲಿ ಜೋಡೆತ್ತುಗಳಿಗೆ ಕಡಿವಾಣ ಹಾಕುವ ಭರದಲ್ಲಿ ಜಿಲ್ಲೆಗೆ ಮಂಜೂರಾಗಿದ್ದ ಹಲವು ಯೋಜನೆಗಳನ್ನು ರದ್ದು ಮಾಡುವ ಮೂಲಕ ಬಿಜೆಪಿ ಸರ್ಕಾರ ದ್ವೇಷದ ರಾಜಕೀಯಕ್ಕೆ ಮುನ್ನುಡಿ ಬರೆಯಲು ಮುಂದಾಗಿದೆ ಎನ್ನುವ ಗುಲ್ಲು ಸಾರ್ವಜನಿಕ ಆಕ್ರೋಶಕ್ಕೂ ಕಾರಣವಾಗಿದೆ.
ಕನಕಪುರ ಮೆಡಿಕಲ್ ಕಾಲೇಜು ಸ್ಥಳಾಂತರ ಮಾಡಿದ ವಿಚಾರಕ್ಕೆ ಈಗಾಗಲೇ ಮಾಜಿ ಸಚಿವ ಡಿ ಕೆ ಶಿವಕುಮಾರ್, ಸಿಎಂ ಅವರಿಗೆ ಪತ್ರ ಬರೆದು ನೀವು ಸಿಎಂ ಗಾದಿ ಏರಿದಾಗ ದ್ವೇಷ ರಾಜಕಾರಣ ಮಾಡುವುದಿಲ್ಲ ಎಂದು ಹೇಳಿಕೆ ನೀಡಿದ್ದೀರಿ. ಆದರೆ, ನಿಮ್ಮ ನಡವಳಿಕೆಗಳನ್ನ ಗಮನಿಸಿದರೆ ನೀವು ದ್ವೇಷ ರಾಜಕೀಯ ಮಾಡುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.