ಬೆಂಗಳೂರು: ಕೊರೊನಾ ವಾರಿಯರ್ ಆಗಿ ಕಾರ್ಯ ನಿರ್ವಹಿಸಿದ ಹೆಡ್ ಕಾನ್ಸ್ಟೇಬಲ್ ಒಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ.
ರಮೇಶ್.ಎಲ್. ಮೃತರು. ಇವರು ಸಂಜಯನಗರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕಾರ್ಯನಿರ್ವಹಣೆ ಮಾಡುತ್ತಿದ್ದರು. ಆದರೆ, ನಿನ್ನೆ ಏಕಾಏಕಿ ಹೃದಯಕ್ಕೆ ಸಂಬಂಧಿಸಿದ ಖಾಯಿಲೆ ಉಲ್ಬಣವಾದಾಗ ಸ್ಥಳೀಯ ಸುಗುಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಇವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಮೃತದೇಹವನ್ನು ಕೋವಿಡ್ ಟೆಸ್ಟ್ಗೆ ಒಳಪಡಿಸಿದ ನಂತರ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲು ನಿರ್ಧರಿಸಲಾಗಿದೆ.