ETV Bharat / state

ದಾಸಶ್ರೇಷ್ಠ ಕನಕದಾಸರ ಜಯಂತಿ: ಜನತೆಗೆ ಶುಭಾಶಯ ಕೋರಿದ ಹೆಚ್​ಡಿಡಿ, ಹೆಚ್​ಡಿಕೆ - ಟ್ವೀಟ್​ ಮೂಲಕ ಜನತೆಗೆ ಶುಭಾಶಯ

ಇಂದು ನಾಡಿನಾದ್ಯಂತ ಕನಕದಾಸ ಜಯಂತಿ ಆಚರಿಸುತ್ತಿದ್ದು, ಜೆಡಿಎಸ್​ ನಾಯಕರಾದ ಹೆಚ್​ ಡಿ ದೇವೇಗೌಡ, ಹೆಚ್​ ಡಿ ಕುಮಾರಸ್ವಾಮಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಟ್ವೀಟ್​ ಮೂಲಕ ಜನತೆಗೆ ಶುಭಾಶಯ ಕೋರಿದ್ದಾರೆ.

HDD and HDK
ಹೆಚ್​ಡಿಡಿ ಹಾಗೂ ಹೆಚ್​ಡಿಕೆ
author img

By

Published : Nov 11, 2022, 11:23 AM IST

ಬೆಂಗಳೂರು: ಸಂತಕವಿ, ದಾಸಶ್ರೇಷ್ಠ ಕನಕದಾಸರ ಜಯಂತಿ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ, ಜೆಡಿಎಸ್‍ ವರಿಷ್ಠ ಹೆಚ್ ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ.

ನಾಡಿನ ಸಮಸ್ತರಿಗೂ ಸಂತಕವಿ, ದಾಸಶ್ರೇಷ್ಠ ಕನಕದಾಸರ ಜಯಂತಿಯ ಹಾರ್ದಿಕ ಶುಭಾಶಯಗಳು. 16ನೇ ಶತಮಾನದಲ್ಲಿಯೇ ಸಮಾಜದಲ್ಲಿ ಸಮಾನತೆಯ ಸಂದೇಶ ಸಾರಿದ ಕನಕದಾಸರಿಗೆ ನನ್ನ ಭಕ್ತಿಪೂರ್ವಕ ನಮನಗಳು. ಅವರು ತೋರಿದ ಸಮಾನತೆಯ ದಾರಿಯಲ್ಲಿ ನಾವೆಲ್ಲರೂ ನಡೆಯೋಣ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿ, ತಲ್ಲಣಿಸದಿರು ಕಂಡ್ಯ ತಾಳು ಮನವೆ, ಎಲ್ಲರನು ಸಲಹುವನು ಇದಕೆ ಸಂಶಯವಿಲ್ಲ, ಕುಲ ಕುಲ ಕುಲವೆಂದು ಹೊಡೆದಾಡದಿರಿ, ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ?. ಇಂಥ ಕಾಲಾತೀತ ಕಾವ್ಯವನ್ನು ಕಟ್ಟಿ ಸಮಾಜವನ್ನು ತಿದ್ದಿದ ಕನಕದಾಸರ ಜಯಂತಿ ದಿನದಂದು ಎಲ್ಲರಿಗೂ ಶುಭಾಶಯಗಳು ಹಾಗೂ ಆ ದಾಸಶ್ರೇಷ್ಠರಿಗೆ ಭಕ್ತಿಪೂರ್ವಕ ನಮನಗಳು ಎಂದು ತಿಳಿಸಿದ್ದಾರೆ.

ಶಾಸಕಿ ಅನಿತಾ ಕುಮಾರಸ್ವಾಮಿ ಟ್ವೀಟ್ ಮಾಡಿ, ಮಹಾನ್‌ ದಾರ್ಶನಿಕರು, ಸಮಾಜ ಸುಧಾರಕರು ಆಗಿದ್ದ ಕನಕದಾಸರ ಜಯಂತಿ ನಿಮಿತ್ತ ನಾಡಿನ ಸಮಸ್ತ ಜನತೆಗೆ ಶುಭಾಶಯಗಳು ಹಾಗೂ ಆ ಸಂತ ಶ್ರೇಷ್ಠರಿಗೆ ಭಕ್ತಿಪೂರ್ವಕ ಪ್ರಣಾಮಗಳು ಎಂದಿದ್ದಾರೆ.

ಇದನ್ನೂ ಓದಿ: ಕನಕದಾಸ, ವಾಲ್ಮೀಕಿ ಪ್ರತಿಮೆಗಳಿಗೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಿ ಮೋದಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.