ಬೆಂಗಳೂರು: ನೀರಾವರಿ ಇಲಾಖೆಯ 20,000 ಕೋಟಿ ರೂಪಾಯಿಯ ಯೋಜನೆಯಲ್ಲಿ ಶೇ. 10 ಕಿಕ್ ಬ್ಯಾಕ್ ಪಡೆಯಲಾಗಿದೆ ಎಂಬ ಆರೋಪ ಜೀವಂತವಾಗಿರುವಾಗಲೇ, ಅಬಕಾರಿ ಇಲಾಖೆಯ ಅಕ್ರಮವೊಂದು ಬಯಲಾಗಿದೆ. ಅಬಕಾರಿ ಸಚಿವರಿಗೆ ಪ್ರತಿ ಜಿಲ್ಲೆಯಿಂದ 5 ಲಕ್ಷ ರೂ. ಹೋಗಬೇಕು ಎಂಬ ಅಧಿಕಾರಿಗಳ ಸಂಭಾಷಣೆ ಸಂಚಲನ ಮೂಡಿಸಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಹಣ ಖರ್ಚು ಮಾಡಿ ಅಧಿಕಾರಕ್ಕೆ ಬಂದ ಬಿಜೆಪಿ ಹಣ ಲೂಟಿ ಮಾಡುವಲ್ಲಿ ನಿರತವಾಗಿದೆ ಎಂದಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಆಡಿಯೊ ಬಹಿರಂಗವಾಗುತ್ತಲೇ ಅಬಕಾರಿ ಇಲಾಖೆಯ ಮೂವರು ಇನ್ಸ್‌ಪೆಕ್ಟರ್‌ಗಳನ್ನು ಅಮಾನತು ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಕೊಟ್ಟಿರಬಹುದಾದವರಿಗೆ ಶಿಕ್ಷೆ ಕೊಟ್ಟ ಮೇಲೆ ಈಸ್ಕೋಂಡಿರಬಹುದಾದವರಿಗೆ ಶಿಕ್ಷೆ ಇಲ್ಲ ಏಕೆ? ಅಧಿಕಾರಿಗಳ ಮೇಲಿನ ಕ್ರಮ ಭ್ರಷ್ಟಾಚಾರಕ್ಕಾಗಿಯೋ ಅಥವಾ ಸರ್ಕಾರದ ಬಂಡವಾಳ ಬಯಲು ಮಾಡಿದರು ಎಂಬ ಕಾರಣಕ್ಕೋ? ಎಂದು ಪ್ರಶ್ನಿಸಿದ್ದಾರೆ.
-
ನೀರಾವರಿ ಇಲಾಖೆಯ ₹20,000 ಕೋಟಿ ಯೋಜನೆಯಲ್ಲಿ 10% ಕಿಕ್ ಬ್ಯಾಕ್ ಪಡೆಯಲಾಗಿದೆ ಎಂಬ ಆರೋಪ ಜೀವಂತವಾಗಿರುವಾಗಲೇ ಅಬಕಾರಿ ಇಲಾಖೆಯ ಅಕ್ರಮ ಬಯಲಾಗಿದೆ. ಅಬಕಾರಿ ಸಚಿವರಿಗೆ ಪ್ರತಿ ಜಿಲ್ಲೆಯಿಂದ ₹5 ಲಕ್ಷ ಹೋಗಬೇಕು ಎಂಬ ಅಧಿಕಾರಿಗಳ ಸಂಭಾಷಣೆ ಬಹಿರಂಗವಾಗಿದೆ. ಹಣ ಖರ್ಚು ಮಾಡಿ ಅಧಿಕಾರಕ್ಕೆ ಬಂದ ಬಿಜೆಪಿ ಹಣ ಲೂಟಿ ಮಾಡುವಲ್ಲಿ ನಿರತವಾಗಿದೆ.
— H D Kumaraswamy (@hd_kumaraswamy) June 22, 2021 " class="align-text-top noRightClick twitterSection" data="
1/4 pic.twitter.com/NpwA9bbcds
">ನೀರಾವರಿ ಇಲಾಖೆಯ ₹20,000 ಕೋಟಿ ಯೋಜನೆಯಲ್ಲಿ 10% ಕಿಕ್ ಬ್ಯಾಕ್ ಪಡೆಯಲಾಗಿದೆ ಎಂಬ ಆರೋಪ ಜೀವಂತವಾಗಿರುವಾಗಲೇ ಅಬಕಾರಿ ಇಲಾಖೆಯ ಅಕ್ರಮ ಬಯಲಾಗಿದೆ. ಅಬಕಾರಿ ಸಚಿವರಿಗೆ ಪ್ರತಿ ಜಿಲ್ಲೆಯಿಂದ ₹5 ಲಕ್ಷ ಹೋಗಬೇಕು ಎಂಬ ಅಧಿಕಾರಿಗಳ ಸಂಭಾಷಣೆ ಬಹಿರಂಗವಾಗಿದೆ. ಹಣ ಖರ್ಚು ಮಾಡಿ ಅಧಿಕಾರಕ್ಕೆ ಬಂದ ಬಿಜೆಪಿ ಹಣ ಲೂಟಿ ಮಾಡುವಲ್ಲಿ ನಿರತವಾಗಿದೆ.
— H D Kumaraswamy (@hd_kumaraswamy) June 22, 2021
1/4 pic.twitter.com/NpwA9bbcdsನೀರಾವರಿ ಇಲಾಖೆಯ ₹20,000 ಕೋಟಿ ಯೋಜನೆಯಲ್ಲಿ 10% ಕಿಕ್ ಬ್ಯಾಕ್ ಪಡೆಯಲಾಗಿದೆ ಎಂಬ ಆರೋಪ ಜೀವಂತವಾಗಿರುವಾಗಲೇ ಅಬಕಾರಿ ಇಲಾಖೆಯ ಅಕ್ರಮ ಬಯಲಾಗಿದೆ. ಅಬಕಾರಿ ಸಚಿವರಿಗೆ ಪ್ರತಿ ಜಿಲ್ಲೆಯಿಂದ ₹5 ಲಕ್ಷ ಹೋಗಬೇಕು ಎಂಬ ಅಧಿಕಾರಿಗಳ ಸಂಭಾಷಣೆ ಬಹಿರಂಗವಾಗಿದೆ. ಹಣ ಖರ್ಚು ಮಾಡಿ ಅಧಿಕಾರಕ್ಕೆ ಬಂದ ಬಿಜೆಪಿ ಹಣ ಲೂಟಿ ಮಾಡುವಲ್ಲಿ ನಿರತವಾಗಿದೆ.
— H D Kumaraswamy (@hd_kumaraswamy) June 22, 2021
1/4 pic.twitter.com/NpwA9bbcds
2 ಸಾವಿರ ಕೋಟಿ ಕಿಕ್ ಬ್ಯಾಕ್ ಪ್ರಕರಣವನ್ನು ತನಿಖೆಗೆ ಒಳಪಡಿಸುವಂತೆ ಈಗಾಗಲೇ ನಾನು ಆಗ್ರಹಿಸಿದ್ದೇನೆ. ಅದರಲ್ಲಿ ಸಿಎಂ ಯಡಿಯೂರಪ್ಪ ಕುಟುಂಬದ ಪಾತ್ರದ ಬಗ್ಗೆ ತನಿಖೆಯಾಗಲಿ ಎಂದು ಹೇಳಿದ್ದೇನೆ. ಅದರ, ಜೊತೆಗೆ ಅಬಕಾರಿ ಇಲಾಖೆಯಲ್ಲಿನ ಈ ಪ್ರಕರಣದ ಬಗ್ಗೆಯೂ ತನಿಖೆಯಾಗಬೇಕು. ಸರ್ಕಾರ ಈ ಪ್ರಕರಣವನ್ನು ಕೂಡಲೇ ಸೂಕ್ತ ತನಿಖಾ ಸಂಸ್ಥೆಗೆ ವಹಿಸಬೇಕು ಎಂದು ಹೆಚ್ಡಿಕೆ ಒತ್ತಾಯಿಸಿದ್ದಾರೆ.
ಜೊತೆಗೆ, ಕೋವಿಡ್ ಮತ್ತು ಬ್ಲ್ಯಾಕ್ ಫಂಗಸ್ ಸ್ಥಿತಿಗತಿಗಳು, ಕೈಗೊಂಡ ಕ್ರಮಗಳು, ಕೊಟ್ಟ ಪರಿಹಾರ, ಅಕ್ರಮ ಆರೋಪಗಳ ಕುರಿತು ಚರ್ಚಿಸಲು ಅಧಿವೇಶನ ಕರೆಯಬೇಕೆಂದು ನಾನು ಆಗ್ರಹಿಸಿದ್ದೇನೆ. ಅದರ, ಬಗ್ಗೆ ಸಿಎಂ ಈ ವರೆಗೆ ಮಾತನಾಡಿಲ್ಲ. ಪ್ರತಿಪಕ್ಷಗಳ ಮುಂದೆ ನಿಲ್ಲಲು ಅವರಿಗೆ ಭಯವಿದ್ದಂತೆ ಕಾಣುತ್ತಿದೆ. ಭಯವಿಲ್ಲದೇ ಹೋದರೆ ಅಧಿವೇಶನ ಕರೆಯಬೇಕು ಎಂದು ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಡಿಸಿ ನಿವಾಸದಲ್ಲಿ ಈಜುಕೊಳ ನಿರ್ಮಾಣ: ಪ್ರಾದೇಶಿಕ ಆಯುಕ್ತರಿಂದ ಸರ್ಕಾರಕ್ಕೆ ವರದಿ ಸಲ್ಲಿಕೆ